Homeಕರೋನಾ ತಲ್ಲಣಹಬ್ಬಗಳಲ್ಲಿ ಸೈನಿಕರಿಗಾಗಿ ದೀಪ ಬೆಳಗಿಸಿ: ಪ್ರಧಾನಿ ಮೋದಿ ಕರೆ

ಹಬ್ಬಗಳಲ್ಲಿ ಸೈನಿಕರಿಗಾಗಿ ದೀಪ ಬೆಳಗಿಸಿ: ಪ್ರಧಾನಿ ಮೋದಿ ಕರೆ

ಹಬ್ಬದ ಸಂದರ್ಭದಲ್ಲಿ ದೇಶದ ಜನತೆ ಸ್ವದೇಶಿ ಹಾಗೂ ಸ್ಥಳೀಯ ಉತ್ಪನ್ನಗಳನ್ನು ಹೆಚ್ಚಾಗಿ ಬಳಸಿ ಎಂದು ಪ್ರಧಾನಿ ಮನವಿ ನೀಡಿದ್ದಾರೆ.

- Advertisement -
- Advertisement -

ದೇಶದ ಧೈರ್ಯಶಾಲಿ ಸೈನಿಕರು ಮತ್ತು ಭದ್ರತಾ ಪಡೆಗಳೊಂದಿಗೆ ಭಾರತ ದೃಢವಾಗಿ ನಿಂತಿದೆ. ಕೊರೊನಾ ಸಾಂಕ್ರಾಮಿಕದ ನಡುವೆ ಹಬ್ಬಗಳನ್ನು ಆಚರಿಸುವಾಗ ಸೈನಿಕರಿಗಾಗಿ ದೀಪ ಬೆಳಗಿಸಬೇಕೆಂದು ದೇಶದ ಜನರಲ್ಲಿ ಪ್ರಧಾನಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ.

ಈ ತಿಂಗಳ ಮನ್‌ ಕಿ ಬಾತ್ ಮೂಲಕ ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ, ದಸರಾ ಹಬ್ಬಕ್ಕೆ ಶುಭಾಶಯಗಳನ್ನು ತಿಳಿಸಿ, ದೇಶಾದ್ಯಂತ ಕೊರೊನಾ ಉಲ್ಬಣಗೊಳ್ಳುತ್ತಿರುವ ಈ ಸಮಯದಲ್ಲಿ ಹಬ್ಬಗಳನ್ನು ಆಚರಿಸುವಾಗ ಜನರು ತಾಳ್ಮೆ, ಎಚ್ಚರಿಕೆ ವಹಿಸಬೇಕು ಎಂದು ಹೇಳಿದ್ದಾರೆ.

“ದೇಶದ ಜನರನ್ನು, ದೇಶವನ್ನು ಹೊರಗಿನ ದಾಳಿಗಳಿಂದ ಸುರಕ್ಷಿತವಾಗಿರಿಸಲು ನಮ್ಮ ಸೈನಿಕರು ತಮ್ಮ ಕುಟುಂಬಗಳಿಂದ ದೂರ ಇದ್ದು ಸೇವೆ ಸಲ್ಲಿಸುತ್ತಿದ್ದಾರೆ. ಈ ಸಮಯದಲ್ಲಿ ಈದ್, ದೀಪಾವಳಿಯಂತಹ ಹಲವಾರು ಹಬ್ಬಗಳು ನಡೆಯಲಿವೆ. ಈ ಹಬ್ಬಗಳ ಸಮಯದಲ್ಲಿ, ಗಡಿಯಲ್ಲಿ ನಿಂತಿರುವ ನಮ್ಮ ಕೆಚ್ಚೆದೆಯ ಸೈನಿಕರನ್ನು ಸಹ ನಾವು ನೆನಪಿನಲ್ಲಿಟ್ಟುಕೊಳ್ಳಬೇಕು”. ಎಂದಿದ್ದಾರೆ.

’ಭಾರತ ಮಾತೆಯ ಈ ಧೈರ್ಯಶಾಲಿ ಪುತ್ರರು ಮತ್ತು ಹೆಣ್ಣುಮಕ್ಕಳ ಗೌರವಾರ್ಥವಾಗಿ ನಾವು ಮನೆಯಲ್ಲಿ ಸೈನಿಕರಿಗಾಗಿ ದೀಪವನ್ನು ಬೆಳಗಿಸಬೇಕಾಗಿದೆ’ ಎಂದು ಪ್ರಧಾನಿ ಮೋದಿ ಮನ್ ಕಿ ಬಾತ್ ರೇಡಿಯೋ ಭಾಷಣದಲ್ಲಿ ಹೇಳಿದರು.

ಇದನ್ನೂ ಓದಿ: ಲಾಕ್‌ಡೌನ್‌ ಮುಗಿದಿದೆ, ಆದರೆ ಕೊರೊನಾ ಮುಗಿದಿಲ್ಲ: ಪ್ರಧಾನಿ ಮೋದಿ ಎಚ್ಚರಿಕೆ

ಭಾರತ-ಚೀನಾ ಭಿನ್ನಾಭಿಪ್ರಾಯಕ್ಕೆ ಸಿಲುಕಿರುವ ಈ ಸಮಯದಲ್ಲಿ ಪ್ರಧಾನಿ ಮೋದಿಯವರ ಈ ಅಭಿಪ್ರಾಯಗಳು ವ್ಯಕ್ತಪಡಿಸಿದ್ದಾರೆ. ಸಿಕ್ಕಿಂ ಮತ್ತು ಅರುಣಾಚಲ ಪ್ರದೇಶ ಸೇರಿದಂತೆ ಸುಮಾರು 3,500 ಕಿ.ಮೀ ಉದ್ದದ ಗಡಿಯಲ್ಲಿ ಚೀನಾ ತನ್ನ ಸೈನ್ಯ ಮತ್ತು ಶಸ್ತ್ರಾಸ್ತ್ರಗಳನ್ನು ಗಮನಾರ್ಹವಾಗಿ ಬಲಪಡಿಸಿದ್ದು, ಲಡಾಖ್‌ನಲ್ಲಿ ಉದ್ವಿಗ್ನತೆ ಕಡಿಮೆಗೊಳ್ಳುವ ಯಾವುದೇ ಲಕ್ಷಣ ಕಾಣಿಸಿಲ್ಲ.

ಕೊರೊನಾ ವಿರುದ್ಧದ ಯುದ್ಧದಲ್ಲಿ ಗೆಲುವು ಖಚಿತವಾಗಿದೆ. ಇಂತಹ ಸಂಕಷ್ಟದ ಸಮಯದಲ್ಲಿ ನಮಗೆಲ್ಲಾ ಸಂಯಮ ಮುಖ್ಯ ಎಂದಿದ್ದಾರೆ. ಹಬ್ಬದ ಸಂದರ್ಭದಲ್ಲಿ ದೇಶದ ಜನತೆ ಸ್ವದೇಶಿ ಹಾಗೂ ಸ್ಥಳೀಯ ಉತ್ಪನ್ನಗಳನ್ನು ಹೆಚ್ಚಾಗಿ ಬಳಸಿ ಎಂದು ಪ್ರಧಾನಿ ಕರೆ ನೀಡಿದ್ದಾರೆ.

ಹಬ್ಬದ ಆಚರಣೆಯಲ್ಲಿ ಕೊರೊನಾ ನಿಯಮಾವಳಿಗಳನ್ನು ಮರೆಯಬೇಡಿ. ಮಾಸ್ಕ್, ಸಾಮಾಜಿಕ ಅಂತರ ಪಾಲಿಸಿ ಎಂದಿದ್ದಾರೆ. ಅಲ್ಲದೇ ಕೊರೊನಾ ಸಂದರ್ಭದಲ್ಲಿ ಖಾದಿ ಮಾಸ್ಕ್‌ಗಳು ಜನಪ್ರಿಯವಾಗಿವೆ. ಮೆಕ್ಸಿಕೊದ ಒಕ್ಸಾಕ ಪ್ರದೇಶದಲ್ಲಿಯೂ ಖಾದಿ ಮಾಸ್ಕ್ ತಯಾರಿಸಲಾಗುತ್ತಿದೆ. ಖಾದಿಯು ಪರಿಸರಸ್ನೇಹಿಯೂ ಶರೀರಸ್ನೇಹಿಯೂ ಆಗಿದೆ’ ಎಂದು ಹೇಳಿದ್ದಾರೆ.


ಇದನ್ನೂ ಓದಿ: ಇಂದಿನ ಪ್ರಧಾನಿ ಮೋದಿ ಭಾಷಣಕ್ಕೆ ಡಿಸ್‌ಲೈಕ್‌ಗಳ ಸುರಿಮಳೆ: ಸಂಖ್ಯೆ ಮರೆಮಾಚಿದ ಬಿಜೆಪಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಚುನಾವಣೆಯಲ್ಲಿ ಬೆಂಬಲಿಸಿಲ್ಲ ಎಂದು ದಲಿತರ ಮೇಲೆ ಹಲ್ಲೆ ಪ್ರಕರಣ: YSRCP ಮುಖಂಡನಿಗೆ ಜೈಲು

0
1996ರಲ್ಲಿ ನಡೆದಿದ್ದ ದಲಿತರ ಮೇಲಿನ ದೌರ್ಜನ್ಯ ಮತ್ತು ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ವೈಎಸ್‌ಆರ್ ಕಾಂಗ್ರೆಸ್ ಪಕ್ಷದ (ವೈಎಸ್‌ಆರ್‌ಸಿಪಿ) ಮುಖಂಡ ತೋಟ ತ್ರಿಮೂರ್ತಿಲು ಸೇರಿದಂತೆ ಒಂಬತ್ತು ಮಂದಿಯನ್ನು ವಿಶಾಖಪಟ್ಟಣ ನ್ಯಾಯಾಲಯವು ದೋಷಿ ಎಂದು ಘೋಷಿಸಿ...