Homeಮುಖಪುಟಮದ್ಯ ನಿಷೇಧ ಕಾನೂನನ್ನು ಪರಿಶೀಲಿಸಲಿರುವ ಬಿಹಾರ ಸಿಎಂ ನಿತೀಶ್ ಕುಮಾರ್ - ವರದಿ

ಮದ್ಯ ನಿಷೇಧ ಕಾನೂನನ್ನು ಪರಿಶೀಲಿಸಲಿರುವ ಬಿಹಾರ ಸಿಎಂ ನಿತೀಶ್ ಕುಮಾರ್ – ವರದಿ

- Advertisement -
- Advertisement -

ಮಹಿಳೆಯರ ಬೇಡಿಕೆಯ ಮೇರೆಗೆ ರಾಜ್ಯದಲ್ಲಿ ಹೇರಿದ್ದ ಮದ್ಯ ನಿಷೇಧ ಕಾನೂನನ್ನು ಪರಿಶೀಲಿಸಲು ಬಿಹಾರ ಮುಖ್ಯಮಂತ್ರಿ ಮುಂದಾಗಿದ್ದಾರೆ ಎಂದು ವರದಿಗಳು ಹೇಳಿವೆ. ಮದ್ಯ ನಿಷೇಧದಿಂದ ತಮಗೆ ಲಾಭಕ್ಕಿಂತ ಹೆಚ್ಚು ಹಾನಿಯಾಗುತ್ತಿದೆ ಎಂಬ ವರದಿಗಳನ್ನು ಪರಿಗಣಿಸಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಈ ನಿರ್ಧಾರಕ್ಕೆ ಮುಂದಾಗಿದ್ದಾರೆ ಎಂದು ವರದಿಯಾಗಿದೆ.

ಡಿಸೆಂಬರ್ 15 ರಿಂದ ನಿತೀಶ್ ಕುಮಾರ್ ನಡೆಸಲು ಉದ್ದೇಶಿಸಿರುವ ಮೆರವಣಿಗೆಯಲ್ಲಿ ಮಹಿಳೆಯರು ಈ ಆಗ್ರಹವನ್ನು ಇಡಲು ಸಜ್ಜಾಗಿದ್ದಾರೆ. ಜೆಡಿಯುನ ಪ್ರಮುಖ ಮತದಾರರೆಂದು ಪರಿಗಣಿಸಲ್ಪಟ್ಟಿರುವ ಮಹಿಳೆಯರು ಈಗಾಗಲೇ ನಿಷೇಧ ಕಾನೂನಿನ ಕಳಪೆ ಅನುಷ್ಠಾನ ಮತ್ತು ರಾಜ್ಯಾದ್ಯಂತ ಕಳ್ಳಭಟ್ಟಿ ವ್ಯಾಪಾರ ಪ್ರವರ್ಧಮಾನಕ್ಕೆ ಬರುತ್ತಿರುವ ಬಗ್ಗೆ ತಮ್ಮ ಕಳವಳ ವ್ಯಕ್ತಪಡಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಜೆಡಿಯು ಯಾತ್ರೆ ವೇಳೆ ಸಿಎಂ ಅವರ ಮುಂದೆ ನಮ್ಮ ಬೇಡಿಕೆ ಇಡುತ್ತೇವೆ. ಕಾನೂನನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು ಅಥವಾ ಅದನ್ನು ರದ್ದುಗೊಳಿಸಬೇಕು ಎಂದು ನಾವು ಅಭಿಪ್ರಾಯಪಟ್ಟಿದ್ದೇವೆ ಎಂದು ವೈಶಾಲಿಯ ರಾಘೋಪುರ ಫತೇಪುರ್ ನಿವಾಸಿ ತೆಟಾರಿಯಾ ದೇವಿ ಹೇಳಿದ್ದಾರೆ. ಪ್ರಾಸಂಗಿಕವಾಗಿ ರಾಘೋಪುರವು ಆರ್‌ಜೆಡಿ ನಾಯಕ ತೇಜಸ್ವಿ ಪ್ರಸಾದ್ ಯಾದವ್ ಅವರ ವಿಧಾನಸಭಾ ಕ್ಷೇತ್ರವಾಗಿದೆ.

ಏಪ್ರಿಲ್ 2016 ರಲ್ಲಿ ನಿತೀಶ್ ಅವರು ಬಿಹಾರದಲ್ಲಿ ಸಂಪೂರ್ಣ ಮದ್ಯ ನಿಷೇಧವನ್ನು ಹೇರಿದ್ದರು. ಅವರ ಈ ನೀತಿಗೆ ಸ್ವಾಗತ ಮತ್ತು ಟೀಕೆಗಳು ಸಮಾನವಾಗಿ ವ್ಯಕ್ತವಾಗಿತ್ತು. ಈ ವೇಳೆ ನಿತೀಶ್ ಅವರು ಆರ್‌ಜೆಡಿ ಜೊತೆಗೆ ಸಮ್ಮಿಶ್ರ ಸರ್ಕಾರ ನಡೆಸುತ್ತಿದ್ದರು. ಆದರೂ, ಆರ್‌ಜೆಡಿ ನಿತೀಶ್ ಅವರ ಈ ಕ್ರಮದ ವಿರುದ್ಧ ಬಹಿರಂಗವಾಗಿ ಟೀಕೆ ವ್ಯಕ್ತಪಡಿಸಿತ್ತು.

ವಿಶೇಷವಾಗಿ ರಾಜ್ಯಕ್ಕೆ ಭಾರಿ ಪ್ರಮಾಣದ ಕಳ್ಳಸಾಗಣೆ ಮತ್ತು ಕಾನೂನಿನ ಕಳಪೆ ಜಾರಿಯಿಂದಾಗಿ ನಡೆಯುವ ದುರಂತಗಳ ಬಗ್ಗೆ ಮತ್ತು ಕಡಿಮೆ ಬೆಲೆಯಲ್ಲಿ ಸಿಗುವ ನಕಲಿ ಮದ್ಯದ ಸೇವನೆಯಿಂದ ಉಂಟಾಗುವ ಸಾವುನೋವುಗಳ ಬಗ್ಗೆ ಆರ್‌ಜೆಡಿ ಆತಂಕ ವ್ಯಕ್ತಪಡಿಸಿತ್ತು.

ಕೇಂದ್ರ ಸಚಿವ ಮತ್ತು HAM ಸಂಸ್ಥಾಪಕ ಜಿತನ್ ರಾಮ್ ಮಾಂಝಿ ನಿಷೇಧ ಕಾನೂನನ್ನು ತಿರುಚುವ ಮೂಲಕ ಸಣ್ಣ ಪ್ರಮಾಣದಲ್ಲಿ ಮದ್ಯ ಸೇವನೆಗೆ ಅವಕಾಶ ನೀಡುವಂತೆ ಒತ್ತಾಯಿಸುತ್ತಿದ್ದಾರೆ. ಮಾಜಿ ಚುನಾವಣಾ ತಂತ್ರಜ್ಞ ಮತ್ತು ಹೊಸದಾಗಿ ರಚಿಸಲಾದ ಜನ್ ಸೂರಾಜ್ ಪಕ್ಷದ ಸಂಸ್ಥಾಪಕ ಪ್ರಶಾಂತ್ ಕಿಶೋರ್ ಅವರು ವಿಧಾನಸಭಾ ಚುನಾವಣೆಯ ನಂತರ ಅಧಿಕಾರಕ್ಕೆ ಬಂದರೆ ಒಂದು ಗಂಟೆಯೊಳಗೆ ನಿಷೇಧ ಕಾನೂನನ್ನು ರದ್ದುಗೊಳಿಸುವುದಾಗಿ ಭರವಸೆ ನೀಡಿದ್ದಾರೆ.

ಪ್ರಸ್ತುತ ಬಿಹಾರ ಮದ್ಯ ನಿಷೇಧದಿಂದ ಪ್ರತಿ ವರ್ಷ 20,000 ಕೋಟಿ ರೂಪಾಯಿ ನಷ್ಟ ಅನುಭವಿಸುತ್ತಿದೆ. ಬಿಹಾರವು ವಿಶ್ವ ದರ್ಜೆಯ ಶಿಕ್ಷಣ ವ್ಯವಸ್ಥೆಯನ್ನು ಸಾಧಿಸಲು, ಮುಂದಿನ 10 ವರ್ಷಗಳಲ್ಲಿ ₹ 5 ಲಕ್ಷ ಕೋಟಿ ಹೂಡಿಕೆ ಅಗತ್ಯವಿದೆ. ಮದ್ಯಪಾನ ನಿಷೇಧವನ್ನು ತೆಗೆದುಹಾಕಿದ ಕೂಡಲೆ, ಅದರಿಂದ ಬರುವ ಹಣವನ್ನು ಹೊಸ ಶಿಕ್ಷಣ ವ್ಯವಸ್ಥೆಯನ್ನು ಸ್ಥಾಪಿಸಲು ಮಾತ್ರ ಮೀಸಲಿಡಲಾಗುವುದು ಎಂದು ಕಿಶೋರ್ ಇತ್ತೀಚೆಗೆ ಹೇಳಿದ್ದರು.

ಪಾಟ್ನಾ ಹೈಕೋರ್ಟ್ ಕೂಡಾ ಮದ್ಯ ನಿಷೇಧ ಕಾನೂನನ್ನು ಇತ್ತೀಚೆಗೆ ಟೀಕಿಸಿದೆ. ಈ ಕಾನೂನು ಸರ್ಕಾರಿ ಅಧಿಕಾರಿಗಳಿಗೆ ಹಣ ಗಳಿಸುವ ಮತ್ತು ಅನಧಿಕೃತ ವ್ಯಾಪಾರವನ್ನು ಉತ್ತೇಜಿಸುವ ಸಾಧನವಾಗಿದೆ ಎಂದು ಕರೆದಿತ್ತು. ನಿಷೇಧ ಕಾನೂನನ್ನು ಜಾರಿಗೊಳಿಸುವಲ್ಲಿ ನಿರ್ಲಕ್ಷ್ಯ ತೋರಿದ ಆರೋಪದ ಮೇಲೆ ಇನ್ಸ್‌ಪೆಕ್ಟರ್‌ನ ಪದಚ್ಯುತಿಯನ್ನು ರದ್ದುಗೊಳಿಸುವ ಹೈಕೋರ್ಟ್ ತೀವ್ರ ಟೀಕೆಗ ಮಾಡಿತ್ತು.

ಇದನ್ನೂ ಓದಿ: ಸಂಭಾಲ್ ನಂತರ ಮತ್ತೊಂದು ವಿವಾದ: ಜಾಮಾ ಮಸೀದಿಯ ಮಾಲೀಕತ್ವಕ್ಕಾಗಿ ನ್ಯಾಯಾಲಯದ ಮೊರೆ

ಸಂಭಾಲ್ ನಂತರ ಮತ್ತೊಂದು ವಿವಾದ: ಜಾಮಾ ಮಸೀದಿಯ ಮಾಲೀಕತ್ವಕ್ಕಾಗಿ ನ್ಯಾಯಾಲಯದ ಮೊರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...