Homeಮುಖಪುಟಮತದಾನಕ್ಕೆ ಹಣ ನೀಡುವಂತೆ ಆಗ್ರಹಿಸಿ ಸ್ಥಳೀಯರಿಂದ ಪ್ರತಿಭಟನೆ: ವಿಚಿತ್ರ ಘಟನೆ

ಮತದಾನಕ್ಕೆ ಹಣ ನೀಡುವಂತೆ ಆಗ್ರಹಿಸಿ ಸ್ಥಳೀಯರಿಂದ ಪ್ರತಿಭಟನೆ: ವಿಚಿತ್ರ ಘಟನೆ

- Advertisement -
- Advertisement -

ಆಂಧ್ರಪ್ರದೇಶದ ಹಲವೆಡೆ ಮತದಾನಕ್ಕೆ ನಮಗೆ ಹಣ ಕೊಟ್ಟಿಲ್ಲ ಎಂದು ಜನರು ಬೀದಿಗಿಳಿದು ಪ್ರತಿಭಟನೆ ನಡೆಸಿರುವ ವಿಚಿತ್ರ ಘಟನೆ ನಡೆದಿದೆ. ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗೆ ಇಂದು ಆಂಧ್ರದಲ್ಲಿ ಮತದಾನ ನಡೆಯುತ್ತಿದ್ದು, ಚುನಾವಣೆಯ ಪಾರದರ್ಶಕತೆಯ ಬಗ್ಗೆ ಪ್ರಶ್ನೆ ಉದ್ಭವಿಸಿದೆ.

ಎನ್‌ಡಿಎ ಪ್ರಚಾರ ಸಭೆಗೆ 500ರೂ.ಹಣದ ಆಮಿಷ ನೀಡಿ ಕರೆದುಕೊಂಡು ಬಂದು ಹಣ ಕೊಡದೆ ವಂಚನೆ ಮಾಡಲಾಗಿದೆ ಎಂದು ಮಹಿಳೆಯರು ಮಹರಾಷ್ಟ್ರದ ಔರಂಗಾಬಾದ್‌ನಲ್ಲಿ ಇತ್ತೀಚೆಗೆ ಆರೋಪಿಸಿದ್ದರು. ಇದೀಗ ಆಂಧ್ರಪ್ರದೇಶದ ಪಲಂಡು ಜಿಲ್ಲೆಯ ಸತ್ತೇನಪಲ್ಲಿಯಲ್ಲಿ ಸ್ಥಳೀಯ ನಿವಾಸಿಗಳು ಮತದಾನಕ್ಕೆ ಮೊದಲು ಭರವಸೆ ನೀಡಿದ ಲಂಚದ ಹಣ ನಮಗೆ ಬಂದಿಲ್ಲ ಎಂದು ಪ್ರತಿಭಟನೆ ನಡೆಸಿದ್ದಾರೆ.

ನಿರ್ದಿಷ್ಟ ಅಭ್ಯರ್ಥಿಗೆ ಮತ ಹಾಕಲು ಹಣ ನೀಡುವುದಾಗಿ ಮುಖಂಡರೊಬ್ಬರು ಭರವಸೆ ನೀಡಿದ್ದಾರೆ. ಆದರೆ, ಭರವಸೆ ಈಡೇರಿಸುವಲ್ಲಿ ಅವರು ವಿಫಲರಾಗಿದ್ದಾರೆ ಎಂದು ಮಹಿಳೆಯರು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದಾರೆ. ಆಂಧ್ರದ ಕನಿಷ್ಠ ಐದು ಕಡೆ ಈ ರೀತಿಯ ಬೆಳವಣಿಗೆ ನಡೆದಿದೆ. ಆಂಧ್ರ ಪ್ರದೇಶದಲ್ಲಿಇದು ಹೊಸ ಬೆಳವಣಿಗೆಯಲ್ಲದಿದ್ದರೂ, ವಿಧಾನಸಭಾ ಮತ್ತು ಲೋಕಸಭಾ ಕ್ಷೇತ್ರಗಳಲ್ಲಿ ಒಂದು ಮತಕ್ಕೆ ಒಂದು ಸಾವಿರದಿಂದ 6,000 ರೂ.ವರೆಗೆ ಬೆಲೆ ನಿಗದಿ ಮಾಡಲಾಗಿದೆ ಎನ್ನಲಾಗಿದೆ.

ಈ ಘಟನೆಯು ಚುನಾವಣಾ ಪ್ರಕ್ರಿಯೆಯ ಪಾರದರ್ಶಕತೆ ಮತ್ತು ರಾಜಕಾರಣಿಗಳ ಹೊಣೆಗಾರಿಕೆಯ ಬಗ್ಗೆ ಪ್ರಶ್ನೆಯನ್ನು ಹುಟ್ಟುಹಾಕಿದೆ. ಅಧಿಕಾರಿಗಳು ಈ ವಿಷಯದ ಬಗ್ಗೆ ಪ್ರತಿಕ್ರಿಯಿಸಲು ಇನ್ನೂ ಮುಂದಾಗಿಲ್ಲ, ಆದರೆ ಪ್ರತಿಭಟನೆಯು ಚುನಾವಣೆಯಲ್ಲಿ ಪಾರದರ್ಶಕತೆ ಮತ್ತು ನೈತಿಕ ನಡವಳಿಕೆಯ ಅಗತ್ಯತೆಯ ಬಗ್ಗೆ ಗಮನ ಸೆಳೆದಿದೆ.

ಪೀತಂಪುರಂನಲ್ಲಿ ಅಭ್ಯರ್ಥಿಗಳ ಕಚೇರಿಗಳ ಮುಂದೆ ಮತದಾರರು ಹಣಕ್ಕಾಗಿ ಪ್ರತಿಭಟನೆ ನಡೆಸಿದ್ದಾರೆ. ಪಕ್ಷದ ಬೆಂಬಲಿಗರು ಪ್ರತಿ ಮತಕ್ಕೆ 5,000 ರೂ. ನೀಡುವ ಭರವಸೆ ನೀಡಿದ್ದು, ಮಹಿಳಾ ಮತದಾರರಿಗೆ ಹಣ ನೀಡಿಲ್ಲ ಎಂದು ಪ್ರತಿಭಟನೆ ನಡೆದಿದೆ. ಈ ವೇಳೆ ಗುಂಪು ಚದುರಿಸಲು ಪೊಲೀಸರು ಮಧ್ಯಪ್ರವೇಶಿಸಿದ್ದಾರೆ.

ಓಂಗೋಲ್‌ನಲ್ಲಿ ಪ್ರತಿ ಮತಕ್ಕೆ 5 ಸಾವಿರ ರೂ.ನಂತೆ ಹಣ ವಿತರಿಸಲಾಗಿದೆ. ಆದರೆ ಹಣ ಸಿಗದವರು ಪ್ರತಿಭಟನೆ ನಡೆಸಿದ್ದಾರೆ. ಇದಲ್ಲದೆ ಪೂರ್ವ ಗೋದಾವರಿ ಜಿಲ್ಲೆಯ ಕೊಂಡೇವರಂ ಗ್ರಾಮದಲ್ಲಿ ಮತದಾನ ಮಾಡಲು ಹಣಕ್ಕೆ ಬೇಡಿಕೆ ಇಟ್ಟು ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದಾರೆ. ವಿಜಯವಾಡದಲ್ಲೂ ಇದೇ ರೀತಿಯ ಬೆಳವಣಿಗೆ ಕಂಡು ಬಂದಿದ್ದು, ಪಾಲಿಕೆ ಸದಸ್ಯರ ಮನೆಯಲ್ಲಿ ಪ್ರತಿ ಮತಕ್ಕೆ ಒಂದು ಸಾವಿರ ರೂಪಾಯಿಯಂತೆ ವಿತರಿಸಲಾಗಿದೆ ಎಂದು ಹೇಳಲಾಗಿದೆ.

ಆಂಧ್ರಪ್ರದೇಶದಲ್ಲಿ ಇಂದು ಲೋಕಸಭೆಗೆ ಮತ್ತು ರಾಜ್ಯ ವಿಧಾನಸಭೆಗೆ ಮತದಾನ ನಡೆಯುತ್ತಿದೆ. ರಾಜ್ಯದ ಕೆಲವು ಮತಗಟ್ಟೆಗಳಲ್ಲಿ ಹಿಂಸಾಚಾರ ವರದಿಯಾಗಿದೆ. ಆಂಧ್ರಪ್ರದೇಶದ ಮುಖ್ಯ ಚುನಾವಣಾಧಿಕಾರಿ(ಸಿಇಒ) ಮುಕೇಶ್ ಕುಮಾರ್ ಮೀನಾ ಮಾತನಾಡಿ, ಚಿತ್ತೂರು ಜಿಲ್ಲೆಯಲ್ಲಿ ಅಪಹರಣಕ್ಕೊಳಗಾದ ಮೂವರು ಟಿಡಿಪಿ ಪೋಲಿಂಗ್ ಏಜೆಂಟ್‌ಗಳನ್ನು ಪತ್ತೆ ಹಚ್ಚಲಾಗಿದೆ ಎಂದು ಹೇಳಿದ್ದಾರೆ.

ಇದನ್ನು ಓದಿ: ಮೋದಿ ಕೈಗೆ ಮತ್ತೆ ಅಧಿಕಾರ ಕೊಟ್ಟರೆ ಬಡವರು, ದಲಿತರನ್ನು ಗುಲಾಮರಂತೆ ನಡೆಸಿಕೊಳ್ಳುತ್ತಾರೆ: ಮಲ್ಲಿಕಾರ್ಜುನ ಖರ್ಗೆ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...