Homeಮುಖಪುಟಅಕ್ಟೋಬರ್‌ನಲ್ಲಿ ಒಟಿಟಿ ವೇದಿಕೆಯಲ್ಲಿ ಸಿಗಲಿರುವ ಸಿನಿಮಾಗಳ ಪಟ್ಟಿ ಇಲ್ಲಿದೆ ನೋಡಿ

ಅಕ್ಟೋಬರ್‌ನಲ್ಲಿ ಒಟಿಟಿ ವೇದಿಕೆಯಲ್ಲಿ ಸಿಗಲಿರುವ ಸಿನಿಮಾಗಳ ಪಟ್ಟಿ ಇಲ್ಲಿದೆ ನೋಡಿ

- Advertisement -
- Advertisement -

ಈ ಅಕ್ಟೋಬರ್‌ ತಿಂಗಳಲ್ಲಿ ಶೇಕಡಾ 100 ರಷ್ಟು ಸೀಟುಗಳೊಂದಿಗೆ ಚಿತ್ರಮಂದಿರಗಳನ್ನು ತೆರೆಯಲು ಸರ್ಕಾರ ಅನುಮತಿ ನೀಡಿದೆ. ಆದರೂ ಕೂಡ ಒಟಿಟಿ ವೇದಿಕೆಗಳು ಚಿತ್ರ ನಿರ್ಮಾಪಕರು ಮತ್ತು ಪ್ರೇಕ್ಷಕರ ಮೇಲೆ ಹಿಡಿತ ಸಾಧಿಸುತ್ತಿವೆ.

ಕೆಲವು ಚಲನಚಿತ್ರ ತಯಾರಕರು ತಮ್ಮ ಚಲನಚಿತ್ರಗಳನ್ನು ಥಿಯೇಟರ್‌ಗಳಿಗಿಂತ ಒಟಿಟಿಯಲ್ಲಿ ಬಿಡುಗಡೆ ಮಾಡಲು ಬಯಸುತ್ತಾರೆ. ಈ ಬಾರಿ ಅಕ್ಟೋಬರ್‌ನಲ್ಲಿ ತೆರೆಕಾಣಲಿರುವ 5 ಚಿತ್ರಗಳ ಪಟ್ಟಿ ಇಲ್ಲಿದೆ.

ಚಿತ್ರ: ರತ್ನನ್ ಪ್ರಪಂಚ (ಕನ್ನಡ)

ಒಟಿಟಿ: ಅಮೆಜಾನ್ ಪ್ರೈಂ

ಬಿಡುಗಡೆ: ಅಕ್ಟೋಬರ್‌ 22

ಕನ್ನಡದಲ್ಲಿ ಬಹು ನಿರೀಕ್ಷಿತ ಚಿತ್ರ ಎನಿಸಿಕೊಂಡಿದ್ದ ನಟ ಡಾಲಿ ಧನಂಜಯ ಅಭಿನಯದ ರತ್ನನ್ ಪ್ರಪಂಚವನ್ನು ಒಟಿಟಿಯಲ್ಲಿ ಬಿಡುಗಡೆ ಮಾಡಲು ಚಿತ್ರ ತಂಡ ನಿರ್ಧರಿಸಿದೆ.

ಅಕ್ಟೋಬರ್‌ 22 ರಂದು ಅಮೆಜಾನ್ ಪ್ರೈಂನಲ್ಲಿ ಬಿಡುಗಡೆಯಾಗಲಿದೆ. ರೋಹಿತ್ ಪದಕಿ ನಿರ್ದೇಶನದಲ್ಲಿ ಮೂಡಿ ಬಂದಿರು ಈ ಚಿತ್ರ ಕೆಆರ್‌ಜೆ ಸ್ಟುಡಿಯೊ ಅಡಿ ನಿರ್ಮಾಣವಾಗಿದೆ. ಕಾರ್ತಿಕ್ ಗೌಡ ಹಾಗೂ ಯೋಗಿ ಜಿ ರಾಜ್ ಚಿತ್ರದ ನಿರ್ಮಾಪಕರು.

ಇದನ್ನೂ ಓದಿ: ಕನ್ನಡದ ಮೊದಲ ಲೆಸ್ಬಿಯನ್ ಚಿತ್ರ ’ನಾನು ಲೇಡಿಸ್’ ತಸ್ವೀರ್ ದಕ್ಷಿಣ ಏಷ್ಯಾ ಚಿತ್ರೋತ್ಸವಕ್ಕೆ ಆಯ್ಕೆ

ಚಿತ್ರ:  ರಶ್ಮಿ ರಾಕೆಟ್ (ಹಿಂದಿ)

ಒಟಿಟಿ:  ZEE5

ಬಿಡುಗಡೆ: ಅಕ್ಟೋಬರ್‌ 15

ಬಹುಭಾಷಾ ನಟಿ ತಾಪ್ಸಿ ಪನ್ನು ನಟನೆಯ ಹಸೀನ್ ದಿಲ್ರುಬಾ ಒಟಿಟಿಯಲ್ಲಿ ಬಿಡುಗಡೆಯಾದ ಬಳಿಕ ಈಗ ಮತ್ತೊಂದು ಚಿತ್ರ ಒಟಿಟಿಯಲ್ಲಿ ಬಿಡುಗಡೆಗೆ ಸಿದ್ದವಾಗಿದೆ. ತಾಪ್ಸಿ ನಟನೆಯ ರಶ್ಮಿ ರಾಕೆಟ್ ಅಕ್ಟೋಬರ್‌ 15 ರಂದು ZEE5ನಲ್ಲಿ ಬಿಡುಗಡೆಯಾಗಲಿದೆ.

ರಶ್ಮಿ ರಾಕೆಟ್‌ನಲ್ಲಿ ಕಛ್ ಮೂಲದ ಓಟಗಾರ್ತಿಯಾಗಿ ನಟಿಸುತ್ತಿದ್ದು, ಅಥ್ಲೆಟಿಕ್ ಕ್ರೀಡಾಪಟುವಾಗಲು ಅವರು ಪಟ್ಟ ಕಷ್ಟಗಳು, ಲಿಂಗತ್ವ ಪರೀಕ್ಷೆಯ ಸವಾಲುಗಳು ಮತ್ತು ಆಕೆ ಪಡೆದ ಗೆಲುವಿನ ರುಚಿಯುಣಿಸಲು ತಾಪ್ಸಿ ರೆಡಿಯಾಗಿದ್ದಾರೆ. ಚಿತ್ರಕ್ಕೆ ಆಕರ್ಷ್ ಖುರಾನಾ ನಿರ್ದೇಶನವಿದೆ.

 

ಇದನ್ನೂ ಓದಿ: ಭಾವುಕ ಅನುಭವ ನೀಡುವ ‘ಪುಕ್ಸಟ್ಟೆ ಲೈಫು, ಪುರ್‌ಸೊತ್ತೇ ಇಲ್ಲ’ ಸಿನಿಮಾ: ಪ್ರೀತಿ ನಾಗರಾಜ್

ಚಿತ್ರ: ಸರ್ದಾರ್ ಉಧಮ್ ಸಿಂಗ್ (ಹಿಂದಿ)

ಒಟಿಟಿ: ಅಮೆಜಾನ್ ಪ್ರೈಂ

ಬಿಡುಗಡೆ: ಅಕ್ಟೋಬರ್‌ 15

ಗುಲಾಬೊ ಸೀತಾಬೊ ನಿರ್ದೇಶಕ ಶೂಜಿತ್ ಸಿರ್ಕಾರ್ ಮತ್ತು ನಿರ್ಮಾಪಕ ರೋನಿ ಲಾಹಿರಿ ಅವರ ಸರ್ದಾರ್ ಉಧಮ್ ಸಿಂಗ್ ಅಮೆಜಾನ್‌ ಪ್ರೈಂನಲ್ಲಿ ಅ. 15 ರಂದು ಬಿಡುಗಡೆಯಾಗುತ್ತಿದೆ.

ಉರಿ ಚಿತ್ರದ ಮೂಲಕ ಮುನ್ನೆಲೆಗೆ ಬಂದ ನಟ ವಿಕಿ ಕೌಶಲ್ ಈ ಚಿತ್ರದಲ್ಲಿ ಸರ್ದಾರ್ ಉಧಮ್ ಆಗಿ ಅಭಿನಯಿಸಿದ್ದಾರೆ. ಸ್ವಾತಂತ್ರ್ಯ ಹೋರಾಟಗಾರ ಉಧಮ್ ಸಿಂಗ್ ಅವರ ಜೀವನ ಕಥೆಯನ್ನು ಚಿತ್ರ ಹೊಂದಿದೆ.

ಜಲಿಯನ್ ವಾಲಾಬಾಗ್ ಹತ್ಯಾಕಾಂಡದ ಸೇಡು ತೀರಿಸಿಕೊಳ್ಳಲು ಹೊರಟ ಹೋರಾಟಗಾರ ಉಧಮ್ ಸಿಂಗ್ ಕಥೆ ಇದು ಎಂದು ಚಿತ್ರ ತಂಡ ಹೇಳಿಕೊಂಡಿದೆ.

ಚಿತ್ರ: ಸನಕ್ (ಹಿಂದಿ)

ಒಟಿಟಿ: ಡಿಸ್ನಿ+ಹಾಟ್ ಸ್ಟಾರ್

ಬಿಡುಗಡೆ: ಅಕ್ಟೋಬರ್‌ 15

ಬಾಲಿವುಡ್ ನಟ ವಿದ್ಯುತ್ ಜಮ್‌ವಾಲ್ ನಟನೆಯ ಆಕ್ಷನ್ ಥ್ರಿಲ್ಲರ್ ಸಿನಿಮಾ ‘ಸನಕ್‘ ಸಿನಿಮಾ ಅಕ್ಟೋಬರ್ 15 ರಂದು ಹಾಟ್‌ಸ್ಟಾರ್‌ನಲ್ಲಿ ಬಿಡುಗಡೆಯಾಗಲಿದೆ. ಕಾನಿಶಕ್ ವರ್ಮಾ ನಿರ್ದೇಶನದ ಸಿನಿಮಾವನ್ನು ವಿಪುಲ್ ಅಮೃತ್‌ಲಾಲ್ ಶಾ ಹಾಗೂ ಜೀ ಸ್ಟುಡಿಯೊ ನಿರ್ಮಾಣ ಮಾಡಿದೆ

ಆಸ್ಪತ್ರೆಯೊಂದಕ್ಕೆ ನುಗ್ಗಿ ಅಲ್ಲಿನ ರೋಗಿಗಳನ್ನು, ನಾಯಕನ ಪತ್ನಿಯನ್ನು ಒತ್ತೆಯಾಳುಗಳನ್ನಾಗಿ ಇಟ್ಟುಕೊಳ್ಳುವ ಉಗ್ರರಿಂದ ಹೇಗೆ ಎಲ್ಲರನ್ನೂ ನಾಯಕ ಪಾರು ಮಾಡುತ್ತಾನೆ ಎಂಬ ಕಥೆಯನ್ನು ಈ ಚಿತ್ರ ಹೊಂದಿದೆ ಎಂಬ ಸುಳಿವು ಟ್ರೇಲರ್ ನೀಡುತ್ತದೆ.

 

ಚಿತ್ರ:  ಬ್ರಹ್ಮಂ (ಮಲಯಾಳಂ)

ಒಟಿಟಿ: ಅಮೆಜಾನ್ ಪ್ರೈಂ

ಬಿಡುಗಡೆ: ಅಕ್ಟೋಬರ್‌ 07

ನಟ ಪೃಥ್ವಿರಾಜ್ ಅಭಿನಯದ ಬ್ರಹ್ಮಂ ಚಿತ್ರ ಆಯುಷ್ಮಾನ್ ಖುರಾನಾ ಅಭಿನಯದ ಹಿಂದಿ ಚಿತ್ರ ಅಂಧಧೂನ್‌ನ ಅಧಿಕೃತ ರಿಮೇಕ್ ಆಗಿದೆ. ಅಕ್ಟೋಬರ್ 7 ರಂದು ಅಮೆಜಾನ್ ಪ್ರೈಂನಲ್ಲಿ ಬಿಡುಗಡೆಯಾಗುತ್ತಿದೆ.

ಇದನ್ನೂ ಓದಿ: ಕನ್ಯಾದಾನ್‌ ಅಲ್ಲ, ಕನ್ಯಾಮಾನ್‌ ಹೊಸ ಐಡಿಯಾ ಎಂದ ಜಾಹೀರಾತು ವಿರುದ್ಧ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...