Homeಕರ್ನಾಟಕಚುನಾವಣೆಯಲ್ಲಿ ರಾಜಕಾರಣ ಮಾಡೋಣ; ನಾಡ ಹಬ್ಬದ ವಿಚಾರದಲ್ಲಿ ಬೇಡ: ಸಿಎಂ ಸಿದ್ದರಾಮಯ್ಯ

ಚುನಾವಣೆಯಲ್ಲಿ ರಾಜಕಾರಣ ಮಾಡೋಣ; ನಾಡ ಹಬ್ಬದ ವಿಚಾರದಲ್ಲಿ ಬೇಡ: ಸಿಎಂ ಸಿದ್ದರಾಮಯ್ಯ

- Advertisement -
- Advertisement -

ಬನ್ನಿ ಚುನಾವಣೆಯಲ್ಲಿ ರಾಜಕಾರಣ ಮಾಡೋಣ. ನಾಡ ಹಬ್ಬದ ವಿಚಾರದಲ್ಲಿ ಕೆಟ್ಟ ರಾಜಕಾರಣ ಬೇಡ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಜೆಪಿ ನಾಯಕರಿಗೆ ಸವಾಲು ಎಸೆದರು.

ತಾಯಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದ ಬಳಿಕ ನಾಡಹಬ್ಬ ಐತಿಹಾಸಿಕ ದಸರಾ ಉದ್ಘಾಟನೆ ಬಳಿಕ ವೇದಿಕೆ  ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ದಸರಾ ಮತ್ತು ನಮ್ಮ ಸಾಂಸ್ಕೃತಿಕ ಹಿರಿಮೆಯ ಪರಿಚಯ ಇಲ್ಲದವರು ಬಾನು ಮುಷ್ತಾಕ್ ಅವರಿಗೆ ವಿರೋಧಿಸಿದ್ದರು. ಇತಿಹಾಸ ತಿರುಚಿ, ಸ್ವಾರ್ಥ ರಾಜಕೀಯ ಮಾಡುವುದು ಅಕ್ಷಮ್ಯ ಅಪರಾಧ. ರಾಜಕಾರಣ ಮಾಡುವುದಿದ್ದರೆ ಚುನಾವಣೆಯಲ್ಲಿ ಮಾಡೋಣ. ನಾಡ ಹಬ್ಬದ ವಿಚಾರದಲ್ಲಿ ಕೆಳ ಮಟ್ಟದ ರಾಜಕಾರಣ ಮಾಡುವುದು ಕ್ಷುಲ್ಲಕ” ಎಂದರು.

“ನಾಡಿನ ಬಹುಸಂಖ್ಯಾತ ಸಮುದಾಯ ಬಾನು ಮುಷ್ತಾಕ್ ಅವರಿಂದ ದಸರಾ ಉದ್ಘಾಟಿಸಿರುವುದನ್ನು ಸ್ವಾಗತಿಸಿದೆ; ಇದು ಹೆಮ್ಮೆಯ ಸಂಗತಿ. ಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿ ಪುರಸ್ಕೃತರಾದ ಬಾನು ಮುಷ್ತಾಕ್ ಅವರು ದಸರಾ ಉದ್ಘಾಟಿಸಿರುವುದು ಸೂಕ್ತವಾಗಿದೆ. ಬಾನು ಮುಷ್ತಾಕ್ ಮುಸ್ಲಿಂ ಮಹಿಳೆ ಎನ್ನುವುದಕ್ಕಿಂತ ಮಾನವೀಯ ಮೌಲ್ಯ ಪಾಲಿಸುವ ಮನುಷ್ಯರು. ನಾವು ಮನುಷ್ಯರು ಪರಸ್ಪರ ಪ್ರೀತಿಯಿಂದ ಬಾಳಬೇಕು. ದ್ವೇಷ ಮನುಷ್ಯತ್ವದ ವಿರೋಧಿ. ಆದ್ದರಿಂದ ದ್ವೇಷವನ್ನು ಆಚರಿಸುವವರು ಮನುಷ್ಯತ್ವದ ವಿರೋಧಿಗಳು” ಎಂದರು.

“ಸಂವಿಧಾನದ ಮೌಲ್ಯಗಳಾದ ಸಹಿಷ್ಣತೆ-ಸಹಬಾಳ್ವೆ ಪಾಲಿಸುವವರು ಮಾತ್ರ ಅಪ್ಪಟ ಭಾರತೀಯರು.
ನಮ್ಮ ಸಂವಿಧಾನ ಜಾತ್ಯತೀತ ಮತ್ತು ಧರ್ಮಾತೀತ. ಇದನ್ನೇ ಹೈಕೋರ್ಟ್- ಸುಪ್ರೀಂಕೋರ್ಟ್ ಎತ್ತಿಹಿಡಿದಿದೆ.
ಯಾರಿಗೆ ಭಾರತೀಯರು ಎನ್ನುವ ಹೆಮ್ಮೆ ಇರುತ್ತದೋ ಅವರಿಗೆ ಮಾತ್ರ ಸಂವಿಧಾನದ ಬಗ್ಗೆ ಹೆಮ್ಮೆ ಇರುತ್ತದೆ.
ನಮಗೆ ನಮ್ಮ ಹಕ್ಕು ಮತ್ತು ಜವಾಬ್ದಾರಿಗಳು ಗೊತ್ತಾಗಬೇಕಾದರೆಸಂವಿಧಾನ ಗೊತ್ತಿರಬೇಕು” ಎಂದರು.

ನಮ್ಮದು ಸರ್ವ ಜನಾಂಗದ ಶಾಂತಿಯ ತೋಟ

“ರಾಷ್ಟ್ರಕವಿ ಕುವೆಂಪು ಅವರ ಮಾತನ್ನು ನಾವು ಮರೆಯಬಾರದು. ಗುಡಿ-ಚರ್ಚು-ಮಸೀದಿಗಳ ಬಿಟ್ಟು ಹೊರ ಬನ್ನಿ ಎಂದು ಕರೆ ನೀಡಿದ ಸಿಎಂ, ಕುವೆಂಪು ಅವರ ಆಶಯದ ಸರ್ವ ಜನಾಂಗದ ಶಾಂತಿಯ ತೋಟವನ್ನಾಗಿ ರಾಜ್ಯವನ್ನು ಗಟ್ಟಿಗೊಳಿಸಬೇಕು” ಜಾತ್ಯತೀತತೆಯ ವಿರೋಧಿಗಳಿಗೆ ಚಾಟಿ ಬೀಸಿದರು.

ಬಿಜೆಪಿ ಯವರು ಗ್ಯಾರಂಟಿ ಫಲಾನುಭವಿಗಳ್ವಾ?

“ಸಂವಿಧಾನದ ಆಶಯದಂತೆ ಎಲ್ಲ ಜಾತಿ, ಎಲ್ಲ ಧರ್ಮದ ಮತ್ತು ಎಲ್ಲ ಪಕ್ಷದ ಬಡವರಿಗೆ ನಾವು ಗ್ಯಾರಂಟಿ ಗಳನ್ನು ಜಾರಿ ಮಾಡಿದ್ದೇವೆ. ಬಿಜೆಪಿಯವರು ಗ್ಯಾರಂಟಿಗಳ ಫಲಾನುಭವಿಗಳಲ್ಲವೇ? ಈ ಗ್ಯಾರಂಟಿಗಳು ನಿಲ್ಲುವುದಿಲ್ಲ. ನಮ್ಮ ಗ್ಯಾರಂಟಿಗಳಿಂದಾಗಿ ನಮ್ಮ ರಾಜ್ಯದ ನಮ್ಮ ಜನಗಳ ತಲಾ ಆದಾಯ ದೇಶದಲ್ಲೇ ನಂಬರ್ ಒನ್ ಆಗಿದೆ. ಈಗ ಜಿಡಿಪಿಯಲ್ಲಿ ದೇಶದಲ್ಲೇ ನಂಬರ್ ಒನ್ ಆಗಿದ್ದೇವೆ” ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಜಿಎಸ್‌ಟಿ ಜಾರಿ ಮಾಡಿ ಹೆಚ್ಚೆಚ್ಚು ವಿಧಿಸಿದ್ದೂ ಮೋದಿಯವರೇ, ಈಗ ಬೆನ್ನು ತಟ್ಟಿಕೊಳ್ಳುತ್ತಿರುವುದು ಮೋದಿಯವರೇ : ಸಿಎಂ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...