Homeಮುಖಪುಟಸಾಲ ವಂಚನೆ ಹಗರಣ: ಅನಿಲ್ ಅಂಬಾನಿಗೆ ಸಂಬಂಧಿಸಿದ ಆಸ್ತಿಗಳ ಮೇಲೆ ಇಡಿ ದಾಳಿ

ಸಾಲ ವಂಚನೆ ಹಗರಣ: ಅನಿಲ್ ಅಂಬಾನಿಗೆ ಸಂಬಂಧಿಸಿದ ಆಸ್ತಿಗಳ ಮೇಲೆ ಇಡಿ ದಾಳಿ

- Advertisement -
- Advertisement -

ಅನಿಲ್ ಅಂಬಾನಿಗೆ ಸಂಬಂಧಿಸಿದ ಕಂಪನಿಗಳ ಸಮೂಹ ಮತ್ತು ಯೆಸ್ ಬ್ಯಾಂಕ್ ಒಳಗೊಂಡ ರೂ. 3,000 ಕೋಟಿಗೂ ಹೆಚ್ಚಿನ ಸಾಲ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಗುರುವಾರ ಹಲವು ಸ್ಥಳಗಳಲ್ಲಿ ದಾಳಿ ನಡೆಸಿದೆ ಎಂದು ವರದಿಯಾಗಿದೆ.

ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆಯ (ಪಿಎಂಎಲ್‌ಎ) ಸೆಕ್ಷನ್ 17ರ ಅಡಿಯಲ್ಲಿ ಇಡಿ ಅಧಿಕಾರಿಗಳು 35ಕ್ಕೂ ಹೆಚ್ಚು ಪ್ರದೇಶಗಳಲ್ಲಿ 50 ಕಂಪನಿಗಳು ಮತ್ತು 25ಕ್ಕೂ ಹೆಚ್ಚು ವ್ಯಕ್ತಿಗಳ ಮೇಲೆ ಶೋಧ ಕಾರ್ಯಾಚರಣೆ ಕೈಗೊಂಡಿದ್ದಾರೆ ಎಂದು ಇಡಿ ಮೂಲಗಳನ್ನು ಉಲ್ಲೇಖಿಸಿ ಎಎನ್‌ಐ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಕೇಂದ್ರೀಯ ಸಂಸ್ಥೆಯು ಲಂಚ ಮತ್ತು ಸಾಲದ ಶಂಕಿತ ಸಂಬಂಧವನ್ನು ತನಿಖೆ ನಡೆಸುತ್ತಿದೆ ಎಂದು ವರದಿ ಹೇಳಿದೆ.

ಪ್ರಾಥಮಿಕ ತನಿಖೆಯಲ್ಲಿ 2017 ಮತ್ತು 2019 ರ ನಡುವೆ ಯೆಸ್ ಬ್ಯಾಂಕಿನಿಂದ ಸುಮಾರು ರೂ. 3,000 ಕೋಟಿಗಳಷ್ಟು ಅಕ್ರಮ ಸಾಲ ವರ್ಗಾವಣೆ ನಡೆದಿದೆ ಎಂದು ಆರೋಪಿಸಲಾಗಿದೆ. ಸಾಲ ನೀಡುವ ಮೊದಲು, ಯೆಸ್ ಬ್ಯಾಂಕಿನ ಪ್ರವರ್ತಕರು (ಪ್ರಮೋಟರ್ಸ್) ತಮ್ಮ ವೈಯಕ್ತಿಕ ಖಾತೆಗಳಲ್ಲಿ ಹಣವನ್ನು ಪಡೆದಿದ್ದಾರೆ ಎಂದು ಇಡಿ ಪತ್ತೆ ಹಚ್ಚಿದೆ.

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ರಿಲಯನ್ಸ್ ಕಮ್ಯುನಿಕೇಷನ್ಸ್‌ನ ಸಾಲದ ಖಾತೆ ಮತ್ತು ಅನಿಲ್ ಅಂಬಾನಿ ಅವರನ್ನು ‘ವಂಚನೆ’ ಎಂದು ವರ್ಗೀಕರಿಸಿ ಇತ್ತೀಚೆಗೆ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾಗೆ (ಆರ್‌ಬಿಐ) ವರದಿ ಮಾಡಿತ್ತು. ಈ ವಿಷಯವನ್ನು ಹಣಕಾಸು ಖಾತೆ ರಾಜ್ಯ ಸಚಿವ ಪಂಕಜ್ ಚೌಧರಿ ಸಂಸತ್ತಿಗೆ ತಿಳಿಸಿದ್ದರು. ಎಸ್‌ಬಿಐ ಸಿಬಿಐ ದೂರು ನೀಡಲು ಸಿದ್ದತೆ ನಡೆಸಿದೆ ಎಂದಿದ್ದರು. ಈ ಬೆನ್ನಲ್ಲೇ ಇಡಿ ದಾಳಿ ನಡೆಸಿದೆ. ರಿಲಯನ್ಸ್ ಕಮ್ಯುನಿಕೇಷನ್ಸ್‌ ಜೂನ್ 2019 ರಿಂದ ದಿವಾಳಿಯಾಗಿದೆ.

ಎಸ್‌ಬಿಐ ವಂಚನೆ ಎಂದು ವರ್ಗೀಕರಿಸಿದ ಬಳಿಕ ಸಿಬಿಐ ಎಫ್‌ಐಆರ್ ದಾಖಲಿಸಿದೆ. ಅದನ್ನು ಅನುಸರಿಸಿ ರಿಲಯನ್ಸ್ ಅನಿಲ್ ಅಂಬಾನಿ ಗ್ರೂಪ್ ಆಫ್ ಕಂಪನೀಸ್ (ಆರ್‌ಎಎಜಿಎ) ವಿರುದ್ದ ಇಡಿ ಹಣ ಅಕ್ರಮ ವರ್ಗಾವಣೆಯ ತನಿಖೆ ಕೈಗೊಂಡಿದೆ. ಅದರ ಭಾಗವಾಗಿ ದಾಳಿ ನಡೆದಿದೆ ಎಂದು ವರದಿಗಳು ಹೇಳಿವೆ.

ನ್ಯಾಷನಲ್ ಹೌಸಿಂಗ್ ಬ್ಯಾಂಕ್, ಸೆಬಿ, ರಾಷ್ಟ್ರೀಯ ಹಣಕಾಸು ವರದಿ ಪ್ರಾಧಿಕಾರ (ಎನ್‌ಎಫ್‌ಆರ್‌ಎ) ಮತ್ತು ಬ್ಯಾಂಕ್ ಆಫ್ ಬರೋಡಾದಂತಹ ಇತರ ಏಜೆನ್ಸಿಗಳು ಮತ್ತು ಸಂಸ್ಥೆಗಳು ಜಾರಿ ನಿರ್ದೇಶನಾಲಯದೊಂದಿಗೆ ಮಾಹಿತಿಯನ್ನು ಹಂಚಿಕೊಂಡಿವೆ ಎಂದು ವರದಿಗಳು ವಿವರಿಸಿವೆ.

ಬ್ಯಾಂಕುಗಳು, ಷೇರುದಾರರು, ಹೂಡಿಕೆದಾರರು ಮತ್ತು ಇತರ ಸಾರ್ವಜನಿಕ ಸಂಸ್ಥೆಗಳನ್ನು ವಂಚಿಸುವ ಮೂಲಕ ಸಾರ್ವಜನಿಕ ಹಣವನ್ನು ಬೇರೆಡೆಗೆ ತಿರುಗಿಸಲು ಅಥವಾ ವಂಚಿಸಲು ರೂಪಿಸಲಾದ ಒಂದು ಯೋಜನೆಯ ಬಗ್ಗೆ ಇಡಿ ನಡೆಸಿದ ಪ್ರಾಥಮಿಕ ತನಿಖೆಯು ಬಹಿರಂಗಪಡಿಸಿದೆ.

ಯೆಸ್ ಬ್ಯಾಂಕ್ ಲಿಮಿಟೆಡ್‌ನ ಪ್ರವರ್ತಕ ಸೇರಿದಂತೆ ಬ್ಯಾಂಕ್ ಅಧಿಕಾರಿಗಳಿಗೆ ಲಂಚ ನೀಡಿದ ಅಪರಾಧವೂ ತನಿಖೆಯಲ್ಲಿದೆ ಎಂದು ವರದಿಯಾಗಿದೆ.

ಸಾಲದ ಅನುಮೋದನೆ ಜ್ಞಾಪಕ ಪತ್ರಗಳಿಗೆ ಹಿಂದಿನ ದಿನಾಂಕ ಹಾಕುವುದು, ಸಾಲದ ವಿಶ್ಲೇಷಣೆ ನಡೆಸದೆ ಮಾಡಲಾದ ಹೂಡಿಕೆ ಪ್ರಸ್ತಾವನೆಗಳು ಮತ್ತು ಯೆಸ್ ಬ್ಯಾಂಕಿನ ಸ್ವಂತ ಸಾಲ ನೀತಿಯ ಬಹು ಉಲ್ಲಂಘನೆಗಳು ಸೇರಿದಂತೆ ರಿಲಯನ್ಸ್ ಅನಿಲ್ ಅಂಬಾನಿ ಗ್ರೂಪ್ ಆಫ್ ಕಂಪನೀಸ್‌ಗೆ ಸಾಲ ಅನುಮೋದನೆ ಪ್ರಕ್ರಿಯೆಯಲ್ಲಿ ಸಂಪೂರ್ಣ ಉಲ್ಲಂಘನೆಗಳು ನಡೆದಿವೆ ಎಂದು ಇಡಿ ಹೇಳಿರುವುದಾಗಿ ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ರಿಲಯನ್ಸ್ ಕಮ್ಯುನಿಕೇಷನ್ಸ್‌ , ಅನಿಲ್ ಅಂಬಾನಿಯನ್ನು ‘ವಂಚನೆ’ ಎಂದು ವರ್ಗೀಕರಿಸಿದ ಎಸ್‌ಬಿಐ: ಸಿಬಿಐಗೆ ದೂರು ನೀಡಲು ಸಿದ್ದತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್ ನಿಂದ ಏಪ್ರಿಲ್ 12ರಂದು ‘ರನ್ ಫಾರ್ ಅಂಬೇಡ್ಕರ್, ರನ್ ಫಾರ್ ಕಾನ್ಸ್ಟಿಟ್ಯೂಷನ್’ ಮ್ಯಾರಥಾನ್ ಆಯೋಜನೆ

ನವದೆಹಲಿ: ಬಿ.ಆರ್. ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯ ಅಂಗವಾಗಿ ಕಾಂಗ್ರೆಸ್ ಭಾನುವಾರ 'ಅಂಬೇಡ್ಕರ್‌ಗಾಗಿ ಓಟ, ಸಂವಿಧಾನಕ್ಕಾಗಿ ಓಟ' ಮ್ಯಾರಥಾನ್ ಆಯೋಜಿಸಿದೆ. ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಇಲ್ಲಿನ ಮಂಡಿ ಹೌಸ್‌ನಿಂದ ಮ್ಯಾರಥಾನ್‌ಗೆ...

ಮುಖ್ಯವಾಹಿನಿಗೆ ಬಂದ 42 ಕೇಡರ್‌ಗಳು; ರಾಜ್ಯದಲ್ಲಿ’ಮಾವೋವಾದಿ ಕಾರ್ಯಾಚರಣೆ’ ಅಂತ್ಯವಾಗಿದೆ ಎಂದ ತೆಲಂಗಾಣ ಪೊಲೀಸರು

ರಾಜ್ಯದಲ್ಲಿ ಸಿಪಿಐ (ಮಾವೋವಾದಿ) ಸಂಘಟನೆಯ ಕಾರ್ಯಚರಣೆ ಅಂತಿಮವಾಗಿದೆ ಎಂದು ತೆಲಂಗಾಣ ಪೊಲೀಸರು ಘೋಷಣೆ ಮಾಡಿದ್ದಾರೆ. ಬೆಟಾಲಿಯನ್ ಕಮಾಂಡರ್ ಮತ್ತು ಎರಡು ಪ್ರಮುಖ ಗುಂಪುಗಳ ಹಿರಿಯ ನಾಯಕತ್ವ ಸೇರಿದಂತೆ ನಿಷೇಧಿತ ಸಂಘಟನೆಯ 42 ಕೇಡರ್‌ಗಳು...

‘ಹಿಂದಿ ನಿರ್ಮೂಲನೆ ಮಾಡುತ್ತೇವೆ’ ಎಂದು ಸಚಿವರು ಹೇಳಿಲ್ಲ; ಹಿಂದಿ ಪರ ಅರ್ಜಿ ವಜಾ; ₹1 ಲಕ್ಷ ದಂಡ ವಿಧಿಸಿದ ಹೈಕೋರ್ಟ್‌

ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷಾ ವಿಷಯಗಳ ಮೌಲ್ಯಮಾಪನ ಸಂಬಂಧ ರಾಜ್ಯ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ನೀಡಿದ ಹೇಳಿಕೆಯ ವಿರುದ್ಧ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು (ಪಿಐಎಲ್) ಕರ್ನಾಟಕ...

ದೆಹಲಿ| ಮುಸ್ಲಿಮರ ಮೇಲಿನ ದ್ವೇಷಕ್ಕೆ ಜೀವಂತ ಹಂದಿಗಳನ್ನು ಪೂಜಿಸುತ್ತಿರುವ ಹಿಂದೂಗಳು

ಹಳೆಯ ದೆಹಲಿಯ ಹಿಂದೂ-ಮುಸ್ಲಿಂ ಜನರು ವಾಸಿಸುವ ತ್ರನಗರದ ನೆರೆಹೊರೆಯಲ್ಲಿ ಹಿಂದೂ ಕುಟುಂಬಗಳು ಜೀವಂತ ಹಂದಿಗಳನ್ನು ಪೂಜಿಸುತ್ತಿದ್ದಾರೆ. ಮುಸ್ಲಿಮರ ಮೇಲಿನ ದ್ವೇಷಕ್ಕೆ ಮನೆಯ ಮುಂಭಾಗ ಅಲಂಕೃತ ಹಂದಿ (ವರಹಾಸ್ವಾಮಿ) ಚಿತ್ರಗಳನ್ನು ಅಳವಡಿಸಿದ್ದಾರೆ ಎಂದು 'ದಿ...

ಪ. ಬಂಗಾಳ: ಮಹಿಳೆಯರಿಗೆ ₹3,000 ರಿಂದ 6 ತಿಂಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ ಸೇರಿದಂತೆ ಹಲವು ಭರವಸೆ ನೀಡಿದ ಬಿಜೆಪಿ 

ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಪ್ರಚಾರ ಆರಂಭವಾಗಿದ್ದು, ಮೊದಲ ಹಂತದ ಮತದಾನಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಪಶ್ಚಿಮ ಬಂಗಾಳದ ಬಿಜೆಪಿ...

ಹಾಸನ| ರೈತ ಮುಖಂಡ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ; ದುಷ್ಕರ್ಮಿಗಳ ಬಂಧನಕ್ಕೆ ಕೆಪಿಆರ್‌ಎಸ್‌ ಆಗ್ರಹ

ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಕರ್ನಾಟಕ ಪ್ರಾಂತ ರೈತ ಸಂಘದ (ಕೆಪಿಆರ್‌ಎಸ್‌) ಕಾರ್ಯದರ್ಶಿ ಹಾಗೂ ಕಲ್ಕೆರೆ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ, ಡಿವೈಎಫ್‌ಐ ಜಿಲ್ಲಾಧ್ಯಕ್ಷ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ-ದೌರ್ಜನ್ಯ ನಡೆಸಿರುವ ಗೂಂಡಾಗಳನ್ನು...

ಉತ್ತರ ಪ್ರದೇಶ| ಡಿಜಿಟಲ್ ಬಂಧನದಿಂದ ಪೋಷಕರನ್ನು ರಕ್ಷಿಸಿದ 8ನೇ ತರಗತಿ ವಿದ್ಯಾರ್ಥಿ

ಸುಮಾರು 10 ಗಂಟೆಗಳ ಕಾಲ ವೀಡಿಯೊ ಕರೆ ಮೂಲಕ ಡಿಜಿಟಲ್ ಬಂಧನಕ್ಕೆ ಒಳಗಾಗಿದ್ದ ತನ್ನ ಹೆತ್ತವರು ಹಣ ಕಳೆದುಕೊಳ್ಳದಂತೆ 8ನೇ ತರಗತಿಯ ಬಾಲಕನೊಬ್ಬ ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಉತ್ತರ ಪ್ರದೇಶದ ಬರೇಲಿಯಲ್ಲಿ...

ಅಸ್ಸಾಂ: ಪವನ್ ಖೇರಾ ವಿರುದ್ಧದ ಪ್ರಕರಣದಲ್ಲಿ ಒಂದು ವಾರದ ನಿರೀಕ್ಷಣ ಜಾಮೀನು ನೀಡಿದ ತೆಲಂಗಾಣ ಹೈಕೋರ್ಟ್

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಸಲ್ಲಿಸಿದ ಎಫ್‌ಐಆರ್‌ಗೆ ಸಂಬಂಧಿಸಿದಂತೆ ತೆಲಂಗಾಣ ಹೈಕೋರ್ಟ್ ಶುಕ್ರವಾರ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ಒಂದು ವಾರದ...

ನಿವಾಸದಲ್ಲಿ ನಗದು ಪತ್ತೆ ಪ್ರಕರಣದಲ್ಲಿ ಸಿಲುಕಿದ್ದ ನ್ಯಾಯಮೂರ್ತಿ ಯಶವಂತ್ ವರ್ಮಾ ರಾಜೀನಾಮೆ

ತಮ್ಮ ನಿವಾಸದಲ್ಲಿ ನಗದು ಪತ್ತೆ ಆರೋಪದ ಕೇಂದ್ರಬಿಂದುವಾಗಿದ್ದ ಅಲಹಾಬಾದ್ ಹೈಕೋರ್ಟ್ ನ್ಯಾಯಾಧೀಶ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ತಮ್ಮ ರಾಜೀನಾಮೆಯನ್ನು ಸಲ್ಲಿಸಿದ್ದಾರೆ. ಕಳೆದ ವರ್ಷ ಏಪ್ರಿಲ್ 5...

ಆಂಧ್ರಪ್ರದೇಶ: ಬೇಸಿಗೆ ವಿಹಾರಕ್ಕೆಂದು ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ಅನಂತಗಿರಿ ಜಲಪಾತದಲ್ಲಿ ಮುಳುಗಿ ಸಾವು 

ಅನಂತಗಿರಿ: ಬೇಸಿಗೆ ವಿಹಾಕ್ಕೆಂದು ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ಅನಂತಗಿರಿ ಜಲಪಾತದಲ್ಲಿ ಸೆಲ್ಫಿ ತೆಗೆದುಕೊಳ್ಳಲು ಜಲಪಾತಕ್ಕೆ ಇಳಿದು ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅಲ್ಲೂರಿ ಸೀತಾರಾಮರಾಜು ಮೂಲಗುಮ್ಮಿ ಗ್ರಾಮದಲ್ಲಿ ನಾಲ್ವರು...