Homeಮುಖಪುಟಸ್ಥಳೀಯ ಸಂಸ್ಥೆ ಚುನಾವಣೆ: ಕಾಂಗ್ರೆಸ್ ಮೇಲುಗೈ, ಬಿಜೆಪಿಗೆ ಮುಖಭಂಗ

ಸ್ಥಳೀಯ ಸಂಸ್ಥೆ ಚುನಾವಣೆ: ಕಾಂಗ್ರೆಸ್ ಮೇಲುಗೈ, ಬಿಜೆಪಿಗೆ ಮುಖಭಂಗ

ಸಿಎಂ ಬಸವರಾಜ ಬೊಮ್ಮಾಯಿ ಅವರ ತವರು ಕ್ಷೇತ್ರದಲ್ಲೇ ಬಿಜೆಪಿ ಮುಖಭಂಗ ಎದುರಿಸಿದ್ದು, ಹಾವೇರಿ ಜಿಲ್ಲೆಯ ಬಂಕಾಪುರ ಪುರಸಭೆ ಮತ್ತು ಗುತ್ತಲ ಪಟ್ಟಣ ಪಂಚಾಯಿತಿಗಳಲ್ಲಿ ಕಾಂಗ್ರೆಸ್ ಅಧಿಕಾರ ಹಿಡಿದಿದೆ.

- Advertisement -
- Advertisement -

ರಾಜ್ಯದ 5 ನಗರಸಭೆ ಸಭೆಗಳು ಸೇರಿದಂತೆ 58 ನಗರ ಸ್ಥಳೀಯ ಸಂಸ್ಥೆಗಳಿಗೆ ಡಿಸೆಂಬರ್ 27ರಂದು ನಡೆದಿದ್ದ ಚುನಾವಣೆಯ ಫಲಿತಾಂಶ ಇಂದು (ಗುರುವಾರ) ಪ್ರಕಟವಾಗಿದೆ. ಫಲಿತಾಂಶದಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಮೇಲುಗೈ ಸಾಧಿಸಿದ್ದು, ಆಡಳಿತರೂಢ ಬಿಜೆಪಿಗೆ ಭಾರೀ ಮುಖಭಂಗವಾಗಿದೆ. 

ರಾಜ್ಯದ ಒಟ್ಟು 19 ಪುರಸಭೆಗಳ ಪೈಕಿ ಕಾಂಗ್ರೆಸ್- 8, ಬಿಜೆಪಿ- 6, ಜೆಡಿಎಸ್- 1 ಪುರಸಭೆಗಳ ಅಧಿಕಾರ ಗಿಟ್ಟಿಸಿಕೊಂಡಿವೆ. ಇನ್ನು 4 ಪುರಸಭೆಗಳಲ್ಲಿ ಅತಂತ್ರ ಫಲಿತಾಂಶ ಬಂದಿದೆ.

ಒಟ್ಟು 34 ಪಟ್ಟಣ ಪಂಚಾಯತ್‌ಗಳ ಪೈಕಿ ಕಾಂಗ್ರೆಸ್- 13, ಬಿಜೆಪಿ- 5, ಇತರರು- 5 ಪುರಸಭೆಗಳಲ್ಲಿ ಅಧಿಕಾರ ಹಿಡಿದ್ದಾರೆ. ಉಳಿದ 10 ಪುರಸಭೆಗಳಲ್ಲಿ ಅತಂತ್ರ ಫಲಿತಾಂಶ ಎದುರಾಗಿದೆ.

ಇನ್ನು 5 ನಗರಸಭೆಗಳ ಪೈಕಿ ಬಿಜೆಪಿ- 3 (ಚಿಕ್ಕಮಗಳೂರು, ಹೆಬ್ಬಗೋಡಿ, ಗದಗ-ಬೆಟಗೇರಿ) ನಗರ ಸಭೆಗಳಲ್ಲಿ ಅಧಿಕಾರ ಪಡೆದಿದೆ. ಕಾಂಗ್ರೆಸ್‌ ಮತ್ತು ಜೆಡಿಎಸ್‌ ಯಾವುದೇ ನಗರಸಭೆಯಲ್ಲಿ ಬಹುಮತ ಪಡೆಯಲು ಸಾಧ್ಯವಾಗಿಲ್ಲ.  2 ನಗರಸಭೆ (ಶಿರಾ, ಹೊಸಪೇಟೆ)ಗಳಲ್ಲಿ ಅತಂತ್ರ ಪರಿಸ್ಥಿತಿ ಇದೆ.

ಸಿಎಂ ಬಸವರಾಜ ಬೊಮ್ಮಾಯಿ ಅವರ ತವರು ಕ್ಷೇತ್ರದಲ್ಲೇ ಬಿಜೆಪಿ ಮುಖಭಂಗ ಎದುರಿಸಿದ್ದು, ಹಾವೇರಿ ಜಿಲ್ಲೆಯ ಬಂಕಾಪುರ ಪುರಸಭೆ ಮತ್ತು ಗುತ್ತಲ ಪಟ್ಟಣ ಪಂಚಾಯಿತಿಗಳಲ್ಲಿ ಕಾಂಗ್ರೆಸ್ ಅಧಿಕಾರ ಹಿಡಿದಿದೆ.

ಬಂಕಾಪುರ ಪುರಸಭೆಯಲ್ಲಿರುವ ಒಟ್ಟು 23 ಸ್ಥಾನಗಳ ಪೈಕಿ ಕಾಂಗ್ರೆಸ್- 14, ಬಿಜೆಪಿ- 7, ಪಕ್ಷೇತರರು- 2 ಸ್ಥಾನ ಗೆದ್ದಿದ್ದಾರೆ. ಇನ್ನು, ಗುತ್ತಲ ಪಟ್ಟಣ ಪಂಚಾಯಿತಿಯಲ್ಲಿರುವ ಒಟ್ಟು 18 ಸ್ಥಾನಗಳ ಪೈಕಿ ಕಾಂಗ್ರೆಸ್‌- 11, ಬಿಜೆಪಿ- 6, ಪಕ್ಷೇತರರು- 1 ಸ್ಥಾನಗಳಲ್ಲಿ ಗೆಲುವುಸಾಧಿಸಿದ್ದಾರೆ.

ಕಾಂಗ್ರೆಸ್‌ ಮತ್ತು ಜೆಡಿಎಸ್‌ ನಡುವೆ ಜಿದ್ದಾಜಿದ್ದಿನ ಕಣವಾಗಿದ್ದ ಬಿಡದಿ ಪುರಸಭೆಯಲ್ಲಿ ಜೆಡಿಎಸ್‌ ಅಧಿಕಾರ ಪಡೆದುಕೊಂಡಿದೆ. ಬಿಜೆಪಿ ಎಲ್ಲಾ ಕ್ಷೇತ್ರಗಳಲ್ಲಿಯೂ ಠೇವಣಿ ಕಳೆದುಕೊಂಡು ಮುಖಭಂಗ ಅನುಭವಿಸಿದೆ. 

ಬಿಡದಿ ಪುರಸಭೆಯ ಒಟ್ಟು 23 ವಾರ್ಡುಗಳ ಪೈಕಿ ಜೆಡಿಎಸ್ 14 ವಾರ್ಡುಗಳಲ್ಲಿ, ಕಾಂಗ್ರೆಸ್ 9 ವಾರ್ಡುಗಳಲ್ಲಿ ಗೆದ್ದಿವೆ. ಬಿಜೆಪಿ 12 ವಾರ್ಡ್‌ಗಳಲ್ಲಿ ಸ್ಪರ್ಧಿಸಿತ್ತು, 12 ವಾರ್ಡುಗಳಲ್ಲಿಯೂ ಠೇವಣಿ ಕಳೆದುಕೊಂಡಿದೆ.


ಇದನ್ನೂ ಓದಿ: ಜೈಲುಗಳಲ್ಲೂ ಜಾತಿಭೇದ ಮೆರೆದಿರುವ ಮನುವಾದ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

LEAVE A REPLY

Please enter your comment!
Please enter your name here

- Advertisment -

Must Read

ಹಾಸನ ಪೆನ್‌ಡ್ರೈವ್ ಪ್ರಕರಣ: ಎಸ್‌ಐಟಿ ರಚಿಸಲು ಕೋರಿ ಮಹಿಳಾ ಆಯೋಗದಿಂದ ಸಿಎಂಗೆ ಪತ್ರ

0
ಹಾಸನ ಜಿಲ್ಲೆಯಲ್ಲಿ ಹರಿದಾಡುತ್ತಿರುವ ಪೆನ್‌ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗೆ ವಿಶೇಷ ತಂಡ ರಚನೆ ಮಾಡುವಂತೆ ಕೋರಿ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌದರಿ ಅವರು ಸಿಎಂ ಸಿದ್ದರಾಮಯ್ಯ, ಗೃಹ ಸಚಿವ...