Homeಮುಖಪುಟದೆಹಲಿಯ ಲೆಫ್ಟಿನೆಂಟ್ ಗವರ್ನರ್ ತಮ್ಮನ್ನೇ ನ್ಯಾಯಾಲಯ ಎಂದು ಭಾವಿಸಿರುವಂತಿದೆ: ಸುಪ್ರೀಂ ಕೋರ್ಟ್ ಕಿಡಿ

ದೆಹಲಿಯ ಲೆಫ್ಟಿನೆಂಟ್ ಗವರ್ನರ್ ತಮ್ಮನ್ನೇ ನ್ಯಾಯಾಲಯ ಎಂದು ಭಾವಿಸಿರುವಂತಿದೆ: ಸುಪ್ರೀಂ ಕೋರ್ಟ್ ಕಿಡಿ

- Advertisement -
- Advertisement -

ಸುಪ್ರೀಂ ಕೋರ್ಟ್‌ ಆದೇಶ ಉಲ್ಲಂಘಿಸಿ ಉತ್ತರ ಅರಾವಳಿ ಚಿರತೆ ವನ್ಯಜೀವಿ ಕಾರಿಡಾರ್‌ ಆಗಿರುವ ದೆಹಲಿ ರಿಜ್‌ ಅರಣ್ಯ ಪ್ರದೇಶದಲ್ಲಿ ಸುಮಾರು 1,100 ಮರಗಳನ್ನು ಕಡಿಯಲು ನಿರ್ದೇಶನ ನೀಡುವಾಗ ದೆಹಲಿ ಅಭಿವೃದ್ಧಿ ಪ್ರಾಧಿಕಾರದ (ಡಿಡಿಎ) ಅಧ್ಯಕ್ಷರೂ ಆಗಿರುವ ಲೆಫ್ಟಿನೆಂಟ್ ಗವರ್ನರ್ ವಿ.ಕೆ ಸಕ್ಸೇನಾ ಅವರು ತಮ್ಮ ವಿವೇಚನೆ ಬಳಸಿಲ್ಲ ಎಂದು ಸುಪ್ರೀಂ ಕೋರ್ಟ್‌ ಶುಕ್ರವಾರ ಕಿಡಿಕಾರಿದೆ.

ನ್ಯಾಯಾಲಯದ ಪೂರ್ವಾನುಮತಿ ಪಡೆಯದೆ ಮರಗಳನ್ನು ಕಡಿಯಲು ಲೆ. ಗವರ್ನರ್‌ ಅನುಮತಿಸಿದ್ದಕ್ಕೆ ನ್ಯಾಯಮೂರ್ತಿಗಳಾದ ಅಭಯ್ ಎಸ್ ಓಕಾ ಮತ್ತು ಉಜ್ಜಲ್ ಭುಯಾನ್ ಅವರಿದ್ದ ಪೀಠ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಅಲ್ಲದೆ ತಮ್ಮ ಪಾತ್ರ ಮುಚ್ಚಿಡಲು ಲೆ. ಗವರ್ನರ್‌ ಯತ್ನಿಸಿದ್ದನ್ನು ಖಂಡಿಸಿತು. ಮರ ಕಡಿಯಲು ತಾನು ನಿರ್ದೇಶನ ನೀಡಿದ್ದಾಗಿ ವಿಚಾರಣೆಯ ಮೊದಲ ದಿನವೇ ಲೆ. ಗವರ್ನರ್‌ ತಿಳಿಸಬೇಕಿತ್ತು ಎಂದು ಪೀಠ ಹೇಳಿದೆ.

ಮೊದಲ ದಿನವೇ ಲೆ. ಗವರ್ನರ್‌ ನಿರ್ದೇಶನ ನೀಡಿದ್ದಾರೆ ಎಂಬುವುದನ್ನು ನಮಗೆ ತಿಳಿಸಬೇಕಿತ್ತು. ಮೂರು ದಿನ ಆ ವಿಷಯ ಮುಚ್ಚಿಡಲಾಯಿತು. ಅಲ್ಲದೆ ಲೆ. ಗವರ್ನರ್‌ ಸಕ್ಸೇನಾ ಅವರು ತಮ್ಮನ್ನು ತಾವೇ ನ್ಯಾಯಾಲಯ ಎಂದು ಭಾವಿಸಿದಂತಿದೆ ಎಂದು ನ್ಯಾಯಾಲಯ ಕಿಡಿಕಾರಿದೆ. ಲೆ. ಗವರ್ನರ್‌ ಸೇರಿದಂತೆ ಎಲ್ಲರೂ ಪ್ರಕರಣದಲ್ಲಿ ತಪ್ಪು ಮಾಡಿದ್ದು, ನ್ಯಾಯಾಲಯಕ್ಕೆ ಸ್ಪಷ್ಟೀಕರಣ ನೀಡುವ ಬದಲು ಕೃತ್ಯವನ್ನು ಮುಚ್ಚಿಡಲು ಮುಂದಾಗಿದ್ದಾರೆ ಎಂದಿದೆ.

ಈ ಬೆಳವಣಿಗೆಗಳು ವಿಷಾದಕರ ಎಂದಿರುವ ನ್ಯಾಯಾಲಯ ಲೆ. ಗವರ್ನರ್‌ ಕ್ರಮಗಳನ್ನು ಸಮರ್ಥಿಸಿಕೊಂಡಿದ್ದ ಅವರ ಪರ ಹಿರಿಯ ವಕೀಲ ಮಣಿಂದರ್ ಸಿಂಗ್ ಅವರನ್ನು ತರಾಟೆಗೆ ತೆಗೆದುಕೊಂಡಿದೆ.

ಇದೇ ವೇಳೆ ಮರ ಕಡಿಯಲು ಅನುಮತಿಸಲಾಗದು ಎಂದು ಲೆ. ಗವರ್ನರ್‌ಗೆ ತಿಳಿಸಲಾಗಿತ್ತೇ ಎಂಬ ಬಗ್ಗೆ ಸರ್ಕಾರಿ ಅಧಿಕಾರಿಗಳು ಮತ್ತು ಡಿಡಿಎ ಅಧಿಕಾರಿಗಳು ತನಗೆ ತಿಳಿಸಬೇಕು ಎಂದು ಸುಪ್ರೀಂ ಕೋರ್ಟ್‌ ತಿಳಿಸಿದೆ. ಅಲ್ಲದೆ ಲೆ. ಗವರ್ನರ್‌ ಅಣತಿಯಂತೆ ಮರ ಕಡಿಯಲು ನಿರ್ಧರಿಸಲಾಗಿತ್ತೇ ಅಥವಾ ಸ್ವತಂತ್ರವಾಗಿ ನಿರ್ಧಾರ ಕೈಗೊಳ್ಳಲಾಗಿತ್ತೆ ಎಂಬುದನ್ನು ವಿವರಿಸುವಂತೆಯೂ ಡಿಡಿಎಗೆ ಅದು ನಿರ್ದೇಶಿಸಿದೆ.

ಯಾರ ಸೂಚನೆಯ ಮೇರೆಗೆ ಅವರು ಕ್ರಮಕ್ಕೆ ಮುಂದಾಗಿದ್ದಾರೆ ಎಂದು ತಿಳಿಸುವಂತೆ ಮರ ಕಡಿದಿದ್ದ ಗುತ್ತಿಗೆದಾರರಿಗೆ ನೋಟಿಸ್ ಜಾರಿ ಮಾಡಲಾಗಿದೆ. ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವ ಬಗ್ಗೆ ಸರ್ಕಾರ ವಿವರಿಸಬೇಕು ಎಂದು ಕೂಡ ಪೀಠ ತಾಕೀತು ಮಾಡಿದೆ.

ಇದನ್ನೂ ಓದಿ : ಉಪ ಚುನಾವಣೆ : 13 ಕ್ಷೇತ್ರಗಳ ಪೈಕಿ 10ರಲ್ಲಿ ಇಂಡಿಯಾ ಒಕ್ಕೂಟದ ಪಕ್ಷಗಳಿಗೆ ಗೆಲುವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಎಸ್‌ಐಆರ್ ಬಳಿಕ ಮತದಾರರ ಪಟ್ಟಿಯಿಂದ ಸುಮಾರು 91 ಲಕ್ಷ ಹೆಸರುಗಳು ಡಿಲೀಟ್

ಚುನಾವಣಾ ಆಯೋಗ ಬಿಡುಗಡೆ ಮಾಡಿದ ಮಾಹಿತಿಯ ಪ್ರಕಾರ, ರಾಜ್ಯದಲ್ಲಿ ವಿಶೇಷ ತೀವ್ರ ಪರಿಷ್ಕರಣೆ ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಸುಮಾರು 91 ಲಕ್ಷ ಮತದಾರರನ್ನು ಮತದಾರರ ಪಟ್ಟಿಯಿಂದ ಅಳಿಸಲಾಗಿದೆ. ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯ ನಂತರ...

ಇರಾನ್ ನೂತನ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ ‘ಪ್ರಜ್ಞಾಹೀನ’, ಕೋಮ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ: ವರದಿ

ಇರಾನ್‌ನ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ ಅವರು ಕೋಮ್‌ನಲ್ಲಿ ವೈದ್ಯಕೀಯ ಚಿಕಿತ್ಸೆ ಪಡೆಯುತ್ತಿದ್ದಾರೆ ಮತ್ತು ಪ್ರಜ್ಞಾಹೀನರಾಗಿದ್ದಾರೆ ಎಂದು ನಂಬಲಾಗಿದೆ ಎಂದು ಗುಪ್ತಚರ ಆಧಾರಿತ ರಾಜತಾಂತ್ರಿಕ ಜ್ಞಾಪಕ ಪತ್ರವನ್ನು ಉಲ್ಲೇಖಿಸಿ ದಿ ಟೈಮ್ಸ್ ವರದಿ...

ಪ. ಬಂಗಾಳ : ಎಸ್‌ಐಆರ್‌ನಲ್ಲಿ ಮತದಾರರ ಪಟ್ಟಿಯಿಂದ ಕೈ ಬಿಟ್ಟಿದ್ದ ಮತ್ತೊಬ್ಬ ಕಾಂಗ್ರೆಸ್ ಅಭ್ಯರ್ಥಿಯ ಹೆಸರು ಮರು ಸೇರ್ಪಡೆ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ ವೇಳೆ (ಎಸ್‌ಐಆರ್‌) ತೆಗೆದು ಹಾಕಿದ್ದ ಮತ್ತೊಬ್ಬ ಕಾಂಗ್ರೆಸ್ ಅಭ್ಯರ್ಥಿಯ ಹೆಸರನ್ನು ಮತದಾರರ ಪಟ್ಟಿಗೆ ಮರು ಸೇರ್ಪಡೆಗೊಳಿಸುವಂತೆ ಮೇಲ್ಮನವಿ ನ್ಯಾಯಮಂಡಳಿ ಸೋಮವಾರ (ಏ.6) ಆದೇಶಿಸಿರುವುದಾಗಿ ವರದಿಯಾಗಿದೆ. ರತುವಾ...

ಹೈದರಾಬಾದ್| ಐಪಿಎಲ್ ಪಂದ್ಯದಿಂದ ಭಾರೀ ಸಂಚಾರ ದಟ್ಟಣೆ; ಆಂಬ್ಯುಲೆನ್ಸ್‌ನಲ್ಲಿದ್ದ ಮಹಿಳೆ ಸಾವು

ಏಪ್ರಿಲ್ 5 ರ ಭಾನುವಾರ ಉಪ್ಪಳದಲ್ಲಿ ಉಂಟಾದ ಭಾರೀ ಸಂಚಾರ ದಟ್ಟಣೆಯಿಂದಾಗಿ ಒಂದು ಗಂಟೆಗೂ ಹೆಚ್ಚು ಕಾಲ ಆಂಬ್ಯುಲೆನ್ಸ್‌ನಲ್ಲಿ ಸಿಲುಕಿಕೊಂಡಿದ್ದ ಬಿಷ್ಣಾ ಎಂಬ 30 ವರ್ಷದ ಮಹಿಳೆ ಸಾವನ್ನಪ್ಪಿದ ದುರಂತ ಘಟನೆ ನಡೆದಿದೆ. ಉಪ್ಪಳದ...

ಪಶ್ಚಿಮ ಬಂಗಾಳ: ನಂದಿಗ್ರಾಮದಲ್ಲಿ ಎಸ್‌ಐಆರ್ ಪೂರಕ ಪಟ್ಟಿಯಿಂದ 95% ಮುಸ್ಲಿಂ ಮತದಾರರ ಹೆಸರು ತೆಗೆದುಹಾಕಲಾಗಿದೆ: ವರದಿ 

ಸುವೇಂದು ಅಧಿಕಾರಿ ಪ್ರತಿನಿಧಿಸುವ ಪೂರ್ವ ಮಿಡ್ನಾಪುರ ವಿಧಾನಸಭಾ ಕ್ಷೇತ್ರವಾದ ನಂದಿಗ್ರಾಮದಲ್ಲಿ ಒಂದು ಅಧ್ಯಯನವು ಆತಂಕಕಾರಿ ಅಸಮಾನತೆಯನ್ನು ಎತ್ತಿ ತೋರಿಸಿದೆ, ಅಲ್ಲಿ ಮತದಾರರಲ್ಲಿ ಕಡಿಮೆ ಪಾಲು ಇದ್ದರೂ ಎಸ್‌ಐಆರ್ ಪೂರಕ ಪಟ್ಟಿಯಿಂದ ಅಳಿಸಲಾದ ಮತದಾರರಲ್ಲಿ...

ಟೋಲ್ ಪ್ಲಾಜಾಗಳಲ್ಲಿನ ಅಶುಚಿತ್ವ ಶೌಚಾಲಯಗಳ ಬಗ್ಗೆ ವರದಿ ಮಾಡಿದರೆ ಬಹುಮಾನ: ಕೇಂದ್ರ ಸರ್ಕಾರ

ರಾಷ್ಟ್ರೀಯ ಹೆದ್ದಾರಿಗಳಲ್ಲಿನ ನೈರ್ಮಲ್ಯದ ಬಗ್ಗೆ ದೀರ್ಘಕಾಲದ ಕಳವಳಗಳನ್ನು ಪರಿಹರಿಸುವ ಪ್ರಯತ್ನದಲ್ಲಿ, ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ (MoRTH) ಟೋಲ್ ಪ್ಲಾಜಾಗಳಲ್ಲಿ ಅಶುಚಿಯಾದ ಶೌಚಾಲಯ ಸೌಲಭ್ಯಗಳ ಬಗ್ಗೆ ವರದಿ ಮಾಡಲು ಪ್ರಯಾಣಿಕರನ್ನು ಪ್ರೋತ್ಸಾಹಿಸುವ...

ಮಣಿಪುರ: ಬಾಂಬ್ ದಾಳಿಗೆ ಇಬ್ಬರು ಮಕ್ಕಳು ಬಲಿ; ಕುಕಿ ದಂಗೆಕೋರರಿಂದ ದಾಳಿ ಆರೋಪ; ಇದು ಅನಾಗರಿಕ ಕೃತ್ಯ ಎಂದ ಸಿಎಂ 

ಗುವಾಹಟಿ: ಮಣಿಪುರದ ಮೈತೇಯಿ ಪ್ರಾಬಲ್ಯದ ಬಿಷ್ಣುಪುರ ಜಿಲ್ಲೆಯಲ್ಲಿ ಮಂಗಳವಾರ ಮನೆಯೊಂದರ ಮೇಲೆ ಬಾಂಬ್ ದಾಳಿ ನಡೆದಿದ್ದು, ಘಟನೆಯಲ್ಲಿ ಐದು ತಿಂಗಳ ಗಂಡು ಮಗು ಸೇರಿದಂತೆ ಇಬ್ಬರು ಅಪ್ರಾಪ್ತ ವಯಸ್ಕರು ಸಾವನ್ನಪ್ಪಿರುವ ಘಟನೆ ನಡೆದಿದೆ.  ಮೊಯಿರಾಂಗ್...

ಮುಖ್ಯ ಚುನಾವಣಾ ಆಯುಕ್ತರ ಪದಚ್ಯುತಿಗೆ ವಿಪಕ್ಷಗಳಿಂದ ನೋಟಿಸ್‌ : ಕಾರಣ ನೀಡದೆ ತಿರಸ್ಕರಿಸಿದ ಸಂಸತ್ತಿನ ಉಭಯ ಸದನಗಳ ಮುಖ್ಯಸ್ಥರು-ವರದಿ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸಲು ವಿಪಕ್ಷ ಸಂಸದರು ಸಲ್ಲಿಸಿದ್ದ ನಿಲುವಳಿ ನೋಟಿಸ್ ಅನ್ನು ರಾಜ್ಯಸಭಾ ಅಧ್ಯಕ್ಷ ಸಿ.ಪಿ. ರಾಧಾಕೃಷ್ಣನ್ ಮತ್ತು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ತಿರಸ್ಕರಿಸಿದ್ದಾರೆ. ಉಭಯ...

ಎನ್‌ಸಿಪಿ ನಾಯಕನ ಕೊಲೆ ಪ್ರಕರಣ : ಛತ್ತೀಸ್‌ಗಢ ಮಾಜಿ ಸಿಎಂ ಅಜಿತ್ ಜೋಗಿ ಮಗ ಅಮಿತ್ ಜೋಗಿಗೆ ಜೀವಾವಧಿ ಶಿಕ್ಷೆ

2003ರ ಕೊಲೆ ಪ್ರಕರಣದಲ್ಲಿ ಛತ್ತೀಸ್‌ಗಢ ಹೈಕೋರ್ಟ್ ಮಾಜಿ ಮುಖ್ಯಮಂತ್ರಿ ಅಜಿತ್ ಜೋಗಿ ಅವರ ಪುತ್ರ ಅಮಿತ್ ಜೋಗಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ ಎಂದು ದಿ ಹಿಂದೂ ಸೋಮವಾರ (ಏ.6) ವರದಿ ಮಾಡಿದೆ. ರಾಷ್ಟ್ರೀಯವಾದಿ ಕಾಂಗ್ರೆಸ್...

ಪ. ಬಂಗಾಳ | ಮತದಾರರ ಪಟ್ಟಿಯಿಂದ ಕೈಬಿಟ್ಟಿದ್ದಕ್ಕೆ ಸೂಕ್ತ ಕಾರಣ ನೀಡದ ಚುನಾವಣಾ ಆಯೋಗ : ಕಾಂಗ್ರೆಸ್ ಅಭ್ಯರ್ಥಿ ಹೆಸರು ಮರು ಸೇರ್ಪಡೆ

ಪಶ್ಚಿಮ ಬಂಗಾಳದ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲ್ಪಟ್ಟವರ ಅರ್ಜಿಗಳ ವಿಚಾರಣೆಗಾಗಿ ಕೋಲ್ಕತ್ತಾದಲ್ಲಿ ಸ್ಥಾಪಿಸಲಾದ ಮೇಲ್ಮನವಿ ನ್ಯಾಯಮಂಡಳಿಯು, ಮುಂಬರುವ ವಿಧಾನಸಭಾ ಚುನಾವಣೆಯ ಫರಕ್ಕಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮೊತಾಬ್ ಶೇಖ್ ಅವರ ಹೆಸರನ್ನು ಭಾನುವಾರ...