HomeUncategorizedಆರ್‌ಎಸ್‌ಎಸ್‌, ಸಂಘ ಪರಿವಾರವನ್ನು ದ್ವೇಷ ಹರಡುವ ಗುಂಪುಗಳ ಪಟ್ಟಿಗೆ ಸೇರಿಸಿ : ದಕ್ಷಿಣ ಏಷ್ಯಾ ಸಮುದಾಯಗಳಿಂದ...

ಆರ್‌ಎಸ್‌ಎಸ್‌, ಸಂಘ ಪರಿವಾರವನ್ನು ದ್ವೇಷ ಹರಡುವ ಗುಂಪುಗಳ ಪಟ್ಟಿಗೆ ಸೇರಿಸಿ : ದಕ್ಷಿಣ ಏಷ್ಯಾ ಸಮುದಾಯಗಳಿಂದ ಕೆನಡಾ ಪ್ರಧಾನಿಗೆ ಬಹಿರಂಗ ಪತ್ರ

- Advertisement -
- Advertisement -

ಕೆನಡಾದಲ್ಲಿರುವ ದಕ್ಷಿಣ ಏಷ್ಯಾದ 25 ಸಮುದಾಯಗಳ ಸದಸ್ಯರು ದೇಶದ ಪ್ರಧಾನಿ ಜಸ್ಟಿನ್ ಟ್ರುಡೊ ಅವರಿಗೆ ಬಹಿರಂಗ ಪತ್ರ ಬರೆದಿದ್ದು, ಕೆನಡಾದಲ್ಲಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮತ್ತು ಅದರ ಅಂಗ ಸಂಸ್ಥೆಗಳನ್ನು ದ್ವೇಷದ ಗುಂಪುಗಳು ಅಥವಾ ತೀವ್ರ ಬಲಪಂಥೀಯ ಉಗ್ರಗಾಮಿ ಸಂಘಟನೆಗಳ ಪಟ್ಟಿಗೆ ಸೇರಿಸುವಂತೆ ಸರ್ಕಾರವನ್ನು ಒತ್ತಾಯಿಸಿದ್ದಾರೆ ಎಂದು ವರದಿಯಾಗಿದೆ.

ಖಲಿಸ್ತಾನ್ ಪ್ರತ್ಯೇಖವಾದಿ ನಾಯಕ ಹರ್ದೀಪ್ ಸಿಂಗ್ ನಿಜ್ಜರ್ ಅನ್ನು 2023ರಲ್ಲಿ ಹತ್ಯೆಗೈದ ವಿಚಾರ ಭಾರತ-ಕೆನಡಾ ನಡುವೆ ರಾಜತಾಂತ್ರಿಕ ಬಿಕ್ಕಟ್ಟು ಸೃಷ್ಟಿಸಿರುವ ನಡುವೆ ಆರ್‌ಎಸ್ಎಸ್‌ ವಿರೋಧಿ ಕೂಗು ಕೇಳಿ ಬಂದಿರುವುದು ಮಹತ್ವ ಪಡೆದುಕೊಂಡಿದೆ.

ಕೆನಡಾದಲ್ಲಿ ಸಿಖ್ ವಿರೋಧಿ ಹಿಂಸಾಚಾರದ ಹಿಂದೆ ಆರ್‌ಎಸ್‌ಎಸ್ ಮತ್ತು ಸಂಘ ಪರಿವಾರದ ಪಾತ್ರವಿದೆ ಎಂದು ಕೆನಡಾದ ಮುಸ್ಲಿಮರ ರಾಷ್ಟ್ರೀಯ ಮಂಡಳಿಯು ಪ್ರಕಟಿಸಿದ 2023ರ ವರದಿಯನ್ನು ದಕ್ಷಿಣ ಏಷ್ಯಾದ ಸಮುದಾಯಗಳ ಸದಸ್ಯರ ಹೇಳಿಕೆ ಉಲ್ಲೇಖಿಸಿದೆ.

ಕೆನಡಾದಲ್ಲಿ ಸಂಘಪರಿವಾರ ಮತ್ತು ಆರ್‌ಎಸ್‌ಎಸ್‌ ಸಂಬಂಧಿತ ಗುಂಪುಗಳು ಹಿಂದೂ ಪ್ರಾಬಲ್ಯದ ಕೃತ್ಯಗಳ ಹಿಂದೆ ಇದೆ ಎಂದು 2023ರ ವರದಿ ಹೇಳಿತ್ತು.

“ಬಿಜೆಪಿಯು ಆರ್‌ಎಸ್‌ಎಸ್‌ನ ರಾಜಕೀಯ ಅಂಗವಾಗಿದೆ. ಇದು ಯುರೋಪಿಯನ್ ಫ್ಯಾಸಿಸಂನಿಂದ ಪ್ರೇರಿತವಾದ “ಹಿಂದುತ್ವ” ಅಥವಾ ಹಿಂದೂ ರಾಷ್ಟ್ರೀಯತೆಯನ್ನು ಉತ್ತೇಜಿಸುವ ಅರೆಸೈನಿಕ ಸಂಘಟನೆಯಾಗಿದೆ” ಎಂದು ದಕ್ಷಿಣ ಏಷ್ಯಾದ ಸಮುದಾಯಗಳ ಸದಸ್ಯರ ಹೇಳಿಕೆ ತಿಳಿಸಿದೆ.

“ಆರ್‌ಎಸ್‌ಎಸ್‌ನ ಸಂಸ್ಥಾಪಕರು ಸ್ಪಷ್ಟವಾಗಿ ಫ್ಯಾಸಿಸ್ಟ್ ಸಿದ್ಧಾಂತವನ್ನು ಪ್ರತಿಪಾದಿಸಿದ್ದಾರೆ. ಭಾರತದಲ್ಲಿ ಬಿಜೆಪಿಯ ಹತ್ತು ವರ್ಷಗಳ ಆಡಳಿತದಲ್ಲಿ ನಾವು ಇದರ ಜ್ವಲಂತ ಉದಾಹರಣೆಗಳನ್ನು ನೋಡಿದ್ದೇವೆ. 200 ಮಿಲಿಯನ್ ಮುಸ್ಲಿಂ ಜನಸಂಖ್ಯೆ ಹೊಂದಿರುವ ದೇಶವನ್ನು ಹಿಂದೂ ಜನಾಂಗೀಯ-ರಾಷ್ಟ್ರೀಯ ರಾಜ್ಯವನ್ನಾಗಿ ಮಾಡುವ ಗುರಿಯತ್ತ ಭಾರತದ ಸರ್ಕಾರ ಕೊಂಡೊಯ್ಯುತ್ತಿದೆ ಮತ್ತು ಇತರ ಅಲ್ಪಸಂಖ್ಯಾತ ಜನಸಂಖ್ಯೆಗಳಾದ ಸಿಖ್, ದಲಿತ, ಆದಿವಾಸಿ (ಸ್ಥಳೀಯ ಜನರು) ಹಾಗೂ ಕ್ರಿಶ್ಚಿಯನ್ನರನ್ನು ಎರಡನೇ ದರ್ಜೆಯ ಪ್ರಜೆಗಳಾಗಿ ಮಾಡಲಾಗಿದೆ” ಎಂದು ಹೇಳಿಕೆಯಲ್ಲಿ ಸೇರಿಸಲಾಗಿದೆ.

ಹಿಂದೂಸ್ ಫಾರ್ ಹ್ಯೂಮನ್ ರೈಟ್ಸ್‌, ಕೆನಡಿಯನ್ ಕೌನ್ಸಿಲ್ ಆಫ್ ಇಂಡಿಯನ್ ಮುಸ್ಲಿಮ್ಸ್ (ಸಿಸಿಐಎಂ) ಕೆನಡಿಯನ್ ಕೌನ್ಸಿಲ್ ಆಫ್ ಮುಸ್ಲಿಂ ವುಮೆನ್, ಮಾಂಟ್ರಿಯಲ್, ಕೆನಡಿಯನ್ ಫೋರಮ್ ಫಾರ್ ಹ್ಯೂಮನ್ ರೈಟ್ಸ್ ಅಂಡ್ ಡೆಮಾಕ್ರಸಿ ಇನ್ ಇಂಡಿಯಾ, ಕೆನಡಿಯನ್ಸ್ ಅಗೇನ್ಸ್ಟ್ ಒಪ್ರೆಶನ್ ಅಂಡ್ ಪರ್ಸಿಕ್ಯೂಶನ್ (ಸಿಎಒಪಿ), ಕೆನಡಿಯನ್ಸ್ ಫಾರ್ ಇಂಡಿಯನ್ ಡೆಮಾಕ್ರಸಿ (ಸಿಐಡಿ) ಮತ್ತು ಪ್ಯಾಲೆಸ್ತೀನಿಯನ್ ಅಂಡ್ ಜ್ಯೂವಿಶ್ ಯೂನಿಟಿ (ಪಿಎಜೆಯು) ಸೇರಿದಂತೆ ವಿವಿಧ ಸಂಘಟನೆಗಳ ಸದಸ್ಯರು ಈ ಪತ್ರಕ್ಕೆ ಸಹಿ ಹಾಕಿದ್ದಾರೆ.

“ಹಿಂದೂ ರಾಷ್ಟ್ರೀಯತಾವಾದಿ ಸರ್ಕಾರದ ಅಡಿಯಲ್ಲಿ, ಭಾರತದಲ್ಲಿ ಆಗಾಗ ಅಲ್ಪಸಂಖ್ಯಾತರ ವಿರುದ್ಧದ ದೌರ್ಜನ್ಯಗಳನ್ನು ನಿರ್ಭಯದಿಂದ ಮತ್ತು ಸಹಭಾಗಿತ್ವದಿಂದ ನಡೆಸಲಾಗಿದೆ. ಇತ್ತೀಚಿನ ವರದಿಗಳಲ್ಲಿನ ಪುರಾವೆಗಳು ಈ ಉಗ್ರಗಾಮಿ ಗುಂಪುಗಳ ಜಾಲವು ಸಿಖ್ಖರು, ಕೆನಡಾ ಮತ್ತು ಯುಎಸ್‌ನಲ್ಲಿರುವ ಇತರ ವಲಸೆ ಭಾರತೀಯ ಅಲ್ಪಸಂಖ್ಯಾತ ಸಮುದಾಯಗಳು ಮತ್ತು ಕಾರ್ಯಕರ್ತರನ್ನು ಗುರಿಯಾಗಿಸಿಕೊಂಡಿದೆ ಎಂದು ಖಚಿತಪಡಿಸುತ್ತದೆ. ಕೆನಡಾ ಮತ್ತು ವಿಶ್ವದಾದ್ಯಂತ ಹಿಂದೂ ರಾಷ್ಟ್ರೀಯತಾವಾದಿಗಳು ಮತ್ತು ಅವರ ಅಂಗ ಸಂಸ್ಥೆಗಳ ವ್ಯಾಪಕವಾದ ಜಾಲ ಹಬ್ಬಿದೆ. ಈಗ ಕೆನಡಾದಲ್ಲಿ ಈ ಜಾಲವು ಗೊಂದಲದ ಮಾದರಿಯ ಬಲಾತ್ಕಾರ, ಸಂಘಟಿತ ಅಪರಾಧ ಮತ್ತು ಮಾರಣಾಂತಿಕ ಹಿಂಸಾಚಾರದಲ್ಲಿ ತೊಡಗಿಸಿಕೊಂಡಿದೆ” ಎಂದು ಬಹಿರಂಗ ಪತ್ರದಲ್ಲಿ ಹೇಳಲಾಗಿದೆ.

ಕೆನಡಾ ಸರ್ಕಾರವು ದಕ್ಷಿಣ ಏಷ್ಯನ್ನರು ಮತ್ತು ಇತರ ಅಲ್ಪಸಂಖ್ಯಾತ ಸಮುದಾಯಗಳಿಗೆ ರಕ್ಷಣೆ ಒದಗಿಸಲು ಆರ್‌ಎಸ್‌ಎಸ್ ಮತ್ತು ಅದರ ಅಂಗ ಸಂಸ್ಥೆಗಳ ಮಾನವ ಹಕ್ಕುಗಳ ಉಲ್ಲಂಘನೆ ಮತ್ತು ಪ್ರಭಾವವನ್ನು ತನಿಖೆ ಮಾಡಬೇಕು. ಕೆನಡಾದಲ್ಲಿ ಆರ್‌ಎಸ್‌ಎಸ್ ಮತ್ತು ಅದರ ಅಂಗ ಸಂಸ್ಥೆಗಳನ್ನು ದ್ವೇಷದ ಗುಂಪುಗಳು ಅಥವಾ ತೀವ್ರ ಬಲಪಂಥೀಯ ಉಗ್ರಗಾಮಿ ಗುಂಪುಗಳಾಗಿ ಪಟ್ಟಿ ಮಾಡುವಂತೆ ಬಹಿರಂಗ ಪತ್ರವು ಒತ್ತಾಯಿಸಿದೆ.

ಸೌಜನ್ಯ : thewire.in

ಇದನ್ನೂ ಓದಿ : ಮುಂದುವರಿದ ಇಸ್ರೇಲ್ ಆಕ್ರಮಣ | ಗಾಝಾದಲ್ಲಿ 84 ಸಾವು, ಲೆಬನಾನ್‌ನಲ್ಲೂ ಹಲವರ ಹತ್ಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ಕೇಂದ್ರ ಸರ್ಕಾರದ SIRಗೆ ಕೌಂಟರ್‌, ಮಹತ್ವದ ಆದೇಶಗಳನ್ನು ಹೊರಡಿಸಿದ ಕರ್ನಾಟಕ ಸರ್ಕಾರ

ಕೇಂದ್ರ ಸರ್ಕಾರ ಚುನಾವಣಾ ಆಯೋಗದ ಮೂಲಕ ನಡೆಸುತ್ತಿರುವ ವಿಶೇಷ ಮತದಾರ ಪಟ್ಟಿ ಪರಿಷ್ಕರಣೆ ಕುರಿತಂತೆ ದೇಶದಾದ್ಯಂತ ಭಾರೀ ವಿರೋಧ ವ್ಯಕ್ತವಾಗಿದ್ದವು. ಸುಪ್ರೀಂ ಕೋರ್ಟ್‌ ಆ ಪ್ರಕ್ರಿಯೆಯನ್ನು ಮಾನ್ಯ ಮಾಡಿತ್ತು. ಕರ್ನಾಟಕದಲ್ಲಿ ನಾಳೆಯಿಂದ (ಜೂನ್.30)‌...

ರಾಮಮಂದಿರದ ದೇಣಿಗೆ ಕಳ್ಳತನ: ಆರೋಪಿಗಳ ಪರ ಯಾವುದೇ ವಕೀಲರು ವಾದಿಸುವಂತಿಲ್ಲ , ವಾದಿಸಿದರೆ ರೂ. 5ಲಕ್ಷ ದಂಡ

ರಾಮಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳ ಪರವಾಗಿ ಯಾವುದೇ ವಕೀಲರು ನ್ಯಾಯಾಲಯದಲ್ಲಿ ವಕಾಲತ್ತು ವಹಿಸಬಾರದು ಎಂದು ಅಯೋಧ್ಯೆ ಬಾರ್ ಅಸೋಸಿಯೇಷನ್ ಮಹತ್ವದ ನಿರ್ಧಾರ ಕೈಗೊಂಡಿದೆ. ಒಂದು ವೇಳೆ ಸಂಘದ ಈ ತೀರ್ಮಾನವನ್ನು...

ವೋಟರ್ ಲಿಸ್ಟ್‌ನಿಂದ ಹೆಸರು ಡಿಲೀಟ್: ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ಬ್ರೇಕ್! ಬಂಗಾಳ ಸಿಎಂ ಗೆ ಪತ್ರ ಬರೆದ ಕೇರಳ ಸಿಎಂ

ಹಿರಿಯ ಪತ್ರಕರ್ತ ಮತ್ತು ‘ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ರಾಮದಾಸ್ ಅವರ ಪಾಸ್‌ಪೋರ್ಟ್ ನವೀಕರಣ ವಿವಾದವು ಸೋಮವಾರ ಮತ್ತಷ್ಟು ತೀವ್ರಗೊಂಡಿದೆ. ಈ ಸಮಸ್ಯೆಯನ್ನು ತಕ್ಷಣವೇ ಬಗೆಹರಿಸಲು ಮಧ್ಯಪ್ರವೇಶಿಸಬೇಕು ಎಂದು ಕೋರಿ...

ರಾಮ ಮಂದಿರ ದೇಣಿಗೆ ಹಗರಣ: ಅರ್ಜಿ ವಿಚಾರಣೆ ಕೆಲ ದಿನ ತಡವಾದರೆ ‘ಆಕಾಶವೇನೂ ಉರುಳಿ ಬೀಳುವುದಿಲ್ಲ’ ಎಂದ ಸುಪ್ರೀಂ ಕೋರ್ಟ್

ಅಯೋಧ್ಯೆಯ ರಾಮ ಮಂದಿರಕ್ಕೆ ಭಕ್ತರಿಂದ ಬಂದ ದೇಣಿಗೆ ಹಣ ದುರುಪಯೋಗ ಆಗಿರುವ ಕುರಿತು ಸಿಬಿಐ ನೇತೃತ್ವದ ಬಹು-ಸಂಸ್ಥೆಗಳ ಜಂಟಿ ತನಿಖೆಗೆ ಆದೇಶಿಸಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗಳ ತುರ್ತು ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ...

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...

SIR ವೇಳೆ ಮತಪಟ್ಟಿಯಿಂದ ಹೆಸರು ಡಿಲೀಟ್: ‘ದಿ ಟೆಲಿಗ್ರಾಫ್’ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ತಡೆ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಿದ ಕಾರಣ ಪಾಸ್‌ಪೋರ್ಟ್ ನವೀಕರಿಸಲು ಆಗುತ್ತಿಲ್ಲ ಎಂದು ದೇಶದ ಖ್ಯಾತ ಇಂಗ್ಲಿಷ್ ದಿನಪತ್ರಿಕೆ ‘ದಿ ಟೆಲಿಗ್ರಾಫ್’ನ ಮಾಜಿ ಸಂಪಾದಕ ಆರ್. ರಾಜಗೋಪಾಲ್...

‘ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ’ : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್ ಹೇಳಿಕೆ

"ಮಮತಾ ಬ್ಯಾನರ್ಜಿ ಅವರೇ ಇಂದಿಗೂ ನಮ್ಮ ನಾಯಕಿ. ಅವರೇ ಈ ಪಕ್ಷವನ್ನು ಸ್ಥಾಪಿಸಿದವರು. ಅವರೇ ನಮ್ಮ ಪಕ್ಷದ ಕಾಂದಾರಿ (ಮಾರ್ಗದರ್ಶಕರು ಅಥವಾ ಪಕ್ಷವನ್ನು ಮುನ್ನಡೆಸುವವರು). ಮಮತಾ ಬ್ಯಾನರ್ಜಿ ಅವರಿಂದಾಗಿಯೇ ನಾವು ಈ ಪಕ್ಷವನ್ನು...

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...