ವಿವಾದಿತ ಹೊಸ ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟಿಸುತ್ತಿರುವ ರೈತರಂತೆಯೇ ತಮ್ಮ ಹಕ್ಕುಗಳು ಮತ್ತು ವಿಶೇಷ ಸ್ಥಾನಮಾನವನ್ನು ವಾಪಸ್ ಪಡೆಯಲು ಜಮ್ಮು ಮತ್ತು ಕಾಶ್ಮೀರದ ಜನರು ಕೂಡ ತ್ಯಾಗ ಮಾಡಬೇಕಾಗಬಹುದು ಎಂದು ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ಭಾನುವಾರ ಹೇಳಿದ್ದಾರೆ.
ನ್ಯಾಷನಲ್ ಕಾನ್ಫರೆನ್ಸ್ ಪಕ್ಷದ ಸಂಸ್ಥಾಪಕ ಶೇಖ್ ಮೊಹಮ್ಮದ್ ಅಬ್ದುಲ್ಲಾ ಅವರ 116 ನೇ ಜನ್ಮದಿನದ ಸಂದರ್ಭದಲ್ಲಿ ನಸೀಂಬಾಗ್‌ನಲ್ಲಿರುವ ಅವರ ಸಮಾಧಿ ಬಳಿಯಲ್ಲಿ ಯುವ ಘಟಕದ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಅವರು, ತಮ್ಮ ಪಕ್ಷವು ಹಿಂಸಾಚಾರವನ್ನು ಬೆಂಬಲಿಸುವುದಿಲ್ಲ ಎಂದು ಹೇಳಿದ್ದಾರೆ.
ವಿವಾದಿತ ಕೃಷಿ ಕಾನೂನುಗಳ ವಿರುದ್ಧ ಸುಮಾರು ಒಂದು ವರ್ಷದ ಪ್ರತಿಭಟನೆಯ ನಂತರ, ನವೆಂಬರ್ 19 ರಂದು ಪ್ರಧಾನಿ ನರೇಂದ್ರ ಮೋದಿ ಒಕ್ಕೂಟ ಸರ್ಕಾರ ಜಾರಿಗೆ ತಂದಿದ್ದ ಕೃಷಿ ಕಾನೂನುಗಳನ್ನು ರದ್ದುಗೊಳಿಸುವ ನಿರ್ಧಾರವನ್ನು ಪ್ರಕಟಿಸಿದ್ದರು. ನವೆಂಬರ್ 29 ರಿಂದ ನಡೆಯುತ್ತಿರುವ ಚಳಿಗಾಲದ ಅಧಿವೇಶನದ ಮೊದಲ ದಿನದಲ್ಲಿ ಸಂಸತ್ತು ಕೃಷಿ ಕಾನೂನುಗಳನ್ನು ರದ್ದುಗೊಳಿಸುವ ಮಸೂದೆಯನ್ನು ಅಂಗೀಕರಿಸಿತು.
ಇದನ್ನೂ ಓದಿ: ಕೇಂದ್ರಕ್ಕೆ ಕೃಷಿ ಕಾಯ್ದೆಗಳ ವಿರುದ್ಧದ ಹೋರಾಟದಲ್ಲಿ ಮೃತಪಟ್ಟ 702 ರೈತರ ಪಟ್ಟಿ ಕಳುಹಿಸಿದ SKM
“ರೈತರು 11 ತಿಂಗಳು ಪ್ರತಿಭಟನೆ ನಡೆಸಿದ್ದಾರೆ. ಅದರಲ್ಲಿ 700 ಕ್ಕೂ ಹೆಚ್ಚು ರೈತರು ಮೃತಪಟ್ಟಿದ್ದಾರೆ. ರೈತರು ತ್ಯಾಗ ಮಾಡಿದಾಗ ಕೇಂದ್ರವು ಮೂರು ಕೃಷಿ ಕಾನೂನುಗಳನ್ನು ಹಿಂತೆಗೆದುಕೊಳ್ಳಬೇಕಾಯಿತು. ಹೀಗಾಗಿ ನಮ್ಮ ಹಕ್ಕುಗಳನ್ನು ಮರಳಿ ಪಡೆಯಲು ನಾವು ಕೂಡ ತ್ಯಾಗ ಮಾಡಬೇಕಾಗಬಹುದು. ನೆನಪಿಡಿ, ನಾವು 370, 35-ಎ ಮತ್ತು ರಾಜ್ಯತ್ವವನ್ನು ವಾಪಸ್ ಪಡೆಯುವ ಭರವಸೆ ನೀಡಿದ್ದೇವೆ. ಜೊತೆಗೆ ನಾವು ಯಾವುದೇ ತ್ಯಾಗಕ್ಕೂ ಸಿದ್ಧರಿದ್ದೇವೆ” ಎಂದು ಫಾರೂಕ್ ಅಬ್ದುಲ್ಲಾ ಹೇಳಿದ್ದಾರೆ.
ಮುಂದುವರಿದು ತಮ್ಮ ಪಕ್ಷ ನ್ಯಾಷನಲ್ ಕಾನ್ಫರೆನ್ಸ್ ಸಹೋದರತ್ವದ ವಿರುದ್ಧವಾಗಿಲ್ಲ ಮತ್ತು ಹಿಂಸೆಯನ್ನು ಬೆಂಬಲಿಸುವುದಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
ಒಕ್ಕೂಟ ಸರ್ಕಾರವು ಆಗಸ್ಟ್ 5, 2019 ರಂದು ಜಮ್ಮು ಮತ್ತು ಕಾಶ್ಮೀರ ರಾಜ್ಯದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿತು ಮತ್ತು ಅದನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸಿತು. ಸರ್ಕಾರದ ಕ್ರಮಕ್ಕೆ ಪ್ರತಿಪಕ್ಷಗಳು ಆಕ್ಷೇಪ ವ್ಯಕ್ತಪಡಿಸಿದ್ದವು.



ನೀವು ಬೀದಿಗೆ ಬಂದರೆ ,ಬೀದಿ ಹೆಣ ಆಗೋದು ಖಚಿತ,ಕಾಶ್ಮೀರ ವಿಚಾರದಲ್ಲಿ ದಯೆ ನೀಡುವ ಪ್ರಮಯವೇ ಇಲ್ಲಾ ,ಸೈನಿಕರೇ ಮುಗಿಸಿ ಬಿಡ್ತಾರೇ ,ಫಾರೂಕ್ ಅಬ್ದುಲ್ಲಾ ಮೊದಲು ಪಾಕ್ ಗೆ ಓಡಿ ಹೋಗು