Homeಕರ್ನಾಟಕನಿಜಗುಣಾನಂದ ಸ್ವಾಮೀಜಿಗೆ ಮತ್ತೆ ಜೀವ ಬೆದರಿಕೆ ಪತ್ರ!: ಮೂವರು ಸಚಿವರ ಹೆಸರು ಉಲ್ಲೇಖ

ನಿಜಗುಣಾನಂದ ಸ್ವಾಮೀಜಿಗೆ ಮತ್ತೆ ಜೀವ ಬೆದರಿಕೆ ಪತ್ರ!: ಮೂವರು ಸಚಿವರ ಹೆಸರು ಉಲ್ಲೇಖ

- Advertisement -
- Advertisement -

ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲ್ಲೂಕಿನ ಬೈಲೂರು ನಿಷ್ಕಲ ಮಂಟಪದ ನಿಜಗುಣಾನಂದ ಸ್ವಾಮೀಜಿ ಅವರಿಗೆ ಅನಾಮಿಕನಿಂದ ಕೊಲೆ ಬೆದರಿಕೆ ಪತ್ರ ಬಂದಿತ್ತು. ಇದೀಗ ಸೆ.20 ಮತ್ತೊಂದು ಜೀವ ಬೆದರಿಕೆ ಪತ್ರ ಸ್ವಾಮೀಜಿಗೆ ಬಂದಿದ್ದು, ಪತ್ರದಲ್ಲಿ ಸ್ವಾಮೀಜಿ ಸೇರಿದಂತೆ ರಾಜ್ಯದ ಮೂವರು ಸಚಿವರ ಹೆಸರನ್ನು ಉಲ್ಲೇಖಿಸಲಾಗಿದೆ.

ಕೆಲ ದಿನಗಳ ಹಿಂದೆಯೂ ನಿಜಗುಣಾನಂದ ಸ್ವಾಮೀಜಿಗೆ ಜೀವ ಬೆದರಿಕೆ ಪತ್ರ ಬಂದಿತ್ತು. ಇದೀಗ ಮತ್ತೊಂದು ಜೀವಬೆದರಿಕೆ ಪತ್ರ ಬಂದಿದ್ದು, ಅದರಲ್ಲಿ, ಸಚಿವರಾದ ಸತೀಶ್ ಜಾರಕಿಹೊಳಿ, ದಿನೇಶ್ ಗುಂಡೂರಾವ್, ಪ್ರೀಯಾಂಕ್ ಖರ್ಗೆ ಅವರ ಹೆಸರು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಪತ್ರದಲ್ಲಿ ಏನಿದೆ?

”ನಿಜಗುಣಾನಂದ, ನಾನು ಬರೆದಿರುವ ಪತ್ರ ಪ್ರೇಮ ಪತ್ರ ಅಂತಾದರೂ ತಿಳಿ ಅಥವಾ ಸಾವಿನ ಪತ್ರವಂತಾದರೂ ತಿಳಿ, ನಾನು ನಿನ್ನ ಜತೆ ತಮಾಷೆ‌ ಮಾಡುತ್ತಿಲ್ಲ. ನೀನು ಆಯೋಜಿಸುವ ಪಾಪದ ಕಾರ್ಯಕ್ರಮದಲ್ಲೇ ನಿನ್ನ ಕಣ್ಣೆದುರಿಗೆ ನಿನ್ನ ಸಾವು ಬರುತ್ತೆ. ನೀನು ಮನುಷ್ಯ ರೂಪದಲ್ಲಿರುವ ರಾಕ್ಷಸ. ಹಿಂದೂ ಧರ್ಮ ದೇವತೆಗಳನ್ನು ನಿಂದಿಸುವ ನೀನು ರಾಕ್ಷಸನೇ ಸರಿ. ನಿನ್ನ ಜೀವನದ‌ ಕೊನೆಯ ಘಟ್ಟದಲ್ಲಿ ನೀನು ನಿಂತಿದ್ದಿಯಾ. ನಿನ್ನ ಹತ್ಯೆ ಬಿಟ್ಟರೆ ಬೇರೆ ದಾರಿ ಇಲ್ಲ. ನಿನ್ನಂಥ ದುಷ್ಟ ರಾಕ್ಷಸಿ ಸಂತತಿಯ ಸಂಹಾರವನ್ನು ಯಾರಿಂದಲೂ ತಪ್ಪಿಸಲು ಸಾಧ್ಯವಿಲ್ಲ” ಎಂದು ಪತ್ರದಲ್ಲಿ ಬರೆಯಲಾಗಿದೆ.

”ಎಸ್.ಜಿ ಸಿದ್ದರಾಮಯ್ಯ, ಕೆ.ಮರುಳಸಿದ್ದಪ್ಪ, ಬರಗೂರು ರಾಮಚಂದ್ರಪ್ಪ, ಭಾಸ್ಕರ್ ಪ್ರಸಾದ್, ಪ್ರೋ.ಭಗವಾನ್, ಪ್ರೋ.ಮಹೇಶ್ ಚಂದ್ರ, ಬಿಟಿ ಲಲಿತಾನಾಯಕ್, ನಟ ಚೇತನ್, ನಟ ಪ್ರಕಾಶರಾಜ್. ಸಚಿವರಾದ ಪ್ರಿಯಾಂಕ್ ಖರ್ಗೆ, ಸತೀಶ್ ಜಾರಕಿಹೊಳಿ, ದಿನೇಶ್ ಗುಂಡೂರಾವ್ ಹಾಗೂ ಧ್ವಾರಕಾನಾಥ, ದೇವನೂರು ಮಹದೇಪ್ಪ, ಬಿ.ಎಲ್ ವೇಣು, ನೀವು ನಿಮ್ಮ ತಂದೆ ತಾಯಿಗಳಿಗೆ ಹುಟ್ಟಿದ್ದರೆ ಕೇಳುವ ಪ್ರಶ್ನೆಗೆ ಉತ್ತರ ಕೊಡಿ” ಎಂದು ಹೇಳಿದ್ದಾರೆ.

”ಮತಾಂಧ ಮುಸ್ಲಿಂಮರು, ಪಾಕಿಸ್ತಾನಿಗಳು, ಭಯೋತ್ಪಾದಕರು ಮಾಡುತ್ತಿರುವುದು ತಪ್ಪು ಎಂದು ಹೇಳುವ ತಾಕತ್ತು ನಿಮ್ಮಲ್ಲಿದಿಯೇ? ದೇಶದ ಒಳಗೆ ಇದ್ದುಕೊಂಡು ಪಾಕ್ ನಾಯಿಗಳು ಮಾಡುತ್ತಿರುವುದು ತಪ್ಪು ‌ಎಂದು ಹೇಳುವ ಧೈರ್ಯ ನಿಮ್ಮಲ್ಲಿದೆಯೇ? ದೈರ್ಯವಿದ್ದರೆ ಹೇಳಿ ಇಲ್ಲವಾದರೆ ನಿಮ್ಮ ಕೊನೆಯ ‌ದಿನಗಳನ್ನು ಎಣಿಸಿ” ಎಂದು ಬೆದರಿಕೆ ಹಾಕಲಾಗಿದೆ.

ಇದನ್ನೂ ಓದಿ: ನಿಲ್ಲದ ಕೊಲೆ ಬೆದರಿಕೆ ಪತ್ರಗಳು; ಬಸವ ತತ್ವದ ಸ್ವಾಮೀಜಿಗಳ ಬೆನ್ನು ಹತ್ತಿದ ಮತಾಂಧರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಮಹಿಳೆಯರಿಗಷ್ಟೇ ಏಕೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...

ಉಪವಾಸ ಕೊನೆಗೊಳಿಸಲು ನಿರಾಕರಿಸಿದ ಸೋನಮ್ ವಾಂಗ್‌ಚುಕ್ : 19ನೇ ದಿನವೂ ಮುಂದುವರಿದ ಸತ್ಯಾಗ್ರಹ; ಇನ್ನಷ್ಟು ಹದಗೆಟ್ಟ ಆರೋಗ್ಯ

ರಾಜಕೀಯ ನಾಯಕರು, ಬೆಂಬಲಿಗರು ಮತ್ತು ಕಾನೂನು ಮಧ್ಯಸ್ಥಿಕೆಗಳ ಮೂಲಕ ಪದೇ ಪದೇ ಮನವಿ ಮಾಡಿಕೊಂಡಿದ್ದರೂ ಸಹ, ಹೋರಾಟಗಾರ ಸೋನಮ್ ವಾಂಗ್‌ಚುಕ್ ಅವರು ತಮ್ಮ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೊನೆಗೊಳಿಸಲು ನಿರಾಕರಿಸಿದ್ದಾರೆ. ಸರ್ಕಾರದ ಕಡೆಯಿಂದ...

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...