Homeಕರ್ನಾಟಕ‘ಬದುಕಿದರೆ ದೊರೆಸ್ವಾಮಿಯವರ ಹಾಗೆ ಬದುಕಬೇಕು’ - ಗಾಂಧಿವಾದಿ ನಿಧನಕ್ಕೆ ಗಣ್ಯರ ಕಂಬನಿ

‘ಬದುಕಿದರೆ ದೊರೆಸ್ವಾಮಿಯವರ ಹಾಗೆ ಬದುಕಬೇಕು’ – ಗಾಂಧಿವಾದಿ ನಿಧನಕ್ಕೆ ಗಣ್ಯರ ಕಂಬನಿ

- Advertisement -
- Advertisement -

ಹಿರಿಯ ಸ್ವಾತಂತ್ಯ್ರ ಹೋರಾಟಗಾರ ಹೆಚ್‌.ಎಸ್‌. ದೊರೆಸ್ವಾಮಿ ಹೃದಯಾಘಾತದಿಂದ ಬೆಂಗಳೂರಿನಲ್ಲಿ ಬುಧವಾರ ನಿಧನರಾಗಿದ್ದಾರೆ. ಅವರಿಗೆ 104 ವರ್ಷ ವಯಸ್ಸಾಗಿತ್ತು. ಕೊರೊನಾ ಕಾರಣಕ್ಕೆ ಅವರ ಅಂತಿಮ ದರ್ಶನವನ್ನು ಪಡೆಯಲು ಸಾಧ್ಯವಾಗದ ಅವರ ಅಭಿಮಾನಿಗಳಿಗಾಗಿ ಆನ್‌ಲೈನ್‌ ಮೂಲಕ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತಿದೆ. ಅಂತಿಮ ಸಂಸ್ಕಾರವು ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಸಲೂ ಸಿದ್ದತೆ ನಡೆಯುತ್ತಿದೆ.

ಮುಖ್ಯಮಂತ್ರಿ ಯಡಿಯೂರಪ್ಪ ಅವರು, “ಹಿರಿಯ ಸ್ವಾತಂತ್ರ್ಯ ಹೋರಾಟಗಾರರು, ಗಾಂಧೀವಾದಿ, ಪತ್ರಕರ್ತ, ಸಮಾಜ ಸೇವಕರು, ನಾಡುನುಡಿ ಜನಪರ ಕಾಳಜಿಗಳಿಗೆ ಸದಾ ಧ್ವನಿಯಾಗಿದ್ದ ಶತಾಯುಷಿ ಹೆಚ್.ಎಸ್.ದೊರೆಸ್ವಾಮಿ ವಿಧಿವಶರಾದ ಸುದ್ದಿ ಕೇಳಿ ಅತೀವ ದುಃಖವಾಗಿದೆ. ಅವರ ಆತ್ಮಕ್ಕೆ ಸದ್ಗತಿಯನ್ನು ಪ್ರಾರ್ಥಿಸುತ್ತಾ, ದೇವರು ಅವರ ಕುಟುಂಬದವರಿಗೆ ನೋವನ್ನು ಭರಿಸುವ ಶಕ್ತಿ ನೀಡಲಿ” ಎಂದು ಸಂತಾಪ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಸ್ವಾತಂತ್ಯ್ರ ಹೋರಾಟಗಾರ, ಶತಾಯುಷಿ ಹೆಚ್‌.ಎಸ್‌. ದೊರೆಸ್ವಾಮಿ ಇನ್ನಿಲ್ಲ

ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು, “ಹಿರಿಯ ಸ್ವಾತಂತ್ರ್ಯ ಸೇನಾನಿ, ಶತಾಯುಷಿ ಎಚ್.ಎಸ್. ದೊರೆಸ್ವಾಮಿಯವರ ನಿಧನ ನನಗೆ ಆಘಾತ ಉಂಟುಮಾಡಿದೆ.‌ ಮನೆ ಹಿರಿಯನನ್ನು ಕಳೆದುಕೊಂಡ ದುಃಖ ನನ್ನದಾಗಿದೆ. ಅವರ ಕುಟುಂಬದ ಸದಸ್ಯರು ಮತ್ತು ಅಪಾರ ಅಭಿಮಾನಿಗಳ ಶೋಕದಲ್ಲಿ ನಾನೂ ಭಾಗಿಯಾಗಿದ್ದೇನೆ. ನಮ್ಮನ್ನು ಅಗಲಿ ಹೋದ ಅವರು ನಮ್ಮೆಲ್ಲರ ಆತ್ಮ ಸಾಕ್ಷಿಯಾಗಿದ್ದರು. ತಪ್ಪು ಕಂಡಾಗ ಎಚ್ಚರಿಸಿ, ಸರಿ ಕಂಡಾಗ ಬೆಂಬಲಿಸುತ್ತಿದ್ದ ಮಾರ್ಗದರ್ಶಕರಾಗಿದ್ದರು. ಇಳಿ ವಯಸ್ಸಿನಲ್ಲಿಯೂ ಜಗ್ಗದೆ, ಕುಗ್ಗದೆ ಅನ್ಯಾಯ-ಅಕ್ರಮ‌ ಕಂಡಾಗ ಬೀದಿಗಿಳಿಯುತ್ತಿದ್ದ ಅವರು ಎಲ್ಲರ ಪಾಲಿನ ಸ್ಪೂರ್ತಿಯಾಗಿದ್ದರು” ಎಂದು ಹೇಳಿದ್ದಾರೆ.

ಜೆಡಿಎಸ್‌ ನಾಯಕ ಕುಮಾರಸ್ವಾಮಿ ಅವರು, “ಶತಾಯುಷಿ, ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿ ಅವರ ನಿಧನಕ್ಕೆ ತೀವ್ರ ಕಂಬನಿ ಮಿಡಿಯುತ್ತೇನೆ. ಗಾಂಧಿವಾದಿ, ಪ್ರಾತಃಸ್ಮರಣೀಯರು ಹಾಗೂ ನಾಡಿನ ಸಾಕ್ಷಿಪ್ರಜ್ಞೆಯಂತಿದ್ದ ದೊರೆಸ್ವಾಮಿ ಅವರ ನಿಧನದಿಂದ ಶತಮಾನದ ಮಹಾನ್ ಹೋರಾಟಗಾರರನ್ನು ಕಳೆದುಕೊಳ್ಳುವ ಮೂಲಕ ನಾಡು ಹಾಗೂ ದೇಶ ಬಡವಾಗಿದೆ” ಎಂದು ಸರಣಿ ಟ್ವೀಟ್ ಮಾಡಿದ್ದಾರೆ.

ಮಾಜಿ ಐಎಎಸ್‌ ಅಧಿಕಾರಿ ಸಸಿಕಾಂತ್‌‌ ಸೆಂಥಿಲ್ ಅವರು, “ಕೆಲವು ಆತ್ಮಗಳು ನಾಶ ಹೊಂದುವುದಿಲ್ಲ. ನಿಮ್ಮ ಮಾರ್ಗದರ್ಶಕ ಬೆಳಕಿನೊಂದಿಗೆ ನಾವು ಮುಂದುವರಿಯುತ್ತೇವೆ, ಲಾಲ್‌ಸಲಾಮ್‌” ಎಂದು ಹೇಳಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷ ಡಿ.ಕೆ. ಶಿವಕುಮಾರ್‌, “ನಾಡಿನ ಸಾಕ್ಷಿಪ್ರಜ್ಞೆಯಂತಿದ್ದ, ಬದುಕಿನ ಕೊನೆಯ ದಿನಗಳವರೆಗೂ ಮುಂಚೂಣಿಯಲ್ಲಿ ನಿಂತು ಜನಪರ ಧ್ವನಿಯಾಗುತ್ತಿದ್ದ ಶತಾಯುಷಿ, ಸ್ವತಂತ್ರ ಹೋರಾಟಗಾರ, ನಿಸ್ಟೂರವಾದಿ ದೊರೆಸ್ವಾಮಿಯವರ ನಿಧನವು ಈ ನಾಡಿಗೆ ತುಂಬಲಾರದ ನಷ್ಟ ಅವರ ಆತ್ಮಕ್ಕೆ ಶಾಂತಿ ಕೋರುತ್ತಾ, ಅವರ ಕುಟುಂಬ ಹಾಗೂ ಅಪಾರ ಅಭಿಮಾನಿಗಳ ನೋವಿನಲ್ಲಿ ನಾವೂ ಬಾಗಿಗಳಾಗಿದ್ದೇವೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಗೌರವ ನಮನ | ದೊರೆಸ್ವಾಮಿ ಅವರ ಸಾರ್ಥಕ ಬದುಕಿನ ಮೈಲಿಗಲ್ಲುಗಳು

ಜಾನಪದ ಸಂಶೋಧಕ, ಜೆಎ‌ನ್‌ಯು ಮಾಜಿ ಪ್ರೊಫೆಸರ್‌ ಪುರುಷೋತ್ತಮ ಬಿಳಿಮಲೆ ಅವರು, “ಡಾ. ಎಚ್.ಎಸ್. ದೊರೆಸ್ವಾಮಿ ಶತಮಾನದ ವ್ಯಕ್ತಿ. 20 ನೇ ಶತಮಾನವಿಡೀ ಬದುಕಿ, 21 ನೇ ಶತಮಾನದ ಮೊದಲೆರಡು ದಶಕಗಳನ್ನೂ ಕಂಡು ನಮಗೆಲ್ಲರಿಗೂ ಸ್ಫೂರ್ತಿಯ ಕೇಂದ್ರವಾಗಿದ್ದರು. ದೇಶದ ಸ್ವಾತಂತ್ರ್ಯ ಹೋರಾಟದಿಂದ ಹಿಡಿದು ಸರಕಾರದ ಈಚಿನ ಭೂ ಕಬಳಿಕೆಯ ವಿರುದ್ಧದ ಹೋರಾಟದವರೆಗೂ ಅವರ ಚಟುವಟಿಕೆಗಳ ವ್ಯಾಪ್ತಿ ಹಬ್ಬಿತ್ತು. ಪತ್ರಕರ್ತರಾಗಿಯೂ ಅವರು ಪ್ರಸಿದ್ಧರು. ಗಾಂಧೀ ಹತ್ಯೆಯ ಕೆಲವು ದಿನಗಳ ಮೊದಲು ಗೋಡ್ಸೆ ಬೆಂಗಳೂರಿಗೆ ಬಂದದ್ದನ್ನು ಅವರು ದಾಖಲಿಸಿದ್ದರು’’ ಎಂದು ಹೇಳಿದ್ದಾರೆ.

“ಕರ್ನಾಟಕ ಏಕೀಕರಣಕ್ಕೂ ಅವರು ದುಡಿದಿದ್ದರು. ಇಂದಿರಾಗಾಂಧೀ ಕಾಲದಲ್ಲಿ ತುರ್ತುಪರಿಸ್ಥಿತಿ ವಿರೋಧಿಸಿ ಜೈಲುವಾಸ ಅನುಭವಿಸಿದ್ದ ಅವರು, ಈಚೆಗೆ ವೇಗವಾಗಿ ಬೆಳೆಯುತ್ತಿರುವ ಫ್ಯಾಸಿಸಂನ ವಿರುದ್ಧವೂ ಧ್ವನಿ ಎತ್ತುತ್ತಿದ್ದರು. ʼಗಾಂಧೀ ಮತ್ತು ಅಂಬೇಡ್ಕರ್ ಅವರುಗಳಲ್ಲಿ ಭಿನ್ನಾಭಿಪ್ರಾಯ ಇತ್ತೇ ಹೊರತು ವೈರತ್ವ ಇರಲಿಲ್ಲʼ ಎಂಬ ಅವರ ಮಾತು ನನಗೆ ವೈಯಕ್ತಿಕವಾಗಿ ಬಹಳ ಖುಷಿ ನೀಡಿತ್ತು. ಒಳ್ಳೆಯವರನ್ನೆಲ್ಲಾ ಟ್ರೋಲ್‌ ಮಾಡುವುದನ್ನೇ ಕೆಲಸ ಮಾಡಿಕೊಂಡಿರುವವರ ಬಗ್ಗೆ ಅವರಿಗೆ ಚೆನ್ನಾಗಿ ಗೊತ್ತಿತ್ತು. ‘ನಿಮ್ಮ ಬಗ್ಗೆ ಹೀಗೆ ಬರೆದಿದ್ದಾರಲ್ಲಾ?ʼ ಎಂದರೆ ಅಜ್ಜ ನಕ್ಕುಬಿಡುತ್ತಿದ್ದರು! ಬದುಕಿದರೆ ದೊರೆಸ್ವಾಮಿಯವರ ಹಾಗೆ ಬದುಕಬೇಕು!ನಮನಗಳು ಸಾರ್‌” ಎಂದು ಪುರುಷೋತ್ತಮ ಬಿಳಿಮಲೆ ಸಂತಾಪ ವ್ಯಕ್ತಪಡಿಸಿದ್ದಾರೆ.

ಕಾರ್ಮಿಕ ಸಂಘಟನೆ ಸಿಐಟಿಯು ಅಧ್ಯಕ್ಷೆ ವರಲಕ್ಷ್ಮಿ ಅವರು, “ಸರಳ,ಸ್ವಾಭಿಮಾನಿ ಮತ್ತು ಹೋರಾಟವನ್ನೇ ಉಸಿರಾಗಿಸಿಕೊಂಡ ಸ್ವಾತಂತ್ರ್ಯ ಸೇನಾನಿ ದೊರೆಸ್ವಾಮಿಯವರು” ಎಂದು ಹೇಳಿದ್ದಾರೆ.

ಲೇಖಕಿ ಚೇತನಾ ತೀರ್ಥಹಳ್ಳಿ ಅವರು, “ನಮ್ಮ ಪ್ರೀತಿಯ ‘ಆಂದೋಲನಜೀವಿ’, ಅದಮ್ಯ ಚೇತನ ದೊರೆಸ್ವಾಮಿಯವರು ತಮ್ಮ ಶತಮಾನದ ಬದುಕು ಮುಗಿಸಿದ್ದಾರೆ. ಸದಾ ಶಾಂತಿಯನ್ನೇ ಹಂಚಿದ ದೊರೆಸ್ವಾಮಿಯವರ ಆತ್ಮಕ್ಕೆ ಶಾಂತಿ ದೊರೆಯದೆ ಇರುವುದೆ? ಅದರಲ್ಲೂ ಇವತ್ತು ಬುದ್ಧ ಹುಣ್ಣಿಮೆ!” ಎಂದು ಹೇಳಿದ್ದಾರೆ.

ಹಿರಿಯ ಪತ್ರಕರ್ತ ದಿನೇಶ್ ಅಮಿನ್ ಮಟ್ಟು ಅವರು, “ಬೆಳಕು ಆರಿತು” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಇನ್ನಾದರು ಈ ಪ್ರಕೃತಿ ಸಂಪತ್ತುಗಳ ಲೂಟಿಗೆ ಕಡಿವಾಣ ಹಾಕಬೇಕು: ಎಚ್ ಎಸ್ ದೊರೆಸ್ವಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನಾನು ಹಿಂದೂ ಅಲ್ಲ, ಮನುಷ್ಯ’: ಎಸ್‌ಪಿ ನಾಯಕ ಶಿವರಾಜ್ ಸಿಂಗ್ ಯಾದವ್ ಹೇಳಿಕೆ ತಿರುಚಿ ವಿವಾದ ಸೃಷ್ಟಿಸಿದ ಬಿಜೆಪಿ ಬೆಂಬಲಿಗರು

ಸಮಾಜವಾದಿ ಪಕ್ಷದ ನಾಯಕ, ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರ ಆಪ್ತ ಸಹಾಯಕ ಹಾಗೂ ಉತ್ತರ ಪ್ರದೇಶದ ಫಿರೋಜಾಬಾದ್‌ನ ಸಮಾಜವಾದಿ ಪಕ್ಷದ ಜಿಲ್ಲಾಧ್ಯಕ್ಷ ಶಿವರಾಜ್ ಸಿಂಗ್ ಯಾದವ್ ‘ನಾನು ಹಿಂದೂ ಅಲ್ಲ, ನಾನು...

ಛತ್ತೀಸ್‌ಗಢ : ಎಂಟು ಮಂದಿ ಬಂಗಾಳಿ ಮುಸ್ಲಿಂ ವಲಸೆ ಕಾರ್ಮಿಕರ ಮೇಲೆ ಬಜರಂಗದಳ ಕಾರ್ಯಕರ್ತರಿಂದ ಹಲ್ಲೆ; ವರದಿ

ಛತ್ತೀಸ್‌ಗಢದ ರಾಯ್‌ಪುರದಲ್ಲಿ ಭಾನುವಾರ (ಜ.4) ಬಜರಂಗದಳ ಕಾರ್ಯಕರ್ತರು ಎಂಟು ಮಂದಿ ಬಂಗಾಳಿ ಮಾತನಾಡುವ ಮುಸ್ಲಿಂ ವಲಸೆ ಕಾರ್ಮಿಕರ ಮೇಲೆ ಹಲ್ಲೆ ನಡೆಸಿದ್ದು, ಒಬ್ಬ ಕಾರ್ಮಿಕ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ರಾಯ್‌ಪುರ ಜಿಲ್ಲೆಯ ಕಟೋವಾಲಿ...

‘ಉಮರ್ ಮತ್ತು ಶಾರ್ಜಿಲ್ ಜಾಮೀನು ನಿರಾಕರಣೆ’: ಶಾಸಕಾಂಗ, ನ್ಯಾಯಾಂಗದ ಕಾರ್ಯವೈಖರಿಯಲ್ಲಿನ ವೈರುಧ್ಯಗಳಿಗೆ ಉದಾಹರಣೆ: ಶ್ರೀಪಾದ್ ಭಟ್

ಇಂಡಿಯನ್ ಎಕ್ಸ್ಪ್ರೆಸ್ ನಲ್ಲಿನ ವರದಿಯ ಪ್ರಕಾರ ಈ ಪ್ರಕರಣದ ವಿಚಾರಣೆಯಲ್ಲಿರುವ ಮುಖ್ಯ ಪ್ರಶ್ನೆ: ಬಂಧನವಾಗಿ ಐದು ವರ್ಷಗಳಾದರೂ ಸಹ ಇನ್ನೂ ವಿಚಾರಣೆ ಆರಂಭವಾಗಿಲ್ಲ. ದೀರ್ಘಕಾಲದ ಜೈಲುವಾಸವನ್ನು ಭಯೋತ್ಪಾದಕ ವಿರೋಧಿ ಕಾನೂನಿನ ಅಡಿಯಲ್ಲಿ ಸಮರ್ಥಿಸಬಹುದೇ?...

ಉತ್ತರ ಪ್ರದೇಶ SIR : ಮತದಾರರ ಪಟ್ಟಿಯಿಂದ 2.89 ಕೋಟಿ ಹೆಸರು ಡಿಲೀಟ್

ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐರ್‌) ಬಳಿಕ ಸುಮಾರು 2.89 ಕೋಟಿ ಮತದಾರರ ಹೆಸರುಗಳನ್ನು ಪಟ್ಟಿಯಿಂದ ತೆಗೆದುಹಾಕಲಾಗಿದೆ ಎಂದು ಉತ್ತರ ಪ್ರದೇಶದ ಮುಖ್ಯ ಚುನಾವಣಾ ಅಧಿಕಾರಿ (ಸಿಇಒ) ನವದೀಪ್ ರಿನ್ವಾ...

ಕರೂರ್ ಕಾಲ್ತುಳಿತ ಪ್ರಕರಣ: ಟಿವಿಕೆ ನಾಯಕ ವಿಜಯ್‌ಗೆ ವಿಚಾರಣೆಗೆ ಹಾಜರಾಗುವಂತೆ ಸಿಬಿಐ ನೋಟಿಸ್

ಕರೂರ್ ಕಾಲ್ತುಳಿತ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ಟಿವಿಕೆ ನಾಯಕ ವಿಜಯ್ ಅವರಿಗೆ ಸಿಬಿಐ ನೋಟಿಸ್ ಜಾರಿ ಮಾಡಿದೆ ಎಂದು ಪಿಟಿಐ ಮಂಗಳವಾರ ವರದಿ ಮಾಡಿದೆ. ಸೆಪ್ಟೆಂಬರ್ 27 ರಂದು ನಟ-ರಾಜಕಾರಣಿ ವಿಜಯ್ ಅವರ ತಮಿಳಗ...

ಲಂಡನ್‌ನಲ್ಲಿ ಪ್ಯಾಲೆಸ್ತೀನ್ ರಾಯಭಾರ ಕಚೇರಿ ಉದ್ಘಾಟನೆ : ‘ಐತಿಹಾಸಿಕ ಕ್ಷಣ’ ಎಂದ ರಾಯಭಾರಿ ಹುಸಾಮ್ ಝೊಮ್ಲೋಟ್

ಲಂಡನ್‌ನಲ್ಲಿ ಪ್ಯಾಲೆಸ್ತೀನ್ ದೇಶದ ರಾಯಭಾರಿ ಕಚೇರಿ ಅಧಿಕೃತವಾಗಿ ಉದ್ಘಾಟನೆಯಾಗಿದ್ದು, ಯುಕೆಯ ಪ್ಯಾಲೆಸ್ತೀನ್‌ ರಾಯಭಾರಿ ಇದನ್ನು 'ಐತಿಹಾಸಿಕ ಕ್ಷಣ' ಎಂದು ಬಣ್ಣಿಸಿದ್ದಾರೆ. ಸೋಮವಾರ (ಜ.5) ಪಶ್ಚಿಮ ಲಂಡನ್‌ನ ಹ್ಯಾಮರ್‌ಸ್ಮಿತ್‌ನಲ್ಲಿ ನಡೆದ ರಾಯಭಾರ ಕಚೇರಿ ಉದ್ಘಾಟನಾ ಸಮಾರಂಭದಲ್ಲಿ...

ಬಾಂಗ್ಲಾದೇಶದಲ್ಲಿ ಹಿಂದೂ ಉದ್ಯಮಿ ಮತ್ತು ಪತ್ರಕರ್ತನಾಗಿದ್ದ ರಾಣಾ ಪ್ರತಾಪ್ ಬೈರಾಗಿ ತಲೆಗೆ ಗುಂಡಿಕ್ಕಿ ಹತ್ಯೆ 

ಬಾಂಗ್ಲಾದೇಶದ ಜೆಸ್ಸೋರ್ ಜಿಲ್ಲೆಯಲ್ಲಿ ಸೋಮವಾರ 38 ವರ್ಷದ ರಾಣಾ ಪ್ರತಾಪ್ ಬೈರಾಗಿ ಅವರ ತಲೆಗೆ ಅಪರಿಚಿತ ವ್ಯಕ್ತಿಗಳು ಗುಂಡು ಹಾರಿಸಿದ್ದಾರೆ ಎಂದು ಹಲವು ಮಾಧ್ಯಮಗಳಲ್ಲಿ ವರದಿ ಪ್ರಕಟವಾಗಿದೆ.  ಬೈರಾಗಿ ಒಬ್ಬ ಹಿಂದೂ ಉದ್ಯಮಿ ಮತ್ತು...

ತಿರುಪರನ್‌ಕುಂದ್ರಂ ಬೆಟ್ಟದ ಮೇಲೆ ದೀಪ ಬೆಳಗಿಸುವ ಆದೇಶ ಎತ್ತಿ ಹಿಡಿದ ಮದ್ರಾಸ್ ಹೈಕೋರ್ಟ್

ಮಧುರೈನ ತಿರುಪರನ್‌ಕುಂದ್ರಂ ಬೆಟ್ಟದ ಮೇಲಿರುವ ಕಲ್ಲಿನ ಕಂಬದಲ್ಲಿ ದೀಪ ಬೆಳಗಿಸಲು ಅನುಮತಿ ನೀಡಿ ಮದ್ರಾಸ್‌ ಹೈಕೋರ್ಟ್‌ನ ಮಧುರೈ ಪೀಠದ ಏಕ ಸದಸ್ಯ ನ್ಯಾಯಾಧೀಶರು ನೀಡಿದ ಆದೇಶವನ್ನು ವಿಭಾಗೀಯ ಪೀಠ ಎತ್ತಿಹಿಡಿದಿದೆ. ನ್ಯಾಯಮೂರ್ತಿ ಜಿ. ಜಯಚಂದ್ರನ್...

ಕರ್ನಾಟಕದ ದೀರ್ಘಾವಧಿಯ ಮುಖ್ಯಮಂತ್ರಿಯಾಗಿ ದಾಖಲೆ ಸೃಷ್ಟಿಸಿದ ಸಿದ್ದರಾಮಯ್ಯ

ಬೆಂಗಳೂರು: ಕರ್ನಾಟಕದ ಅತಿ ಹೆಚ್ಚು ಕಾಲ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ ದಿವಂಗತ ಡಿ.ದೇವರಾಜ್ ಅರಸ್ ಅವರ ದಾಖಲೆಯನ್ನು (7 ವರ್ಷ 239 ದಿನಗಳು) ಸಿದ್ದರಾಮಯ್ಯ ಮುರಿದಿದ್ದಾರೆ.  ದೇವರಾಜು ಅರಸು ಮತ್ತು ಸಿದ್ದರಾಮಯ್ಯ ಅವರು ಸಾಮಾಜಿಕ...

ಅಜ್ಮೀರ್ ದರ್ಗಾಕ್ಕೆ ಪ್ರಧಾನಿ ಚಾದರ್ ಅರ್ಪಿಸುವುದನ್ನು ತಡೆಯುವಂತೆ ಅರ್ಜಿ : ತಿರಸ್ಕರಿಸಿದ ಸುಪ್ರೀಂ ಕೋರ್ಟ್

ಉರೂಸ್ ಪ್ರಯುಕ್ತ ಅಜ್ಮೀರ್‌ನ ಸೂಫಿ ಸಂತ ಖ್ವಾಜಾ ಮುಯೀನುದ್ದೀನ್ ಹಸನ್ ಚಿಸ್ತಿ ಅವರ ದರ್ಗಾಕ್ಕೆ ಪ್ರಧಾನಿ ಚಾದರ್ ಅರ್ಪಿಸುವುದನ್ನು ಮತ್ತು ದರ್ಗಾಕ್ಕೆ ಸರ್ಕಾರದ ವತಿಯಿಂದ ನೀಡಲಾಗುವ ಗೌರವಗಳನ್ನು ತಡೆಯುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು...