- Advertisement -
- Advertisement -
ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಹೋಬಳಿಯ ಹದಿಮೂರು ಹಳ್ಳಿಗಳ ರೈತರ 1,777 ಎಕರೆ ಭೂಮಿಯನ್ನು ವಶಪಡಿಸಿಕೊಂಡು ಕಾರ್ಪೊರೇಟ್ ಕಂಪನಿಗಳಿಗೆ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ. ಇದನ್ನು ವಿರೋಧಿಸಿ ರೈತರು ಕಳೆದ 1,180 ದಿನಗಳಿಂದ ನಿರಂತರ ಹೋರಾಟ ಮಾಡುತ್ತಾ ಬಂದಿದ್ದಾರೆ. ಇಂದು ‘ದೇವನಹಳ್ಳಿ ಚಲೋ’ ಹಮ್ಮಿಕೊಳ್ಳುವ ಮೂಲಕ ಹೋರಾಟವನ್ನು ತಾರ್ಕಿಕ ಹಂತಕ್ಕೆ ಕೊಂಡೊಯ್ಯಲು ನಿರ್ಧರಿಸಿದ್ದಾರೆ.


