Homeಕರ್ನಾಟಕನನ್ನನ್ನು ಎನ್‌ಕೌಂಟರ್ ಮಾಡುವುದಾಗಿ ಬೆದರಿಕೆ ಪತ್ರ ಬಂದಿದೆ: ಸಚಿವ ಪ್ರಿಯಾಂಕ್ ಖರ್ಗೆ

ನನ್ನನ್ನು ಎನ್‌ಕೌಂಟರ್ ಮಾಡುವುದಾಗಿ ಬೆದರಿಕೆ ಪತ್ರ ಬಂದಿದೆ: ಸಚಿವ ಪ್ರಿಯಾಂಕ್ ಖರ್ಗೆ

- Advertisement -
- Advertisement -

“ಬಿಜೆಪಿಯ ಮನುವಾದಿಗಳು ನನ್ನನ್ನು ಎನ್‌ಕೌಂಟರ್ ಮಾಡುವುದಾಗಿ ಜೀವ ಬೆದರಿಕೆ ಪತ್ರ ಬರೆದು ಹತ್ತು ದಿನಗಳ ಹಿಂದೆ ನನ್ನ ಕಚೇರಿಗೆ ಕಳುಹಿಸಿದ್ದಾರೆ” ಎಂದು ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ ಮಾಡಿದ್ದಾರೆ.

ಕಲಬುರಗಿಯಲ್ಲಿ ಗುರುವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, “ಕೆಲವು ಕೆಟ್ಟ ಪದಗಳನ್ನು ಬಳಸಿ ನನ್ನ ಕುಟುಂಬ ಸದಸ್ಯರನ್ನು ನಿಂದಿಸಿದ್ದಾರೆ. ಜಾತಿ ಹೆಸರನ್ನು ಕೂಡ ಉಲ್ಲೇಖ ಮಾಡಿದ್ದಾರೆ. ಕಲಬುರಗಿಯಿಂದ ಬೆಂಗಳೂರಿನ ವಿಕಾಸಸೌಧದ ನನ್ನ ಕಚೇರಿಗೆ ಪತ್ರ ಬಂದಿದೆ. ಈ ಸಂಬಂಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ” ಎಂದು ತಿಳಿಸಿದ್ದಾರೆ.

“ಬಿಜೆಪಿಯವರು ನನ್ನ ಹೆಣ ಬೀಳಿಸಿಯಾದರೂ ಚುನಾವಣೆ ಗೆಲ್ಲಬೇಕು ಎಂಬ ಪ್ಲಾನ್ ಮಾಡಿಕೊಂಡಿದ್ದಾರೆ. ಹೆದರಿಸುವುದು ಅಥವಾ ಬೆದರಿಸಲು ಬಂದರೆ ಅದಕ್ಕೆಲ್ಲ ನಾವು ಹೆದರುವುದಿಲ್ಲ ಎಂದಿದ್ದಾರೆ.

ಇದನ್ನೂ ಓದಿ : ಸಿಎಂ ಕುರಿತು ಸುಳ್ಳು ಸುದ್ದಿ ಪ್ರಸಾರ; ‘ಆರ್‌ ಕನ್ನಡ’ ಮುಖ್ಯಸ್ಥ ಅರ್ನಬ್ ಮೇಲೆ ಎಫ್‌ಐಆರ್‌ ದಾಖಲು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಲೋಕಸಭೆ ಚುನಾವಣೆ 2024: ರಾಹುಲ್ ಗಾಂಧಿ ಸ್ಪರ್ಧೆಗೆ ಒತ್ತಾಯಿಸಿ ಅಮೇಠಿ ಕಾಂಗ್ರೆಸ್ ಕಾರ್ಯಕರ್ತರಿಂದ ಧರಣಿ

0
ಅಮೇಠಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಘೋಷಣೆಯಲ್ಲಿ ಅನಗತ್ಯ ವಿಳಂಬ ಮಾಡುತ್ತಿರುವುದನ್ನು ಪ್ರತಿಭಟಿಸಿ ಕಾಂಗ್ರೆಸ್ ಕಾರ್ಯಕರ್ತರು ಮಂಗಳವಾರ ಇಲ್ಲಿನ ಪಕ್ಷದ ಜಿಲ್ಲಾ ಸಮಿತಿ ಕಚೇರಿ ಎದುರು ಧರಣಿ ನಡೆಸಿ, ರಾಹುಲ್ ಗಾಂಧಿ ಅವರನ್ನು ಕಣಕ್ಕಿಳಿಸಬೇಕು...