Homeಮುಖಪುಟಯುಪಿ ಸಿಎಂ ಯೋಗಿ ಆದಿತ್ಯನಾಥ್‌ಗೆ ಜೀವ ಬೆದರಿಕೆ; 24 ವರ್ಷದ ಯುವತಿಯನ್ನು ಬಂಧಿಸಿದ ಮುಂಬೈ ಪೊಲೀಸ್

ಯುಪಿ ಸಿಎಂ ಯೋಗಿ ಆದಿತ್ಯನಾಥ್‌ಗೆ ಜೀವ ಬೆದರಿಕೆ; 24 ವರ್ಷದ ಯುವತಿಯನ್ನು ಬಂಧಿಸಿದ ಮುಂಬೈ ಪೊಲೀಸ್

- Advertisement -
- Advertisement -

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ಗೆ ಜೀವ ಬೆದರಿಕೆ ಹಾಕಿದ ಆರೋಪದ ಮೇಲೆ 24 ವರ್ಷದ ಯುವತಿಯನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ.

ಮಾಹಿತಿ ತಂತ್ರಜ್ಞಾನದಲ್ಲಿ ಬಿಎಸ್‌ಸಿ ಮಾಡಿರುವ ಫಾತಿಮಾ ಖಾನ್ ಎಂದು ಗುರುತಿಸಲಾದ ಮಹಿಳೆ, ತನ್ನ ಕುಟುಂಬ ಸದಸ್ಯರೊಂದಿಗೆ ಮಹಾರಾಷ್ಟ್ರದ ನೆರೆಯ ಥಾಣೆ ಜಿಲ್ಲೆಯ ಉಲ್ಹಾಸ್‌ನಗರ ಪ್ರದೇಶದಲ್ಲಿ ನೆಲೆಸಿದ್ದಳು.

ಮಹಿಳೆ ಉತ್ತಮ ಅರ್ಹತೆ ಹೊಂದಿದ್ದರೂ ಮಾನಸಿಕವಾಗಿ ಅಸ್ಥಿರಳಾಗಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

ಆದಿತ್ಯನಾಥ್ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡದಿದ್ದರೆ ಎನ್‌ಸಿಪಿ ನಾಯಕ ಬಾಬಾ ಸಿದ್ದಿಕ್ ಅವರಂತೆ ಕೊಲ್ಲಲಾಗುವುದು ಎಂದು ನಗರ ಪೊಲೀಸ್ ಟ್ರಾಫಿಕ್ ಕಂಟ್ರೋಲ್ ರೂಂಗೆ ಅಪರಿಚಿತ ಸಂಖ್ಯೆಯಿಂದ ಸಂದೇಶ ಬಂದಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಉತ್ತರ ಪ್ರದೇಶ ಸಿಎಂ ಮಹಾರಾಷ್ಟ್ರ ವಿಧಾನಸಭಾ ಚುನಾವಣಾ ಪ್ರಚಾರಕ್ಕಾಗಿ ಭೇಟಿ ನೀಡುವ ಸಾಧ್ಯತೆ ಇದೆ. ಬೆದರಿಕೆ ಸಂದೇಶದ ಕುರಿತು ಪೊಲೀಸರು ತನಿಖೆ ಆರಂಭಿಸಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.

ತನಿಖೆಯ ಸಮಯದಲ್ಲಿ, ಖಾನ್ ಸಂದೇಶವನ್ನು ಕಳುಹಿಸಿದ್ದನ್ನು ಪೊಲೀಸರು ಕಂಡುಕೊಂಡರು ಎಂದು ಅವರು ಹೇಳಿದರು.

ಮುಂಬೈ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಉಲ್ಲಾಸ್‌ನಗರ ಪೊಲೀಸರೊಂದಿಗೆ ಸಂಯೋಜಿತ ಕಾರ್ಯಾಚರಣೆಯಲ್ಲಿ ಮಹಿಳೆಯನ್ನು ಪತ್ತೆಹಚ್ಚಿ ಆಕೆಯನ್ನು ಬಂಧಿಸಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಇದನ್ನೂ ಓದಿ; ಕೆಲಸ ಮಾಡುತ್ತಿದ್ದ ಮನೆಯಲ್ಲೇ ದಲಿತ ಬಾಲಕಿ ಶವವಾಗಿ ಪತ್ತೆ; ಮನೆ ಮಾಲೀಕರಿಂದ ಚಿತ್ರಹಿಂಸೆ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಆಯೋಗ ಬಿಜೆಪಿ ಆಜ್ಞೆಯ ಮೇರೆಗೆ ಕೆಲಸ ಮಾಡುತ್ತಿದೆ: ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ

ವಿಧಾನಸಭಾ ಚುನಾವಣೆಗೂ ಮುನ್ನ, ಭಾರತದ ಚುನಾವಣಾ ಆಯೋಗ (ಇಸಿಐ) ಪ್ರಸ್ತುತ ಡಿಜಿಪಿ, ಕೋಲ್ಕತ್ತಾ ಪೊಲೀಸ್ ಆಯುಕ್ತರು, ಮುಖ್ಯ ಮತ್ತು ಗೃಹ ಕಾರ್ಯದರ್ಶಿಗಳನ್ನು ಬದಲಿಸುವ ಮೂಲಕ ಪ್ರಮುಖ ಪುನರ್ರಚನೆಯನ್ನು ಮಾಡಿದೆ. ಪಶ್ಚಿಮ ಬಂಗಾಳದ ಹೊಸ ಡಿಜಿ...

‘ಶಾಂತಿಗೆ ಇದು ಸಮಯವಲ್ಲ’: ‘ಕದನ ವಿರಾಮ’ ಪ್ರಸ್ತಾಪಗಳನ್ನು ತಿರಸ್ಕರಿಸಿದ ಇರಾನ್ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ 

ಇರಾನ್‌ನ ನೂತನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ ಅವರು ಉದ್ವಿಗ್ನತೆಯನ್ನು ಕಡಿಮೆ ಮಾಡುವ ಅಥವಾ ಎರಡು ಮಧ್ಯವರ್ತಿ ರಾಷ್ಟ್ರಗಳು ಟೆಹ್ರಾನ್‌ಗೆ ತಲುಪಿಸಿದ ಯುನೈಟೆಡ್ ಸ್ಟೇಟ್ಸ್‌ನೊಂದಿಗೆ ಕದನ ವಿರಾಮದ ಪ್ರಸ್ತಾಪಗಳನ್ನು ತಿರಸ್ಕರಿಸಿದರು ಎಂದು...

ಲೋಕಸಭೆ | 8 ವಿಪಕ್ಷ ಸಂಸದರ ಅಮಾನತು ರದ್ದು

ಲೋಕಸಭೆಯ ಎಂಟು ವಿಪಕ್ಷ ಸಂಸದರ ಅಮಾನತನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ಸ್ಪೀಕರ್ ಓಂ ಬಿರ್ಲಾ ಮಂಗಳವಾರ (ಮಾ.17) ವಾಪಸ್ ಪಡೆದಿದ್ದಾರೆ. ಅಶಿಸ್ತಿನ ಕಾರಣ ನೀಡಿ ಫೆಬ್ರವರಿ 8ರಂದು ಸಂಸದರನ್ನು ಅಮಾನತು ಮಾಡಲಾಗಿತ್ತು. ಅಮಾನತು...

ಪಿತೃತ್ವ ರಜೆಗೆ ಕಾನೂನು ತನ್ನಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಪಿತೃತ್ವ ರಜೆಯನ್ನು (paternity leave) ಸಾಮಾಜಿಕ ಭದ್ರತಾ ಸೌಲಭ್ಯವೆಂದು ಪರಿಗಣಿಸಿ ಕಾನೂನು ರೂಪಿಸುವಂತೆ ಸುಪ್ರೀಂ ಕೋರ್ಟ್ ಮಂಗಳವಾರ (ಮಾ.17) ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. ಈ ರಜೆಯ ಅವಧಿಯು ಪೋಷಕರು ಮತ್ತು ಮಗು ಇಬ್ಬರ...

‘ಕಾಲ ಎಲ್ಲಕ್ಕೂ ಉತ್ತರಿಸುತ್ತದೆ’; ಟಿವಿಕೆ ನಾಯಕನ ‘ಡಿಎಂಕೆ ಬೆದರಿಕೆ’ ಆರೋಪ ‘ಸತ್ಯಕ್ಕೆ ದೂರವಾದ ಮಾತು’ ಎಂದ ರಜನಿಕಾಂತ್

ರಾಜಕೀಯ ಪ್ರವೇಶಕ್ಕೆ ಯತ್ನಿಸಿದಾಗ ಡಿಎಂಕೆಯಿಂದ ಬೆದರಿಕೆ ಇತ್ತು ಎಂಬ ಟಿವಿಕೆ ನಾಯಕ ಆಧವ್ ಅರ್ಜುನ ಅವರ ಆರೋಪವನ್ನು ಸೂಪರ್‌ಸ್ಟಾರ್ ರಜನಿಕಾಂತ್ ಮಂಗಳವಾರ ನಿರಾಕರಿಸಿದ್ದಾರೆ ಮತ್ತು "ಕಾಲವೇ ಉತ್ತರ ನೀಡುತ್ತದೆ" ಎಂದು ಹೇಳಿದ್ದಾರೆ. ತಮ್ಮ ಅಧಿಕೃತ...

ಕಾಂಗ್ರೆಸ್‌ ಮಾನನಷ್ಟ ಪ್ರಕರಣ : ಅರ್ನಾಬ್ ಗೋಸ್ವಾಮಿ, ರಿಪಬ್ಲಿಕ್ ಟಿವಿಗೆ ದೆಹಲಿ ಹೈಕೋರ್ಟ್ ಸಮನ್ಸ್

ಟರ್ಕಿ ದೇಶದಲ್ಲಿ ಕಾಂಗ್ರೆಸ್‌ ಪಕ್ಷವು ಅಂತಾರಾಷ್ಟ್ರೀಯ ಕಚೇರಿ ಹೊಂದಿದೆ ಎಂಬ ವರದಿಗೆ ಸಂಬಂಧಿಸಿದಂತೆ, ಅರ್ನಾಬ್ ಗೋಸ್ವಾಮಿ ಮತ್ತು ರಿಪಬ್ಲಿಕ್ ಟಿವಿ ವಿರುದ್ಧ ಕಾಂಗ್ರೆಸ್ ಹೂಡಿರುವ ಮಾನನಷ್ಟ ಮೊಕದ್ದಮೆಯಲ್ಲಿ ದೆಹಲಿ ಹೈಕೋರ್ಟ್ ಮಂಗಳವಾರ (ಮಾ.17)...

ನಾಗಾಲ್ಯಾಂಡ್‌| ಕೇಂದ್ರದ ‘ವಂದೇ ಮಾತರಂ’ ಕಡ್ಡಾಯ ನಿರ್ದೇಶನ ವಿರೋಧಿಸಿ ನಾಗಾ ವಿದ್ಯಾರ್ಥಿ ಒಕ್ಕೂಟದಿಂದ ಪ್ರತಿಭಟನೆ

ಸರ್ಕಾರದ ಅಧಿಕೃತ ಕಾರ್ಯಕ್ರಮಗಳ ಸಮಯದಲ್ಲಿ ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ವಂದೇ ಮಾತರಂ ಹಾಡುವುದನ್ನು ಕಡ್ಡಾಯಗೊಳಿಸುವ ರಾಜ್ಯ ಸರ್ಕಾರಕ್ಕೆ ಕೇಂದ್ರ ಸರ್ಕಾರ ನೀಡಿರುವ ನಿರ್ದೇಶನವನ್ನು ವಿರೋಧಿಸಿ ಸೋಮವಾರ ನಾಗಾ ವಿದ್ಯಾರ್ಥಿ ಒಕ್ಕೂಟದ (ಎನ್‌ಎಸ್‌ಎಫ್) ಬ್ಯಾನರ್...

‘ಹೇಡಿತನದ, ಅವಿವೇಕದ ಹಿಂಸಾಚಾರ’: 400 ಜನರನ್ನು ಬಲಿತೆಗೆದುಕೊಂಡ ಕಾಬೂಲ್ ಆಸ್ಪತ್ರೆಯ ಮೇಲಿನ ಪಾಕ್ ದಾಳಿ ಖಂಡಿಸಿದ ಭಾರತ 

ಕಾಬೂಲ್‌ನ ಆಸ್ಪತ್ರೆಯ ಮೇಲೆ ಪಾಕಿಸ್ತಾನ ನಡೆಸಿದ ವಾಯುದಾಳಿಯನ್ನು ಭಾರತ ಮಂಗಳವಾರ ಖಂಡಿಸಿದೆ. ಈ ದಾಳಿಯಲ್ಲಿ ಕನಿಷ್ಠ 400 ಜನರು ಅಸ್ವಸ್ಥರಾಗಿ 250 ಜನರು ಗಾಯಗೊಂಡಿದ್ದರು. ಈ ಬಗ್ಗೆ ವಿದೇಶಾಂಗ ವ್ಯವಹಾರಗಳ ಸಚಿವಾಲಯ (MEA)...

ಮೂಡುಬಿದಿರೆ ಠಾಣೆ ಇನ್‌ಸ್ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳದ ಆರೋಪ: ತನಿಖೆಗೆ ಕಮಿಷನರ್ ಆದೇಶ

ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಸಂದೇಶ್ ಬಿ.ಜಿ ವಿರುದ್ಧ ಮಹಿಳೆಯರಿಗೆ ಲೈಂಗಿಕ, ಮಾನಸಿಕ ಕಿರುಕುಳ ನೀಡಿದ್ದಲ್ಲದೆ, ಹಣ ಕೊಡುವಂತೆ ಪೀಡಿಸಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದ್ದು, ಈ...

ಅಸ್ಸಾಂ: ರಂಜಾನ್ ಆಹಾರ ವ್ಯವಸ್ಥೆಗಾಗಿ ಮೀನು ಹಿಡಿಯುತ್ತಿದ್ದ ಮುಸ್ಲಿಂ ಸಹೋದರರ ಮೇಲೆ ಬಿಎಸ್‌ಎಫ್ ಗುಂಡಿನ ದಾಳಿ: ಗಂಭೀರ ಗಾಯ

ಅಸ್ಸಾಂನ ದಕ್ಷಿಣ ಸಲ್ಮಾರಾ–ಮಂಕಚಾರ್ ಜಿಲ್ಲೆಯ ಇಬ್ಬರು ಸಹೋದರರು ಭಾರತದ ಭೂಪ್ರದೇಶದೊಳಗಿನ ನದಿನೀರಿನಲ್ಲಿ ಮೀನುಗಾರಿಕೆ ನಡೆಸುತ್ತಿದ್ದಾಗ ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಸಿಬ್ಬಂದಿ ಗುಂಡು ಹಾರಿಸಿ ಪ್ರಾಣಕ್ಕಾಗಿ ಹೋರಾಡುತ್ತಿದ್ದಾರೆ. ಈ ಘಟನೆ ಮಾರ್ಚ್ 8-9, 2026...