Homeಕರ್ನಾಟಕಸರ್ಕಾರಿ ಶಾಲೆಗಳಲ್ಲಿ ಎಲ್‌ಕೆಜಿ, ಯುಕೆಜಿ ಆರಂಭ: ಸಚಿವ ಮಾಧುಸ್ವಾಮಿ

ಸರ್ಕಾರಿ ಶಾಲೆಗಳಲ್ಲಿ ಎಲ್‌ಕೆಜಿ, ಯುಕೆಜಿ ಆರಂಭ: ಸಚಿವ ಮಾಧುಸ್ವಾಮಿ

ಮೊದಲ ಹಂತದಲ್ಲಿ 275 ಪಬ್ಲಿಕ್‌ ಶಾಲೆಗಳಲ್ಲಿ ಎಲ್‌ಕೆಜಿ, ಯುಕೆಜಿ ಪ್ರಾರಂಭಿಸಲು ಸಚಿವ ಸಂಪುಟ ಸಭೆ ಒಪ್ಪಿಗೆ

- Advertisement -
- Advertisement -

ರಾಷ್ಟ್ರೀಯ ಶಿಕ್ಷಣ ನೀತಿಗೆ ಅನುಗುಣವಾಗಿ ರಾಜ್ಯದ  ಸರ್ಕಾರಿ ಶಾಲೆಗಳಲ್ಲಿ ಎಲ್​​ಕೆಜಿ, ಯುಕೆಜಿ ಶಿಕ್ಷಣ ಈ ಶೈಕ್ಷಣಿಕ ವರ್ಷದಿಂದಲೇ ಜಾರಿಯಾಗಲಿದೆ ಎಂದು ಸಚಿವ ಮಾಧುಸ್ವಾಮಿ ಹೇಳಿದ್ದಾರೆ. ಮೊದಲ ಹಂತದಲ್ಲಿ 275 ಪಬ್ಲಿಕ್‌ ಶಾಲೆಗಳಲ್ಲಿ ಪ್ರಾರಂಭಿಸಲು ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ ಎಂದಿದ್ದಾರೆ.

ಸಂಪುಟ ಸಭೆ ಬಳಿಕ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಮಾಧುಸ್ವಾಮಿ, ಮುಂದಿನ ಶೈಕ್ಷಣಿಕ ವರ್ಷದಿಂದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಎಲ್​​​ಕೆಜಿ, ಯುಕೆಜಿ ಶಿಕ್ಷಣ ನೀಡುವ ಬಗ್ಗೆ ಸರ್ಕಾರ ಗಂಭೀರ ಚಿಂತನೆ ನಡೆಸಿದೆ. 275 ಪಬ್ಲಿಕ್ ಶಾಲೆಗಳಲ್ಲಿ ಎಲ್​ಕೆಜಿ, ಯುಕೆಜಿ ತರಗತಿ ಆರಂಭಿಸಲು ತೀರ್ಮಾನ ಮಾಡಲಾಗಿದೆ ಎಂದರು.

ಇದನ್ನೂ ಓದಿ: ಮಾಧುಸ್ವಾಮಿಗೆ ಕಾನೂನಿನ ಪಾಠ ಹೇಳಿಕೊಡಬೇಕಿದೆ ; ಹೋರಾಟಗಾರ್ತಿಯರ ಆಕ್ರೋಶ

ಇನ್ನು ಇದಕ್ಕೆ ಅಗತ್ಯವಿರುವ ಎಲ್ಲ ರೀತಿಯ ಮೂಲ ಸೌಕರ್ಯಗಳನ್ನು ಸಿದ್ಧಪಡಿಸಿಕೊಳ್ಳಲಾಗಿದೆ. ಶಿಕ್ಷಣ ನೀಡಲು ಡಿಎಡ್ ಆದವರಿಗೆ ಮಾಂಟೆಸ್ಸರಿ ತರಬೇತಿ ನೀಡಲಾಗುತ್ತಿದೆ. ಶಿಕ್ಷಕರಿಗೆ 7,500 ರೂಪಾಯಿ ಮತ್ತು ಆಯಾಗಳಿಗೆ 5,000 ರೂಪಾಯಿ ಗೌರವ ಸಂಭಾವನೆ ನೀಡಲಾಗುವುದು ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಮಾಧುಸ್ವಾಮಿ ತಿಳಿಸಿದರು.

ಹಾಗೇ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಇಂಜಿನಿಯರಿಂಗ್ ಹಾಗೂ ಪಾಲಿಟೆಕ್ನಿಕ್ ಕಾಲೇಜುಗಳಲ್ಲಿ ಡಿಜಿಟಲ್ ಲರ್ನಿಂಗ್ ಕೋರ್ಸ್ ಆರಂಭಿಸಲು ತೀರ್ಮಾನ ಮಾಡಲಾಗಿದೆ ಎನ್ನುವ ಮಾಹಿತಿ ನೀಡಿದರು.


ಇದನ್ನೂ ಓದಿ: ಸರ್ಕಾರಿ ಶಾಲೆಯ ಶಿಕ್ಷಕರು ನಮ್ಮ ವಿದ್ಯಾರ್ಥಿಗಳನ್ನು ಸೆಳೆಯುತ್ತಿದ್ದಾರೆ ಎಂದು ದೂರಿದ ಖಾಸಗಿ ಶಾಲೆಗಳು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...

ಮಧ್ಯಪ್ರದೇಶ| ವಂದೇ ಮಾತರಂ ಹಾಡಲು ನಿರಾಕರಣೆ; ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್

ಏಪ್ರಿಲ್ 8 ರಂದು ಇಂದೋರ್ ಮುನ್ಸಿಪಲ್ ಕಾರ್ಪೊರೇಷನ್‌ನ ಬಜೆಟ್ ಅಧಿವೇಶನದಲ್ಲಿ ಧಾರ್ಮಿಕ ಮತ್ತು ಸಾಂವಿಧಾನಿಕ ಕಾರಣಗಳನ್ನು ಉಲ್ಲೇಖಿಸಿ ವಂದೇ ಮಾತರಂ ಹಾಡಲು ನಿರಾಕರಿಸಿದ್ದಕ್ಕಾಗಿ ಮಧ್ಯಪ್ರದೇಶ ಪೊಲೀಸರು ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್...

ನ್ಯಾಯಾಂಗ ಸೇವೆಗಳು, ಸರ್ಕಾರಿ ಸಮಿತಿಗಳಲ್ಲಿ ಶೇ. 50 ಮಹಿಳಾ ಪ್ರಾತಿನಿಧ್ಯ ಕೋರಿ ಪಿಐಎಲ್ : ವಜಾಗೊಳಿಸಿದ ಸುಪ್ರೀಂ ಕೋರ್ಟ್

ಸರ್ಕಾರಿ ಸಮಿತಿಗಳು ಮತ್ತು ನ್ಯಾಯಾಂಗ ಸೇವೆಯ ಖಾಲಿ ಇರುವ ಸ್ಥಾನಗಳಲ್ಲಿ ಮಹಿಳೆಯರಿಗೆ ಶೇ. 50ರಷ್ಟು ಪ್ರಾತಿನಿಧ್ಯ ನೀಡಬೇಕೆಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆಗೆ ಸ್ವೀಕರಿಸಲು ಸುಪ್ರೀಂ ಕೋರ್ಟ್ ಗುರುವಾರ...

ರಷ್ಯಾ ತೈಲ ಖರೀದಿಸಲು ಭಾರತಕ್ಕೆ ನೀಡಿದ್ದ ಕಾಲಾವಕಾಶ ವಿಸ್ತರಿಸುವುದಿಲ್ಲ: ಅಮೆರಿಕ

ಇರಾನ್ ಮತ್ತು ರಷ್ಯಾದಿಂದ ತೈಲವನ್ನು ಖರೀದಿಸಲು ಭಾರತ ಸೇರಿದಂತೆ ವಿವಿಧ ದೇಶಗಳಿಗೆ ಈವರೆಗೆ ನೀಡಲಾಗಿದ್ದ ನಿರ್ಬಂಧ ಸಡಿಲಿಕೆಯನ್ನು ಇನ್ನು ಮುಂದೆ ಮುಂದುವರಿಸುವುದಿಲ್ಲ ಎಂದು ಅಮೆರಿಕದ ಖಜಾನೆ ಕಾರ್ಯದರ್ಶಿ ಸ್ಕಾಟ್ ಬೆಸೆಂಟ್ ಬುಧವಾರ (ಏ.15)...