Homeಅಂತರಾಷ್ಟ್ರೀಯಇಂಗ್ಲೆಂಡ್ ನೂತನ ಪ್ರಧಾನಿಯಾಗಿದ್ದ ಲಿಜ್ ಟ್ರಸ್ ರಾಜೀನಾಮೆ

ಇಂಗ್ಲೆಂಡ್ ನೂತನ ಪ್ರಧಾನಿಯಾಗಿದ್ದ ಲಿಜ್ ಟ್ರಸ್ ರಾಜೀನಾಮೆ

- Advertisement -
- Advertisement -

ಇತ್ತೀಚಿಗಷ್ಟೆ ಇಂಗ್ಲೆಂಡ್ ಪ್ರಧಾನಿಯಾಗಿ ಆಯ್ಕೆಯಾಗಿದ್ದ ಕನ್ಸರ್ವೇಟಿವ್ ಪಕ್ಷದ ನಾಯಕಿ ಲಿಜ್ ಟ್ರಸ್ ಇಂದು ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಅಧಿಕಾರ ವಹಿಸಿಕೊಂಡ ಕೇವಲ 45 ದಿನಗಳಲ್ಲಿಯೇ ರಾಜೀನಾಮೆ ನೀಡುವ ಮೂಲಕ ಅತ್ಯಂತ ಕಡಿಮೆ ಅವಧಿಗೆ ಪ್ರಧಾನಿ ಎನಿಸಿಕೊಂಡಿದ್ದಾರೆ.

ತಮ್ಮ ಆಡಳಿತದಲ್ಲಿ ಮಾರುಕಟ್ಟೆ ಕುಸಿತವನ್ನು ತಡೆಯಲಾಗದ ಕಾರಣ ರಾಜೀನಾಮೆ ನೀಡುತ್ತಿದ್ದೇನೆ ಎಂದು ಅವರು ತಿಳಿಸಿದ್ದಾರೆ. “ನಾನು ಚುನಾವಣೆಯಲ್ಲಿ ನೀಡಿದ ಭರವಸೆಗಳನ್ನು ಈಡೇರಿಸಲು ಸಾಧ್ಯವಿಲ್ಲವಾದ್ದರಿಂದ ರಾಜೀನಾಮೆ ಸಲ್ಲಿಸುತ್ತಿದ್ದೇನೆ. ಕನ್ಸರ್‌ವೇಟಿವ್ ಪಕ್ಷ ನಿಡಿದ ಜನಾದೇಶವನ್ನು ನನಗೆ ನಿರ್ವಹಿಸಲು ಸಾಧ್ಯವಾಗಿಲ್ಲ. ಮುಂದಿನ ಪ್ರಧಾನಿಯ ಆಯ್ಕೆ ಮಾಡುವವರೆಗೂ ನಾನು ಪ್ರಧಾನಿಯಾಗಿಯೇ ಇರುತ್ತೇನೆ” ಎಂದು ಅವರು ತಿಳಿಸಿದ್ದಾರೆ.

ಹಿಂದಿನ ಪ್ರಧಾನಿ ಬೋರಿಸ್ ಜಾನ್ಸನ್ ಅವರ ಅಡಿಯಲ್ಲಿ ಹಣಕಾಸು ಸಚಿವರಾಗಿ ಸೇವೆ ಸಲ್ಲಿಸಿದ ಭಾರತೀಯ ಮೂಲದ ರಿಷಿ ಸುನಕ್ (60,399) ಅವರ ವಿರುದ್ಧ ಕನ್ಸರ್ವೇಟಿವ್ ಪಕ್ಷದ ಲಿಜ್ ಟ್ರಸ್ 81,326 ಮತಗಳನ್ನು ಪಡೆದು ಪ್ರಧಾನಿಯಾಗಿ ಆಯ್ಕೆಯಾಗಿದ್ದರು. ಆ ಮೂಲಕ ಬ್ರಿಟನ್ ಪ್ರಧಾನಿ ಹುದ್ದೆಗೇರಿದ್ದ ಮೂರನೇ ಮಹಿಳೆ ಎನಿಸಿಕೊಂಡಿದ್ದರು.

ಕನ್ಸರ್ವೇಟಿವ್ ಪಕ್ಷದ ನಾಯಕತ್ವಕ್ಕೆ ಮತ್ತೊಮ್ಮೆ ಸ್ಪರ್ಧೆ ಏರ್ಪಡಲಿದೆ. ಲಿಜ್ ಟ್ರಸ್‌ಗೆ ರನ್ನರ್-ಅಪ್ ಆಗಿದ್ದ ರಿಷಿ ಸುನಕ್, ಪೆನ್ನಿ ಮೊರ್ಡಾಂಟ್, ಗ್ರಾಂಟ್ ಶಾಪ್ಸ್ ಮತ್ತು ಕೆಮಿ ಬಡೆನೊಚ್ ಮುಂತಾದವರು ಪ್ರಧಾನಿ ಹುದ್ದೆಯ ರೇಸ್‌ನಲ್ಲಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ಭೂತಾರಾಧನೆ ವೈದಿಕ ಸಂಸ್ಕೃತಿಯಲ್ಲ: ‘ಒಂದು ಮುತ್ತಿನ ಕಥೆ’ ಸಿನಿಮಾ ದೃಶ್ಯ ವೈರಲ್‌

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಜೆಪಿಯವರು ಬಜೆಟ್ ಓದುವುದೂ ಇಲ್ಲ, ಆರ್ಥಿಕತೆ ಬಗ್ಗೆ ಗೊತ್ತೂ ಇಲ್ಲ: ಸಿಎಂ ಸಿದ್ದರಾಮಯ್ಯ

0
ಬಡವರಿಗೆ ಆರ್ಥಿಕ ಸಬಲತೆ ಕೊಡುವುದು ಅಭಿವೃದ್ಧಿ ಅಲ್ಲವೇ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಮಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, "ಗ್ಯಾರಂಟಿ ಯೋಜನೆಗಳನ್ನೇ ಸಾಧನೆ ಎಂದು ಬಿಂಬಿಸಲಾಗುತ್ತಿದೆ. ಅಭಿವೃದ್ಧಿ ಕೆಲಸಗಳು ಆಗುತ್ತಿಲ್ಲ" ಎಂಬ ಬಿಜೆಪಿಗರ ಆರೋಪಕ್ಕೆ...