Homeಮುಖಪುಟಮದ್ಯ ನಿಷೇಧ ಬಿಹಾರದಲ್ಲಿ ನಕಲಿ ಮದ್ಯ ಸೇವಿಸಿ 7 ಜನರು ಸಾವು!

ಮದ್ಯ ನಿಷೇಧ ಬಿಹಾರದಲ್ಲಿ ನಕಲಿ ಮದ್ಯ ಸೇವಿಸಿ 7 ಜನರು ಸಾವು!

- Advertisement -
- Advertisement -

ಮದ್ಯ ನಿಷೇಧ ಇರುವ ರಾಜ್ಯವಾದ ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಸಂಭವಿಸಿದ ಶಂಕಿತ ನಕಲಿ ಮದ್ಯ ದುರಂತದಲ್ಲಿ ಏಳು ಜನರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಅಸ್ವಸ್ಥರಾಗಿದ್ದಾರೆ ಎಂದು ವರದಿಯಾಗಿದೆ. ಒಂದು ದಿನದ ಹಿಂದೆಯಷ್ಟೆ, ನೆರೆಯ ಸರನ್ ಜಿಲ್ಲೆಯಲ್ಲಿ ನಕಲಿ ಮದ್ಯ ಸೇವಿಸಿ ಒಬ್ಬರು ಸಾವನ್ನಪ್ಪಿದರು ಮತ್ತು ಇನ್ನೊಬ್ಬರು ಅಸ್ವಸ್ಥರಾಗಿದ್ದರು.

ಮಂಗಳವಾರ ತಡರಾತ್ರಿ ಸಿವಾನ್ ಜಿಲ್ಲೆಯ ಭಗವಾನ್‌ಪುರ ಪೊಲೀಸ್ ವ್ಯಾಪ್ತಿಯ ಮಧಾರ್ ಗ್ರಾಮದಲ್ಲಿ ನಕಲಿ ಮದ್ಯ ಸೇವಿಸಿ ಏಳು ಮಂದಿ ಸಾವನ್ನಪ್ಪಿದ್ದಾರೆ ಎಂದು ಕೇಂದ್ರ ಕಚೇರಿಗೆ ವರದಿಗಳು ತಿಳಿಸಿವೆ. ಇನ್ನಿಬ್ಬರು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮದ್ಯ ನಿಷೇಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಸಂತ್ರಸ್ತರು ಅಂಗಡಿಯೊಂದರಲ್ಲಿ ಜಮಾಯಿಸಿ ಸಂಜೆ ವೇಳೆ ಮದ್ಯ ಸೇವಿಸಿದ್ದಾರೆ. ಮನೆಗೆ ತಲುಪಿದ ನಂತರ ದೃಷ್ಟಿ ನಷ್ಟ, ವಾಂತಿ ಮತ್ತು ಹೊಟ್ಟೆ ನೋವು ಎಂದು ಅಸ್ವಸ್ಥರಾಗಿದ್ದಾರೆ. ಚಿಕಿತ್ಸೆ ವೇಳೆ ಆರು ಮಂದಿ ಮೃತಪಟ್ಟರೆ, ಏಳನೇ ವ್ಯಕ್ತಿ ಪಾಟ್ನಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ (ಪಿಎಂಸಿಎಚ್) ಸಾಗಿಸುವ ದಾರಿಯಲ್ಲಿ ಕೊನೆಯುಸಿರೆಳೆದಿದ್ದಾರೆ ಎಂದು ವರದಿಯಾಗಿದೆ.

ಅರವಿಂದ್ ಸಿಂಗ್ (40), ರಾಮೇಂದ್ರ ಸಿಂಗ್ (30), ಸಂತೋಷ್ ಮಹ್ತೋ (35), ಮುನ್ನಾ (32) ಮತ್ತು ಬ್ರಿಜ್ ಮೋಹನ್ ಸಿಂಗ್ (38) ಅವರು ಸ್ಥಳೀಯ ಖಾಸಗಿ ಕ್ಲಿನಿಕ್‌ನಲ್ಲಿ ಚಿಕಿತ್ಸೆ ವೇಳೆ ಸಾವನ್ನಪ್ಪಿದ್ದಾರೆ, ಮಧಾರ್ ಗ್ರಾಮದ ನಿವಾಸಿ ಮೋಹನ್ ಶಾ (28) PMCH ಗೆ ಹೋಗುವ ದಾರಿಯಲ್ಲಿ ಕೊನೆಯುಸಿರೆಳೆದಿದ್ದಾರೆ. ಉಳಿದ ಇಬ್ಬರು ಮೃತರು ಬಿಲಾಸ್‌ಪುರ ಮತ್ತು ಸರ್ಸಯ್ಯಾ ಗ್ರಾಮದ ನಿವಾಸಿಗಳಾಗಿದ್ದು, ಮಾಧರ್ ಗ್ರಾಮದಲ್ಲಿ ಅಕ್ರಮ ಮದ್ಯ ಸೇವಿಸಿದ ಗುಂಪಿನ ಭಾಗವಾಗಿದ್ದರು.

ಮಂಗಳವಾರ ತಡರಾತ್ರಿ ಅರವಿಂದ್ ಸಿಂಗ್ ಅವರ ಕುಟುಂಬ ಸದಸ್ಯರು ಅಂತ್ಯಕ್ರಿಯೆ ನೆರವೇರಿಸಿದರು ಎಂದು ಮೂಲಗಳು ತಿಳಿಸಿವೆ. ಹೊಸ ನಿಷೇಧ ಕಾನೂನಿನ ಅಡಿಯಲ್ಲಿ ಬಿಹಾರದಲ್ಲಿ ಮದ್ಯದ ಉತ್ಪಾದನೆ, ಮಾರಾಟ, ಬಳಕೆ ಮತ್ತು ಸಂಗ್ರಹಣೆಯನ್ನು ಸಂಪೂರ್ಣವಾಗಿ ನಿಷೇಧಿಸಿರುವುದರಿಂದ ಸಿವಾನ್‌ನ ಹಿರಿಯ ಅಧಿಕಾರಿಗಳು ಘಟನೆಯ ಬಗ್ಗೆ ಬಾಯಿ ಮುಚ್ಚಿಕೊಂಡಿದ್ದಾರೆ ಎಂದು ವರದಿ ಹೇಳಿದೆ.

ರಾಜ್ಯದಲ್ಲಿ 2016ರಲ್ಲಿ ನಿಷೇಧಾಜ್ಞೆ ಜಾರಿಗೆ ಬಂದಿದೆ. ಘಟನೆ ಈ ಬಗ್ಗೆ ವಿಚಾರಣೆ ನಡೆಸಲು ಗ್ರಾಮಕ್ಕೆ ತಂಡವನ್ನು ಕಳುಹಿಸಲಾಗಿದೆ ಎಂದು ಸಿವಾನ್ ಜಿಲ್ಲಾ ಮ್ಯಾಜಿಸ್ಟ್ರೇಟ್ ಮುಕುಲ್ ಕುಮಾರ್ ಗುಪ್ತಾ ತಿಳಿಸಿದ್ದಾರೆ. “ಮಧಾರ್ ಗ್ರಾಮದಲ್ಲಿ ಕೆಲವು ಜನರ ಸಾವಿಗೀಡಾಗಿರುವ ಬಗ್ಗೆ ವರದಿಗಳು ನಮಗೆ ಬಂದಿವೆ. ಸಾವಿನ ಕಾರಣ ಇನ್ನೂ ಪತ್ತೆಯಾಗಿಲ್ಲ,” ಎಂದು ಅವರು ಹೇಳಿದ್ದಾರೆ.

ಒಂದು ದಿನದ ಹಿಂದೆ, ಸರನ್ ಜಿಲ್ಲೆಯ ಮಸಾರಖ್‌ನಲ್ಲಿ ಅಕ್ರಮ ಮದ್ಯ ಸೇವಿಸಿ ಒಬ್ಬರು ಸಾವನ್ನಪ್ಪಿದರು ಮತ್ತು ಇನ್ನೊಬ್ಬರು ಅಸ್ವಸ್ಥರಾಗಿದ್ದರು. ಮೃತರನ್ನು ಇಬ್ರಾಹಿಂಪುರ ಕೈಯಾ ಗ್ರಾಮದ ನಿವಾಸಿ ಇಸ್ಮಾಯಿಲುದ್ದೀನ್ ಎಂದು ಗುರುತಿಸಲಾಗಿದೆ. ಇನ್ನೋರ್ವ ಸಂತ್ರಸ್ತೆ ಮಸರಖ್ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇದನ್ನೂ ಓದಿ: ಮಸೀದಿ ಬಳಿ ‘ಜೈ ಶ್ರೀರಾಮ್’ ಘೋಷಣೆ ಕೂಗುವುದರಿಂದ ಧಾರ್ಮಿಕ ಭಾವನೆಗಳಿಗೆ ಘಾಸಿಯಾಗುವುದಿಲ್ಲ: ಕರ್ನಾಟಕ ಹೈಕೋರ್ಟ್

ಮಸೀದಿ ಬಳಿ ‘ಜೈ ಶ್ರೀರಾಮ್’ ಘೋಷಣೆ ಕೂಗುವುದರಿಂದ ಧಾರ್ಮಿಕ ಭಾವನೆಗಳಿಗೆ ಘಾಸಿಯಾಗುವುದಿಲ್ಲ: ಕರ್ನಾಟಕ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...

SIR ವೇಳೆ ಮತಪಟ್ಟಿಯಿಂದ ಹೆಸರು ಡಿಲೀಟ್: ‘ದಿ ಟೆಲಿಗ್ರಾಫ್’ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ತಡೆ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಿದ ಕಾರಣ ಪಾಸ್‌ಪೋರ್ಟ್ ನವೀಕರಿಸಲು ಆಗುತ್ತಿಲ್ಲ ಎಂದು ದೇಶದ ಖ್ಯಾತ ಇಂಗ್ಲಿಷ್ ದಿನಪತ್ರಿಕೆ ‘ದಿ ಟೆಲಿಗ್ರಾಫ್’ನ ಮಾಜಿ ಸಂಪಾದಕ ಆರ್. ರಾಜಗೋಪಾಲ್...

‘ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ’ : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್ ಹೇಳಿಕೆ

"ಮಮತಾ ಬ್ಯಾನರ್ಜಿ ಅವರೇ ಇಂದಿಗೂ ನಮ್ಮ ನಾಯಕಿ. ಅವರೇ ಈ ಪಕ್ಷವನ್ನು ಸ್ಥಾಪಿಸಿದವರು. ಅವರೇ ನಮ್ಮ ಪಕ್ಷದ ಕಾಂದಾರಿ (ಮಾರ್ಗದರ್ಶಕರು ಅಥವಾ ಪಕ್ಷವನ್ನು ಮುನ್ನಡೆಸುವವರು). ಮಮತಾ ಬ್ಯಾನರ್ಜಿ ಅವರಿಂದಾಗಿಯೇ ನಾವು ಈ ಪಕ್ಷವನ್ನು...

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...