Homeಕರೋನಾ ತಲ್ಲಣತಮಿಳುನಾಡಿಗೆ ಜೂನ್‌‌ ಮೊದಲ ವಾರದಲ್ಲೆ ವ್ಯಾಕ್ಸಿನ್ ಲೋಡ್‌ ಮಾಡಿ: ಕೇಂದ್ರಕ್ಕೆ ಸಿಎಂ ಸ್ಟಾಲಿನ್ ಒತ್ತಾಯ

ತಮಿಳುನಾಡಿಗೆ ಜೂನ್‌‌ ಮೊದಲ ವಾರದಲ್ಲೆ ವ್ಯಾಕ್ಸಿನ್ ಲೋಡ್‌ ಮಾಡಿ: ಕೇಂದ್ರಕ್ಕೆ ಸಿಎಂ ಸ್ಟಾಲಿನ್ ಒತ್ತಾಯ

- Advertisement -
- Advertisement -

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಕೊರೊನಾ ಲಸಿಕೆ ಸರಬರಾಜುಗಳನ್ನು ಜೂನ್‌ ಮೊದಲ ವಾರದಿಂದಲೇ ಲೋಡ್ ಮಾಡುವಂತೆ ಕೇಂದ್ರವನ್ನು ಕೋರಿದ್ದಾರೆ. ಚೆಂಗಲ್‌ಪಟ್ಟಿಯಲ್ಲಿರುವ ಇಂಟಿಗ್ರೇಟೆಡ್ ಲಸಿಕೆ ಕಾಂಪ್ಲೆಕ್ಸ್‌‌ನಲ್ಲಿ ಲಸಿಕೆಗಳ ಉತ್ಪಾದನೆಯನ್ನು ಶೀಘ್ರದಲ್ಲಿಯೇ ಪ್ರಾರಂಭಿಸಬೇಕು ಎಂಬ ಮನವಿಯನ್ನು ಅವರು ಮತ್ತೆ ಮಾಡಿದ್ದಾರೆ.

ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಹರ್ಷ್ ವರ್ಧನ್ ಅವರಿಗೆ ಬರೆದಿರುವ ಪತ್ರದಲ್ಲಿ, ತಮಿಳುನಾಡು ತನ್ನ ಜನಸಂಖ್ಯೆಯ ಗಾತ್ರ ಮತ್ತು ಸೋಂಕಿತರಿಗೆ ಅನುಗುಣವಾಗಿ ಲಸಿಕೆಗಳನ್ನು ಸ್ವೀಕರಿಸಿಲ್ಲ. ಇದನ್ನು ಕೇಂದ್ರ ಮತ್ತು ಇತರ ಮಾರ್ಗಗಳ ಮೂಲಕ 50 ಲಕ್ಷ ವಿಶೇಷ ಹಂಚಿಕೆಯಿಂದ ಮಾತ್ರ ಸರಿಪಡಿಸಬಹುದು ಎಂದು ಒತ್ತಿಹೇಳಿದ್ದಾರೆ.

ಇದನ್ನೂ ಓದಿ: ವೈದ್ಯರ ಮೇಲೆ ಮಾರಣಾಂತಿಕ ಹಲ್ಲೆ, ಕಠಿಣ ಕಾಯ್ದೆ ರೂಪಿಸಲು IMA ಆಗ್ರಹ

ಇತ್ತೀಚಿನ ಹಂಚಿಕೆಯಡಿಯಲ್ಲಿ, ಮೊದಲಿಗೆ 25.84 ಲಕ್ಷ ಡೋಸೇಜ್‌ಗಳು ಮತ್ತು ನಂತರ 16.74 ಲಕ್ಷ ಡೋಸುಗಳನ್ನು ನಮಗೆ ಹಂಚಿಕೆ ಮಾಡಲಾಗಿದೆ, ಈ ಹಂಚಿಕೆಗೆ ಧನ್ಯವಾದಗಳು ಎಂದು ಅವರು ತಿಳಿಸಿದ್ದಾರೆ.

ಲಸಿಕೆಯ ಅನಿಶ್ಚಿತತೆಯನ್ನು ಹೋಗಲಾಡಿಸಲು ಕಳೆದ ಒಂದು ತಿಂಗಳಲ್ಲಿ ತಮಿಳುನಾಡು ಸರ್ಕಾರ ಕೈಗೊಂಡ ಪ್ರಯತ್ನಗಳು ಮತ್ತು ರಾಜ್ಯದ ಜನರಲ್ಲಿ ಲಸಿಕೆಗಳಿಗೆ ಅಪಾರ ಬೇಡಿಕೆಯನ್ನು ಸೃಷ್ಟಿಸುವಲ್ಲಿ ರಾಜ್ಯ ಸರ್ಕಾರ ಹೇಗೆ ಯಶಸ್ವಿಯಾಗಿದೆ ಎಂಬುದನ್ನು ಮುಖ್ಯಮಂತ್ರಿ ಎತ್ತಿ ತೋರಿಸಿದರು.

ಇತರ ರಾಜ್ಯಗಳಿಗೆ ಹಂಚಿಕೆ ಮಾಡಿರುವ ಲಸಿಕೆಯಷ್ಟೇ ತಮಿಳುನಾಡಿಗೆ ಕೂಡಾ ಹಂಚಿಕೆ ಮಾಡಲಾಗಿದೆಯೆ ಎಂದು ಖಚಿತಪಡಿಸಬೇಕು ಎಂದು ತಮ್ಮ ಪತ್ರದಲ್ಲಿ ಕೇಂದ್ರ ಸರ್ಕಾರಕ್ಕೆ ಸ್ಟಾಲಿನ್ ಮತ್ತೆ ನೆನಪಿಸಿದ್ದಾರೆ.

ಚೆಂಗಲ್‌ಪಟ್ಟಿಯಲ್ಲಿರುವ ಲಸಿಕೆ ಕಾಂಪ್ಲೆಕ್ಸ್‌ ಅನ್ನು ಹಸ್ತಾಂತರಿಸುವಂತೆ ರಾಜ್ಯ ಸರ್ಕಾರದ ಮನವಿಯನ್ನು ಮುಖ್ಯಮಂತ್ರಿ ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ: ಉತ್ತರ ಪ್ರದೇಶ ವಿವಿಗಳಲ್ಲಿ ಯೋಗಿ ಆದಿತ್ಯನಾಥ್, ಬಾಬಾ ರಾಮದೇವ್ ಕುರಿತು ಪಠ್ಯ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...