Homeಕರ್ನಾಟಕಸಾಹಿತ್ಯದ ಮೂಲಕ ಸಮಾಜವನ್ನು ಒಗ್ಗೂಡಿಸಬೇಕೇ ಹೊರತು, ವಿಭಜಿಸಬಾರದು: ಸಿಎಂ ಸಿದ್ದರಾಮಯ್ಯ

ಸಾಹಿತ್ಯದ ಮೂಲಕ ಸಮಾಜವನ್ನು ಒಗ್ಗೂಡಿಸಬೇಕೇ ಹೊರತು, ವಿಭಜಿಸಬಾರದು: ಸಿಎಂ ಸಿದ್ದರಾಮಯ್ಯ

'ಅಂತಾರಾಷ್ಟ್ರೀಯ ಬುಕರ್ ಪ್ರಶಸ್ತಿ' ವಿಜೇತ ಭಾನು ಮುಷ್ತಾಕ್, ದೀಪಾ ಭಸ್ತಿಗೆ ಸರ್ಕಾರಿ ಅಭಿನಂದನಾ ಕಾರ್ಯಕ್ರಮ

- Advertisement -
- Advertisement -

ಸಾಹಿತ್ಯಕ್ಕೆ ಸಮಾಜವನ್ನು ಬೆಸೆಯುವ ಶಕ್ತಿ ಇದೆ. ಸಾಹಿತ್ಯದ ಮೂಲಕ ಸಮಾಜವನ್ನು ಒಗ್ಗೂಡಿಸಬೇಕೇ ಹೊರತು, ವಿಭಜಿಸಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಸೋಮವಾರ ವಿಧಾನಸೌಧದ ಬ್ಯಾಂಕ್ವೆಂಟ್ ಹಾಲ್‌ನಲ್ಲಿ ಆಯೋಜಿಸಿದ್ದ ‘ಅಂತಾರಾಷ್ಟ್ರೀಯ ಬುಕರ್ ಪ್ರಶಸ್ತಿ’ ವಿಜೇತ ಬಾನು ಮುಷ್ತಾಕ್ ಮತ್ತು ದೀಪಾ ಭಸ್ತಿ ಅವರ ಸರ್ಕಾರಿ ಅಭಿನಂದನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಬಾನು ಮುಷ್ತಾಕ್ ಅವರು ನಮ್ಮ ಭಾಷೆಗೆ ಬುಕರ್ ಒದಗಿಸಿಕೊಡುವ ಮೂಲಕ ಕನ್ನಡದ ಕೀರ್ತಿ ಹೆಚ್ಚಿಸಿದ್ದಾರೆ. ಇದು ಇಡೀ ಕನ್ನಡ ಜಗತ್ತಿನ ಹೆಮ್ಮೆ‌ ಎಂದು ಸಿಎಂ ಮೆಚ್ಚುಗೆ ವ್ಯಕ್ತಪಡಿಸಿದರು.

ತಮ್ಮ ಕತೆ ಮತ್ತು ಅನುವಾದದ ಮೂಲಕ ಕನ್ನಡಕ್ಕೆ ಕೀರ್ತಿ ತಂದ ಬಾನು ಮುಷ್ತಾಕ್ ಹಾಗೂ ದೀಪಾ ಭಸ್ತಿ ಅವರಿಗೆ ತಲಾ 10 ಲಕ್ಷ ರೂಪಾಯಿ ನಗದು ಪುರಸ್ಕಾರ ನೀಡಲಾಗುವುದು ಎಂದು ಘೋಷಿಸಿದರು.

ಬಾನು ಮುಷ್ತಾಕ್ ಅವರ ಕತೆಗಳನ್ನು ಇಂಗ್ಲಿಷ್‌ನಲ್ಲಿ ಪ್ರಕಟಿಸಲು ಮತ್ತು ಅನುವಾದಕ್ಕೆ ಸರ್ಕಾರದಿಂದ ನೆರವು ನೀಡಲಾಗುವುದು ಎಂದು ತಿಳಿಸಿದರು.

ಪತ್ರಕರ್ತೆಯಾಗಿ, ಲೇಖಕಿಯಾಗಿ, ವಕೀಲರಾಗಿ, ಹೋರಾಟಗಾರ್ತಿಯಾಗಿ ಸಮಾಜದಲ್ಲಿ ಗುರುತಿಸಿಕೊಂಡಿರುವುದೇ ಬಾನು ಮುಷ್ತಾಕ್ ಅವರ ಬರವಣಿಗೆಯ ಶಕ್ತಿ ಎಂದು ಸಿಎಂ ಹೇಳಿದರು.

ಲಂಕೇಶ್ ಪತ್ರಿಕೆಯಲ್ಲಿ ಪತ್ರಕರ್ತೆಯಾಗಿ ಬರೆಯುತ್ತಲೇ, ವಕೀಲೆಯಾಗಿ ಬಡವರ ಪರ ವಕಾಲತ್ತು ವಹಿಸುತ್ತಾ ರಾಜ್ಯೋತ್ಸವ ಪ್ರಶಸ್ತಿ ಸೇರಿ ಹಲವು ಪ್ರಶಸ್ತಿಗಳು ಪಡೆದಿರುವುದು ಬಾನು ಮುಷ್ತಾಕ್ ಅವರ ಬರವಣಿಗೆಗಳಲ್ಲಿ ಸಮಾಜಮುಖಿ ಸತ್ವ ಇದೆ ಎನ್ನುವುದಕ್ಕೆ ಸಾಕ್ಷಿ ಎಂದರು.

ಮುಸ್ಲಿಂ ಸಮುದಾಯದ ಹೆಣ್ಣು‌ಮಕ್ಕಳ ಧ್ವನಿಯಾಗಿ ಮೌಢ್ಯ ವಿರೋಧಿಸಿ ಬರೆಯುವ ಪ್ರಗತಿಪರ ಎದೆಗಾರಿಕೆ ಬಾನು ಅವರಲ್ಲಿದೆ. ಸಾಹಿತ್ಯದ ಮೂಲಕ ಮಾನವೀಯ ಸಂದೇಶ ನೀಡುವ ಜವಾಬ್ದಾರಿ ಬಾನು ಮುಷ್ತಾಕ್ ಅವರು ನಿರ್ವಹಿಸಿದ್ದಾರೆ ಎಂದು ಶ್ಲಾಘಿಷಿಸಿದರು.

ಕವಿರಾಜಮಾರ್ಗದಲ್ಲಿ ‘ಪರಧರ್ಮ ಮತ್ತು ಪರ ವಿಚಾರಗಳನ್ನು ಸಹಾನುಭೂತಿಯಿಂದ ನೋಡಬೇಕು’ ಎಂದು ಕರೆ ನೀಡಿದ್ದರೆ, ಆದಿಕವಿ ಪಂಪ ಅವರು ‘ಮನುಷ್ಯ ಜಾತಿ ತಾನೊಂದೇ ವಲಂ’ ಎಂದಿದ್ದಾರೆ, ಬಸವಣ್ಣನವರು ‘ಇವ ನಮ್ಮವ’ ಎಂದು ಹೇಳಿದ್ದಾರೆ. ಹೆಣ್ಣಿನ ಧ್ವನಿಯಾದ ಅಕ್ಕಮಹಾದೇವಿ ಅವರೂ ಇದನ್ನೇ ಧ್ವನಿಸಿದ್ದಾರೆ. ಇವರೆಲ್ಲರ ಆಶಯಗಳ ಮುಂದುವರಿಕೆಯಾಗಿ ಬಾನು ಮುಷ್ತಾಕ್ ಕೆಲಸ ಮಾಡಿದ್ದಾರೆ ಎಂದರು.

ಕಲಬುರಗಿ | ಮುಸ್ಲಿಮರ ಸಾಮೂಹಿಕ ಹತ್ಯೆಗೆ ಕರೆ ನೀಡಿದ ಬಿಜೆಪಿ ನಾಯಕ; ಎಫ್ಐಆರ್ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...

ತಿರುವನಂತಪುರಂ | 20 ಬಿಜೆಪಿ ಕೌನ್ಸಿಲರ್‌ಗಳ ಪ್ರಮಾಣವಚನ ಅಸಿಂಧು : ಹೈಕೋರ್ಟ್ ಮಹತ್ವದ ಆದೇಶ

ತಿರುವನಂತಪುರಂ ಮಹಾನಗರ ಪಾಲಿಕೆಯ 20 ಬಿಜೆಪಿ ಕೌನ್ಸಿಲರ್‌ಗಳಿಗೆ ನಾಲ್ಕು ವಾರಗಳ ಒಳಗೆ ಮತ್ತೊಮ್ಮೆ ಪ್ರಮಾಣವಚನ ಸ್ವೀಕರಿಸುವಂತೆ ಕೇರಳ ಹೈಕೋರ್ಟ್ ಬುಧವಾರ (ಜೂ.24) ಆದೇಶಿಸಿದೆ. ಜನವರಿ ತಿಂಗಳಲ್ಲಿ ಕೌನ್ಸಿಲರ್‌ಗಳ ಪ್ರಮಾಣವಚನ ನಡೆದಿತ್ತು. ಡೆಪ್ಯುಟಿ ಮೇಯರ್...

ಎಸ್‌ಐಆರ್‌ನಿಂದ ಹೊರಗಿಡಲಾದ ಜನರಿಗೆ ಪಡಿತರ ನಿರಾಕರಣೆ ಪ್ರಶ್ನಿಸಿದ ಅರ್ಜಿ ತಿರಸ್ಕರಿಸಿದ ಸುಪ್ರೀಂ; ಕಲ್ಕತ್ತಾ ಹೈಕೋರ್ಟ್‌ಗೆ ಹೋಗಲು ಸೂಚನೆ

ನವದೆಹಲಿ: ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲಾದ ವ್ಯಕ್ತಿಗಳಿಗೆ ಸಾರ್ವಜನಿಕ ವಿತರಣಾ ವ್ಯವಸ್ಥೆಯ (ಪಿಡಿಎಸ್) ಪಡಿತರ ಸೌಲಭ್ಯ ಸೇರಿದಂತೆ ಇತರೆ ಕಲ್ಯಾಣ ಯೋಜನೆಗಳನ್ನು ನಿರಾಕರಿಸುತ್ತಿರುವ ಪಶ್ಚಿಮ ಬಂಗಾಳ...

ಪಶ್ಚಿಮ ಬಂಗಾಳ: ಸರ್ಕಾರಿ ಶಾಲಾ ಬಿಸಿಯೂಟದ ಜವಾಬ್ದಾರಿ ಇಸ್ಕಾನ್‌ಗೆ, ಊಟದಿಂದ ‘ಮೊಟ್ಟೆ’ ಔಟ್

ಪಶ್ಚಿಮ ಬಂಗಾಳದ ಸರ್ಕಾರಿ ಶಾಲೆಗಳ ಬಿಸಿಯೂಟದ ಮೆನುವಿನಲ್ಲಿ ಇನ್ಮೇಲೆ ಮೊಟ್ಟೆಗಳು ಇರುವುದಿಲ್ಲ. ಅವುಗಳ ಬದಲಿಗೆ ಮಕ್ಕಳಿಗೆ ಪನೀರ್ ಮತ್ತು ರಾಜ್ಮಾವನ್ನು ನೀಡಲಾಗುತ್ತದೆ. ಕೋಲ್ಕತ್ತಾ ಮಹಾನಗರ ಪಾಲಿಕೆ ವ್ಯಾಪ್ತಿಯ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ...

ಕಿರಣ್ ರಿಜಿಜು ‘ಸೇಫ್‌’ವಾದ ಅಲ್ಲಗಳೆದ ಸರಣಿ ಮುಸ್ಲಿಂ ವಿರೋಧಿ ಹಿಂಸಾಚಾರಾಗಳು

ಜೂನ್ 15, 2026ರಂದು ಪ್ರಕಟಗೊಂಡ ಇಂಡಿಯನ್ ಎಕ್ಸ್‌ಪ್ರೆಸ್‌ನ 'ಐಡಿಯಾ ಎಕ್ಸ್‌ಚೇಂಜ್' ಕಾರ್ಯಕ್ರಮದ ಸಂದರ್ಶನವೊಂದರಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, “ಭಾರತದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂದು ಹೇಳುವ ಮೂಲಕ ನೀವು ದೇಶದ ಚಾರಿತ್ರ್ಯಕ್ಕೆ...

ರಾಮ ಮಂದಿರ ದೇಣಿಗೆ ದುರುಪಯೋಗ ವಿವಾದ; ಪ್ರಾಥಮಿಕ ವರದಿ ಸಲ್ಲಿಸಿದ ಎಸ್‌ಐಟಿ

ಅಯೋಧ್ಯೆಯ ರಾಮ ಮಂದಿರದಲ್ಲಿ ಸ್ವೀಕರಿಸಿದ ದೇಣಿಗೆಯ ದುರುಪಯೋಗದ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಜೂನ್ 23 ಮಂಗಳವಾರ ಉತ್ತರ ಪ್ರದೇಶ ಸರ್ಕಾರಕ್ಕೆ ತನ್ನ ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸಿದೆ...

ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ ಕಲ್ಕತ್ತಾ ಹೈಕೋರ್ಟ್

ಭವಾನಿಪುರ ವಿಧಾನಸಭಾ ಕ್ಷೇತ್ರದ ಇತ್ತೀಚಿನ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ (TMC) ನಾಯಕಿ ಮಮತಾ ಬ್ಯಾನರ್ಜಿ ಸಲ್ಲಿಕೆ ಮಾಡಿರುವ ಚುನಾವಣಾ ಅರ್ಜಿಗೆ ಸಂಬಂಧಿಸಿದಂತೆ ಕಲ್ಕತ್ತಾ...

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...