Homeಮುಖಪುಟಲಾಕ್‌ಡೌನ್ 5.0: ದೇಶದಾದ್ಯಂತ ಜೂನ್ 30 ವರೆಗೆ ವಿಸ್ತರಣೆ

ಲಾಕ್‌ಡೌನ್ 5.0: ದೇಶದಾದ್ಯಂತ ಜೂನ್ 30 ವರೆಗೆ ವಿಸ್ತರಣೆ

- Advertisement -
- Advertisement -

ಲಾಕ್‌ಡೌನ್ ಅನ್ನು ಜೂನ್ 30 ರವರೆಗೆ ವಿಸ್ತರಿಸಿ ಕೇಂದ್ರ ಗೃಹ ಸಚಿವಾಲಯ ಆದೇಶ ಹೊರಡಿಸಿದೆ. ಆದರೆ ಈ  ಲಾಕ್​ಡೌನ್ ಕಂಟೈನ್‌ಮೆಂಟ್ ಝೋನ್‌ಗಳಿಗೆ ಮಾತ್ರ ಅನ್ವಯಿಸಲಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಜೂನ್ 8 ರಿಂದ ಧಾರ್ಮಿಕ ಸ್ಥಳಗಳು, ಮಾಲ್, ರೆಸ್ಟೋರೆಂಟ್‌ಗಳನ್ನು ತೆರೆಯಲು ಅವಕಾಶ ನೀಡಲಾಗಿದೆ. ರಾತ್ರಿ 9 ಗಂಟೆಯಿಂದ ಬೆಳಗ್ಗೆ 5 ಗಂಟೆವರೆಗೆ ಕರ್ಫ್ಯೂ ಜಾರಿಯಲ್ಲಿರಲಿದೆ ಎಂದು ಗೃಹ ಸಚಿವಾಲಯ ತನ್ನ ಹೊಸ ಮಾರ್ಗಸೂಚಿಯಲ್ಲಿ ತಿಳಿಸಿದೆ.

ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳೊಂದಿಗೆ ನಡೆಸಿದ ವ್ಯಾಪಕ ಸಮಾಲೋಚನೆಗಳ ಆಧಾರದ ಮೇಲೆ ಹೊಸ ಮಾರ್ಗಸೂಚಿಗಳನ್ನು ನೀಡಲಾಗಿದ್ದು, ಶಾಲೆಗಳೊಂದಿಗೆ ಸಮಾಲೋಚಿಸಿದ ನಂತರ ಜುಲೈನಲ್ಲಿ ಶಾಲೆಗಳನ್ನು ಮತ್ತೆ ತೆರೆಯುವ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದಿದೆ.

ಭಾರತದಲ್ಲಿ ಇದುವರೆಗು 174,000 ಕೊರೊನಾ ಪ್ರಕರಣಗಳು ವರದಿಯಾಗಿದ್ದು, 4,971 ಸಾವುಗಳು ಸೋಂಕಿನಿಂದ ಸಂಭವಿಸಿದೆ. ಭಾರತದಲ್ಲಿ ಇದುವರೆಗೂ 82,369 ಜನರು ಚೇತರಿಸಿಕೊಂಡಿದ್ದಾರೆ.


ಓದಿ: ಹಿಂದೂ ರಾಷ್ಟ್ರೀಯವಾದದ ವಿಜೃಂಭಣೆಯೇ ಮೋದಿ ಸರ್ಕಾರದ ಸಾಧನೆ!


ವಿಡಿಯೋ ನೋಡಿ:  ಬಿಜೆಪಿಯೇನೋ ದ್ರೋಹ ಮಾಡಿತು; ಆದರೆ ಕಾಂಗ್ರೆಸ್ಸೇಕೆ ಕೈ ಬಿಟ್ಟಿತು?

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ‘ರೋಹಿತ್ ವೇಮುಲಾ ಕಾಯ್ದೆ’ ಜಾರಿ: ಕೆ.ಸಿ ವೇಣುಗೋಪಾಲ್

0
ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಶಿಕ್ಷಣ ಸಂಸ್ಥೆಗಳಲ್ಲಿನ ಜಾತಿ ಮತ್ತು ಕೋಮು ದೌರ್ಜನ್ಯ ತಡೆಯಲು 'ರೋಹಿತ್ ವೇಮುಲಾ ಕಾಯ್ದೆ ಜಾರಿಗೊಳಿಸಲಾಗುವುದು ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಭರವಸೆ ನೀಡಿದ್ದಾರೆ. ಸಾಮಾಜಿಕ ಮತ್ತು...