Homeಕರ್ನಾಟಕಚಲುವರಾಯಸ್ವಾಮಿ ವಿರುದ್ಧ ರಾಜ್ಯಪಾಲರಿಗೆ ಪತ್ರ ಬರೆದ ಪ್ರಕರಣ: ಇಬ್ಬರು ವಶಕ್ಕೆ

ಚಲುವರಾಯಸ್ವಾಮಿ ವಿರುದ್ಧ ರಾಜ್ಯಪಾಲರಿಗೆ ಪತ್ರ ಬರೆದ ಪ್ರಕರಣ: ಇಬ್ಬರು ವಶಕ್ಕೆ

- Advertisement -
- Advertisement -

ಕೃಷಿ ಸಚಿವ ಚಲುವರಾಯಸ್ವಾಮಿ ವಿರುದ್ಧ ರಾಜ್ಯಪಾಲರಿಗೆ ಬರೆಯಲಾಗಿದ್ದ ಲಂಚ ಆರೋಪ ಪತ್ರದ ಪ್ರಕರಣಕ್ಕೆ ಸಂಬಂಧಿಸಿದಂತೆ ​​ ಸಿಐಡಿ ಅಧಿಕಾರಿಗಳು ಇಬ್ಬರು ಅಧಿಕಾರಿಗಳನ್ನು ವಶಕ್ಕೆ ಪಡೆದುಕೊಂಡಿರುವ ಬಗ್ಗೆ ವರದಿಯಾಗಿದೆ.

ಕೆ.ಆರ್‌.ಪೇಟೆಯ ಕೃಷಿ ಅಧಿಕಾರಿಗಳಾದ ಶಿವಪ್ರಸಾದ್​, ಗುರುದತ್ ಎನ್ನುವರನ್ನು​​ ಸಿಐಡಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡು ತನಿಖೆ ನಡೆಸುತ್ತಿದ್ದಾರೆ.

ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್‌ ಅವರಿಗೆ ಸಚಿವ ಚಲುವರಾಯಸ್ವಾಮಿ ವಿರುದ್ಧ ಲಂಚ ಅರೋಪ ಮಾಡಿ ಪತ್ರವನ್ನು ಬರೆಯಲಾಗಿತ್ತು. ಏಳು ಕೃಷಿ ಅಧಿಕಾರಿಗಳು ಪತ್ರಕ್ಕೆ ಸಹಿ ಹಾಕಿದ್ದಾರೆ ಎನ್ನಲಾಗಿತ್ತು.

ಪ್ರಕರಣ ರಾಜ್ಯದಲ್ಲಿ ಚರ್ಚೆಗೆ  ಗ್ರಾಸವಾಗಿ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಪರಸ್ಪರ ಆರೋಪ, ಪ್ರತ್ಯಾರೋಪಕ್ಕೆ ಕಾರಣವಾಗಿತ್ತು. ತಕ್ಷಣ ಸಿಎಂ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಿ ಆದೇಶಿಸಿದ್ದರು.

ಇದೀಗ ಈ ಪತ್ರ ಯಾಕೆ ಬರೆದಿದ್ದಾರೆ ಎಂಬ ಬಗ್ಗೆ  ಸಿಐಡಿ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.

ಇದನ್ನು ಓದಿ: 1200 ಕಾರುಗಳ ಜೊತೆ ಮೆರವಣಿಗೆಯಲ್ಲಿ ತೆರಳಿ ಕಾಂಗ್ರೆಸ್ ಗೆ ಸೇರ್ಪಡೆಗೊಂಡ ಬಿಜೆಪಿ ಶಾಸಕ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಅಮೇಥಿ ಕಾಂಗ್ರೆಸ್ ಕಚೇರಿ ಮೇಲೆ ದಾಳಿ, ಕಾರ್ಯಕರ್ತನಿಗೆ ಹಲ್ಲೆ: ಬಿಜೆಪಿ ಮುಖಂಡರು ಸೇರಿ 10...

0
ಉತ್ತರ ಪ್ರದೇಶದ ಅಮೇಥಿಯಲ್ಲಿ ಕಾಂಗ್ರೆಸ್ ಪಕ್ಷದ ಕಚೇರಿ ಮೇಲೆ ಭಾನುವಾರ (ಮೇ 5) ಮಧ್ಯರಾತ್ರಿ ಅಪರಿಚಿತ ದುಷ್ಕರ್ಮಿಗಳ ಗುಂಪೊಂದು ದಾಳಿ ಮಾಡಿದೆ. ಪಕ್ಷದ ಕಚೇರಿಯ ಹೊರಗೆ ನಿಲ್ಲಿಸಿದ್ದ ಹಲವು ವಾಹನಗಳನ್ನು ಧ್ವಂಸಗೊಳಿಸಿದ ದುಷ್ಕರ್ಮಿಗಳು,...