Homeಮುಖಪುಟ'ಅಕ್ಬರ್‌', 'ಸೀತಾ' ಹೆಸರಿನ ಸಿಂಹಗಳನ್ನು ಒಂದೇ ಸ್ಥಳದಲ್ಲಿ ಬಿಟ್ಟಿದ್ದಕ್ಕೆ ಹೈಕೋರ್ಟ್‌ ಮೆಟ್ಟಿಲೇರಿದ ವಿಹೆಚ್‌ಪಿ: ವಿಲಕ್ಷಣ...

‘ಅಕ್ಬರ್‌’, ‘ಸೀತಾ’ ಹೆಸರಿನ ಸಿಂಹಗಳನ್ನು ಒಂದೇ ಸ್ಥಳದಲ್ಲಿ ಬಿಟ್ಟಿದ್ದಕ್ಕೆ ಹೈಕೋರ್ಟ್‌ ಮೆಟ್ಟಿಲೇರಿದ ವಿಹೆಚ್‌ಪಿ: ವಿಲಕ್ಷಣ ಘಟನೆ

- Advertisement -
- Advertisement -

ಪಶ್ಚಿಮ ಬಂಗಾಳದ ಅರಣ್ಯ ಇಲಾಖೆ ನಡೆಸುತ್ತಿರುವ ಸಫಾರಿ ಪಾರ್ಕ್‌ನಲ್ಲಿ ಅಕ್ಬರ್‌ ಹಾಗೂ ಸೀತಾ ಎನ್ನುವ ಹೆಸರಿನ ಸಿಂಹದ ಜೋಡಿಯನ್ನು ಅರಣ್ಯ ಇಲಾಖೆ ಒಂದೇ ಸ್ಥಳದಲ್ಲಿ ಬಿಟ್ಟಿದ್ದನ್ನು ಪ್ರಶ್ನಿಸಿ ವಿಶ್ವ ಹಿಂದೂ ಪರಿಷತ್‌ ಮುಖಂಡರು ಹೈಕೋರ್ಟ್‌ ಮೆಟ್ಟಿಲೇರಿರುವ ವಿಲಕ್ಷಣ ಘಟನೆ ನಡೆದಿದೆ.

ಸಿಲಿಗುರಿಯಲ್ಲಿರುವ ಬಂಗಾಳ ಸಫಾರಿ ಪಾರ್ಕ್‌ಗೆ ಫೆಬ್ರವರಿ 12ರಂದು ತ್ರಿಪುರಾದ ಸೆಪಹಿಜಲಾ ಝುವೊಲಾಜಿಕಲ್‌ ಪಾರ್ಕಿನಿಂದ ಎರಡು ಸಿಂಹಗಳನ್ನು ತರಲಾಗಿತ್ತು. ಅವುಗಳಲ್ಲಿ ಒಂದಕ್ಕೆ ʼಅಕ್ಬರ್‌ʼ ಎಂದು ಹೆಸರನ್ನಿಡಲಾಗಿದ್ದರೆ, ಇನ್ನೊಂದಕ್ಕೆ ಸೀತಾ ಎಂಬ ಹೆಸರನ್ನಿಡಲಾಗಿದೆ. ಈ 7 ವರ್ಷದ ʼಅಕ್ಬರ್‌ ಮತ್ತು 5 ವರ್ಷದ ಸೀತಾ ಸಿಂಹದ ಜೋಡಿಯನ್ನು ಒಂದೇ ಕಡೆ ಅಧಿಕಾರಿಗಳು ಇರಿಸಿದ್ದಾರೆ. ಇದನ್ನು ಪ್ರಶ್ನಿಸಿ ವಿಶ್ವ ಹಿಂದೂ ಪರಿಷತ್‌ ಕೋಲ್ಕತಾ ಹೈಕೋರ್ಟ್‌ ಮೊರೆ ಹೋಗಿದೆ. ಇದು ಹಿಂದೂ ಧರ್ಮಕ್ಕೆ ಅವಮಾನ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.
ಕೋಲ್ಕತ್ತ ಉಚ್ಚ ನ್ಯಾಯಾಲಯದ ಜಲ್‌ ಪಾಯ್‌ಗುರಿ ಸರ್ಕ್ಯೂಟ್‌ ಪೀಠಕ್ಕೆ ವಿಶ್ವಹಿಂದೂ ಪರಿಷತ್‌ ಅರ್ಜಿಯನ್ನು ಸಲ್ಲಿಸಿದೆ. ಈ ಕುರಿತು ಅರ್ಜಿಯನ್ನು ವಿಚಾರಣೆಗೆ ಕೈಗೆತ್ತಿಕೊಂಡ ಸುಗತಾ ಭಟ್ಟಾಚಾರ್ಯ ಅವರ ಪೀಠವು ವಿಚಾರಣೆಯನ್ನು ಫೆಬ್ರವರಿ 20ಕ್ಕೆ ಮುಂದೂಡಿದ್ದಾರೆ.

 

ಪಶ್ಚಿಮ ಬಂಗಾಳದ ಅರಣ್ಯ ಇಲಾಖೆಯು ಹಲವಾರು ವರ್ಷಗಳಿಂದ ಪ್ರವಾಸಿ ತಾಣವಾದ ಸಿಲಿಗುರಿಯಲ್ಲಿ ವನ್ಯಜೀವಿಗಳ ಸಫಾರಿ ಪಾರ್ಕ್‌ ಹೊಂದಿದೆ. ಇಲ್ಲಿ ಆನೆ, ಸಿಂಹ, ಹುಲಿ ಸಹಿತ ಪ್ರಮುಖ ಪ್ರಾಣಿಗಳಿವೆ. ಇಲ್ಲಿಗೆ ನಿತ್ಯ ನೂರಾರು ಪ್ರವಾಸಿಗರು ಕೂಡ ಭೇಟಿ ನೀಡುತ್ತಾರೆ. ʼಅಕ್ಬರ್‌ʼ  ಮತ್ತುಸೀತಾ ಸಿಂಹದ ಜೋಡಿಯನ್ನು ಒಂದೇ ಕಡೆ ಅಧಿಕಾರಿಗಳು ಬಿಟ್ಟಿರುವುದನ್ನು ಗಮನಿಸಿದ ವಿಶ್ವ ಹಿಂದೂ ಪರಿಷತ್‌ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮನವಿ ಸಲ್ಲಿಸಿ ಸಿಂಹಗಳ ಹೆಸರನ್ನು ಬದಲಿಸಿ ಅಥವಾ ಸಿಂಹಗಳನ್ನು ಒಂದೇ ಕಡೆ ಇರುವುದನ್ನು ತಪ್ಪಿಸಿ ಎಂದು ಹೇಳಿದ್ದರು. ಆದರೆ ಈಗಾಗಲೇ ಸಿಂಹಗಳಿಗೆ ಹೆಸರು ಇಡಲಾಗಿದೆ. ಹೆಸರು ಬದಲಾಯಿಸಲು ಆಗುವುದಿಲ್ಲ. ಅವುಗಳನ್ನು ಸ್ಥಳಾಂತರಿಸುವ ವಿಷಯವೂ ನಮ್ಮ ವ್ಯಾಪ್ತಿಗೆ ಬರುವುದಿಲ್ಲ ಎಂದು ಅಧಿಕಾರಿಗಳು ಸ್ಪಷ್ಟನೆಯನ್ನು ನೀಡಿದ್ದರು. ಇದನ್ನು ಪ್ರಶ್ನಿಸಿ ಪಶ್ಚಿಮ ಬಂಗಾಳದ ವಿಶ್ವ ಹಿಂದೂ ಪರಿಷತ್‌ ಮುಖಂಡರು ಹೈಕೋರ್ಟ್ ಮೊರೆ ಹೋಗಿದ್ದಾರೆ.

ಅಕ್ಬರ್‌ ಎನ್ನುವ ಸಿಂಹವನ್ನು ಸೀತಾ ಎನ್ನುವ ಸಿಂಹದ ಜತೆಗೆ ಇರಿಸುವುದು ಸರಿಯಲ್ಲ. ಈ ಮೂಲಕ ಹಿಂದೂ ಭಾವನೆಗಳನ್ನು ಕೆರಳಿಸಲಾಗಿದೆ. ಕೂಡಲೇ ಸಿಂಹದ ಹೆಸರು ಬದಲಿಸಬೇಕು ಎಂದು ಹೈಕೋರ್ಟ್‌ಗೆ ಸಲ್ಲಿಸಲಾಗಿರುವ ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ. ಪಶ್ವಿಮ ಬಂಗಾಳದ ಅರಣ್ಯ ಇಲಾಖೆ ಅಧಿಕಾರಿಗಳು, ಸಿಲಿಗುರಿ ಸಫಾರಿ ಪಾರ್ಕ್‌ ನಿರ್ದೇಶಕರನ್ನು ಪ್ರತಿವಾದಿಯನ್ನಾಗಿ ಮಾಡಲಾಗಿದೆ.

ಈ ಬಗ್ಗೆ ಪ್ರತಿಕ್ರಿಯಿಸಿದ ವಿಶ್ವಹಿಂದೂ ಪರಿಷತ್‌ ಮುಖಂಡ ದುಲಾಲ್‌ ಚಂದ್ರ ರೇ, ಅಕ್ಬರ್‌ ಹೆಸರಿನ ಸಿಂಹದ ಜೋಡಿಯಾಗಿರುವ ಹೆಣ್ಣು ಸಿಂಹಕ್ಕೆ ಸೀತಾ ಹೆಸರಿಟ್ಟಿದ್ದು ಹಿಂದೂ ಧರ್ಮದ ಜನರ ಧಾರ್ಮಿಕ ಭಾವನೆಗಳಿಗೆ ನೋವುಂಟು ಮಾಡಿದೆ ಎಂದು ಹೇಳಿದ್ದಾರೆ.

ಇದನ್ನು ಓದಿ: ಮತಾಂತರ: ಕಠಿಣ ಶಿಕ್ಷೆಗೆ ಅವಕಾಶ ಕಲ್ಪಿಸಬಲ್ಲ ಮಸೂದೆ ಮಂಡಿಸಲು ಛತ್ತೀಸ್‌ಗಢ ಸಜ್ಜು; ಪ್ರಾಸ್ತಾವಿತ ಮಸೂದೆಯಲ್ಲೇನಿದೆ?

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಕಿರ್ಗಿಸ್ತಾನ್‌ನಲ್ಲಿ ಹಿಂಸಾಚಾರ: ಮನೆಬಿಟ್ಟು ಹೊರಬರದಂತೆ ಭಾರತೀಯ ವಿದ್ಯಾರ್ಥಿಗಳಿಗೆ ಸೂಚನೆ

0
ಕಿರ್ಗಿಸ್ತಾನ್‌ನ ರಾಜಧಾನಿ ಬಿಷ್ಕೆಕ್‌ನಲ್ಲಿ ವಿದೇಶಿ ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ಗುಂಪು ಹಿಂಸಾಚಾರದ ವರದಿಗಳ ಮಧ್ಯೆ ಭಾರತ ಮತ್ತು ಪಾಕಿಸ್ತಾನವು ಶನಿವಾರ ಬಿಷ್ಕೆಕ್‌ನಲ್ಲಿರುವ ವಿದ್ಯಾರ್ಥಿಗಳಿಗೆ ತಾವು ತಂಗಿರುವ ಹಾಸ್ಟೆಲ್‌, ಮನೆಗಳಿಂದ ಹೊರಗೆ ಬರದಂತೆ ಸೂಚಿಸಿದೆ. ಕಿರ್ಗಿಸ್ತಾನ್‌ನಲ್ಲಿರುವ ಭಾರತದ...