Homeಕರ್ನಾಟಕಪ್ರಕಾಶ್ ರಾಜ್‌ಗೆ ಜೀವಬೆದರಿಕೆ: ವಿಕ್ರಮ್‌ ಟಿ.ವಿ ವಾಹಿನಿ ವಿರುದ್ಧ ಎಫ್‌ಐಆರ್

ಪ್ರಕಾಶ್ ರಾಜ್‌ಗೆ ಜೀವಬೆದರಿಕೆ: ವಿಕ್ರಮ್‌ ಟಿ.ವಿ ವಾಹಿನಿ ವಿರುದ್ಧ ಎಫ್‌ಐಆರ್

- Advertisement -
- Advertisement -

ಬಹು ಭಾಷಾ ನಟ ಪ್ರಕಾಶ್ ರಾಜ್ ಹಾಗೂ ಅವರ ಕುಟುಂಬದವರಿಗೆ ಜೀವ ಬೆದರಿಕೆಯೊಡ್ಡುವ ವಿಡಿಯೊಗಳನ್ನು ವಿಕ್ರಮ್ ಟಿವಿ ಯೂಟ್ಯೂಬ್‌ನ ಚಾನೆಲ್ ಹರಿಬಿಟ್ಟಿದ್ದು, ಇದೀಗ ಅದರ ವಿರುದ್ಧ ಅಶೋಕನಗರ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

”ನಟ ಪ್ರಕಾಶ್ ರಾಜ್ ಅವರು ದೂರು ನೀಡಿದ್ದಾರೆ, ಅದನ್ನು ಆಧರಿಸಿ ವಿಕ್ರಮ್ ಟಿ.ವಿ ಯೂಟ್ಯೂಬ್ ಚಾನೆಲ್ ಮುಖ್ಯಸ್ಥರು ಹಾಗೂ ಇತರರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಲ್ಲರಿಗೂ ನೋಟಿಸ್‌ ನೀಡಿ ವಿಚಾರಣೆ ನಡೆಸಲಾಗುವುದು” ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಬೆಂಗಳೂರಿನ ಅಶೋಕ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ. ಐಪಿಸಿ ಸೆಕ್ಷನ್ 506, 504, 505(2) ಸೆಕ್ಷನ್‌ ಅಡಿಯಲ್ಲಿ ಮೊಕದ್ದಮೆ ದಾಖಲಾಗಿದ್ದು, ತನಿಖೆ ಮಾಡಲಾಗುತ್ತಿದೆ. ಯೂಟ್ಯೂಬ್​ ಚಾನೆಲ್​ನಲ್ಲಿ ಆಗಸ್ಟ್ 14ರಂದು ಜೀವ ಬೆದರಿಕೆ ಹಾಕುವ ಸಂದೇಶದ ರೀತಿಯಲ್ಲಿ ಸುದ್ದಿ ಪ್ರಸಾರ ಮಾಡಲಾಗಿತ್ತು. ಅಪ್ಲೋಡ್ ಮಾಡಿರುವ 2 ವಿಡಿಯೋಗಳಲ್ಲೂ ಬೆದರಿಕೆ ಹಾಕಲಾಗಿದೆ ಎಂದು ಪ್ರಕಾಶ್​ ರಾಜ್​ ಆರೋಪಿಸಿದ್ದಾರೆ.

ಪ್ರಕಾಶ್ ರಾಜ್ ಮಾತ್ರವಲ್ಲದೇ ಅವರ ಕುಟುಂಬದವರಿಗೂ ಜೀವ ಬೆದರಿಕೆ ಹಾಕಿದ ಆರೋಪದಲ್ಲಿ ಯೂಟ್ಯೂಬ್​ ವಾಹಿನಿ ವಿರುದ್ಧ ದೂರು ನೀಡಲಾಗಿದೆ. ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಲಾಗಿದೆ. ಪ್ರಕಾಶ್ ರಾಜ್ ನೀಡಿದ ದೂರಿನ ಅನ್ವಯ ಯೂಟ್ಯೂಬ್ ವಾಹಿ‌ನಿಯ ಮುಖ್ಯಸ್ಥ ಮತ್ತು ಸಿಬ್ಬಂದಿ ವಿರುದ್ಧ ಅಶೋಕ ನಗರ ಠಾಣೆ ಪೊಲೀಸರು ಎಫ್​ಐಆರ್​ ದಾಖಲು ಮಾಡಿದ್ದಾರೆ. ಸದ್ಯ ತನಿಖೆ ಆರಂಭ ಆಗಿದೆ.

ಈ ಬಗ್ಗೆ ಪ್ರಕಾಶ್ ರಾಜ್ ಅವರು ದೂರು ನೀಡಿದ್ದು, ದೂರಿನಲ್ಲಿ ”ನಟ ಹಾಗೂ ನಿರ್ದೇಶಕನಾಗಿರುವ ನಾನು ರಾಜ್ಯದಾದ್ಯಂತ ಪ್ರವಾಸ ಕೈಗೊಂಡು ವಿವಿಧ ವಿಷಯಗಳ ಚರ್ಚೆ ಸಂವಾದದಲ್ಲಿ ಪಾಲ್ಗೊಳ್ಳುತ್ತಿದ್ದೇನೆ. ಸೆ.14ರಂದು ವಿಕ್ರಮ್ ಟಿ.ವಿ. ಯೂಟ್ಯೂಬ್ ಹಾಗೂ ಫೇಸ್‌ಬುಕ್‌ನಲ್ಲಿ ಎರಡು ವಿಡಿಯೊ ವೀಕ್ಷಣೆ ಮಾಡಿದೆ. ಎರಡೂ ವಿಡಿಯೊದಲ್ಲಿ ನನ್ನ ಜೀವಕ್ಕೆ ಅಪಾಯವಾಗುವ ಸಂಗತಿಗಳಿದ್ದವು” ಎಂದು ತಿಳಿಸಿದ್ದಾರೆ.

”ಬೆದರಿಕೆ ಹಾಕುವ ಸ್ಟಾಲಿನ್, ಪ್ರಕಾಶ್ ರಾಜ್‌ನಂಥವರನ್ನು ಮುಗಿಸಬೇಕೆ…? ಹಿಂದೂಗಳು ಮಾಡಬೇಕಾಗಿರುವುದು ಏನು..? ಸನಾತನ ಧರ್ಮ/ಹಿಂದೂಗಳೇ ಮಲಗೆ ಇರ್ತಿರಾ..? ಎಂಬಿತ್ಯಾದಿ ಶಬ್ದಗಳನ್ನು ಬಳಸಿ ವಿಡಿಯೊ ಮಾಡಲಾಗಿದೆ.”

”ಈ ವಿಡಿಯೊವನ್ನು ಸಾವಿರಾರು ಮಂದಿ ವೀಕ್ಷಿಸಿದ್ದಾರೆ. ವಿಡಿಯೊದಲ್ಲಿರುವ ಅಂಶಗಳು ನನಗೆ ಹಾಗೂ ನನ್ನ ಕುಟುಂಬದವರಿಗೆ ಜೀವ ಬೆದರಿಕೆಯೊಡ್ಡುವಂತಿವೆ ಇಂಥ ವಿಡಿಯೊ ಮಾಡಿರುವ ಟಿವಿ ವಿಕ್ರಮ್ ಟಿವಿ ಯೂಟ್ಯೂಬ್ ಚಾನೆಲ್ ಮುಖ್ಯಸ್ಥರು ಹಾಗೂ ಇತರರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಿ ಎಂದು ಅವರು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ: ನಿಲ್ಲದ ಕೊಲೆ ಬೆದರಿಕೆ ಪತ್ರಗಳು; ಬಸವ ತತ್ವದ ಸ್ವಾಮೀಜಿಗಳ ಬೆನ್ನು ಹತ್ತಿದ ಮತಾಂಧರು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ: ಅಪಹರಣಕ್ಕೊಳಗಾಗಿದ್ದ ಸಂತ್ರಸ್ತೆಯ ರಕ್ಷಣೆ

0
ಅಪಹರಣಕ್ಕೊಳಗಾಗಿದ್ದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ, ಶಾಸಕ ಹೆಚ್‌.ಡಿ ರೇವಣ್ಣ ಅವರ ಮನೆ ಕೆಲಸದ ಮಹಿಳೆಯನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ)ದ ಅಧಿಕಾರಿಗಳು ಇಂದು (ಮೇ 4) ರಕ್ಷಣೆ ಮಾಡಿದ್ದಾರೆ. ಪ್ರಜ್ವಲ್...