Homeಕರ್ನಾಟಕಮಂಗಳೂರು ಆಟೋದಲ್ಲಿ ಲಘು ಸ್ಪೋಟ - ಭಯೋತ್ಪಾದನಾ ಕೃತ್ಯವೆಂದ ಡಿಜಿಪಿ ಪ್ರವೀಣ್ ಸೂದ್

ಮಂಗಳೂರು ಆಟೋದಲ್ಲಿ ಲಘು ಸ್ಪೋಟ – ಭಯೋತ್ಪಾದನಾ ಕೃತ್ಯವೆಂದ ಡಿಜಿಪಿ ಪ್ರವೀಣ್ ಸೂದ್

- Advertisement -
- Advertisement -

ಮಂಗಳೂರು ನಗರದ ಕಂಕನಾಡಿ ಸಮೀಪದ ಗರೋಡಿಯಲ್ಲಿ ಆಟೋರಿಕ್ಷಾವೊಂದರಲ್ಲಿ ಬೆಂಕಿ ಕಾಣಿಸಿಕೊಂಡ ಲಘು ಸ್ಪೋಟದ ಪ್ರಕರಣ ಘಟಿಸಿದೆ. ಪ್ರಕರಣದಲ್ಲಿ ಚಾಲಕ ಮತ್ತು ಪ್ರಯಾಣಿಕನಿಗೆ ಸುಟ್ಟ ಗಾಯಗಳಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಯು ಸಿಸಿಟಿವಿ ದೃಶ್ಯಾವಳಿಯಲ್ಲಿ ಚಿತ್ರೀಕರಣವಾಗಿದೆ. ಇದು ಆಕಸ್ಮಿಕ ಘಟನೆಯಲ್ಲ ಬದಲಿಗೆ ಭಯೋತ್ಪಾದನಾ ಕೃತ್ಯವಾಗಿದೆ ಎಂದು ಡಿಜಿಪಿ ಪ್ರವೀಣ್ ಸೂದ್ ತಿಳಿಸಿದ್ದಾರೆ.

“ಶನಿವಾರ ಸಂಜೆ 5.15 ರ ಸುಮಾರಿಗೆ ಆಟೋರಿಕ್ಷಾದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಪ್ರಯಾಣಿಕರು ಸಾಗಿಸುತ್ತಿದ್ದ ಬ್ಯಾಗ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ ಎಂದು ಚಾಲಕ ಹೇಳಿದ್ದಾರೆ. ಚಾಲಕ ಮತ್ತು ಪ್ರಯಾಣಿಕರಿಗೆ ಸುಟ್ಟ ಗಾಯಗಳಾಗಿವೆ. ನಾವು ಅವರನ್ನು ಆಸ್ಪತ್ರೆಗೆ ಸ್ಥಳಾಂತರಿಸಿದ್ದೇವೆ, ವಿಶೇಷ ತಂಡ ಮತ್ತು ಎಫ್‌ಎಸ್ಎಲ್ ತಂಡವು ಸಾಕ್ಷ್ಯಗಳನ್ನು ಸಂಗ್ರಹಿಸಿದ್ದು ಘಟನೆಯ ಹಿಂದಿನ ಕಾರಣವನ್ನು ಪತ್ತೆ ಹೆಚ್ಚಲಾಗುತ್ತಿದೆ” ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್ ಶಶಿಕುಮಾರ್ ತಿಳಿಸಿದ್ದಾರೆ.

ಈ ಕುರಿತು ಇಂದು ಟ್ವೀಟ್ ಮಾಡಿರುವ ಪ್ರವೀಣ್ ಸೂದ್, “ಘಟನೆ ಆಕಸ್ಮಿಕವಾಗಿ ನಡೆದಿಲ್ಲ, ಗಂಭೀರ ಹಾನಿ ಮಾಡುವ ಉದ್ದೇಶದಿಂದಲೇ ಈ ಕೃತ್ಯ ಎಸಗಲಾಗಿದೆ. ರಾಜ್ಯ ಮತ್ತು ಕೇಂದ್ರ ತನಿಖಾ ಏಜೆನ್ಸಿಗಳು ಜಂಟಿಯಾಗಿ ತನಿಖೆ ನಡೆಸಲಿವೆ” ಎಂದಿದ್ದಾರೆ.

ಘಟನೆ ಕುರಿತು ಪ್ರತಿಕ್ರಿಯಿಸಿರುವ ಗೃಹ ಸಚಿವ ಆರಗ ಜ್ಞಾನೇಂದ್ರ, “ಮಂಗಳೂರಿನಲ್ಲಿ ನಡೆದಿರುವ ಕೃತ್ಯಕ್ಕೆ ಭಯೋತ್ಪಾದನಾ ನಂಟಿರುವ ಶಂಕೆಯಿದ್ದು, ತನಿಖೆ ನಡೆಸಲು ಎನ್‌ಐಎ ಸೇರಿದಂತೆ ವಿವಿಧ ಕೇಂದ್ರೀಯ ಸಂಸ್ಥೆಗಳು ಮಂಗಳೂರಿಗೆ ಬಂದಿವೆ. ಭಯೋತ್ಪಾದಕ ಸಂಘಟನೆಗಳೊಂದಿಗೆ ಸಂಬಂಧ ಹೊಂದಿರುವ ಕೆಲವರು ಈ ಕೃತ್ಯದ ಹಿಂದೆ ಇದ್ದಾರೆ. ಈ ಕುರಿತು ಕೇಂದ್ರೀಯ ಸಂಸ್ಥೆಗಳಿಗೆ ಮಾಹಿತಿ ನೀಡಿದ್ದೇವೆ. ಇನ್ನೆರಡು ದಿನಗಳಲ್ಲಿ ಈ ಕೃತ್ಯದ ಹಿಂದಿರುವ ಕಾಣದ ಕೈಗಳು ಯಾವುವು ಎಂಬುದು ತಿಳಿಯುತ್ತದೆ” ಎಂದು ಹೇಳಿದರು.

ಗಾಯಾಳುಗಳಿಬ್ಬರ ಹೆಸರನ್ನು ಇದುವರೆಗೂ ಪೊಲೀಸರು ಬಹಿರಂಗಪಡಿಸಿಲ್ಲ. ಆದರೆ ಆಟೋದಲ್ಲಿ ಪ್ರೇಮ್‌ರಾಜ್ ಹುಟಗಿ ಎಂಬ ಹುಬ್ಬಳ್ಳಿಯ ರೈಲ್ವೇ ಉದ್ಯೋಗಿಯೊಬ್ಬರ ಆಧಾರ್ ಕಾರ್ಡ್ ಸಿಕ್ಕಿದೆ. ಪ್ರೇಮ್‌ರಾಜ್ ಹುಟಗಿಯವರು ನನ್ನ ಆಧಾರ್ ಕಾರ್ಡ್ ಬಸ್‌ನಲ್ಲಿ ಕಳೆದುಹೋಗಿದೆ ಎಂದು ಪ್ರತಿಕ್ರಿಯಿಸಿದ್ದಾರೆ. ಈ ಆಧಾರ್ ಕಾರ್ಡ್ ಬಳಸಿ ಮೈಸೂರಿನಲ್ಲಿ ಬಾಡಿಗೆ ಮನೆ ಸಹ ಪಡೆಯಲಾಗಿತ್ತು ಎನ್ನಲಾಗಿದೆ.

ಇದನ್ನೂ ಓದಿ; ಬೆಂಗಳೂರು ಮತದಾರರ ಮಾಹಿತಿ ಕಳ್ಳತನ: ಚಿಲುಮೆ ಸಂಸ್ಥೆಯ ಇಬ್ಬರ ಬಂಧನ, ನಿರ್ದೇಶಕ ಪರಾರಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

‘ಬಿಜೆಪಿ ಟಿಕೆಟ್ ಆಮಿಷ ನೀಡಿ ರಾಜೀನಾಮೆ ಕೊಡಿಸಿ ವಂಚಿಸಿದ್ರು’: ಮಣಿಪುರ ಹಿಂಸಾಚಾರದ ತನಿಖೆ ನಡೆಸುತ್ತಿದ್ದ...

0
ಮಣಿಪುರ ಜನಾಂಗೀಯ ಹಿಂಸಾಚಾರಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ವಿಶೇಷ ತನಿಖಾ ತಂಡದ (ಎಸ್‌ಐಟಿ) ನೇತೃತ್ವ ವಹಿಸಲು ಸುಪ್ರೀಂ ನಿರ್ದೇಶನದ ಕೆಲವೇ ದಿನಗಳಲ್ಲಿ ಅಸ್ಸಾಂ-ಮೇಘಾಲಯ ಕೇಡರ್‌ನ ಐಪಿಎಸ್ ಅಧಿಕಾರಿ ಆನಂದ್ ಮಿಶ್ರಾ ತಮ್ಮ ಹುದ್ದೆಗೆ ರಾಜೀನಾಮೆ...