Homeಮುಖಪುಟಲಾಕ್‌ಡೌನ್ ಎಫೆಕ್ಟ್‌: ಶಾಲೆಯಿಂದ ಹೊರಗುಳಿದ 10 ಲಕ್ಷ ಮಕ್ಕಳು!

ಲಾಕ್‌ಡೌನ್ ಎಫೆಕ್ಟ್‌: ಶಾಲೆಯಿಂದ ಹೊರಗುಳಿದ 10 ಲಕ್ಷ ಮಕ್ಕಳು!

- Advertisement -
- Advertisement -

ಕೊರೊನಾ ಲಾಕ್‌ಡೌನ್ ಪರಿಣಾಮದಿಂದಾಗಿ ಬಿಹಾರದ ವಿವಿಧ ಜಿಲ್ಲೆಗಳ ಸುಮಾರು 10 ಲಕ್ಷ ಮಕ್ಕಳು ಶಾಲೆಯಿಂದ ಹೊರಗುಳಿಯುವಂತಾಗಿದೆ ಎಂದು ರಾಜ್ಯದ ಅಧಿಕೃತ ಅಂಕಿಅಂಶಗಳಿಂದ ಬಹಿರಂಗವಾಗಿದೆ.

ಸರ್ಕಾರಿ ಶಾಲೆಗಳಲ್ಲಿ 5 ರಿಂದ 6 ನೇ ತರಗತಿಗೆ ದಾಖಲಾದ 6 ಲಕ್ಷ ಮಕ್ಕಳು, 8 ಮತ್ತು 9 ನೇ ತರಗತಿಯ 4 ಲಕ್ಷ ಮಕ್ಕಳು ಶಾಲೆಗಳನ್ನು ತೊರೆದಿದ್ದಾರೆ ಎಂದು ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಈ ವಿದ್ಯಾರ್ಥಿಗಳನ್ನು ಮತ್ತೆ ತರಗತಿಗಳಿಗೆ ಕರೆತರಲು ಬಿಹಾರ ಸರ್ಕಾರದ ಶಿಕ್ಷಣ ಇಲಾಖೆ ಏಪ್ರಿಲ್ 1 ರಿಂದ ರಾಜ್ಯಾದ್ಯಂತ ‘ದಾಖಲಾತಿ ಪ್ರಕ್ರಿಯೆ’ ಪ್ರಾರಂಭಿಸಲು ನಿರ್ಧರಿಸಿದೆ.

ಈ ಮಾಹಿತಿಯನ್ನು ಪ್ರಕಟಿಸಿದ ಪ್ರಾಥಮಿಕ ಶಿಕ್ಷಣ ವಿಭಾಗದ ನಿರ್ದೇಶಕ ಡಾ.ರಂಜಿತ್ ಕೆ ಸಿಂಗ್, “ಎಲ್ಲಾ ಡ್ರಾಪ್‌ ಔಟ್‌ಗಳನ್ನು ಮತ್ತೆ ಶಾಲೆಗೆ ಕರೆತರುವ ವಿಶೇಷ ದಾಖಲಾತಿ ಪ್ರಕ್ರಿಯೆಗೆ ಚಾಲನೆಯನ್ನು ಏಪ್ರಿಲ್‌ನಿಂದ ಕೈಗೊಳ್ಳಲಾಗುವುದು. ಪ್ರಾಥಮಿಕ ಹಂತದಿಂದ ಪ್ರೌಢ ಶಾಲಾ ಹಂತದ ಶಾಲಾ ಮುಖ್ಯೋಪಾಧ್ಯಾಯರಿಗೆ ವಿದ್ಯಾರ್ಥಿಗಳ ಹೊರಗುಳಿಯುವಿಕೆಯನ್ನು ಕಡಿಮೆ ಮಾಡಲು ದೊಡ್ಡ ಪ್ರಮಾಣದಲ್ಲಿ ದಾಖಲಾತಿ ಪ್ರಕ್ರಿಯೆಗೆ ಚಾಲನೆ ನೀಡುವ ಕೆಲಸವನ್ನು ನೀಡಲಾಗಿದೆ” ಎಂದು ಹೇಳಿದರು.

ಇದನ್ನೂ ಓದಿ: ತೆರೆಯದ ಸರ್ಕಾರಿ ವಸತಿ ಶಾಲೆಗಳು: 30,000 ಕ್ಕೂ ಹೆಚ್ಚು ಹಿಂದುಳಿದ ವರ್ಗದ ವಿದ್ಯಾರ್ಥಿಗಳ ಭವಿಷ್ಯ ಅತಂತ್ರ

“ಶಾಲೆಗಳಲ್ಲಿ ಎಲ್ಲಾ ವಿದ್ಯಾರ್ಥಿಗಳಿಗೆ ಸೇತುಬಂಧ-ಕೋರ್ಸ್‌ಗಳನ್ನು ನಡೆಸಲು ನಾವು ನಿರ್ಧರಿಸಿದ್ದೇವೆ, ರಾಜ್ಯದಲ್ಲಿ ಲಾಕ್‌ಡೌನ್ ಇದ್ದುದರಿಂದ ಪಾಠಗಳನ್ನು ಪೂರ್ಣಗೊಳಿಸಲು ಸಾಧ್ಯವಾಗಲಿಲ್ಲ. ಎಲ್ಲಾ ತರಗತಿಗಳಿಗೆ ಸೇತುಬಂಧ ಕೋರ್ಸ್ ಏಪ್ರಿಲ್ ಮತ್ತು ಜೂನ್ ನಡುವೆ ಮೂರು ತಿಂಗಳು ಮುಂದುವರಿಯಲಿದೆ” ಎಂದು ಅವರು ಹೇಳಿದರು.

ಕೊರೊನಾ ಸಾಂಕ್ರಾಮಿಕ ರೋಗವು ಶಿಕ್ಷಣ ಕ್ಷೇತ್ರದ ಮೇಲೆ ಅಗಾಧವಾದ ಪ್ರತಿಕೂಲ ಪರಿಣಾಮ ಬೀರಿದ್ದು, ಕಳೆದ ವರ್ಷ ಯಾವುದೇ ಶೈಕ್ಷಣಿಕ ಕಾರ್ಯಕ್ರಮಗಳೂ ಸಹ ಪೂರ್ಣಗೊಳ್ಳಲು ಸಾಧ್ಯವಾಗಿಲ್ಲ. ಲಾಕ್‌ಡೌನ್‌ನಿಂದ ಉಂಟಾದ ಸಮಸ್ಯೆಗಳನ್ನು ಖಾಸಗೀ ಶಾಲಾ ಕಾಲೇಜುಗಳು ಆನ್‌ಲೈನ್ ತರಗತಿಗಳ ಮೂಲಕ ಭರಿಸಿಕೊಂಡವು. ಆದರೆ ಸರ್ಕಾರಿ ಶಾಲೆಗಳಿಗೆ ಇದು ಸಾಧ್ಯವಾಗಲಿಲ್ಲ.

ದೇಶದಲ್ಲಿ ಹಲವು ಕಡೆ ಇನ್ನೂ ಕೂಡ 1 ರಿಂದ 8ನೇ ತರಗತಿಯವರೆಗ ಶಾಲೆಗಳು ಆರಂಭವಾಗಿಲ್ಲ. ಇದರಿಂದ ಶಾಲೆಯಿಂದ ಹೊರಗುಳಿಯುವಿಕೆಯ ಮಕ್ಕಳ ಸಂಖ್ಯೆ ಹೆಚ್ಚಾಗುತ್ತಿದೆ ಎಂದು ಸಾಕಷ್ಟು ತಜ್ಞರು ಕಳವಳ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: ಸಾವಿತ್ರಿ ಬಾಯಿ ಫುಲೆ ಸ್ಥಾಪಿಸಿದ ಮೊಟ್ಟಮೊದಲ ಹೆಣ್ಣು ಮಕ್ಕಳ ಶಾಲೆಯ ಸ್ಥಿತಿ ಹೇಗಿದೆ ಗೊತ್ತಾ?

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ರಾಜಸ್ಥಾನ: ಬಿಜೆಪಿ ಸರ್ಕಾರದ ಯೋಜನೆಯಲ್ಲಿ 1,140 ಕೋಟಿ ರೂ.ನಷ್ಟ: ತಮ್ಮದೇ ಸರಕಾರದ ವಿರುದ್ಧ ಆರೋಪಿಸಿದ...

0
ರಾಜಸ್ಥಾನದ ಬಿಜೆಪಿ ಸರಕಾರ ಅಧಿಕಾರಕ್ಕೇರಿದ ಆರು ತಿಂಗಳಲ್ಲೇ ಬಿಕ್ಕಟ್ಟನ್ನು ಎದುರಿಸುತ್ತಿದ್ದು, ಮುಖ್ಯಮಂತ್ರಿಯ ಅಧೀನದ ಇಲಾಖೆಯಲ್ಲಿನ ವಸತಿ ಯೋಜನೆಯಲ್ಲಿನ ಲೋಪದೋಷವನ್ನು ಕ್ಯಾಬಿನೆಟ್ ಸಚಿವರೋರ್ವರು ಬಹಿರಂಗಪಡಿಸಿದ್ದು, ಇದರಿಂದ ಸರಕಾರದ ಬೊಕ್ಕಸಕ್ಕೆ 1,146 ಕೋಟಿ ರೂ. ನಷ್ಟವಾಗಿದೆ...