Homeಮುಖಪುಟ‘ಲಿಂಗಾಯತ ಧರ್ಮ ಹಿಂದೆಯೂ ಇತ್ತು, ಇಂದೂ ಇದೆ, ಮುಂದೆಯೂ ಇರುತ್ತದೆ’

‘ಲಿಂಗಾಯತ ಧರ್ಮ ಹಿಂದೆಯೂ ಇತ್ತು, ಇಂದೂ ಇದೆ, ಮುಂದೆಯೂ ಇರುತ್ತದೆ’

- Advertisement -
- Advertisement -

ಗದುಗಿನ ತೋಂಟದಾರ್ಯ ಮಠದಲ್ಲಿ ಸಿದ್ಧಲಿಂಗ ಶ್ರೀಗಳ ಮೂರನೇ ವರ್ಷದ ಸ್ಮರಣೆ ‘ಮರಣವೇ ಮಹಾನವಮಿ’ ಕಾರ್ಯಕ್ರಮ ಶನಿವಾರ ನಡೆದಿದ್ದು, ಲಿಂಗಾಯತ ಧರ್ಮದ ವಿಚಾರ ಮುನ್ನೆಲೆಗೆ ಬಂದಿದೆ.

ಸನ್ಮಾನ ಸ್ವೀಕರಿಸಿದ ಮಾತನಾಡಿದ ಭಾಲ್ಕಿ ಹಿರೇಮಠ ಸಂಸ್ಥಾನದ ಬಸವಲಿಂಗ ಪಟ್ಟದೇವರು, “ಲಿಂಗಾಯತ ಧರ್ಮ ಹೋರಾಟಕ್ಕೆ ಹಿನ್ನಡೆಯಾಗಿಲ್ಲ” ಎಂದು ಪ್ರತಿಪಾದಿಸಿದ್ದಾರೆ.

“ಲಿಂಗಾಯತ ಧರ್ಮ ಎಂದೆಂದಿಗೂ ಸ್ವತಂತ್ರ ಧರ್ಮ. ಹಿಂದೆಯೂ ಇತ್ತು. ಇಂದೂ ಇದೆ. ಹಾಗೆಯೇ, ಮುಂದೆಯೂ ಇರುತ್ತದೆ. ಆದರೆ, ಅದಕ್ಕೆ ಸರ್ಕಾರದ ಮಾನ್ಯತೆ ಬೇಕಿತ್ತು. ಅದಕ್ಕೆ ಪೂರಕವಾಗಿ ನಿವೃತ್ತ ನ್ಯಾಯಮೂರ್ತಿ ಎಚ್‌.ಎನ್‌.ನಾಗಮೋಹನ್‌ದಾಸ್‌ ಅವರು ಐತಿಹಾಸಿಕ ದಾಖಲೆಗಳನ್ನು ಸರ್ಕಾರಕ್ಕೆ ಒದಗಿಸಿಕೊಟ್ಟಿದ್ದಾರೆ” ಎಂದು ತಿಳಿಸಿದರು.

“ಲಿಂಗಾಯತ ಧರ್ಮ ಎಲ್ಲೂ ವಿಂಗಡಣೆ ಆಗಿಲ್ಲ. ಲಿಂಗಾಯತ ಸ್ವತಂತ್ರ ಧರ್ಮ ಹೋರಾಟಕ್ಕೆ ಹಿನ್ನಡೆಯೂ ಆಗಿಲ್ಲ. ಲಿಂಗಾಯತ ಧರ್ಮ ಮತ್ತೊಮ್ಮೆ ಬೆಳಗಲಿದೆ. ತೋಂಟದ ಸಿದ್ಧರಾಮ ಶ್ರೀಗಳ ನೇತೃತ್ವದಲ್ಲಿ ಸಂಘಟಿತ ಹೋರಾಟ ನಡೆಸಿ ಲಿಂಗಾಯತ ಸ್ವತಂತ್ರ ಧರ್ಮ ಮಾನ್ಯತೆಗೆ ಪ್ರಯತ್ನಿಸಬೇಕು” ಎಂದು ಹೇಳಿದರು.

ತೋಂಟದಾರ್ಯ ಮಠದ ಸಿದ್ಧರಾಮ ಸ್ವಾಮೀಜಿ ಮಾತನಾಡಿ, ‘ಲಿಂಗಾಯತ ಸ್ವತಂತ್ರ ಧರ್ಮ ಹೋರಾಟದ ಸಂದರ್ಭದಲ್ಲಿ ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಸ್ಟೀಸ್‌ ನಾಗಮೋಹನ್‌ದಾಸ್‌ ಅವರ ನೇತೃತ್ವದಲ್ಲಿ ಸಮಿತಿಯನ್ನು ನೇಮಕ ಮಾಡಿದರು. ಅದರಂತೆ ಈ ವಿಷಯದಲ್ಲಿ ಸರ್ಕಾರಕ್ಕೆ ಸ್ಪಷ್ಟ ನಿರ್ದೇಶನ ನೀಡುವಂತಹ ವರದಿಯನ್ನು ನಾಗಮೋಹನ್‌ದಾಸ್‌ ನೀಡಿದ್ದಾರೆ’ ಎಂದರು.

ತೋಂಟದ ಸಿದ್ಧಲಿಂಗ ಶ್ರೀ ರಾಷ್ಟ್ರೀಯ ಪ್ರಶಸ್ತಿಯನ್ನು ಜಸ್ಟೀಸ್ ಎಚ್‌.ಎನ್.ನಾಗಮೋಹನ ದಾಸ್ ಅವರಿಗೆ ಪ್ರಧಾನ ಮಾಡಲಾಯಿತು. ಪ್ರಶಸ್ತಿಯು ಐದು ಲಕ್ಷ ರೂ. ನಗದನ್ನು ಒಳಗೊಂಡಿದ್ದು, ‘ಸಂವಿಧಾನ ಓದು’ ಅಭಿಯಾನಕ್ಕೆ ಈ ಹಣವನ್ನು ಬಳಸುವುದಾಗಿ ನಾಗಮೋಹನದಾಸ್‌ ತಿಳಿಸಿದ್ದಾರೆ.

ಮುಂಡರಗಿ- ಬೈಲೂರು ಮಠದ ನಿಜಗುಣಪ್ರಭು ತೋಂಟದಾರ್ಯ ಸ್ವಾಮೀಜಿ, ಗದಗ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎಂ. ಮೌಲ್ವಿ, ಹಿರಿಯ ರಾಜಕಾರಣಿ ಎಸ್‌.ಎಸ್‌.ಪಾಟೀಲ, ವಿಧಾನ ಪರಿಷತ್‌ ಸದಸ್ಯ ಎಸ್‌.ವಿ.ಸಂಕನೂರ, ಶಿರೋಳ ಮಠದ ಗುರುಬಸವ ಸ್ವಾಮೀಜಿ, ಜಾತ್ರಾ ಮಹೋತ್ಸವ ಸಮಿತಿ ಅಧ್ಯಕ್ಷ ಅಮರೇಶ ಅಂಗಡಿ, ತೋಂಟದಾರ್ಯ ಮಠದ ಆಡಳಿತಾಧಿಕಾರಿ ಎಸ್‌.ಎಸ್‌.ಪಟ್ಟಣಶೆಟ್ಟಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಇದನ್ನೂ ಓದಿರಿ: ‘ತೋಂಟದ ಶ್ರೀ ಪ್ರಶಸ್ತಿಯ 5 ಲಕ್ಷ ರೂ.ಗಳನ್ನೂ ಸಂವಿಧಾನ ಓದು ಅಭಿಯಾನಕ್ಕೆ ಬಳಸುವೆ’

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

FACT CHECK : ಸಿದ್ದರಾಮಯ್ಯ ಸರ್ಕಾರ ಮುಸ್ಲಿಮರನ್ನು ಒಬಿಸಿ ಪಟ್ಟಿಗೆ ಸೇರಿಸಿದ್ದು ನಿಜಾನಾ?

0
ಕರ್ನಾಟಕದಲ್ಲಿ ಮುಸ್ಲಿಮರನ್ನು ಹಿಂದುಳಿದ ವರ್ಗಕ್ಕೆ ಸೇರಿಸುವ ಮೂಲಕ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಹಿಂದುಳಿದ ವರ್ಗಗಳ 36 ಜಾತಿಗಳಿಗೆ ಅನ್ಯಾಯ ಮಾಡಿದೆ ಎಂದು ಬಿಜೆಪಿ ಆರೋಪಿಸಿದೆ. ಸಿದ್ದರಾಮಯ್ಯ ಸರ್ಕಾರ ಹಿಂದುಳಿದ ವರ್ಗಗಳಿಗೆ...