Homeಮುಖಪುಟಎಲ್‌ಐಸಿ ಕಚೇರಿ ಬೆಂಕಿ ಪ್ರಕರಣಕ್ಕೆ ತಿರುವು : ಅಕ್ರಮ ಮುಚ್ಚಿ ಹಾಕಲು ಸಹೋದ್ಯೋಗಿಯಿಂದ ವ್ಯವಸ್ಥಾಪಕಿಯ ಕೊಲೆ...

ಎಲ್‌ಐಸಿ ಕಚೇರಿ ಬೆಂಕಿ ಪ್ರಕರಣಕ್ಕೆ ತಿರುವು : ಅಕ್ರಮ ಮುಚ್ಚಿ ಹಾಕಲು ಸಹೋದ್ಯೋಗಿಯಿಂದ ವ್ಯವಸ್ಥಾಪಕಿಯ ಕೊಲೆ ಎಂದ ತನಿಖೆ

- Advertisement -
- Advertisement -

ಡಿಸೆಂಬರ್‌ನಲ್ಲಿ ಮಧುರೈನ ಜೀವ ವಿಮಾ ನಿಗಮ (ಎಲ್‌ಐಸಿ) ಕಚೇರಿಯಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಹಿರಿಯ ಮಹಿಳಾ ಅಧಿಕಾರಿಯೊಬ್ಬರು ಸಾವನ್ನಪ್ಪಿದ್ದು, ಆರಂಭದಲ್ಲಿ ನಂಬಿದಂತೆ ಅದು ಆಕಸ್ಮಿಕ ಸಾವಲ್ಲ, ಕೊಲೆ ಎಂದು ತಮಿಳುನಾಡು ಪೊಲೀಸರು ತೀರ್ಮಾನಿಸಿದ್ದಾರೆ. ಡಿಸೆಂಬರ್ 17ರಂದು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಆರೋಪದ ಮೇಲೆ ಪುರುಷ ಸಹೋದ್ಯೋಗಿಯನ್ನು ಬಂಧಿಸಲಾಗಿದೆ.

ಬಂಧಿತ ಆರೋಪಿಯನ್ನು ಪಶ್ಚಿಮ ಪೆರುಮಾಳ್ ಮೇಸ್ತ್ರಿ ಬೀದಿಯಲ್ಲಿರುವ ಎಲ್‌ಐಸಿ ಕಚೇರಿಯ ಸಹಾಯಕ ಆಡಳಿತ ಅಧಿಕಾರಿ ಟಿ. ರಾಮ್ ಎಂದು ಗುರುತಿಸಲಾಗಿದೆ. ರಾಮ್ 54 ವರ್ಷದ ಕಲ್ಯಾಣಿ ನಂಬಿ ಅವರನ್ನು ಕೊಂದಿದ್ದು, ಕಚೇರಿ ಕ್ಯಾಬಿನ್‌ನಲ್ಲಿ ಸುಟ್ಟು ಕರಕಲಾಗಿರುವ ಮೃತದೇಹ ಕಂಡುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರಂಭದಲ್ಲಿ ಎಸಿಯಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿದೆ ಎಂದು ಶಂಕಿಸಲಾಗಿತ್ತು. ಪೊಲೀಸರ ಹೆಚ್ಚಿನ ತನಿಖೆಯಲ್ಲಿ ಕಲ್ಯಾಣಿ ನಂಬಿಯ ಕ್ಯಾಬಿನ್‌ನೊಳಗೆ ರಾಮ್ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ ಎಂದು ತಿಳಿದುಬಂದಿದೆ. ವಿಮಾ ಕ್ಲೇಮ್ ಸೆಟಲ್‌ಮೆಂಟ್‌ಗಳಲ್ಲಿ ಅಕ್ರಮಗಳ ಬಗ್ಗೆ ಕಲ್ಯಾಣಿ ಗಂಭೀರ ಕಳವಳ ವ್ಯಕ್ತಪಡಿಸಿದ ನಂತರ, ಅವರನ್ನು ಮೌನಗೊಳಿಸಲು ಈ ಅಪರಾಧ ಮಾಡಲಾಗಿದೆ ಎಂದು ತನಿಖಾಧಿಕಾರಿಗಳು ಹೇಳಿದ್ದಾರೆ.

ತನಿಖೆಯಿಂದ ತಿಳಿದುಬಂದಂತೆ, ರಾಮ್ 40ಕ್ಕೂ ಹೆಚ್ಚು ಸಾವಿನ ಕ್ಲೈಮ್ ಫೈಲ್‌ಗಳನ್ನು ಬಹಳ ಸಮಯದಿಂದ ಪರಿಶೀಲಿಸುತ್ತಿದ್ದಾರೆ ಎಂದು ಹಲವಾರು ವಿಮಾ ಏಜೆಂಟ್‌ಗಳು ಕಲ್ಯಾಣಿಗೆ ದೂರು ನೀಡಿದ್ದರು. ಕಲ್ಯಾಣಿ ಈ ಸಂಬಂಧ ರಾಮ್ ಅವರನ್ನು ಪ್ರಶ್ನಿಸಿ, ವಿಷಯವನ್ನು ಹಿರಿಯ ಅಧಿಕಾರಿಗಳಿಗೆ ತಿಳಿಸುವುದಾಗಿ ಎಚ್ಚರಿಸಿದ್ದರು. ಹಾಗಾಗಿ, ಕಲ್ಯಾಣಿಯ ಸದ್ದಡಗಿಸಲು ಮತ್ತು ಬಾಕಿ ಇರುವ ಫೈಲ್‌ಗಳನ್ನು ನಾಶಮಾಡಲು ರಾಮ್ ನಿರ್ಧರಿಸಿದ್ದಾರೆ ಎಂದು ವರದಿಯಾಗಿದೆ.

ಆರಂಭದಲ್ಲಿ ಬೆಂಕಿ ಆಕಸ್ಮಿಕ ಎಂದು ನಂಬಲಾಗಿದ್ದರೂ, ಮೃತ ಕಲ್ಯಾಣಿ ಅವರ ಮಗ ಪೊಲೀಸರಿಗೆ ದೂರು ನೀಡಿದಾಗ ಅನುಮಾನಗಳು ಹುಟ್ಟಿಕೊಂಡಿತ್ತು. ಬೆಂಕಿ ಘಟನೆ ನಡೆಯುವ ಕೆಲವೇ ನಿಮಿಷಗಳ ಮೊದಲು ತಾಯಿ ತನಗೆ ಕರೆ ಮಾಡಿದ್ದರು. ಆಕೆ ಅಳುತ್ತಾ, ತಕ್ಷಣ ಪೊಲೀಸರಿಗೆ ತಿಳಿಸುವಂತೆ ಹೇಳಿದ್ದರು ಎಂದು ಕಲ್ಯಾಣಿಯವರ ಮಗ ತನ್ನ ದೂರಿನಲ್ಲಿ ವಿವರಿಸಿದ್ದರು. ‘

ಘಟನಾ ಸ್ಥಳದಲ್ಲಿ ಪೊಲೀಸರು ಹಲವಾರು ಅಸಾಮಾನ್ಯ ವಿವರಗಳನ್ನು ಕೂಡ ಕಂಡುಕೊಂಡಿದ್ದರು. ಕಲ್ಯಾಣಿ ಅವರು ಕೆಲಸ ಮಾಡುತ್ತಿದ್ದ ಕ್ಯಾಬಿನ್, ಸಾಮಾನ್ಯವಾಗಿ ಕಚೇರಿ ಸಮಯದಲ್ಲಿ ತೆರೆದಿರುತ್ತದೆ. ಆದರೆ, ಘಟನೆ ನಡೆದ ದಿನ ಹೊರಗಿನಿಂದ ಸರಪಳಿಯಿಂದ ಲಾಕ್ ಆಗಿರುವುದು ಕಂಡುಬಂದಿದೆ. ಆರೋಪಿ ರಾಮ್‌ಗೆ ಕೂಡ ಸಣ್ಣಪುಟ್ಟ ಸುಟ್ಟ ಗಾಯಗಳಾಗಿತ್ತು. ತನ್ನ ಗಾಯಗಳು ಆಕಸ್ಮಿಕ ಎಂದು ಆತ ಆರಂಭದಲ್ಲಿ ಹೇಳಿಕೊಂಡಿದ್ದರು.

ವಿಚಾರಣೆಯ ಸಮಯದಲ್ಲಿ, ಪೊಲೀಸರು ರಾಮ್ ಹೇಳಿಕೆಗಳಲ್ಲಿ ಅಸಮಂಜಸತೆಯನ್ನು ಕಂಡುಕೊಂಡಿದ್ದು, ಪೊಲೀಸರ ಪ್ರಕಾರ, ಅವರು ವಿರೋಧಾತ್ಮಕ ಉತ್ತರಗಳನ್ನು ನೀಡಿದ್ದಾರೆ. ಇದು ತನಿಖಾಧಿಕಾರಿಗಳು ಆಳವಾದ ತನಿಖೆ ನಡೆಸಲು ಕಾರಣವಾಯಿತು. ತನಿಖೆಯ ಸಮಯದಲ್ಲಿ ಸಂಗ್ರಹಿಸಿದ ಪುರಾವೆಗಳು ಅವಘಡಕ್ಕಿಂತ ಹೆಚ್ಚಾಗಿ ಉದ್ದೇಶಪೂರ್ವಕ ಕೃತ್ಯದ ಕಡೆಗೆ ಕೈ ತೋರಿಸಿದ್ದವು ಎಂದು ವರದಿಯಾಗಿದೆ.

ರಾಮ್ ವಿರುದ್ಧ ಕ್ರಮ ಕೈಗೊಳ್ಳುವ ಬಗ್ಗೆ ಕಲ್ಯಾಣಿ ನಂಬಿ ನೀಡಿದ ಎಚ್ಚರಿಕೆಯೇ ಅಪರಾಧದ ಹಿಂದಿನ ಪ್ರಮುಖ ಉದ್ದೇಶವೆಂದು ತೋರುತ್ತದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಘಟನೆಯ ಬಗ್ಗೆ ಎಲ್‌ಐಸಿ ಅಧಿಕಾರಿಗಳು ಇನ್ನೂ ಅಧಿಕೃತ ಹೇಳಿಕೆ ನೀಡಿಲ್ಲ ಎಂದು moneycontrol.com ವರದಿ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...