Homeಕರ್ನಾಟಕರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ನಡೆದ ಸಾಲುಸಾಲು ಭ್ರಷ್ಟಾಚಾರದ ಹಗರಣಗಳಿವು..

ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ನಡೆದ ಸಾಲುಸಾಲು ಭ್ರಷ್ಟಾಚಾರದ ಹಗರಣಗಳಿವು..

- Advertisement -
- Advertisement -

ಬಿಜೆಪಿ – ಪಾರ್ಟಿ ವಿತ್ ಎ ಡಿಫರೆನ್ಸ್ (ಬೇರೆಯವರಿಗಿಂತ ಭಿನ್ನ) ಎಂಬ ಘೋಷಣೆಯ ಮೂಲಕ ದಕ್ಷಿಣ ಭಾರತದಲ್ಲಿಯೇ ಮೊದಲ ಬಾರಿಗೆ ಕರ್ನಾಟಕದಲ್ಲಿ 2008ರಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಿತು. ಅಕ್ರಮ ಗಣಿಗಾರಿಕೆಯಲ್ಲಿ ಲೂಟಿ ಹೊಡೆದ ಹಣವನ್ನು ನೀರನಂತೆ ಹರಿಸಿ ’ಆಪರೇಷನ್ ಕಮಲ’ ಹೆಸರಿನಲ್ಲಿ ಇತರ ಪಕ್ಷಗಳ ಶಾಸಕರನ್ನು ಕೊಳ್ಳುವ ಮೂಲಕ ಸರ್ಕಾರ ರಚಿಸಿ ಇದೇ ನೋಡಿ ನಮಗೂ ಇತರ ಪಕ್ಷಗಳಿಗೂ ಇರುವ ವ್ಯತ್ಯಾಸ ಎಂದು ನಿರೂಪಿಸಿತ್ತು. ಆನಂತರ ಅಧಿಕಾರ ದುರ್ಬಳಕೆ ಮಾಡಿಕೊಂಡು ಭೂಕಬಳಿಕೆ, ಡಿನೋಟಿಫಿಕೇಶನ್, ಅಕ್ರಮ ಗಣಿಗಾರಿಕೆ ನಡೆಸಿದ, ಚೆಕ್ ಮೂಲಕ ಲಂಚ ಪಡೆದಂತಹ ಭಾರೀ ಭ್ರಷ್ಟಾಚಾರದ ಹಗರಣಗಳು ಬಯಲುಗೊಂಡು ಅಂದಿನ ಸಿಎಂ ಯಡಿಯೂರಪ್ಪ, ಸಚಿವ ಜನಾರ್ದನ ರೆಡ್ಡಿ ಸೇರಿದಂತೆ ಪ್ರಭಾವಿ ಸಚಿವರು ಜೈಲು ಸೇರಿದ್ದು ಇತಿಹಾಸ. ಜನಾರ್ದನ ರೆಡ್ಡಿಗೆ ಇಂದಿಗೂ ಬಳ್ಳಾರಿ ಪ್ರವೇಶಿಸಿದಂತೆ ನಿಷೇಧ ಮುಂದುವರಿದಿರುವುದು ಉಲ್ಲೇಖಾರ್ಹ.

2019ರಲ್ಲಿಯೂ ಆಪರೇಷನ್ ಕಮಲದ ಮೂಲಕ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರವನ್ನು ಕೆಡವಿ ಎರಡನೇ ಅವಧಿಗೆ ಅಧಿಕಾರಕ್ಕೆ ಬಂದ ಬಿಜೆಪಿ ಸರ್ಕಾರವು ಮತ್ತದೇ ಭ್ರಷ್ಟಾಚಾರದ ಕರ್ಮಕಾಂಡದಲ್ಲಿ ತೊಡಗಿಕೊಂಡಿದೆ. ಬಿಜೆಪಿ ಶಾಸಕ ಹಾಗೂ ಕೆಎಸ್‌ಡಿಎಲ್ (ಕರ್ನಾಟಕ ಸೋಪ್ಸ್ ಅಂಡ್ ಡಿಟರ್ಜೆಂಟ್ಸ್ ಲಿಮಿಟೆಡ್) ಅಧ್ಯಕ್ಷರಾಗಿದ್ದ ವಿರೂಪಾಕ್ಷಪ್ಪ ಮಾಡಾಳ್‌ರವರ ಪುತ್ರ ಪ್ರಶಾಂತ್ ಮಾಡಾಳ್ ಕಮಿಷನ್ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಇವರುಗಳ ವಿರುದ್ಧ ಎಫ್‌ಐಆರ್ ದಾಖಲೆಯಾಗಿದೆ. ಇದರಿಂದಾಗಿ ಬಿಜೆಪಿ ಸರ್ಕಾರ 40% ಕಮಿಷನ್ ಸರ್ಕಾರ ಎಂಬ ಆರೋಪಕ್ಕೆ ಬಲವಾದ ಸಾಕ್ಷಿಗಳು ಸಿಕ್ಕಂತಾಗಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿಯೆಂದರೆ ಭ್ರಷ್ಟಾಚಾರ ಎಂಬಂತಹ ಚರ್ಚೆಗಳು ನಡೆಯುತ್ತಿವೆ. ಈ ಪ್ರಕರಣದ ಬೆಳಕಿನಲ್ಲಿ ಬಿಜೆಪಿ ಎರಡನೇ ಅವಧಿಗೆ ಅಧಿಕಾರಕ್ಕೆ ಬಂದನಂತರ ವರದಿಯಾದ ಭ್ರಷ್ಟಾಚಾರ ಮತ್ತು ಇತರ ಹಗರಣಗಳ ಸಂಕ್ಷಿಪ್ತ ಮಾಹಿತಿ ಇಲ್ಲಿದೆ.

ಸೂಪರ್ ಸಿಎಂ ವಿಜಯೇಂದ್ರ ಸರ್ವೀಸ್ ಟ್ಯಾಕ್ಸ್

2019ರ ಜುಲೈ ತಿಂಗಳಿನಲ್ಲಿ 76 ವರ್ಷದ ಬಿ.ಎಸ್ ಯಡಿಯೂರಪ್ಪನವರು ನಾಲ್ಕನೇ ಬಾರಿಗೆ ರಾಜ್ಯದ ಮುಖ್ಯಮಂತ್ರಿಯಾದರು. ಆದರೆ ನಿಜವಾಗಿಯೂ ಸಿಎಂ ಆಗಿ ವರ್ತಿಸಿದ್ದು ಅವರ ಪುತ್ರ ಬಿ.ವೈ ವಿಜಯೇಂದ್ರ ಎಂದು ಅವರ ಪಕ್ಷದವರೇ ಹಲವು ವೇದಿಕೆಗಳಲ್ಲಿ ಆರೋಪಿಸುತ್ತಿದ್ದರು. ಸೂಪರ್ ಸಿಎಂ ಎಂದು ಕರೆಸಿಕೊಳ್ಳುತ್ತಿದ್ದ ಅವರು ಪ್ರತಿಯೊಂದು ಕೆಲಸಕ್ಕೆ ಇಂತಿಷ್ಟು ಎಂದು ಕಮಿಷನ್ ನಿಗದಿಮಾಡಿದ್ದಾರೆಂದು ಆರೋಪಿಸಿ ವಿರೋಧ ಪಕ್ಷಗಳು ಇದು ಸೂಪರ್ ಸಿಎಂ ವಿಜಯೇಂದ್ರ ಸರ್ವೀಸ್ ಟ್ಯಾಕ್ಸ್ ಎಂದು ಟೀಕಿಸಿದ್ದರು. (ಬಿಡಿಎ) ವಸತಿ ಯೋಜನೆ ಗುತ್ತಿಗೆ ನೀಡುವ ಸಲುವಾಗಿ ರಾಮಲಿಂಗಂ ಕನ್‌ಸ್ಟ್ರಕ್ಷನ್ ಕಂಪೆನಿಯಿಂದ ಕೋಟ್ಯಂತರ ರೂಪಾಯಿಗಳ ನಗದನ್ನೂ ಮತ್ತು ಶೆಲ್ ಕಂಪೆನಿಗಳ ಮೂಲಕವಾಗಿಯೂ ಲಂಚ ಪಡೆದಿದ್ದಾರೆ ಎಂಬ ಆರೋಪ ಎದುರಿಸಿದ್ದರು. ಈ ಕುರಿತು ಪವರ್ ಟಿವಿ ಸ್ಟಿಂಗ್ ಆಪರೇಷನ್ ನಡೆಸಿ ನಿರಂತರ ವರದಿ ಮಾಡಿತ್ತು. ಈ ಪ್ರಕರಣದ ತನಿಖೆ ಇಂದಿಗೂ ನಡೆಯುತ್ತಿದೆ.

ಜಿಂದಾಲ್ ಕಂಪನಿಗೆ 3,667 ಎಕರೆ ಭೂಮಿ ಮಾರಾಟ

ಬಳ್ಳಾರಿಯಲ್ಲಿರುವ ಜಿಂದಾಲ್ ಕಂಪನಿಗೆ ತೀರಾ ಕಡಿಮೆ ಹಣಕ್ಕೆ 3,667 ಎಕರೆ ಭೂಮಿ ಮಾರಲು 2019ರಲ್ಲಿ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರ ನಿರ್ಧರಿಸಿತ್ತು. ಆಗ ಪ್ರತಿಪಕ್ಷದಲ್ಲಿದ್ದ ಬಿಜೆಪಿ ಭಾರೀ ಪ್ರತಿಭಟನೆ ನಡೆಸಿತ್ತು. ಆದರೆ ಬಿಜೆಪಿ ಅಧಿಕಾರಕ್ಕೆ ಬರುತ್ತಲೇ 3,667 ಎಕರೆ ಭೂಮಿಯನ್ನು ಜಿಂದಾಲ್ ಕಂಪನಿಗೆ ಧಾರೆಯೆರೆದು ಕೊಟ್ಟಿತು.

ಕೊರೊನಾ ಹಗರಣ

ಕೋವಿಡ್ ಸಾಂಕ್ರ್ರಾಮಿಕ ಸಮಯದಲ್ಲಿ ವೈದ್ಯಕೀಯ ಸಾಮಗ್ರಿ ಖರೀದಿ ಹೆಸರಿನಲ್ಲಿ ಆರೋಗ್ಯ ಸಚಿವ ಸುಧಾಕರ್ ನೂರಾರು ಕೋಟಿ ರೂ ಭ್ರಷ್ಟಾಚಾರ ನಡೆಸಿದ್ದಾರೆ ಎಂದು ಆರೋಪಿಸಲಾಗಿತ್ತು. ಅಲ್ಲದೆ 10,000 ಬೆಡ್‌ಗಳ ಕೋವಿಡ್ ಆರೈಕೆ ಕೇಂದ್ರವನ್ನು ಬೆಂಗಳೂರಿನ ವಸ್ತು ಪ್ರದರ್ಶನ ಮೈದಾನದಲ್ಲಿ ನಿರ್ಮಿಸಲಾಗಿತ್ತು. ಅಲ್ಲಿಯೂ ಹೆಸರಿಗೆ ಮಾತ್ರ ಬಿಲ್ ತೋರಿಸಿ ಹಣ ಲಪಟಾಯಿಸಲಾಗಿದೆ ಎಂಬ ಆರೋಪ ಕೇಳಿಬಂದಿತ್ತು. ಕೊರೊನಾ ಎರಡನೇ ಅಲೆಯ ವೇಳೆಗೆ ಜನ ಆಸ್ಪತ್ರೆ ಬೆಡ್ ಸಿಗದೆ ಸಾಯುತ್ತಿರುವ ಸಮಯಕ್ಕೆ ಕೋವಿಡ್ ಆರೈಕೆ ಕೇಂದ್ರವನ್ನು ಮುಚ್ಚಲಾಗಿತ್ತು. ಈ ರೀತಿಯಾಗಿ ಸಾಂಕ್ರಾಮಿಕ ಸಂದರ್ಭದಲ್ಲಿ ಸಾವಿರಾರು ಕೋಟಿ ರೂ ಲೂಟಿ ಮಾಡಲಾಗಿದೆ, ಬಿಜೆಪಿ ಸಚಿವರು-ಶಾಸಕರೆ ಬೆಡ್ ಬ್ಲಾಕಿಂಗ್ ಹಗರಣ ನಡೆಸಿದ್ದಾರೆ ಎಂದು ವರದಿಯಾಯಿತು.

ಡಾ.ಕೆ ಸುಧಾಕರ್‌

ಈ ನಡುವೆ ಬಿಜೆಪಿ ಸರ್ಕಾರದಲ್ಲಿ ನೀರಾವರಿ ಸಚಿವರಾಗಿದ್ದ ರಮೇಶ್ ಜಾರಕಿಹೊಳಿಯ ಸೆಕ್ಸ್ ಸಿಡಿ ಹಗರಣ ಹೊರಬಿತ್ತು. ಅವರು ರಾಜೀನಾಮೆ ನೀಡಬೇಕಾಗಿ ಬಂತು.

ಬಸವರಾಜ ಬೊಮ್ಮಾಯಿಯವರು ಸಿಎಂ ಆದ ನಂತರ..

2021ರ ಜುಲೈ ಅಂತ್ಯದಲ್ಲಿ ಬಿ.ಎಸ್ ಯಡಿಯೂರಪ್ಪನವರನ್ನು ಸಿಎಂ ಸ್ಥಾನದಿಂದ ಇಳಿಸಿ ಬಸವರಾಜ ಬೊಮ್ಮಾಯಿಯವರನ್ನು ನೂತನ ಸಿಎಂ ಆಗಿ ಬಿಜೆಪಿ ಹೈಕಮಾಂಡ್ ನೇಮಿಸಿತು. ಯಡಿಯೂರಪ್ಪನವರ ಸರ್ಕಾರದಲ್ಲಿ ಮಿತಿ ಮೀರಿದ ಭ್ರಷ್ಟಾಚಾರ ಮತ್ತು ಅವರ ಪುತ್ರ ವಿಜಯೇಂದ್ರರವರು ಆಡಳಿತದಲ್ಲಿ ಹಸ್ತಕ್ಷೇಪ ಮಾಡುತ್ತಿದ್ದರಿಂದ ಅದನ್ನು ನಿಗ್ರಹಿಸಲು ಈ ಬದಲಾವಣೆ ಮಾಡಿದ್ದಾರೆ ಎಂಬ ಮಾತುಗಳು ಹರಿದಾಡಿದ್ದವು. ಆದರೆ ಬೊಮ್ಮಾಯಿಯವರು ಸಿಎಂ ಆದ ನಂತರ ಭ್ರಷ್ಟಾಚಾರದ ಹಗರಣ ಆರೋಪಗಳು ಹೆಚ್ಚಾದವೆ ಹೊರತು ಕಡಿಮೆಯಾಗಲಿಲ್ಲ.

40% ಕಮಿಷನ್ ಸರ್ಕಾರ

ಕರ್ನಾಟಕದ ಬಿಜೆಪಿ ಸರ್ಕಾರ ಯಾವುದೇ ಕಾಮಗಾರಿಯಲ್ಲಿ 40% ಕಮಿಷನ್ ಕೇಳುತ್ತದೆ; ಸಚಿವರು-ಶಾಸಕರು ಎಲ್ಲರೂ ಇದರಲ್ಲಿ ಶಾಮೀಲಾಗಿದ್ದು ಇದರಿಂದ ಗುಣಮಟ್ಟದ ಕಾಮಗಾರಿಗಳನ್ನು ಮಾಡಲು ಸಾಧ್ಯವಾಗುತ್ತಿಲ್ಲ ಎಂದು ಆರೋಪಿಸಿ ಕರ್ನಾಟಕದ ಗುತ್ತಿಗೆದಾರರ ಸಂಘದ ಅಧ್ಯಕ್ಷರಾದ ಡಿ.ಕೆಂಪಣ್ಣನವರು ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದಿದ್ದರು.

ಇದನ್ನೂ ಓದಿ: ಲಂಚಾರೋಪಿ ಮಾಡಾಳ್‌ಗೆ ಜಾಮೀನು ವಿಚಾರ: ವಕೀಲರ ಸಂಘದಿಂದ ತೀವ್ರ ಕಳವಳ ವ್ಯಕ್ತ; ಸಿಜೆಐಗೆ ಪತ್ರ

ಆದರೆ ಪ್ರಧಾನಿ ಕಚೇರಿಯಿಂದ ಯಾವುದೇ ಉತ್ತರ ಬಾರದಿದ್ದಾಗ ಪತ್ರಿಕಾಗೋಷ್ಟಿ ನಡೆಸಿ ಬಿಜೆಪಿ ಸರ್ಕಾರದ ಕಮಿಷನ್ ದಂಧೆಯನ್ನು ಜಗಜ್ಜಾಹೀರು ಮಾಡಿದ್ದರು.

ಬಿಟ್ ಕಾಯಿನ್ ಹಗರಣ

ಬೊಮ್ಮಾಯಿಯವರು ಮುಖ್ಯಮಂತ್ರಿ ಆದ ಮೂರೇ ತಿಂಗಳಿನಲ್ಲಿ ಬಿಟ್ ಕಾಯಿನ್ ಹಗರಣದಲ್ಲಿ ಪ್ರಮುಖ ಆರೋಪಿಯಾಗಿ ಅವರ ಹೆಸರು ಕೇಳಿಬಂದಿತ್ತು. ’ಕಾಂಗ್ರೆಸ್‌ನವರು ಇದರಲ್ಲಿ ಇದ್ದಾರೆ ಎಚ್ಚರಿಕೆ’ ಎಂಬ ಹೇಳಿಕೆಗಳನ್ನು ಅವರು ನೀಡಿದರೇ ಹೊರತು ನಿಷ್ಪಕ್ಷಪಾತ ತನಿಖೆಗೆ ಮುಂದಾಗಲಿಲ್ಲ. ಆನಂತರ ಶ್ರೀಕಿ ಎಂಬ ಹ್ಯಾಕರ್‌ನನ್ನು ಬಂಧಿಸಲಾಯಿತು. ಡ್ರಗ್ಸ್ ಜಾಲ ಎಂದು ಕರೆಯಲಾಯಿತಾದರೂ, ಬಿಜೆಪಿಯವರೆ ಈ ಬಿಟ್ ಕಾಯಿನ್ ಹಗರಣ ಮಾಹಿತಿಯನ್ನು ಹೊರಹಾಕಿದ್ದರು!

ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ – ಸಚಿವ ಸ್ಥಾನಕ್ಕೆ ಈಶ್ವರಪ್ಪ ರಾಜೀನಾಮೆ

ಸಚಿವ ಕೆ.ಎಸ್. ಈಶ್ವರಪ್ಪ ವಿರುದ್ಧ 40% ಕಮೀಷನ್ ಆರೋಪ ಮಾಡಿದ್ದ ಬೆಳಗಾವಿಯ ಬಿಜೆಪಿ ಕಾರ್ಯಕರ್ತ ಹಾಗೂ ಗುತ್ತಿಗೆದಾರ ಸಂತೋಷ ಪಾಟೀಲ್ ಅವರು 2022ರ ಏಪ್ರಿಲ್ 12 ಉಡುಪಿಯ ಲಾಡ್ಜ್ ಒಂದರಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ವರ್ಕ್ ಆರ್ಡರ್ ಇಲ್ಲದೆ ಕೋಟ್ಯಾಂತರ ರೂಗಳ ಕಾಮಗಾರಿ ಮಾಡಲಾಗಿದೆ; ಆದರೆ ಸಚಿವರು ಬಿಲ್ ಪಾಸ್ ಮಾಡಿಸುತ್ತಿಲ್ಲ ಎಂದು ಆರೋಪಿಸಿದ್ದರು. ಆನಂತರ ಈ ಪ್ರಕರಣದಲ್ಲಿ ಕೆ.ಎಸ್ ಈಶ್ವರಪ್ಪರವರನ್ನು ಆರೋಪಿಯನ್ನಾಗಿ ಮಾಡಲಾಯಿತು. ಆಗ ಅವರು ತಮ್ಮ ಗ್ರಾಮೀಣಾಭಿವೃದ್ದಿ ಖಾತೆಗೆ ರಾಜೀನಾಮೆ ನೀಡಿದ್ದರು. ಬಿಜೆಪಿ ಸರ್ಕಾರ ಇದರ ಬಗ್ಗೆ ತನಿಖೆ ನಡೆಸಿ ಬಿ-ರಿಪೋರ್ಟ್ ಹಾಕಿ ಈಶ್ವರಪ್ಪ ಆರೋಪಮುಕ್ತ ಎಂದಿದ್ದರೂ, 40% ಕಮಿಷನ್ ಆರೋಪಗಳು ಕಡಿಮೆಯಾಗಲೇ ಇಲ್ಲ!

ಮಠಗಳ ಅನುದಾನದಲ್ಲಿಯೂ 30% ಕಮಿಷನ್!

“ಮಠಗಳಿಗೆ ಸರ್ಕಾರ ಬಿಡುಗಡೆ ಮಾಡುವ ಅನುದಾನ ಪಡೆಯಲು ಶೇ.30ರಷ್ಟು ಕಮಿಷನ್ ನೀಡಬೇಕಿದೆ. ರಾಜ್ಯದಲ್ಲಿ ಭ್ರಷ್ಟಾಚಾರ ಇಲ್ಲಿಗೆ ಬಂದು ನಿಂತಿದೆ” ಎಂದು ಶಿರಹಟ್ಟಿ ಜಗದ್ಗುರು ಫಕೀರ ದಿಂಗಾಲೇಶ್ವರ ಸ್ವಾಮೀಜಿ ಆಕ್ಷೇಪ ವ್ಯಕ್ತಪಡಿಸಿದ್ದರು.

ಫಕೀರ ದಿಂಗಾಲೇಶ್ವರ ಸ್ವಾಮೀಜಿ

ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಪ್ರತಿ ಪಕ್ಷ ಕಾಂಗ್ರೆಸ್ ಪೇ ಸಿಎಂ ಅಭಿಯಾನ ನಡೆಸಿತ್ತು. “ನಲವತ್ತು ಪರ್ಸೆಂಟ್ ಇಲ್ಲಿ ಸ್ವೀಕರಿಸಲಾಗುತ್ತದೆ”, “ಮುಖ್ಯಮಂತ್ರಿಗಳ ಭ್ರಷ್ಟಾಚಾರಕ್ಕೆ ಸಂದಾಯ ಮಾಡಲು ನೀವು ಇಲ್ಲಿ ಕ್ಯೂಆರ್ ಕೋಡ್ ಸ್ಕ್ಯಾನ್” ಮಾಡಿ ಎಂಬ ಸಂದೇಶಗಳುಳ್ಳ ಪೆಟಿಎಂ ವಿನ್ಯಾಸದ ರೀತಿಯ ಪೇ ಸಿಎಂ ಪೋಸ್ಟರ್‌ಗಳು ಏಕಾಏಕಿ ಬೆಂಗಳೂರಿನಲ್ಲಿ ಕಾಣಿಸಿಕೊಂಡು ಅಚ್ಚರಿ ಉಂಟುಮಾಡಿದ್ದವು. ಇದು ಬಿಜೆಪಿ ಸರ್ಕಾರಕ್ಕೆ ಬಹುದೊಡ್ಡ ಮುಜುಗರ ತಂದಿತ್ತು.

ಪಿಎಸ್‌ಐ ಹಗರಣ

ಸಂತೋಷ್ ಪಾಟೀಲ್ ಆತ್ಮಹತ್ಯೆಯ ಬೆನ್ನಲ್ಲೇ ಪಿಎಸ್‌ಐ ಹಗರಣ ಬೆಳಕಿಗೆ ಬಂದಿತು. 2021ರ ಅಕ್ಟೋಬರ್‌ನಲ್ಲಿ ನಡೆದ 545 ಪಿಎಸ್‌ಐ ಹುದ್ದೆ ನೇಮಕಾತಿಯಲ್ಲಿ ಕೆಲ ಅಭ್ಯರ್ಥಿಗಳಿಂದ ಕೋಟಿಗಟ್ಟಲೆ ಹಣ ಪಡೆದು ಅಕ್ರಮವೆಸಗಲಾಗಿತ್ತು. ಕೇವಲ 21 ಪ್ರಶ್ನೆಗಳಿಗೆ ಉತ್ತರ ಬರೆದವರಿಗೆ 100 ಅಂಕ ನೀಡಲಾಗಿತ್ತು. ಖಾಲಿ ಬಿಟ್ಟ ಓಎಂಆರ್ ಶೀಟ್‌ಅನ್ನು ಪರೀಕ್ಷೆ ಮುಗಿದ ಬಳಿಕ ತುಂಬಿದ್ದಾರೆ ಎಂಬ ಆರೋಪಗಳು ಕೇಳಿಬಂದಿದ್ದವು. ಈ ಹಗರಣದ ಕಿಂಗ್ ಪಿನ್ ದಿವ್ಯಾ ಹಾಗರಗಿ ಕಲಬುರಗಿಯ ಬಿಜೆಪಿ ನಾಯಕಿಯಾಗಿದ್ದು ಅವರನ್ನು ಬಂಧಿಸಲಾಗಿತ್ತು. ಅವರು ಗೃಹ ಸಚಿವ ಆರಗ ಜ್ಞಾನೇಂದ್ರ ಮತ್ತು ಉನ್ನತ ಶಿಕ್ಷಣ ಸಚಿವ ಡಾ.ಅಶ್ವಥನಾರಾಯಣ ಗೌಡರೊಂದಿಗೆ ಇರುವ ಫೋಟೊಗಳು ವೈರಲ್ ಆಗಿದ್ದವು. ಮತ್ತೊಬ್ಬ ಆರೋಪಿ ರುದ್ರಗೌಡ ಪಾಟೀಲ್ ಎಂಬುವವರು ಬಿಜೆಪಿ ಟಿಕೆಟ್‌ಗಾಗಿ ಯತ್ನಿಸುತ್ತಿದ್ದಾರೆ.

ಮತದಾರರ ಪಟ್ಟಿ ಹಗರಣ

ಬಿಜೆಪಿಯ ಸಚಿವರ, ಶಾಸಕರ ರಾಜಕೀಯ ಮತ್ತು ಹಣಕಾಸಿನ ಬೆಂಬಲವಿರುವ ’ಚಿಲುಮೆ’ ಎಂಬ ಸಂಸ್ಥೆಯು ಮತದಾರರ ಜಾಗೃತಿ ಹೆಸರಿನಲ್ಲಿ ರಾಜ್ಯಾದ್ಯಂತ 27 ಲಕ್ಷ ಮತದಾರರ ಹೆಸರನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕಿತ್ತು. ಅದರಲ್ಲಿ ಬಹುತೇಕರು ಮುಸ್ಲಿಂ ಸಮುದಾಯದವರೇ ಆಗಿದ್ದರು.

ಬೆಂಗಳೂರು ಒಂದರಲ್ಲಿಯೇ 6.69 ಲಕ್ಷ ಮತದಾರರ ಹೆಸರನ್ನು ಡಿಲೀಟ್ ಮಾಡಲಾಗಿತ್ತು. ಅಷ್ಟು ಮಾತ್ರವಲ್ಲದೆ ಬಿಎಲ್‌ಓಗಳು ಎಂದು ನಕಲಿ ಐಡಿ ಕಾರ್ಡ್ ಮಾಡಿಕೊಂಡು ಬೆಂಗಳೂರಿನ 243 ವಾರ್ಡ್‌ಗಳಲ್ಲಿ ರಾಜಕೀಯ ಸಮೀಕ್ಷೆ ನಡೆಸಲಾಗಿತ್ತು. ಲಕ್ಷಾಂತರ ಮತದಾರರ ವೈಯಕ್ತಿಕ ಡೇಟಾವನ್ನು ಸಂಗ್ರಹಿಸಲಾಗಿತ್ತು. ಈ ಕುರಿತು ನ್ಯೂಸ್ ಮಿನಿಟ್ ಮತ್ತು ಪ್ರತಿಧ್ವನಿ ಮಾಧ್ಯಮಗಳು ಸ್ಟಿಂಗ್ ಆಪರೇಷನ್ ಮಾಡಿ ಈ ನಕಲಿ ಜಾಲವನ್ನು ಬಯಲು ಮಾಡಿದ್ದವು. ಆನಂತರ ದೊಡ್ಡ ಕೋಲಾಹಲವೇ ಸಂಭವಿಸಿತ್ತು. ಸದ್ಯ ಈ ಪ್ರಕರಣವನ್ನು ಚುನಾವಣಾ ಆಯೋಗ ತನಿಖೆ ನಡೆಸುತ್ತಿದೆ.

ಸ್ಯಾಂಟ್ರೋ ರವಿ ಕೇಸ್

ರಾಜಕಾರಣಿಗಳಿಗೆ, ಅಧಿಕಾರಿಗಳಿಗೆ ಹೆಣ್ಣು ಮಕ್ಕಳನ್ನು ಪೂರೈಸುವ ಅನೈತಿಕ ದಂಧೆ ನಡೆಸುತ್ತಿದ್ದ ಸ್ಯಾಂಟ್ರೋ ರವಿ ಬಿಜೆಪಿ ಸರ್ಕಾರ ಬರುತ್ತಲೇ ವರ್ಗಾವಣೆಯ ದಂಧೆಗೆ ಇಳಿದಿದ್ದ. ಮುಖ್ಯಮಂತ್ರಿಗಳೇ ನನ್ನನ್ನು ಸರ್ ಎಂದು ಸಂಭೋಧಿಸುತ್ತಾರೆ, ನೀನು ಯಾರೋ ಖಾಲಿ ಡಿವೈಎಸ್‌ಪಿ ಎಂದು ಆತ ಅವಾಜ್ ಹಾಕಿದ್ದ ಆಡಿಯೋ ಒಂದು ಹರಿದಾಡಿತು. ಯಾವ ಹುದ್ದೆಯಾದರೂ ಸರಿ, ಎಲ್ಲಿಗೆ ಬೇಕಾದರೂ ಸರಿ ವರ್ಗಾವಣೆ ಮಾಡಿಸುತ್ತೇನೆ ಎನ್ನುವ ಆತ ಸರ್ಕಾರದ ಕುಮಾರಕೃಪಾ ಅತಿಥಿ ಗೃಹವನ್ನು ತನ್ನ ಕಚೇರಿಯನ್ನಾಗಿ ಮಾಡಿಕೊಂಡಿದ್ದ. ಸಿಎಂ ಬೊಮ್ಮಾಯಿಯವರ ಪುತ್ರನೊಂದಿಗೆ, ಗೃಹ ಸಚಿವ ಆರಗ ಜ್ಞಾನೇಂದ್ರ, ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಜೊತೆಗಿನ ಆತನ ಫೋಟೊಗಳು ವೈರಲ್ ಆಗಿದ್ದವು. ಸದ್ಯ ಆತ ಜೈಲಿನಲ್ಲಿದ್ದಾನೆ.

ಮಾಡಾಳ್ ಹಗರಣ

ಈಗ ಮಾಡಾಳ್ ವಿರೂಪಾಕ್ಷಪ್ಪ, ಆತನ ಪುತ್ರ ಕೆಎಸ್‌ಡಿಎಲ್‌ನಲ್ಲಿ ಕಮಿಷನ್ ಲಂಚ ಪಡೆಯುವಾಗ ಸಿಕ್ಕಿಬಿದ್ದಿದ್ದಾರೆ. ಈ ಹಿಂದೆಯೂ ಟೆಂಡರ್ ನೀಡುವಾಗಿ 20 ಕೋಟಿ ಕಮಿಷನ್ ಪಡೆದಿದ್ದಾರೆ ಎಂಬ ಆರೋಪ ಅವರ ಮೇಲಿದೆ.

ಪ್ರಶಾಂತ್ ಮಾಡಾಳ್

ಇವಿಷ್ಟು ಮಾತ್ರವಲ್ಲದೆ ವೇದಗಣಿತ ಕಲಿಸುತ್ತೇವೆ ಎಂದು ಸರ್ಕಾರ 50% ಕಮಿಷನ್ ಪಡೆಯಲು ಮುಂದಾಗಿ ವಿರೋಧ ಎದುರಿಸಿತ್ತು. ಗಂಗಾ ಕಲ್ಯಾಣ ಯೋಜನೆಯಲ್ಲಿ 430 ಕೋಟಿ ರೂ.ಗಳಷ್ಟು ಅಕ್ರಮ ನಡೆದಿದೆ ಎಂಬ ಆರೋಪ ಕೇಳಿಬಂದಿದೆ. ಕಾಕಂಬಿ ಹಗರಣದಲ್ಲಿ ಮತ್ತೆ ಸಿಎಂ ಬೊಮ್ಮಾಯಿ ಹೆಸರು ಕಾಣಿಸಿಕೊಂಡಿದೆ. ಕೇವಲ ಭ್ರಷ್ಟಾಚಾರದ ಹಗರಣಗಳು ಮಾತ್ರವಲ್ಲದೆ ಮತೀಯ ಗೂಂಡಾಗಿರಿಗಳು, ಹಿಜಾಬ್-ಹಲಾಲ್, ಜಾತ್ರೆಯಲ್ಲಿ ವ್ಯಾಪಾರ ನಿಷೇಧದಂತಹ ಇಸ್ಲಾಮೋಫೋಬಿಯಾವನ್ನು ಸರ್ಕಾರ ಪೋಷಿಸುತ್ತಿದೆ. ಪಠ್ಯ ಪರಿಷ್ಕರಣೆ ಹೆಸರಿನಲ್ಲಿ ಮತೀಯವಾದ ತುಂಬುತ್ತಿದೆ. ಇನ್ನೊಂದೆಡೆ ಸೈಲೆಂಟ್ ಸುನೀಲ್, ಫೈಟರ್ ರವಿ ಥರದ ರೌಡಿ ಶೀಟರ್‌ಗಳು ಬಿಜೆಪಿ ಪಕ್ಷ ಸೇರುತ್ತಿದ್ದಾರೆ. ಒಟ್ಟಾರೆಯಾಗಿ ಹಗರಣಗಳನ್ನೇ ಹಾಸಿ ಹೊದ್ದು ಮಲಗಿದೆ ಈ ಸರ್ಕಾರ.

ಇದನ್ನೂ ಓದಿ: ಬಿಜೆಪಿ ಶಾಸಕನ ಪುತ್ರನ ಲಂಚದ ಬೇಡಿಕೆಯನ್ನು ಸೆರೆ ಹಿಡಿದ ಸ್ಮಾರ್ಟ್‌ ವಾಚ್: ಪ್ರಶಾಂತ್ ಮಾಡಾಳ್ ಸಿಕ್ಕಿಬಿದ್ದಿದ್ದು ಹೀಗೆ..

ಇದಿಷ್ಟು ರಾಜ್ಯ ಸರ್ಕಾರದ ಕಥೆಯಾದರೆ ಕೇಂದ್ರ ಬಿಜೆಪಿಯದ್ದು ಮತ್ತೊಂದು ರೀತಿಯ ಭ್ರಷ್ಟಾಚಾರ. ತಮ್ಮ ನೀತಿಗಳ ಮೂಲಕ ನೂರಾರು ಉದ್ಯಮಿಗಳಿಗೆ ಅನುಕೂಲ ಮಾಡಿಕೊಟ್ಟು ಅವರಿಂದ ಯಾರಿಗೂ ಗೊತ್ತಾಗದ ಹಾಗೆ ಸಾವಿರಾರು ಕೋಟಿ ರೂಗಳನ್ನು ಚುನಾವಣಾ ಬಾಂಡ್‌ಗಳ ಮೂಲಕ ಪಡೆಯುತ್ತಿದೆ ಎಂಬ ಆರೋಪವನ್ನು ಎದುರಿಸುತ್ತಿದೆ. ಅದಾನಿ ತರದ ಭ್ರಷ್ಟ ಉದ್ಯಮಿಗಳಿಗೆ ತನ್ನ ಪ್ರಭಾವ ಬೀರಿ ಸಾಲ ಕೊಡಿಸುತ್ತಿದೆ ಮತ್ತು ಲಾಭದಲ್ಲಿರುವ ಸಾರ್ವಜನಿಕ ಸಂಸ್ಥೆಗಳನ್ನು ಬಿಡಿಗಾಸಿಗೆ ಮಾರುತ್ತಿದೆ ಎನ್ನುವ ಆರೋಪಗಳಿಗೆ ಸರ್ಕಾರ ಮೌನವಾಗಿದೆ. “ನಾನು ತಿನ್ನೋಲ್ಲ, ತಿನ್ನುವವರಿಗೆ ಬಿಡುವುದಿಲ್ಲ” ಎಂದು ಪ್ರಧಾನಿ ಮೋದಿ ಘೋಷಿಸಿದ್ದರು. ಬಹುಶಃ ಆ ಮಾತು ಬೀಫ್ ಮಾಂಸದ ಬಗ್ಗೆ ಇರಬಹುದು ಎಂದು ಕಾಂಗ್ರೆಸ್ ಸಂಸದ ಶಶಿ ತರೂರ್ ವ್ಯಂಗ್ಯವಾಡಿದ್ದರು. ಬಿಜೆಪಿಯ ಈ ಭ್ರಷ್ಟಾಚಾರಗಳನ್ನೆಲ್ಲ ನೋಡಿದ ಮೇಲೆ ಅದು ವ್ಯಂಗ್ಯ ಮಾತ್ರ ಅನಿಸುತ್ತಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...