Homeಮುಖಪುಟರಾಜ್ಯ ಸ್ಥಳೀಯ ಸಂಸ್ಥೆ ಚುನಾವಣೆ: ದೊಡ್ಡ ಪಕ್ಷಗಳನ್ನು ಎದುರಿಸಲು ಸಿದ್ಧವಾಗಿವೆ ಸಣ್ಣ ಪಕ್ಷಗಳು

ರಾಜ್ಯ ಸ್ಥಳೀಯ ಸಂಸ್ಥೆ ಚುನಾವಣೆ: ದೊಡ್ಡ ಪಕ್ಷಗಳನ್ನು ಎದುರಿಸಲು ಸಿದ್ಧವಾಗಿವೆ ಸಣ್ಣ ಪಕ್ಷಗಳು

- Advertisement -
- Advertisement -

ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್ ಮೂರು ಪ್ರಮುಖ ಪಕ್ಷಗಳು ಪ್ರಾಬಲ್ಯವಿರುವ ರಾಜಕೀಯ ಕಣವಾಗಿರುವ ಕರ್ನಾಟಕದಲ್ಲಿ ಯಾವುದೇ ಆಧಾರವಿಲ್ಲದ ಸಣ್ಣ ಪಕ್ಷಗಳು, ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ತಮ್ಮ ನೆಲೆಯನ್ನು ಕಂಡುಕೊಳ್ಳಲು ಸಿದ್ದತೆ ನಡೆಸುತ್ತಿವೆ.

ಸೆಪ್ಟೆಂಬರ್‌ ತಿಂಗಳಲ್ಲಿ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗಳು ಆರಂಭವಾಗಲಿದ್ದು, ಬೆಳಗಾವಿ, ಹುಬ್ಬಳ್ಳಿ-ಧಾರವಾಡ ಮತ್ತು ಕಲಬುರಗಿ ನಗರ ಪಾಲಿಕೆಗಳಿಗೆ ಸೆಪ್ಟೆಂಬರ್ 3 ರಂದು ಚುನಾವಣೆ ನಡೆಯಲಿದೆ. ಅಲ್ಲಿಂದ ಬೆಂಗಳೂರಿನಲ್ಲಿ ವರ್ಷಾಂತ್ಯದಲ್ಲಿ ಬಿಬಿಎಂಪಿ ಚುನಾವಣೆ ನಡೆಯಲಿದೆ.

ಆಮ್ ಆದ್ಮಿ ಪಕ್ಷ (ಎಎಪಿ) ಮೊದಲ ಬಾರಿಗೆ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. “ನಾವು ಸ್ಥಳದ ಐತಿಹಾಸಿಕ ಮಹತ್ವವನ್ನು ಎತ್ತಿ ತೋರಿಸುವ ಮೂಲಕ ವಿಶ್ವ ದರ್ಜೆಯ ನಗರಗಳ ನಿರ್ಮಾಣದ ಭರವಸೆಯನ್ನು ಹೊಂದಿದ್ದೇವೆ. ಮಹಿಳೆಯರು ಮತ್ತು ಯುವಕರ ಮತಗಳನ್ನು ಪಡೆಯಲು ಯೋಜನೆಗಳನ್ನು ರೂಪಿಸುತ್ತಿದ್ದೇವೆ. ಅಸಾದುದ್ದೀನ್ ಓವೈಸಿ ನೇತೃತ್ವದ ಎಐಎಂಐಎಂ ಅಲ್ಪಸಂಖ್ಯಾತರ ಮತಗಳನ್ನು ವಿಭಜಿಸಲು ಚುನಾವಣೆಯಲ್ಲಿ ಸ್ಪರ್ಧಿಸುತ್ತಿರಬಹುದು, ಆದರೆ ನಾವು ಎಲ್ಲರನ್ನೂ ಒಳಗೊಳ್ಳುವ ರಾಜಕೀಯಕ್ಕಾಗಿ ಕಣಕ್ಕಿಳಿಯಲಿದ್ದೇವೆ” ಎಂದು ಎಎಪಿ ರಾಜ್ಯ ಸಂಚಾಲಕ ಪೃಥ್ವಿ ರೆಡ್ಡಿ ಹೇಳಿದ್ದಾರೆ.

ಇದನ್ನೂ ಓದಿ: ವಿದ್ಯುತ್ ಮಸೂದೆ 2021; ಕೃಷಿಗೆ ಮತ್ತು ವಿದ್ಯುತ್ ವಲಯದ ಕಾರ್ಮಿಕರಿಗೆ ಮಾರಕ

ಕಲಬುರಗಿ ಮತ್ತು ಹುಬ್ಬಳ್ಳಿ-ಧಾರವಾಡ ನಗರ ಪಾಲಿಕೆಗಳ  ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಎಂಟು ವಾರ್ಡ್‌ಗಳಲ್ಲಿ ಬಹುಜನ ಸಮಾಜ ಪಕ್ಷ (ಬಿಎಸ್‌ಪಿ) ಕೂಡ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. “ನಾವು ಪಕ್ಷದ ಬದ್ದತೆಯ ಕಾರ್ಯಕರ್ತರು. ಕೊಳ್ಳೇಗಾಲದ ಶಾಸಕ ಎನ್ ಮಹೇಶ್ ಅವರ ಉಚ್ಚಾಟಣೆಯಿಂದ ಪಕ್ಷವು ಶುದ್ದೀಕರಣಗೊಂಡಿದೆ. ಇದರಿಂದಾಗಿಜನರು ನಮ್ಮನ್ನು ಆರ್ಶೀವದಿಸುತ್ತಾರೆ” ಎಂದು ಬಿಎಸ್‌ಪಿ ರಾಜ್ಯಾಧ್ಯಕ್ಷ ಡಾ. ಕೃಷ್ಣಮೂರ್ತಿ ಹೇಳಿದ್ದಾರೆ.

“ಬಿಎಸ್‌ಪಿ ನಿರ್ದಿಷ್ಟ ಸಮುದಾಯದ ಮತಗಳ ವಿಭಜನೆ ಮಾಡುತ್ತದೆ ಎಂಬುದು ಅಪ್ರಸ್ತುತ. ಬದಲಾಗಿ, ಹಿಂದಿನ ಆಡಳಿತಗಳಲ್ಲಿ ಬಹುಜನರ (ಎಸ್‌ಸಿ, ಎಸ್‌ಟಿ ಮತ್ತು ಒಬಿಸಿ) ಜೀವನವು ಹೇಗೆ ಸುಧಾರಿಸಿಲ್ಲ ಎಂಬುದನ್ನು ಬಿಎಸ್‌ಪಿ ಎತ್ತಿ ತೋರಿಸುತ್ತದೆ” ಎಂದು ಹೇಳಿದ್ದಾರೆ.

ಬಿಎಸ್‌ಪಿ ಪಕ್ಷವು ರಾಜ್ಯದಾದ್ಯಂತ ತನ್ನ ಕಾರ್ಯಕರ್ತರಿಗಾಗಿ ಸರಣಿ ಕಾರ್ಯಾಗಾರಗಳನ್ನು ನಡೆಸುತ್ತಿದೆ ಎಂದು ವರದಿಯಾಗುತ್ತಿದೆ. ಪಕ್ಷವು 2018 ರ ವಿಧಾನಸಭಾ ಚುನಾವಣೆಯಲ್ಲಿ ಕೊಳ್ಳೇಗಲ ಕ್ಷೇತ್ರವನ್ನು ಗೆಲ್ಲುವ ಮೂಲಕ ತನ್ನ ಮೊದಲ ಗೆಲುವನ್ನು ದಾಖಲಿಸುವಲ್ಲಿ ಯಶಸ್ವಿಯಾಗಿದೆ.

2004ರಲ್ಲಿ, ಪಕ್ಷದ ನಾಯಕಿ ಮಾಯಾವತಿ ಅವರ ಪ್ರಭಾವ ಉತ್ತುಂಗದಲ್ಲಿದ್ದಾಗ, ಬಿಎಸ್‌ಪಿ ಪಕ್ಷವು ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕೇವಲ 2.5% ಮತಗಳನ್ನು ಗಳಿಸುವ ಮೂಲಕ, ಸುಮಾರು 45 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷದ ಭವಿಷ್ಯದ ಮೇಲೆ ಪ್ರಭಾವ ಬೀರಿದೆ ಎಂದು ಹೇಳಲಾಗಿದೆ.

ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ (ಆರ್‌ಪಿಐ), ಕೇಂದ್ರ ಸಾಮಾಜಿಕ ನ್ಯಾಯ ಖಾತೆ ರಾಜ್ಯ ಸಚಿವ ರಾಮದಾಸ್ ಅಠಾವಾಳೆ, ಎಂ.ವೆಂಕಟಸ್ವಾಮಿ ನೇತೃತ್ವದಲ್ಲಿ ರಾಜ್ಯಾದ್ಯಂತ ತಮ್ಮ ಕಾರ್ಯಕರ್ತರನ್ನು  ಸಂಘಟಿಸುತ್ತಿದ್ದಾರೆ. ನಗರ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶವು ಬಿಬಿಎಂಪಿ ಚುನಾವಣೆ ಮತ್ತು ಮುಂದಿನ ವಿಧಾನಸಭಾ ಚುನಾವಣೆಗಳಿಗೆ ಮೆಟ್ಟಿಲಾಗಲಿವೆ. ಅಲ್ಲದೆ, ಈ ಸಣ್ಣ ಪಕ್ಷಗಳು ಯಾರ ಭವಿಷ್ಯವನ್ನು ಕಸಿದುಕೊಳ್ಳುತ್ತವೆ ಎಂಬುದರ ಬಗ್ಗೆ ಸುಳಿವು ನೀಡಬಹುದು.


ಇದನ್ನೂ ಓದಿ: ಸರ್ಕಾರಿ ಕಚೇರಿಗಳ ಹಲವು ಸಮಸ್ಯೆಗಳನ್ನು ಬಯಲಿಗೆಳೆಯುತ್ತಿರುವ KRS ಪಕ್ಷ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಸ್ಪರ್ಧೆಯ ಬಗ್ಗೆ ಯಾಕೆ ಉಲ್ಲೇಖಿಸಿಲ್ಲ?

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...