ಮಾಜಿ ಸಂಸದೀಯ ನಾಯಕ, ಕಾಂಗ್ರೆಸ್ ರಾಜ್ಯಸಭಾ ಅಭ್ಯರ್ಥಿ ಮಲ್ಲಿಕಾರ್ಜುನ ಖರ್ಗೆ ಹಾಗೂ ತನಗೆ ಜೀವ ಬೆದರಿಕೆ ಕರೆ ಬಂದಿದೆ ಎಂದು ಶಾಸಕ ಪ್ರಿಯಾಂಕ್ ಖರ್ಗೆಯವರು ರಾಜ್ಯ ಪೊಲೀಸ್ ನಿರ್ದೇಶಕ ಪ್ರವೀಣ್ ಅವರಿಗೆ ದೂರು ನೀಡಿದ್ದಾರೆ.
ಜೂನ್ 7 ರಂದು ಮಧ್ಯರಾತ್ರಿ 01.30ರ ಸುಮಾರಿಗೆ ಮಲ್ಲಿಕಾರ್ಜುನ ಖರ್ಗೆ ಅವರ ಲ್ಯಾಂಡ್‌ಲೈನ್ ದೂರವಾಣಿಗೆ ಕರೆ ಬಂದಿದೆ. ಕರೆ ಸ್ವೀಕರಿಸಿದ ತಕ್ಷಣ ಮಲ್ಲಿಕರ್ಜುನ ಖರ್ಗೆ ಅವರಿಗೆ ಇಂಗ್ಲೀಷ್ ಮಿಶ್ರಿತ ಹಿಂದಿ ಭಾಷೆಯಲ್ಲಿ ಅವಾಚ್ಯ ಶಬ್ದಗಳಲ್ಲಿ ನಿಂದಿಸಿದ್ದಾನೆ. ಜೊತೆಗೆ ರಾಜ್ಯಸಭಾ ಚುನಾವಣೆಗೆ ಖರ್ಗೆಯವರು ಸ್ಪರ್ಧಿಸಿರುವ ಬಗ್ಗೆಯೂ ಆಗಂತುಕ ಮಾತನಾಡಿದ್ದಾನೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ನಂತರ ಸುಮಾರು 1 ಗಂಟೆಗೆ ಪ್ರಯಾಂಕ್ ಖರ್ಗೆ ಅವರಿಗೂ ಅದೇ ಸಂಖ್ಯೆಯಿಂದ ಕರೆ ಬಂದಿದ್ದು, ನಾನು ಕರೆ ಸ್ವೀಕರಿಸಿದಾಗ ಹಿಂದಿ ಹಾಗೂ ಇಂಗ್ಳಿಷ್ ಭಾಷೆಯಲ್ಲಿ ಮಾತನಾಡಿದ್ದು, ಜೀವ ಬೆದರಿಕೆ ಹಾಕಿದ್ದಾನೆ ಎಂದು ಪ್ರಿಯಾಂಕ್ ಖರ್ಗೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಈ ಎರಡು ಬೆದರಿಕೆ ಕರೆ ಮಾಡಿರುವ ವ್ಯಕ್ತಿಗಳನ್ನು ಪತ್ತೆ ಹಚ್ಚಿನ ಕಾನೂನು ರೀತಿಯ ಕ್ರಮಗಳನ್ನು ಕೈಗೊಳ್ಳಬೇಕೆಂದು ಎಂದು ಪ್ರಿಯಾಂಕ ಖರ್ಗೆ ದೂರಿನಲ್ಲಿ ಮನವಿ ಮಾಡಿಕೊಂಡಿದ್ದಾರೆ.
ಓದಿ: ದೆಹಲಿ ಗಲಭೆ ಚಾರ್ಜ್‌ಶೀಟ್‌ನಲ್ಲಿ ಬಿಜೆಪಿ ನಾಯಕರ ದ್ವೇಷ ಭಾಷಣಗಳು ನಾಪತ್ತೆ!


