Homeಮುಖಪುಟರಾಷ್ಟ್ರಪಿತನ‌ ಹೆಸರನ್ನೇ ಅಳಿಸುವ ಪಿತೂರಿಯನ್ನು ಸೋಲಿಸೋಣ : ಸಿಎಂ ಸಿದ್ದರಾಮಯ್ಯ

ರಾಷ್ಟ್ರಪಿತನ‌ ಹೆಸರನ್ನೇ ಅಳಿಸುವ ಪಿತೂರಿಯನ್ನು ಸೋಲಿಸೋಣ : ಸಿಎಂ ಸಿದ್ದರಾಮಯ್ಯ

- Advertisement -
- Advertisement -

ನರೇಗಾ ಯೋಜನೆಗೆ ಮರುನಾಮಕರಣದ ಮೂಲಕ ರಾಷ್ಟ್ರಪಿತನ ಹೆಸರನ್ನೇ ಅಳಿಸಲು ಹೊರಟಿರುವ ಪ್ರಯತ್ನವನ್ನು ವಿಫಲಗೊಳಿಸಬೇಕು. ಗ್ರಾಮೀಣ ಆರ್ಥಿಕತೆಯನ್ನೇ ಹಾಳು ಮಾಡುವ ಹುನ್ನಾರ ಬಿಜೆಪಿಯದ್ದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿಯ ಭಾರತ್ ಜೋಡೋ ಭವನದಲ್ಲಿ ಆಯೋಜಿಸಲಾಗಿದ್ದ ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ನರೇಗಾ ಯೋಜನೆಯಡಿ ದಲಿತರು, ಹಿಂದುಳಿದವರಿಗೆ ಹೆಚ್ಚಾಗಿ ಕೆಲಸ ದೊರಕುತ್ತಿತ್ತು . ಕೇಂದ್ರ ಸರ್ಕಾರ ರಾಜ್ಯಗಳಿಗೆ ಅನುದಾನವನ್ನು ಕೊಡುತ್ತಿತ್ತು. ಈಗ ಹೊಸ ಕಾಯ್ದೆ ಜಾರಿಗೆ ತಂದು 60 ಶೇಕಡ ಕೇಂದ್ರ ಮತ್ತು 40 ಶೇಕಡ ರಾಜ್ಯ ಸರ್ಕಾರ ಕೊಡಬೇಕು ಎಂದು ತೀರ್ಮಾನಿಸಿದ್ದಾರೆ. ರಾಜ್ಯಗಳ ಮೇಲೆ ಭಾರೀ ಹೊರೆಯನ್ನೇ ಹೊರೆಸಿದ್ದಾರೆ ಎಂದು ಸಿಎಂ ಹೇಳಿದರು.

ಗ್ರಾಮ ಪಂಚಾಯತ್‌ನಿಂದ ರಾಜ್ಯ ಮಟ್ಟದವರೆಗೆ ಜನವರಿ 5ರಿಂದ ನಿರಂತರವಾಗಿ ಆಂದೋಲನವನ್ನು ಪ್ರಾರಂಭಿಸಲು ಕಾಂಗ್ರೆಸ್ ಕಾರ್ಯಕಾರಿಣಿ ಸಮಿತಿಯಲ್ಲಿ ತೀರ್ಮಾನಿಸಲಾಗಿದೆ. ಇದಕ್ಕೆ ಎಲ್ಲರೂ ಕೈಜೋಡಿಸಬೇಕು ಎಂದು ಕರೆ ನೀಡಿದರು.

ಕಾಂಗ್ರೆಸ್ ಎಂದರೆ ಕೇವಲ ಪಕ್ಷವಲ್ಲ

ಕಾಂಗ್ರೆಸ್ ಎಂದರೆ ಕೇವಲ ಒಂದು ರಾಜಕೀಯ ಪಕ್ಷವಲ್ಲ. ಇದೊಂದು ಚಳವಳಿ ಮತ್ತು ಸಿದ್ಧಾಂತ. ನಾವೆಲ್ಲರೂ ಚಳವಳಿಯಲ್ಲಿದ್ದೇವೆ. ಸಮಾನತೆ, ಸಮಾನ ಅವಕಾಶಗಳನ್ನು ಎಲ್ಲರಿಗೂ ಕೊಡಬೇಕು ಎನ್ನುವ ಸಿದ್ಧಾಂತ ನಮ್ಮದು ಎಂದು ಸಿಎಂ ಹೇಳಿದರು. ಸತ್ಯಾಗ್ರಹ, ಅಹಿಂಸೆ ಮೂಲಕ ದೇಶಕ್ಕೆ ಸ್ವಾತಂತ್ರ್ಯ ತಂದು ಕೊಟ್ಟದ್ದು ಕಾಂಗ್ರೆಸ್. ಇದನ್ನು ಉಳಿಸಿಕೊಳ್ಳುವ ಕೆಲಸ ಮಾಡೋಣ ಎಂದರು.

ಸ್ವಾತಂತ್ರ್ಯ ಹೋರಾಟದ ವಾರಸುದಾರರು ಕಾಂಗ್ರೆಸ್ ಪಕ್ಷದವರು

ಬ್ರಿಟಿಷ್ ಅಧಿಕಾರಿ ಎ. ಒ ಹ್ಯೂಮ್ ಅವರು ಕಾಂಗ್ರೆಸ್ ಪಕ್ಷವನ್ನು 1885ರಲ್ಲಿ ಪ್ರಾರಂಭಿಸಿ 148 ವರ್ಷಗಳಾಗಿವೆ. ಬ್ರಿಟಿಷ್ ಆಡಳಿತದ ದಬ್ಬಾಳಿಕೆಯ ವಿರುದ್ಧ ಸ್ವಾತಂತ್ರ್ಯ ಹೋರಾಟಕ್ಕಾಗಿ ಪ್ರಾರಂಭವಾದ ಕಾಂಗ್ರೆಸ್ ನಾಗರಿಕರ ಹಕ್ಕುಗಳ ರಕ್ಷಣೆ, ನ್ಯಾಯಯುತ ಆಡಳಿತಕ್ಕಾಗಿ ಒತ್ತಾಯಿಸಿತು. ಮುಂಬೈನಲ್ಲಿ ಮಾಡಲಾ ಅಧಿವೇಶನ ಪ್ರಾರಂಭವಾದ ನಂತರ ನಿಧಾನವಾಗಿ ಬೆಳಕನ್ನು ಕಾಣುವಂತಾಯಿತು. 1915ರಲ್ಲಿ ಮಹಾತ್ಮಾ ಗಾಂಧಿ ಯವರನ್ನು ಗೋಖಲೆಯವರು ಭಾರತದಲ್ಲಿ ಸ್ವಾತಂತ್ರ್ಯ ಹೋರಾಟದ ನಾಯಕತ್ವವನ್ನು ವಹಿಸಲು ಆಹ್ವಾನಿಸಿದರು. ಡಿಸೆಂಬರ್ 28 ಐತಿಹಾಸಿಕ ದಿನವಾಗಿದ್ದು, ಅದನ್ನು ಮರೆಯಲು ಸಾಧ್ಯವಿಲ್ಲ ದೇಶಕ್ಕೆ ಸ್ವಾತಂತ್ರ್ಯ ಬಂದಿದ್ದರೆ ಅದಕ್ಕೆ ಕಾಂಗ್ರೆಸ್ ಕಾರಣ. ಜನಸಂಘ, ಆರ್‌ಎಸ್‌ಎಸ್, ಹಿಂದೂ ಮಹಾಸಭಾ, ಬಿಜೆಪಿ ಸಂಘಟನೆಗಳು ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿಲ್ಲ. ಸ್ವಾತಂತ್ರ್ಯ ಹೋರಾಟದ ವಾರಸುದಾರರು ಕಾಂಗ್ರೆಸ್ ಪಕ್ಷ ಎಂದು ಸಿಎಂ ಹೇಳಿದರು.

ಸ್ವಾತಂತ್ರ್ಯ ಚಳವಳಿ ಪ್ರಾರಂಭವಾಗಿದ್ದ ಸಂದರ್ಭದಲ್ಲಿ ಮಹಾತ್ಮಾ ಗಾಂಧಿ 1915ರಿಂದ ದೇಶದ ಸಾಮಾಜಿಕ ವ್ಯವಸ್ಥೆಯನ್ನು ಅರ್ಥಮಾಡಿಕೊಳ್ಳಲು ಇಡೀ ದೇಶವನ್ನು ಸುತ್ತಿದ ನಂತರ ಕಾಂಗ್ರೆಸ್ ನೇತೃತ್ವವನ್ನು ಹೊತ್ತುಕೊಂಡರು. ಅಸಹಕಾರ ಚಳವಳಿ, ಕ್ವಿಟ್ ಇಂಡಿಯಾ ಚಳವಳಿ ಪ್ರಾರಂಭವಾದಾಗ ಬಿಜೆಪಿ ಪಾಲ್ಗೊಂಡಿರಲಿಲ್ಲ ಎಂದರು.

ಬ್ರಿಟಿಷರೊಂದಿಗೆ ಸೇರಿಕೊಂಡಿದ್ದ ಬಿಜೆಪಿಯವರು ನಮಗೆ ದೇಶಭಕ್ತಿಯ ಪಾಠವನ್ನು ಹೇಳಿಕೊಡುತ್ತಾರೆ. ಅವರು ದೇಶಭಕ್ತರಂತೂ ಅಲ್ಲ. ದೇಶಭಕ್ತಿಯ ಬಗ್ಗೆ ಉದ್ದುದ್ದ ಭಾಷಣ ಬಿಗಿಯುವ ಬಿಜೆಪಿಯ ಒಬ್ಬ ನಾಯಕರೂ ಸ್ವಾತಂತ್ರ್ಯ ಚಳವಳಿಯಲ್ಲಿ ಭಾಗವಹಿಸಿಲ್ಲ. ಈಗ ಮಹಾತ್ಮಾ ಗಾಂಧಿಯವರನ್ನು ದ್ವೇಷಿಸಲು ಪ್ರಾರಂಭಿಸಿದ್ದಾರೆ. ಗಾಂಧಿಯನ್ನು ಕೊಂದವನು ನಾಥುರಾಮ್ ಗೋಡ್ಸೆ. ಬಿಜೆಪಿ ಕಚೇರಿಯ ಮೇಲೆ ಇತ್ತೀಚಿನವರೆಗೆ ಭಾರತದ ಧ್ವಜವೂ ಹಾರಾಡುತ್ತಿರಲಿಲ್ಲ. ಇವರಿಗೆ ದೇಶಕ್ಕೆ ಸ್ವಾತಂತ್ರ್ಯ ಬರುವುದೇ ಇಷ್ಟವಿರಲಿಲ್ಲ ಎಂದರು.

ದೇಶ ಮತ್ತು ಸಮಾಜ ಒಡೆಯುದೇ ಬಿಜೆಪಿಯ ಸಾಧನೆ

ಕಾಂಗ್ರೆಸ್‌ನವರು ಎನ್ನುವುದೇ ನಮಗೆ ಹೆಮ್ಮೆಯ ಸಂಗತಿ. ಆಧುನಿಕ ಭಾರತದ ರೂವಾರಿ ಜವಾಹರ್‌ಲಾಲ್ ನೆಹರೂ ಅವರು. ಜೈ ಜವಾನ್ ಜೈ ಕಿಸಾನ್ ಘೋಷಣೆ ನೀಡಿದ್ದು ಲಾಲ್ ಬಹದ್ದೂರ್ ಶಾಸ್ತ್ರಿ, ಸಾಮಾಜಿಕ ನ್ಯಾಯದ ರೂವಾರಿ ಶ್ರೀಮತಿ ಇಂದಿರಾ ಗಾಂಧಿ, ಗರೀಬಿ ಹಠಾವೋ ಎನ್ನುವುದು ಕೇವಲ ಘೋಷಣೆಯಲ್ಲ. ಅದಕ್ಕೆ ಪೂರಕವಾಗಿ 20 ಅಂಶದ ಕಾರ್ಯಕ್ರಮವನ್ನು ನೀಡಿದರು. ಆಹಾರದಲ್ಲಿ ಸ್ವಾವಲಂಬನೆ ಬರಲು ಇಂದಿರಾ ಗಾಂಧಿ ಹಾಗೂ ಜಗಜೀವನ ರಾಮ್ ಅವರು ಕಾರಣ. 21ನೇ ಶತಮಾನಕ್ಕೆ ಸೂಕ್ತ ಕೊಡುಗೆಗಳನ್ನು ನೀಡಿದ್ದು ರಾಜೀವ್ ಗಾಂಧಿ. ಬಿಜೆಪಿಯ ಸಾಧನೆ ಏನೆಂದರೆ, ದೇಶ ಮತ್ತು ಸಮಾಜ ಒಡೆಯುವ ಕೆಲಸ. ಜಾತಿ ವ್ಯವಸ್ಥೆಯನ್ನು ಹುಟ್ಟುಹಾಕಿದ್ದು ಮನುವಾದಿಗಳು. ಚಾತುರ್ವರ್ಣ ವ್ಯವಸ್ಥೆಯನ್ನು ಹುಟ್ಟುಹಾಕಿದ್ದೆ ಬಿಜೆಪಿ. ಸಂವಿಧಾನ ರಚನೆಯಾದ ಮೇಲೆ ಸಮಾನ ಅವಕಾಶಗಳು ದೊರಕುವಂತಾಯಿತು ಎಂದು ಸಿಎಂ ಹೇಳಿದರು.

ರಾಜಕೀಯ ಮತ್ತು ಆರ್ಥಿಕ ಸ್ವಾತಂತ್ರ್ಯ ಸಿಕ್ಕಿದಾಗ ಮಾತ್ರ ರಾಜಕೀಯ ಪ್ರಜಾಪ್ರಭುತ್ವಕ್ಕೆ ಅರ್ಥ ಬರುತ್ತದೆ

ಸಾಮಾಜಿಕ ಪ್ರಜಾಪ್ರಭುತ್ವದ ತಳಹದಿಯ ಮೇಲೆ ರಾಜಕೀಯ ಪ್ರಜಾಪ್ರಭುತ್ವ ನಿಂತಿದೆ. ರಾಜಕೀಯ ಮತ್ತು ಆರ್ಥಿಕ ಸ್ವಾತಂತ್ರ್ಯ ಸಿಕ್ಕಿದಾಗ ಮಾತ್ರ ರಾಜಕೀಯ ಪ್ರಜಾಪ್ರಭುತ್ವಕ್ಕೆ ಅರ್ಥ ಬರುತ್ತದೆ ಎಂಬ ತತ್ವದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ನಂಬಿಕೆಯಿದೆ. ಅದಕ್ಕಾಗಿಯೇ ನಾವು ಅಸಮಾನತೆ ಹೋಗಲಾಡಿಸಲು ಅನೇಕ ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದೇವೆ. ಮನಮೋಹನ್ ಸಿಂಗ್ ಅವರು ಪ್ರಧಾನ ಮಂತ್ರಿಗಳಾಗಿದ್ದ ಸಂದರ್ಭದಲ್ಲಿ ಮೂಲಭೂತ ಹಕ್ಕುಗಳನ್ನು ನೀಡಿದರು. ಶಿಕ್ಷಣ, ಉದ್ಯೋಗ ಖಾತರಿ ಮುಂತಾದ ಕಾರ್ಯಕ್ರಮಗಳನ್ನು ಜಾರಿಗೆ ತಂದರು. ಮಹಾತ್ಮಾ ಗಾಂಧಿ ನರೇಗಾ ಯೋಜನೆಯ ಹೆಸರನ್ನೇ ಬದಲಾಯಿಸಲು ಹೊರಟಿದ್ದಾರೆ. ಯಾರಿಗೂ ಈ ಪ್ರಮಾಣದ ದ್ವೇಷ ಇರಬಾರದು. ಮಹಾತ್ಮಾ ಗಾಂಧಿಯವರನ್ನು ಕೊಂದ ನಂತರವೂ ಇದನ್ನು ಮುಂದುವರೆಸಿದ್ದಾರೆ. ನೆಹರೂ, ಇಂದಿರಾ ಗಾಂಧಿ , ರಾಜೀವ್ ಗಾಂಧಿ ಹಾಗೂ ರಾಹುಲ್ ಗಾಂಧಿಯವರನ್ನು ಕಂಡರೆ ಅವರಿಗೆ ಆಗುವುದೇ ಇಲ್ಲ. ನರೇಗಾ ಯೋಜನೆ ಹೆಸರನ್ನು ವಿಬಿ ಜಿ ರಾಮ್ ಜಿ ಎಂದು ಕರೆದಿದ್ದು, ಇದರ ಬಗ್ಗೆ ಸಂಸತ್ತಿನಲ್ಲಿ ಚರ್ಚೆಯನ್ನೇ ಮಾಡಿಲ್ಲ. ಇವರು ಹೇಳುವ ರಾಮ ದಶರಥ ಮಗ ರಾಮನಲ್ಲ, ಬಿಜೆಪಿಯ ರಾಮ ಎಂದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನಮ್ಮ ದೇಶ ಮಾರಾಟಕ್ಕಿಲ್ಲ’: ಟ್ರಂಪ್‌ ಸಂಚಿನ ವಿರುದ್ಧ ಬೀದಿಗಿಳಿದ ಗ್ರೀನ್‌ಲ್ಯಾಂಡ್‌ ಜನತೆ, ಬೃಹತ್ ಪ್ರತಿಭಟನೆ

ಖನಿಜ ಸಮೃದ್ದ ಗ್ರೀನ್‌ಲ್ಯಾಂಡ್‌ ಅನ್ನು ವಶಪಡಿಸಿಕೊಳ್ಳುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸಂಚಿನ ವಿರುದ್ದ ಅಲ್ಲಿನ ಜನರು ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ಶನಿವಾರ (ಜ.17) ಗ್ರೀನ್‌ಲ್ಯಾಂಡ್‌ ರಾಜಧಾನಿ ನೂಕ್‌ನಲ್ಲಿ ಭಿತ್ತಿಪತ್ರಗಳನ್ನು ಹಿಡಿದು ಬೀದಿಗಳಿದ ಸಾವಿರಾರು...

ಪಾದ್ರಿ ಮೇಲೆ ಹಲ್ಲೆ ನಡೆಸಿದ ಹಿಂದುತ್ವ ಗುಂಪು : ಸಗಣಿ ತಿನ್ನಿಸಿ, ಜೈ ಶ್ರೀ ರಾಮ್ ಹೇಳುವಂತೆ ಒತ್ತಾಯ; ವರದಿ

ಒಡಿಶಾದ ಧೆಂಕನಲ್‌ನಲ್ಲಿ ಪಾದ್ರಿಯೊಬ್ಬರ ಮೇಲೆ ಬಜರಂಗದಳ ಸದಸ್ಯರು ಹಲ್ಲೆ ನಡೆಸಿದ್ದು, ಸಗಣಿ ತಿನ್ನಿಸಿ, ಜೈ ಶ್ರೀರಾಮ್ ಕೂಗುವಂತೆ ಒತ್ತಾಯಿಸಿದ್ದಾರೆ ಎಂದು ಮಕ್ತೂಬ್ ಮೀಡಿಯಾ ವರದಿ ಮಾಡಿದೆ. ಜನವರಿ 4ರಂದು ಭಾನುವಾರ ಈ ಘಟನೆ ನಡೆದಿದ್ದು,...

ವಿಮಾನ ಸೇವೆಯಲ್ಲಿ ವ್ಯತ್ಯಯ : ಇಂಡಿಗೋ ಏರ್‌ಲೈನ್ಸ್‌ಗೆ 22 ಕೋಟಿ ರೂ. ದಂಡ

ಕಳೆದ ತಿಂಗಳು ವಿಮಾನಯಾನ ಸೇವೆಯಲ್ಲಿ ಉಂಟಾದ ಭಾರೀ ವ್ಯತ್ಯಯಕ್ಕೆ ಸಂಬಂಧಿಸಿದಂತೆ ನಾಗರಿಕ ವಿಮಾನಯಾನಗಳ ಮಹಾನಿರ್ದೇಶನಾಲಯ (ಡಿಜಿಸಿಎ) ಇಂಡಿಗೋ ವಿಮಾನಯಾನ ಸಂಸ್ಥೆಗೆ 22.2 ಕೋಟಿ ರೂಪಾಯಿ ದಂಡ ವಿಧಿಸಿದೆ. ಡಿಸೆಂಬರ್ 3 ರಿಂದ 5 ರವರೆಗಿನ...

ತೆಲಂಗಾಣದಲ್ಲಿ ರೋಹಿತ್ ವೇಮುಲಾ ಕಾಯ್ದೆ ಜಾರಿಗೊಳಿಸುತ್ತೇವೆ: ಭಟ್ಟಿ ವಿಕ್ರಮಾರ್ಕ ಮಲ್ಲು

ರಾಜ್ಯದಲ್ಲಿ ರೋಹಿತ್ ವೇಮುಲಾ ಕಾಯ್ದೆಯನ್ನು ಆದಷ್ಟು ಬೇಗ ಜಾರಿಗೆ ತರಲಾಗುವುದು ಎಂದು ತೆಲಂಗಾಣ ಉಪಮುಖ್ಯಮಂತ್ರಿ ಭಟ್ಟಿ ವಿಕ್ರಮಾರ್ಕ ಮಲ್ಲು ಶನಿವಾರ ಹೇಳಿದ್ದಾರೆ. ಪ್ರಜಾ ಭವನದಲ್ಲಿ ಜಸ್ಟೀಸ್ ಫಾರ್ ರೋಹಿತ್ ವೇಮುಲಾ ಅಭಿಯಾನ ಸಮಿತಿಯ...

88 ಪ್ರಕರಣಗಳಲ್ಲಿ ಪೊಲೀಸರೇ ಶಾಮೀಲು ; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ : ಸಿಎಂ ಸಿದ್ದರಾಮಯ್ಯ

ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಶನಿವಾರ (ಜ.17) ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮ್ಮೇಳನ ಉದ್ಘಾಟಿಸಿದ ನಂತರ ಮಾಧ್ಯಮ ಗೋಷ್ಠಿಯಲ್ಲಿ ಅವರು ಮಾತನಾಡಿದರು. ಪೋಲೀಸ್ ಇಲಾಖೆ ಕೆಲವು...

ಇಂದೋರ್ ಕಲುಷಿತ ನೀರು ದುರಂತ : ಸಂತ್ರಸ್ತ ಕುಟುಂಬಗಳನ್ನು ಭೇಟಿಯಾದ ರಾಹುಲ್ ಗಾಂಧಿ

ಶನಿವಾರ (ಜ.17) ಮಧ್ಯಪ್ರದೇಶದ ಇಂದೋರ್‌ಗೆ ಭೇಟಿ ನೀಡಿದ ಲೋಕಸಭೆಯ ವಿರೋಧ ಪಕ್ಷ ನಾಯಕ ರಾಹುಲ್ ಗಾಂಧಿ, ಇತ್ತೀಚೆಗೆ ಸಂಭವಿಸಿದ ಕಲುಷಿತ ನೀರು ದುರಂತದ ಸಂತ್ರಸ್ತರನ್ನು ಭೇಟಿಯಾದರು. ಕಲುಷಿತ ನೀರು ಕುಡಿದು ವಾಂತಿ ಮತ್ತು...

ಮಹಾರಾಷ್ಟ್ರದಲ್ಲಿ ಬಿಜೆಪಿ-ಎನ್‌ಡಿಎ ಜೊತೆ ಯಾವುದೇ ಮೈತ್ರಿ ಇಲ್ಲ: ಓವೈಸಿ

ಮಹಾರಾಷ್ಟ್ರದಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಅಥವಾ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ಜೊತೆ ಯಾವುದೇ ಮೈತ್ರಿ ಇರುವುದಿಲ್ಲ ಎಂದು ಅಸಾದುದ್ದೀನ್ ಓವೈಸಿ ಹೇಳಿದ್ದಾರೆ. ಭಾರತದ ಅತ್ಯಂತ ಶ್ರೀಮಂತ ರಾಜ್ಯವಾದ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ...

ರೋಹಿತ್ ವೇಮುಲ ಕಾಯ್ದೆ ಘೋಷಣೆಯಲ್ಲ, ಅಗತ್ಯ : ರಾಹುಲ್ ಗಾಂಧಿ

ಹೈದರಾಬಾದ್ ವಿಶ್ವವಿದ್ಯಾಲಯದ ಪಿಎಚ್‌ಡಿ ವಿದ್ಯಾರ್ಥಿ ರೋಹಿತ್ ವೇಮುಲ ಜಾತಿ ತಾರತಮ್ಯಕ್ಕೆ ಬಲಿಯಾಗಿ ಇಂದಿಗೆ (17 ಜನವರಿ 2026) 10 ವರ್ಷಗಳಾಗಿದ್ದು, ಲೋಕಸಭೆಯ ವಿರೋಧಪಕ್ಷದ ನಾಯಕ ರಾಹುಲ್ ಗಾಂಧಿ ರೋಹಿತ್ ಅವರನ್ನು ಸ್ಮರಿಸಿ ಸಾಮಾಜಿಕ...

ದೇವರು-ಹುತಾತ್ಮರ ಹೆಸರಿನಲ್ಲಿ ಪ್ರಮಾಣವಚನ; ಬಿಜೆಪಿ ಕೌನ್ಸಿಲರ್‌ಗಳಿಗೆ ಕೇರಳ ಹೈಕೋರ್ಟ್ ನೋಟಿಸ್

ತಿರುವನಂತಪುರಂ ನಗರಸಭೆಯ ಬಿಜೆಪಿ ಕೌನ್ಸಿಲರ್‌ಗಳು ವಿವಿಧ ದೇವರು, ಹುತಾತ್ಮರು ಮತ್ತು ರಾಜಕೀಯ ಚಳುವಳಿಗಳ ಹೆಸರಿನಲ್ಲಿ ಮಾಡಿದ ಪ್ರಮಾಣವಚನಗಳ ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಸಲಾದ ರಿಟ್ ಅರ್ಜಿಯ ಕುರಿತು ಕೇರಳ ಹೈಕೋರ್ಟ್ ಗುರುವಾರ ನೋಟಿಸ್ ಜಾರಿ...

ಮಧ್ಯಪ್ರದೇಶ: ಬುಡಕಟ್ಟು ವಿಶ್ವವಿದ್ಯಾಲಯ ಹಾಸ್ಟೆಲ್ ಒಳಗೆ ಅಸ್ಸಾಮಿ ವಿದ್ಯಾರ್ಥಿ ಮೇಲೆ ಗುಂಪು ಹಲ್ಲೆ

ಮಧ್ಯಪ್ರದೇಶದ ಇಂದಿರಾ ಗಾಂಧಿ ರಾಷ್ಟ್ರೀಯ ಬುಡಕಟ್ಟು ವಿಶ್ವವಿದ್ಯಾಲಯದ ಹಾಸ್ಟೆಲ್ ಕೋಣೆಯೊಳಗೆ ಐದು ಜನ ವಿದ್ಯಾರ್ಥಿಗಳ ತಂಡವು ಅಸ್ಸಾಮಿ ವಿದ್ಯಾರ್ಥಿಯ ಮೇಲೆ ಹಲ್ಲೆ ನಡೆಸಿದೆ ಎಂದು ಆರೋಪಿಸಲಾಗಿದೆ. ಗುಂಪು ಆತನಿಗೆ ಇಲ್ಲಿಯೇ ಸಾಯಬೇಕು ಎಂದು...