Homeಮುಖಪುಟಡೆನ್ಮಾರ್ಕ್ ರಾಜಕುಮಾರನಿಲ್ಲದ ’ಹ್ಯಾಮ್ಲೆಟ್’: ಮೋದಿ ಭಾಷಣಕ್ಕೆ ಕಾಂಗ್ರೆಸ್ ಟೀಕೆ

ಡೆನ್ಮಾರ್ಕ್ ರಾಜಕುಮಾರನಿಲ್ಲದ ’ಹ್ಯಾಮ್ಲೆಟ್’: ಮೋದಿ ಭಾಷಣಕ್ಕೆ ಕಾಂಗ್ರೆಸ್ ಟೀಕೆ

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿಯವರ ಭಾಷಣವು ಡೆನ್ಮಾರ್ಕ್ ರಾಜಕುಮಾರನಿಲ್ಲದ ಷೇಕ್ಸ್‌ಪಿಯರ್‌ನ ಹ್ಯಾಮ್ಲೆಟ್‌‍ನಂತಿದೆ ಎಂದು ಕಾಂಗ್ರೆಸ್‌ನ ಹಿರಿಯ ಮುಖಂಡ ಅಭಿಷೇಕ್ ಮನು ಸಿಂಘ್ವಿಯವರು ಭಾಷಣವನ್ನು ಮಾರ್ಗಸೂಚಿಯಿಲ್ಲದ ಭಾಷಣವೆಂದು ಟೀಕಿಸಿದ್ದಾರೆ.

“ಹ್ಯಾಮ್ಲೆಟ್” ಷೇಕ್ಸ್‌ಪಿಯರ್‌ ಬರೆದಿರುವ ಇಂಗ್ಲೀಷಿನ ಪ್ರಸಿದ್ದ ನಾಟಕವಾಗಿದ್ದು ಅದರಲ್ಲಿ ಡೆನ್ಮಾರ್ಕ್ ರಾಜಕುಮಾರನದ್ದು ಪ್ರಮುಖ ಪಾತ್ರವಾಗಿದೆ.

ಬಡವರು, ಮಧ್ಯಮ ವರ್ಗದವರು ಮತ್ತು ಸಣ್ಣ ಉದ್ಯಮಗಳಿಗೆ ಹೆಚ್ಚಿನ ಪರಿಹಾರ ನೀಡುವ ಬಗ್ಗೆ ಸಿಂಘ್ವಿ ಟ್ವಿಟ್ಟರಿನಲ್ಲಿ ಪ್ರಧಾನ ಮಂತ್ರಿಯನ್ನು ಕೋರಿದ್ದಾರೆ.

ಸಿಂಘ್ವಿ ಟೀಕಿಸಿದ ಕೆಲವೇ ನಿಮಿಷಗಳಲ್ಲಿ ಹಲವಾರು ಕಾಂಗ್ರೆಸ್ ನಾಯಕರು ಪ್ರಧಾನ ಮಂತ್ರಿಯ ಭಾಷಣವನ್ನು ತರಾಟೆಗೆ ತೆಗೆದುಕೊಂಡರು.

ಮಾಜಿ ಹಣಕಾಸು ಮಂತ್ರಿ ಹಾಗೂ ಹಿರಿಯ ಕಾಂಗ್ರೆಸ್ ಮುಖಂಡ ಪಿ.ಚಿದಂಬರಂ ಅವರು ಟ್ವೀಟ್ ಮಾಡಿ “ಹಣವಿದೆ, ಆಹಾರವಿದೆ, ಆದರೆ ಸರ್ಕಾರ ಹಣ ಅಥವಾ ಆಹಾರವನ್ನು ಬಿಡುಗಡೆ ಮಾಡುತ್ತಿಲ್ಲ, ಪ್ರೀತಿಯ ದೇಶವೇ ಅತ್ತು ಬಿಡು” ಎಂದು ಹೇಳಿದ್ದಾರೆ.

ಮುಂದುವರೆದ ಚಿದಂಬರಂ, “ಮುಖ್ಯಮಂತ್ರಿಗಳು ಇಟ್ಟ ಹಣದ ಬೇಡಿಕೆಯು ಬಗ್ಗೆ ಯಾವುದೇ ಪ್ರತಿಕ್ರಿಯೆಯನ್ನು ನೀಡಿಲ್ಲ. ಮಾರ್ಚ್ 25, 2020 ರ ಕೆಟ್ಟ ಪ್ಯಾಕೇಜ್‌ಗೆ ಒಂದು ರೂಪಾಯಿ ಕೂಡ ಸೇರಿಸಲಾಗಿಲ್ಲ. ರಘುರಾಮ್ ರಾಜನ್‌ನಿಂದ ಹಿಡಿದು ಜೀನ್ ಡ್ರೆಜ್‌ವರೆಗೆ, ಪ್ರಭಾತ್ ಪಟ್ನಾಯಕ್‌ನಿಂದ ಹಿಡಿದು ಅಭಿಜಿತ್ ಬ್ಯಾನರ್ಜಿವರೆಗೆ ಅವರ ಸಲಹೆಗೆ ಕಿವುಡಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

 

ಭಾರತದಲ್ಲಿ ಕೊರೊನಾ ವೈರಸ್ ಪ್ರಕರಣಗಳು 10,000 ದಾಟಿದ ಬೆನ್ನಲ್ಲೇ ಪ್ರಧಾನಿ ಮೋದಿ ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ್ದಾರೆ. “ಎಲ್ಲರ ಸಲಹೆಗಳನ್ನು ಗಣನೆಗೆ ತೆಗೆದುಕೊಂಡ ನಂತರ ಲಾಕ್‌ಡೌನ್ ಅನ್ನು ಮೇ 3 ರವರೆಗೆ ವಿಸ್ತರಿಸಲು ನಾವು ನಿರ್ಧರಿಸಿದ್ದೇವೆ” ಎಂದು ಅವರು ತಮ್ಮ 25 ನಿಮಿಷಗಳ ಭಾಷಣದಲ್ಲಿ ಹೇಳಿದ್ದಾರೆ.

“ಏಪ್ರಿಲ್ 20 ರವರೆಗೆ, ಪ್ರತಿ ಜಿಲ್ಲೆ, ಪ್ರತಿ ರಾಜ್ಯವನ್ನು ಲಾಕ್ ಡೌನ್ ಸರಿಯಾಗಿ ಅನುಸರಿಸಲಾಗಿದೆಯೆ ಎಂದು ಸೂಕ್ಷ್ಮವಾಗಿ ಗಮನಿಸಲಾಗುವುದು. ಅದರ ನಂತರ ನಾವು ನಿರ್ಬಂಧಗಳನ್ನು ಸಡಿಲಿಸುವ ಬಗ್ಗೆ ನಿರ್ಧರಿಸಬಹುದು” ಎಂದು ಪ್ರಧಾನಿ ಹೇಳಿದ್ದಾರೆ.

ತಿರುವನಂತಪುರಂನ ಕಾಂಗ್ರೆಸ್ ಸಂಸದ ಶಶಿ ತರೂರ್ ಅವರು ಲಾಕ್ ಡೌನ್ ವಿಸ್ತರಣೆಯನ್ನು ಬೆಂಬಲಿಸುತ್ತಿದ್ದರೂ, ಪ್ರಧಾನಿ ಮೋದಿ ಅವರು ಬಡವರಿಗೆ ಗಂಭೀರ ಪರಿಹಾರವನ್ನು ಘೋಷಿಸಬೇಕಾಗಿತ್ತು ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...