Homeಮುಖಪುಟಲಿಖಿಂಪುರ್‌: 2 ನೇ FIR ನಲ್ಲಿ ರೈತರ ಮೇಲೆಯೇ ಆರೋಪ; ರೈತರ ಸಾವಿನ ಬಗ್ಗೆ ಉಲ್ಲೇಖವಿಲ್ಲ!

ಲಿಖಿಂಪುರ್‌: 2 ನೇ FIR ನಲ್ಲಿ ರೈತರ ಮೇಲೆಯೇ ಆರೋಪ; ರೈತರ ಸಾವಿನ ಬಗ್ಗೆ ಉಲ್ಲೇಖವಿಲ್ಲ!

- Advertisement -
- Advertisement -

ಲಖಿಂಪುರ್ ಖೇರಿ ಹತ್ಯಾಕಾಂಡ ಪ್ರಕರಣದ ಬಗ್ಗೆ ದಾಖಲಾದ ಎರಡನೇ ಎಫ್‌ಐಆರ್‌‌ನಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ರೈತರು ಹಲ್ಲೆ ನಡೆಸಿದ್ದಾರೆ ಎಂದು ಉಲ್ಲೇಖಿಸಲಾಗಿದೆ. ಆದರೆ ಈ ಎಫ್‌ಐಆರ್‌ನಲ್ಲಿ ರೈತರು ಸಾವಿನ ಬಗ್ಗೆಯಾಗಲೀ, ಘಟನೆ ನಡೆಯುವ ಸಮಯಲ್ಲಿ ಒಕ್ಕೂಟ ಸರ್ಕಾರದ ಸಚಿವ ಅಜಯ್ ಮಿಶ್ರಾ ಅವರ ಮಗ ಆಶೀಶ್ ಮಿಶ್ರಾ ಕಾರಿನಲ್ಲಿ ಇದ್ದರು ಎಂದು ಬಗ್ಗೆಯಾಗಲಿ ಉಲ್ಲೇಖವಿಲ್ಲ ಎಂದು ವರದಿಯಾಗಿದೆ.

ಎರಡನೆ ಎಫ್‌ಐಆರ್‌ನಲ್ಲಿ “ಅಪರಿಚಿತ ಗಲಭೆಕೋರ”ನನ್ನು ಉಲ್ಲೇಖಿಸಲಾಗಿದ್ದು, ಆತನ ಮೇಲೆ ಐಪಿಸಿ ಸೆಕ್ಷನ್ 302, 324 ಅಡಿಯಲ್ಲಿ ಆರೋಪಗಳನ್ನು ಹೊರಿಸಲಾಗಿದೆ. ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ ಪ್ರಸಾದ್ ಮೌರ್ಯ ಅವರು ಮುಖ್ಯ ಅತಿಥಿಯಾಗಿದ್ದ ಕುಸ್ತಿ ಕಾರ್ಯಕ್ರಮಕ್ಕೆ ಸ್ವಾಗತಿಸಲು ಹೋಗುವ ಬಿಜೆಪಿ ಕಾರ್ಯಕರ್ತರಲ್ಲಿ ಒಬ್ಬನೆಂದು ಹೇಳಲಾದ ಸುಮಿತ್ ಜೈಸ್ವಾಲ್ ಅವರ ದೂರಿನ ಆಧಾರದ ಮೇಲೆ ಇದನ್ನು ದಾಖಲಿಸಲಾಗಿದೆ.

ಇದನ್ನೂ ಓದಿ: ಹರಿಯಾಣ: ಪ್ರತಿಭಟನಾನಿರತ ರೈತರಿಗೆ ಗುದ್ದಿದ ಬಿಜೆಪಿ ಸಂಸದನ ಕಾರು – ಆರೋಪ

ಕುಸ್ತಿ ಪಂದ್ಯವನ್ನು ಬನ್ವಿರ್ ಪುರದಲ್ಲಿ ಆಯೋಜಿಸಲಾಗಿದ್ದು, ಒಕ್ಕೂಟ ಸರ್ಕಾರದ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ ತೇನಿ ಅವರ ಪುತ್ರ ಆಶಿಶ್ ಅಲಿಯಾಸ್ ಮೋನು ಅವರನ್ನು ಮೊದಲನೇ ಎಫ್‌ಐಆರ್‌ ಆಧಾರದಲ್ಲಿ ನಾಲ್ವರು ರೈತರ ಸಾವಿಗೆ ಸಂಬಂಧಿಸಿದಂತೆ ಶನಿವಾರ ಬಂಧಿಸಲಾಗಿದೆ.

ಒಟ್ಟಾರೆಯಾಗಿ, ಅಕ್ಟೋಬರ್ 3 ರಂದು ನಡೆದ ಹತ್ಯಾಕಾಂಡದಲ್ಲಿ ನಾಲ್ವರು ರೈತರು ಸೇರಿದಂತೆ ಒಟ್ಟು ಎಂಟು ಜನರು ಸಾವನ್ನಪ್ಪಿದ್ದರು. ಇತರ ನಾಲ್ವರಲ್ಲಿ ಇಬ್ಬರು ಬಿಜೆಪಿ ಕಾರ್ಯಕರ್ತರು, ವಾಹನ ಚಾಲಕ ಮತ್ತು ಪತ್ರಕರ್ತನೊಬ್ಬ ಸೇರಿದ್ದಾರೆ.

ಎರಡನೆ ಎಫ್‌ಐಆರ್‌ ದಾಖಲಿಸಿದ್ದ ಜೈಸ್ವಾಲ್ ಅವರ ದೂರಿನಂತೆ, ಪತ್ರಕರ್ತ ರಾಮನ್ ಕಶ್ಯಪ್, ಕಾರು ಚಾಲಕ ಹರಿ ಓಂ ಮತ್ತು ಬಿಜೆಪಿ ಕಾರ್ಯಕರ್ತರಾದ ಶುಭಂ ಮಿಶ್ರಾ ಮತ್ತು ಶ್ಯಾಮ್ ಸುಂದರ್ ಅವರನ್ನು ಪ್ರತಿಭಟನಾಕಾರರು ಹತ್ಯೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಇದನ್ನೂ ಓದಿ: ಲಖಿಂಪುರ್ ಖೇರಿ ಹತ್ಯಾಕಾಂಡ: ನಿವೃತ್ತ ಹೈಕೋರ್ಟ್ ನ್ಯಾಯಾಧೀಶರ ನೇತೃತ್ವದ ಸಮಿತಿಯಿಂದ ತನಿಖೆ

“ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ರೈತರು ವಾಹನದ ಮೇಲೆ ಬಿದಿರು ದೊಣ್ಣೆಗಳು, ಇಟ್ಟಿಗೆಗಳು ಮತ್ತು ಕಲ್ಲುಗಳಿಂದ ದಾಳಿ ಮಾಡಿದ್ದರಿಂದ ಚಾಲಕ ಹರಿ ಓಮ್ ಗಾಯಗೊಂಡು ರಸ್ತೆಯ ಬದಿಯಲ್ಲಿ ಕಾರನ್ನು ನಿಲ್ಲಿಸಿದರು. ಇದರ ನಂತರ, ಪ್ರತಿಭಟನಾಕಾರರು ಹರಿ ಓಂ ಅವರನ್ನು ಕಾರಿನಿಂದ ಕೆಳಗಿಳಿಸಿ, ಬಿದಿರಿನಿಂದ ಮತ್ತು ಕತ್ತಿಯಿಂದ ಥಳಿಸಲು ಪ್ರಾರಂಭಿಸಿದರು” ಎಂದು ಜೈಸ್ವಾಲ್ ಆರೋಪಿಸಿದ್ದಾರೆ.

ತಾನು ಸ್ಥಳದಿಂದ ಓಡಿಹೋಗುವಲ್ಲಿ ಯಶಸ್ವಿಯಾಗಿದ್ದು, ಇಲ್ಲವೆಂದಿದ್ದರೆ ನನ್ನನ್ನೂ ಕೊಂದು ಹಾಕುತ್ತಿದ್ದರು ಎಂದು ಜೈಸ್ವಾಲ್ ಹೇಳಿದ್ದಾರೆ.

ಇಲ್ಲಿಯವರೆಗೆ, ಮೊದಲು ದಾಖಲಾಗಿದ್ದ ದೂರಿನ ಆಧಾರದಲ್ಲಿ ಒಕ್ಕೂಟ ಸರ್ಕಾರದ ಸಚಿವರ ಪುತ್ರ ಆಶಿಶ್ ಮಿಶ್ರಾ ಸೇರಿದಂತೆ ಇತರ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಯುಪಿ ಸರ್ಕಾರವು ಸುಪ್ರೀಂ ಕೋರ್ಟ್‌ನಲ್ಲಿ ಸಲ್ಲಿಸಿದ ಅಫಿಡವಿಟ್‌‌ ಪ್ರಕಾರ, ಎರಡು ಎಫ್‌ಐಆರ್‌ಗಳ ಬಗ್ಗೆ ಪಕ್ಷಪಾತವಿಲ್ಲದ ಮತ್ತು ಪಾರದರ್ಶಕ ತನಿಖೆಗಾಗಿ ವಿಶೇಷ ತನಿಖಾ ತಂಡವನ್ನು (ಎಸ್‌ಐಟಿ) ರಚಿಸಿದೆ ಎಂದು ಹೇಳಿದೆ.

ಇದನ್ನೂ ಓದಿ: ರೈತರ ಮೇಲೆ ಹರಿದ ಕಾರನ್ನು ಅಜಯ್ ಮಿಶ್ರಾ ಪುತ್ರ ಆಶೀಶ್ ಚಲಾಯಿಸುತ್ತಿದ್ದರು: ಗಾಯಾಳು ರೈತ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...