Homeರಾಷ್ಟ್ರೀಯಸಿಎಂ ಮಮತಾ ಬ್ಯಾನರ್ಜಿಗೆ ಸಾಹಿತ್ಯಿಕ ಗೌರವ: ‘ಸಾಹಿತಿಗಳಿಗೆ ಅವಮಾನ’ ಎಂದು ಪ್ರಶಸ್ತಿ ಹಿಂದಿರುಗಿಸಿದ ಬಂಗಾಳಿ ಸಂಶೋಧಕಿ

ಸಿಎಂ ಮಮತಾ ಬ್ಯಾನರ್ಜಿಗೆ ಸಾಹಿತ್ಯಿಕ ಗೌರವ: ‘ಸಾಹಿತಿಗಳಿಗೆ ಅವಮಾನ’ ಎಂದು ಪ್ರಶಸ್ತಿ ಹಿಂದಿರುಗಿಸಿದ ಬಂಗಾಳಿ ಸಂಶೋಧಕಿ

- Advertisement -
- Advertisement -

‘ಪಶ್ಚಿಮಬಂಗಾ ಬಾಂಗ್ಲಾ ಅಕಾಡೆಮಿ’ಯು ಸಾಹಿತ್ಯಕ್ಕೆ ನೀಡಿದ ಕೊಡುಗೆಗಾಗಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ಗೌರವಿಸಿದ್ದನ್ನು ವಿರೋಧಿಸಿ, ಬಂಗಾಳಿ ಬರಹಗಾರ್ತಿ ಮತ್ತು ಜಾನಪದ ಸಂಸ್ಕೃತಿ ಸಂಶೋಧಕಿ ಅಕಾಡೆಮಿ ನೀಡಿದ ಪ್ರಶಸ್ತಿಯನ್ನು ಮಂಗಳವಾರ ಹಿಂದಿರುಗಿಸಿದ್ದಾರೆ.

2019 ರಲ್ಲಿ ಅಕಾಡೆಮಿ ನೀಡಿದ್ದ, ‘ಅನ್ನದ ಶಂಕರ್ ಸ್ಮಾರಕ ಸಮ್ಮಾನ್’ ಪ್ರಶಸ್ತಿಯನ್ನು ಸಂಶೋಧಕಿ ರತ್ನಾ ರಶೀದ್ ಬ್ಯಾನರ್ಜಿ ಅವರು ಹಿಂದಿರುಗಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಶಿಕ್ಷಣ ಸಚಿವರೂ ಆಗಿರುವ ಅಕಾಡೆಮಿ ಅಧ್ಯಕ್ಷೆ ಬ್ರತ್ಯಾ ಬಸು ಅವರಿಗೆ ಪತ್ರ ಬರೆದಿರುವ ರತ್ನಾ ರಶೀದ್‌,“ರವೀಂದ್ರನಾಥ ಠಾಕೂರರ ಜನ್ಮದಿನದಂದು ಮುಖ್ಯಮಂತ್ರಿಗೆ ಹೊಸ ಸಾಹಿತ್ಯ ಪ್ರಶಸ್ತಿಯನ್ನು ನೀಡುವ ನಿರ್ಧಾರದ ಹಿನ್ನೆಲೆಯಲ್ಲಿ, ತನಗೆ ನೀಡಿರುವ ಪ್ರಶಸ್ತಿಯು ಮುಳ್ಳಿನ ಕಿರೀಟವಾಗಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮಾಧ್ಯಮಗಳು ಕಣ್ಮುಚ್ಚಿ, ನಿಶಬ್ದವಾಗಿ ಕುಳಿತಿವೆ: ಮಮತಾ ಬ್ಯಾನರ್ಜಿ ಆಕ್ರೋಶ

“ತಕ್ಷಣವೇ ಜಾರಿಗೆ ಬರುವಂತೆ ಪ್ರಶಸ್ತಿಯನ್ನು ಹಿಂದಿರುಗಿಸುವ ನನ್ನ ನಿರ್ಧರಿಸಿದ್ದೇನೆ” ಎಂದು ಅವರು ಪತ್ರದಲ್ಲಿ ಹೇಳಿದ್ದಾರೆ.

ಮುಖ್ಯಮಂತ್ರಿಗೆ ಸಾಹಿತ್ಯ ಪ್ರಶಸ್ತಿ ನೀಡುವ ನಿರ್ಧಾರದಿಂದಾಗಿ ಲೇಖಕಿಯಾಗಿ ನನಗೆ ಅವಮಾನವಾಗಿದೆ ಎಂದು ರಶೀದ್ ಬ್ಯಾನರ್ಜಿ ಪಿಟಿಐಗೆ ತಿಳಿಸಿದ್ದಾರೆ. ಇದು ಕೆಟ್ಟ ಸಂಪ್ರದಾಯವಾಗಿದೆ. ಗೌರವಾನ್ವಿತ ಮುಖ್ಯಮಂತ್ರಿಗಳ ನಿರಂತರ ಸಾಹಿತ್ಯದ ಅನ್ವೇಷಣೆಯನ್ನು ಪ್ರಶಂಸಿಸುವ ಅಕಾಡೆಮಿಯ ಹೇಳಿಕೆಯು ಸತ್ಯದ ವಿಡಂಬನೆಯಾಗಿದೆ ಎಂದು ಲೇಖಕಿ ಹೇಳಿದ್ದಾರೆ.

“ಮೂರು ಅವಧಿಗೆ ರಾಜ್ಯವನ್ನು ಆಳಲು ಜನರಿಂದ ಸಿಕ್ಕಿರುವ ಭಾರಿ ಜನಾದೇಶದ ರಾಜಕೀಯ ಹೋರಾಟಕ್ಕಾಗಿ ನಾವು ಸಿಎಂ ಅವರನ್ನು ಮೆಚ್ಚುತ್ತೇವೆ ಮತ್ತು ಗೌರವಿಸುತ್ತೇವೆ. ನಾವು ಅವರಿಗೆ ಮತ ಹಾಕಿದ್ದೇವೆ. ಆದರೆ ಅವರು ಸಾಹಿತ್ಯಕ್ಕಾಗಿ ದುಡಿದಿದ್ದಾರೆ ಎಂಬ ಹೇಳಿಕೆಯೊಂದಿಗೆ ರಾಜಕೀಯಕ್ಕೆ ನೀಡಿದ ಅವರ ಕೊಡುಗೆಯನ್ನು ನಾನು ಸಮೀಕರಿಸಲಾರೆ” ಎಂದು ರಶೀದ್ ಬ್ಯಾನರ್ಜಿ ಹೇಳಿದ್ದಾರೆ.

ಇದನ್ನೂ ಓದಿ: BJP ವಿರುದ್ಧ ಕೈಜೋಡಿಸಲು ಬಿಜೆಪಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದ ಮಮತಾ ಬ್ಯಾನರ್ಜಿ

ಅಕಾಡೆಮಿ ಅಧ್ಯಕ್ಷೆ ಬ್ರತ್ಯಾ ಬಸು ಅವರ ಸಮ್ಮುಖದಲ್ಲಿ ಪ್ರಶಸ್ತಿಯನ್ನು ಘೋಷಿಸಿದ ನಂತರ ಮುಖ್ಯಮಂತ್ರಿಗಳು ಪ್ರಶಸ್ತಿಯನ್ನು ಸ್ವೀಕರಿಸದೆ ಪ್ರಬುದ್ಧತೆಯನ್ನು ತೋರಿಸಬಹುದಿತ್ತು ಎಂದು ಲೇಖಕಿ ಹೇಳಿದ್ದಾರೆ.

ರತ್ನಾ ರಶೀದ್‌ ಅವರು 30 ಕ್ಕೂ ಹೆಚ್ಚು ಪುಸ್ತಕಗಳನ್ನು ಬರೆದಿದ್ದಾರೆ. ಅಲ್ಲದೆ ಅವರು ಸಮಾಜದ ಅಂಚಿನಲ್ಲಿರುವ ವರ್ಗಗಳನ್ನು ಒಳಗೊಂಡಂತೆ ಜಾನಪದ ಸಂಸ್ಕೃತಿಯ ಕುರಿತು ಸಂಶೋಧನಾ ಕಾರ್ಯಗಳನ್ನು ಮಾಡಿದ್ದಾರೆ.

“ಸಾಹಿತ್ಯ ಮತ್ತು ಸಮಾಜದ ಇತರ ಕ್ಷೇತ್ರಗಳ ಸುಧಾರಣೆಗಾಗಿ ಅವಿರತವಾಗಿ ಶ್ರಮಿಸುತ್ತಿರುವವರಿಗೆ ಬಹುಮಾನ ನೀಡಲು ಬಾಂಗ್ಲಾ ಅಕಾಡೆಮಿ ನಿರ್ಧರಿಸಿದೆ” ಎಂದು ಅಕಾಡೆಮಿ ಅಧ್ಯಕ್ಷೆ ಬ್ರತ್ಯಾ ಬಸು ಸೋಮವಾರ ಹೇಳಿದ್ದಾರೆ.

ಇದನ್ನೂ ಓದಿ: ಬಂಗಾಳ ಹತ್ಯಾಕಾಂಡ: ಟಿಎಂಸಿ ಮುಖಂಡನ ಬಂಧನಕ್ಕೆ ಮಮತಾ ಬ್ಯಾನರ್ಜಿ ಆದೇಶ

ಸೋಮವಾರ ಟ್ಯಾಗೋರ್ ಅವರ ಜನ್ಮದಿನವನ್ನು ಆಚರಿಸಲು ರಾಜ್ಯ ಸರ್ಕಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳ 900 ಕ್ಕೂ ಹೆಚ್ಚು ಕವನಗಳ ಸಂಕಲನ ‘ಕಬಿತ ಬಿಟನ್’ ಪುಸ್ತಕಕ್ಕೆ ಈ ವರ್ಷ ಪರಿಚಯಿಸಲಾದ ಪ್ರಶಸ್ತಿಯನ್ನು ಘೋಷಿಸಲಾಯಿತು.

2020 ರ ಅಂತಾರಾಷ್ಟ್ರೀಯ ಕೋಲ್ಕತ್ತಾ ಪುಸ್ತಕ ಮೇಳದಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಪುಸ್ತಕ ‘ಕಬಿತಾ ಬಿಟಾನ್’ ಅನ್ನು ಬಿಡುಗಡೆ ಮಾಡಲಾಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...