Homeಮುಖಪುಟಆಕ್ಸಿಜನ್‌ಗಾಗಿ ರೋಗಿಗಳು ಕಾಯಬೇಕೆಂದು ಹೇಳುತ್ತೀರಾ?: ಕೇಂದ್ರದ ವಿರುದ್ಧ ಕಿಡಿಕಾರಿದ ಹೈಕೋರ್ಟ್

ಆಕ್ಸಿಜನ್‌ಗಾಗಿ ರೋಗಿಗಳು ಕಾಯಬೇಕೆಂದು ಹೇಳುತ್ತೀರಾ?: ಕೇಂದ್ರದ ವಿರುದ್ಧ ಕಿಡಿಕಾರಿದ ಹೈಕೋರ್ಟ್

- Advertisement -
- Advertisement -

ಕೋವಿಡ್ ಎರಡನೇ ಅಲೆಯ ತೀವ್ರತೆಯಿಂದಾಗಿ ದೆಹಲಿಯಲ್ಲಿ ಆಕ್ಸಿಜನ್ ಕೊರತೆ ಸಮಸ್ಯೆ ಉಂಟಾಗಿದ್ದು, ಕೇಂದ್ರ ಸರ್ಕಾರ ತಾರತಮ್ಯ ಮಾಡುತ್ತಿದೆ ಎಂಬ ಆರೋಪ ಕೇಳಿಬರುತ್ತಿರುವ ಹಿನ್ನೆಲೆಯಲ್ಲಿ ಇಂದು ದೆಹಲಿ ಹೈಕೋರ್ಟ್ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಆಕ್ಸಿಜನ್‌ಗಾಗಿ ರೋಗಿಗಳು ಕಾಯಬೇಕೆಂದು ನೀವು ಹೇಳುತ್ತೀರಾ? ಕೈಗಾರಿಕೆಗಳು ಕಾಯಬಹುದೇ ಹೊರತು ರೋಗಿಗಳಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದೆ.

ದೆಹಲಿಯಲ್ಲಿ ನಿನ್ನೆ ಒಂದೇ ದಿನ 30 ಸಾವಿರಕ್ಕೂ ಅಧಿಕ ಸಕ್ರಿಯ ಪ್ರಕರಣಗಳು ವರದಿಯಾಗಿವೆ. ಇದೇ ಸಂದರ್ಭದಲ್ಲಿ ದೆಹಲಿಯಲ್ಲಿ ಆಕ್ಸಿಜನ್ ಕೊರತೆಯುಂಟಾಗಿದ್ದು, ದೆಹಲಿಗೆ ಮೀಸಲಾಗಿದ್ದ 140 ಮೆಟ್ರಿಕ್ ಟನ್ ಆಕ್ಸಿಜನ್‌‌ ಅನ್ನು ಇತರ ರಾಜ್ಯಗಳಿಗೆ ತಿರುಗಿಸಲಾಗಿದೆ. ಹಾಗಾಗಿ ರಾಜ್ಯದಲ್ಲಿ ಆಕ್ಸಿಜನ್‌‌ “ತುರ್ತುಸ್ಥಿತಿ”ಯಾಗಿ ಮಾರ್ಪಟ್ಟಿದೆ ಎಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಆರೋಪಿಸಿದ್ದರು.

ಔಷಧಿ, ಆಕ್ಸಿಜನ್ ನಿಜವಾಗಿಯೂ ಅಗತ್ಯವಿರುವ ಕಡೆಗೆ ನೀಡದಿದ್ದಲ್ಲಿ ಅವರ ಕೈಗೆ ರಕ್ತ ಮೆತ್ತುಕೊಂಡಿದೆ ಎಂದರ್ಥ ಎಂದು ಕಟುವಾಗಿ ಕೇಂದ್ರ ಸರ್ಕಾರವನ್ನು ದೆಹಲಿ ಹೈಕೋರ್ಟ್ ಕುಟುಕಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಇದನ್ನೂ ಓದಿ: ಕೋವಿಡ್ ರೋಗಿಗಳಿಗೆ ಆಕ್ಸಿಜನ್ ಕೊರತೆ: ಸರ್ಕಾರ ಮಾಡುತ್ತಿರುವುದೇನು? ಮಾಡಬೇಕಾದುದ್ದೇನು?

ಕೇಂದ್ರ ಸರ್ಕಾರವು ಕಬ್ಬಿಣ ಮತ್ತು ಪೆಟ್ರೋಲಿಯಂ ಕಂಪನಿಗಳಿಗೆ ಒದಗಿಸುವ ಆಕ್ಸಿಜನ್‌ ಅನ್ನು ಮೊಟಕುಗೊಳಿಸಬೇಕು. ಅದನ್ನು ಕೂಡಲೇ ಅಗತ್ಯವಿರುವ ಆಸ್ಪತ್ರೆಗಳಿಗೆ ತಿರುಗಿಸಬೇಕು. ನಾವು ಸರ್ವನಾಶದ ಸಂದರ್ಭದಲ್ಲಿದ್ದೀವಿ. ಈ ಸಮಯದಲ್ಲಿ ಆರ್ಥಿಕ ಲಾಭಕ್ಕಿಂತ ಮಾನವ ಜೀವಗಳಿಗೆ ಬೆಲೆ ಕೊಡಬೇಕು. ಕಾರ್ಖಾನೆಗಳು ಬೇಕಾದರೆ ಕಾಯುತ್ತವೆ ಆದರೆ ರೋಗಗಳು ಕಾಯಲಾಗುವುದಿಲ್ಲ ಎಂದು ವಿಪಿನ್ ಸಂಘಿ ಮತ್ತು ರೇಖಾ ಪಲ್ಲಿಅವರಿದ್ದ ಪೀಠ ಹೇಳಿದೆ.

ದೆಹಲಿಯ ಗಂಗಾ ರಾಮ್ ಆಸ್ಪತ್ರೆಯ ವೈದ್ಯರು ಆಕ್ಸಿಜನ್ ಕೊರತೆಯಿಂದಾಗಿ ಕೋವಿಡ್ -19 ರೋಗಿಗಳಿಗೆ ಆಕ್ಸಿಜನ್ ಬಳಕೆಯನ್ನು ಕಡಿಮೆ ಮಾಡಲು ಒತ್ತಾಯಿಸಲಾಗುತ್ತಿದೆ ಎಂಬ ವರದಿಗಳನ್ನು ಗಮನಿಸಿದ ನ್ಯಾಯಾಲಯ “ಏಪ್ರಿಲ್ 22 ರಿಂದ ಕಾರ್ಖಾನೆಗಳಿಗೆ ಆಕ್ಸಿಜನ್ ಸರಬರಾಜು ನಿಲ್ಲಿಸುತ್ತೇವೆ ಎಂದು ಕೇಂದ್ರ ಸರ್ಕಾರ ಹೇಳುತ್ತಿದೆ. ಈಗಲೇ ಏಕೆ ನಿಲ್ಲಿಸಲು ಆಗುವುದಿಲ್ಲ? ಅಲ್ಲಿಯವರೆಗೂ ಏಕೆ ಕಾಯಬೇಕು? ಜೀವಗಳು ಅಪಾಯದಲ್ಲಿವೆ. ಆಮ್ಲಜನಕಕ್ಕಾಗಿ ಏಪ್ರಿಲ್ 22 ರವರೆಗೆ ಕಾಯುವಂತೆ ನೀವು ರೋಗಿಗಳಿಗೆ ಹೇಳುತ್ತೀರಾ?” ಎಂದು ಕಿಡಿಕಾರಿದೆ.


ಇದನ್ನೂ ಓದಿ: ದೆಹಲಿಗೆ ಮೀಸಲಿದ್ದ ಆಕ್ಸಿಜನ್ ಕೊಡದೇ ಕೇಂದ್ರ ವಂಚಿಸುತ್ತಿದೆ: ಕೇಜ್ರಿವಾಲ್ ಹೇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...