Homeಮುಖಪುಟಮತ್ತೆರಡು ವಾರ ಲಾಕ್ ಡೌನ್ ಮುಂದುವರಿಕೆ: ಹಸಿರು ವಲಯಗಳಲ್ಲಿ ವಾಹನ ಓಡಾಟಕ್ಕೆ ಅವಕಾಶ

ಮತ್ತೆರಡು ವಾರ ಲಾಕ್ ಡೌನ್ ಮುಂದುವರಿಕೆ: ಹಸಿರು ವಲಯಗಳಲ್ಲಿ ವಾಹನ ಓಡಾಟಕ್ಕೆ ಅವಕಾಶ

- Advertisement -
- Advertisement -

ಕೊರೊನ ಲಾಕ್ ಡೌನ್ ವಿಸ್ತರಿಸಿ ಕೇಂದ್ರ ಗೃಹ ಸಚಿವಾಲಯ ಘೋಷಣೆ ಮಾಡಿದೆ. ಹಾಗೆಯೇ ದೇಶವನ್ನು ಕೆಂಪು, ಕಿತ್ತಳೆ ಮತ್ತು ಹಸಿರು ಎಂದು ಮೂರು ವಲಯಗಳನ್ನಾಗಿ ವಿಂಗಡಿಸಿದೆ. ಕೆಂಪು ವಲಯದಲ್ಲಿ ಅಗತ್ಯವಸ್ತು ಗಳನ್ನು ಬಿಟ್ಟರೆ ಇತರೆ ಯಾವುದೇ ಚಟುವಟಿಕೆ ನಡೆಸಲು ಅವಕಾಶ ನೀಡಿಲ್ಲ.

ಮುಂದಿನ ಎರಡು ವಾರವೂ ವಿಮಾನಯಾನ, ರೈಲ್ವೆ ಮತ್ತು ಸಾರಿಗೆಯ ಅಂತಾರಾಜ್ಯ ಸಂಚಾರವನ್ನು ನಿರ್ಬಂಧಿಸಿ ಕೇಂದ್ರ ಗೃಹ ಸಚಿವಾಲಯ ಆದೇಶಿಸಿದೆ. ಶಿಕ್ಷಣ ಸಂಸ್ಥೆಗಳು, ಹೋಟೆಲ್, ಮಾಲ್ ಗಳು ಮತ್ತು ರೆಸ್ಟೋರೆಂಟ್ ಗಳು ಈ ಅವಧಿಯಲ್ಲಿ ಎಲ್ಲಾ ವಲಯಗಳಲ್ಲೂ ತೆರೆಯುವಂತಿಲ್ಲ.

ಕೆಂಪು, ಕಿತ್ತಳೆ ಮತ್ತು ಹಸಿರು ವಲಯಗಳಲ್ಲಿ ಸಾರ್ವಜನಿಕ ಸಭೆ ಸಮಾರಂಭಗಳನ್ನು ನಡೆಸಲು ನಿರ್ಬಂಧ ಹೇರಲಾಗಿದೆ. ಸಾಮಾಜಿಕ, ರಾಜಕೀಯ ಮತ್ತು ಧಾರ್ಮಿಕ ಕಾರ್ಯಕ್ರಮಗಳನ್ನು ನಡೆಸುವಂತಿಲ್ಲ ಎಂದು ಅಧೇಶದಲ್ಲಿ ಹೇಳಿದೆ.

ಕೆಂಪು ವಲಯದಲ್ಲಿ ಮನೆಯಿಂದ ಯಾರೂ ಅನಗತ್ಯವಾಗಿ ಹೊರಬರುವಂತಿಲ್ಲ ಮತ್ತು 65 ವರ್ಷದ ನಾಗರಿಕರು ಗರ್ಭಿಣಿಯರು ಮತ್ತು 10 ವರ್ಷದೊಳಗಿನ ಮಕ್ಕಳು ಮನೆಯಲ್ಲೇ ಇರುವುದು ಕಡ್ಡಾಯ ಎಂದು ತಿಳಿಸಲಾಗಿದೆ. ಅಷ್ಟೇ ಅಲ್ಲ ಕಟ್ಟಡ ನಿರ್ಮಾಣ, ನವೀಕರಣ ಮೊದಲಾದ ಅನಗತ್ಯ ಕೆಲಸಗಳನ್ನು ನಿರ್ಬಂಧಿಸಲಾಗಿದೆ.

ಕಿತ್ತಳೆ ಮತ್ತು ಹಸಿರುವ ವಲಯದಲ್ಲಿ ಟ್ಯಾಕ್ಸಿ ಸಂಚಾರ ಇದ್ದು ಒಬ್ಬ ಪ್ರಯಾಣಿಕ ಪ್ರಯಾಣ ಮಾಡಬಹುದು. ಬೈಕ್ ಮತ್ತು ಕಾರುಗಳ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ. ದಿನಸಿ ಅಂಗಡಿಗಳು ಸೇರಿದಂತೆ ಇತರೆ ಚಟುವಟಿಕೆಗಳು ಮುಂದುವರಿಯಲಿವೆ. ಹಸಿರು ವಲಯದಲ್ಲಿ ಸಾಕಷ್ಟು ಸಡಿಲಿಕೆಯನ್ನು ಮಾಡಲಾಗಿದೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ರಾಹುಲ್ ಗಾಂಧಿಯನ್ನು ರಾಯ್ ಬರೇಲಿ ಜನರಿಗೆ ಕೊಡುತ್ತಿದ್ದೇನೆ; ಅವನು ನಿಮ್ಮನ್ನು ನಿರಾಸೆಗೊಳಿಸುವುದಿಲ್ಲ: ಸೋನಿಯಾ ಗಾಂಧಿ

0
'ನನ್ನ ಮಗನನ್ನು ರಾಯ್ ಬರೇಲಿಯ ಜನರಿಗೆ ನೀಡುತ್ತಿದ್ದೇನೆ; ರಾಹುಲ್ ಗಾಂಧಿ ನಿಮ್ಮನ್ನು ನಿರಾಶೆಗೊಳಿಸುವುದಿಲ್ಲ' ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು ಶುಕ್ರವಾರ ಹೇಳಿದ್ದಾರೆ. 20 ವರ್ಷಗಳ ಕಾಲ ಸಂಸದರಾಗಿ ಸೇವೆ ಸಲ್ಲಿಸಲು ಅವಕಾಶ ನೀಡಿದ...