Homeಕರೋನಾ ತಲ್ಲಣಲಾಕ್‌ಡೌನ್ ಎಫೆಕ್ಟ್: ಆಹಾರಕ್ಕಾಗಿ ಸಾಲ ಮಾಡಿದ 11 ರಾಜ್ಯಗಳ 45% ಜನ!

ಲಾಕ್‌ಡೌನ್ ಎಫೆಕ್ಟ್: ಆಹಾರಕ್ಕಾಗಿ ಸಾಲ ಮಾಡಿದ 11 ರಾಜ್ಯಗಳ 45% ಜನ!

ಕೇಂದ್ರ ಸರ್ಕಾರದ ಹೊಸ ಕೃಷಿ ಕಾನೂನುಗಳು ಸಾರ್ವಜನಿಕ ವಿತರಣಾ ವ್ಯವಸ್ಥೆಯ ಅಸ್ತಿತ್ವಕ್ಕೆ ಧಕ್ಕೆ ತರಲಿದ್ದು, ದೇಶದ ಹಸಿವಿನ ಪರಿಸ್ಥಿತಿಯನ್ನು ಇನ್ನಷ್ಟು ಹದಗೆಡಿಸುತ್ತದೆ ಎಂದು ವರದಿ ತಿಳಿಸಿದೆ.

- Advertisement -
- Advertisement -

ಕೊರೊನಾ ಸಾಂಕ್ರಾಮಿಕ ಹಿನ್ನೆಲೆಯಲ್ಲಿ ಏಕಾಏಕಿ ಘೋಷಣೆಯಾಗಿದ್ದ ಲಾಕ್‌ಡೌನ್ ಲಕ್ಷಾಂತರ ವಲಸೆ ಕಾರ್ಮಿಕರ ನೋವುಗಳಿಗೆ ಸಾಕ್ಷಿಯಾಗಿದೆ. ಕೊರೊನಾ ನಿಯಂತ್ರಣದ ಹೆಸರಲ್ಲಿ ಹೇರಲಾಗಿದ್ದ ಲಾಕ್‌ಡೌನ್ ಸಮಯದಲ್ಲಿ ದೇಶದ 11 ರಾಜ್ಯಗಳಲ್ಲಿ ಸುಮಾರು 45 ಪ್ರತಿಶತದಷ್ಟು ಜನರು ಆಹಾರಕ್ಕಾಗಿ ಸಾಲ ತೆಗೆದುಕೊಳ್ಳಬೇಕಾಗಿತ್ತು ಎಂಬ ಆತಂಕಕಾರಿ ವಿಚಾರ ಬಹಿರಂಗಗೊಂಡಿದೆ.

ಸಾಂಕ್ರಾಮಿಕ ಕೊರೊನಾ ಪ್ರೇರಿತ ಲಾಕ್‌ಡೌನ್‌ನಿಂದ ದೇಶದ 11 ರಾಜ್ಯಗಳಿಂದ ಸುಮಾರು 45 ಪ್ರತಿಶತದಷ್ಟು ಜನರು ಊಟ ಮಾಡಲು ಸಹ ಹಣವನ್ನು ಸಾಲ ಪಡೆಯಬೇಕಾಯಿತು ಎಂದು ಹಂಗರ್ ವಾಚ್ ನಡೆಸಿದ ಸಮೀಕ್ಷೆ ಉಲ್ಲೇಖಿಸಿದೆ.

‘ಹಂಗರ್ ವಾಚ್’ ಸಮೀಕ್ಷೆಯಲ್ಲಿ, ಲಾಕ್‌ಡೌನ್ ಮುಗಿದ ಐದು ತಿಂಗಳ ನಂತರವೂ ಅಂಚಿನಲ್ಲಿರುವ ಮತ್ತು ದುರ್ಬಲ ಸಮುದಾಯಗಳಲ್ಲಿ ಹಸಿವಿನ ಪರಿಸ್ಥಿತಿ ಗಂಭೀರವಾಗಿದೆ. ಹೆಚ್ಚಿನ ಕುಟುಂಬಗಳು ಆಹಾರವಿಲ್ಲದೆಯೇ ಹಸಿವಿನಿಂದ ಮಲಗುತ್ತಿರುವುದು ಈ 11 ರಾಜ್ಯಗಳಲ್ಲಿ ನಡೆಸಿದ ಸಮೀಕ್ಷೆಯಿಂದ ತಿಳಿದುಬಂದಿದೆ.

ಇದನ್ನೂ ಓದಿ: ’ಯಡಿಯೂರಪ್ಪ ಕೋಟುಬೂಟು ಹಾಕಿರುವ ರೈತರ ಪರ’-ಐಕ್ಯ ಹೋರಾಟ ಸಮಿತಿ

ಕೊರೊನಾ ಸಾಂಕ್ರಾಮಿಕ ರೋಗದ ನಡುವೆ ದೇಶದ ವಿವಿಧ ಭಾಗಗಳಲ್ಲಿನ ಆಹಾರ ಪರಿಸ್ಥಿತಿಯನ್ನು ಪತ್ತೆಹಚ್ಚಲು ಇತರ ಹಲವು ನೆಟ್‌ವರ್ಕ್‌ಗಳೊಂದಿಗೆ ಆಹಾರ ಹಕ್ಕು ಅಭಿಯಾನವು ಸೆಪ್ಟೆಂಬರ್ 2020 ರಲ್ಲಿ ‘ಹಂಗರ್ ವಾಚ್’ ಅನ್ನು ಪ್ರಾರಂಭಿಸಿತು.

ಉತ್ತರ ಪ್ರದೇಶ, ಮಧ್ಯಪ್ರದೇಶ, ಗುಜರಾತ್, ರಾಜಸ್ಥಾನ, ಮಹಾರಾಷ್ಟ್ರ, ಛತ್ತೀಸ್‌ಗಢ, ಜಾರ್ಖಂಡ್, ದೆಹಲಿ, ತೆಲಂಗಾಣ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದ ಸುಮಾರು 3,994 ಜನರನ್ನು ಹಂಗರ್ ವಾಚ್ ತಂಡ ಸಂದರ್ಶನ ಮಾಡಿದೆ. ಗ್ರಾಮೀಣ ಪ್ರದೇಶದಲ್ಲಿ 2,186 ಜನರನ್ನು ಸಂದರ್ಶಿಸಿದರೆ, ನಗರ ಪ್ರದೇಶಗಳಿಂದ 1,808 ಜನರನ್ನು ಸಂದರ್ಶಿಸಲಾಗಿದೆ.

ಸುಮಾರು 77%  PVTG (ವಿಶೇಷವಾಗಿ ದುರ್ಬಲ ಬುಡಕಟ್ಟು ಗುಂಪುಗಳು) ಕುಟುಂಬಗಳು, 76% ದಲಿತರು, ಮತ್ತು 54% ರಷ್ಟು ಆದಿವಾಸಿಗಳು ಸೆಪ್ಟೆಂಬರ್-ಅಕ್ಟೋಬರ್‌ನಲ್ಲಿ ತಮ್ಮ ಆಹಾರ ಸೇವನೆಯ ಪ್ರಮಾಣವು ತೀರ ಕಡಿಮೆಯಾಗಿದೆ ಎಂದು ಹೇಳಿರುವುದನ್ನು ವರದಿ ಉಲ್ಲೇಖಿಸಿದೆ.

ಕೇಂದ್ರ ಸರ್ಕಾರದ ಹೊಸ ಕೃಷಿ ಕಾನೂನುಗಳು ಸಾರ್ವಜನಿಕ ವಿತರಣಾ ವ್ಯವಸ್ಥೆಯ ಅಸ್ತಿತ್ವಕ್ಕೆ ಧಕ್ಕೆ ತಂದಿದೆ ಎಂದು ವರದಿಯು ಸೂಚಿಸಿದೆ. ಇದು ಸಾಂಕ್ರಾಮಿಕ ಸಮಯದಲ್ಲಿ ಅಂಚಿನಲ್ಲಿರುವವರಿಗೆ ಇನ್ನೂ ಲಭ್ಯವಿರುವ ಕೆಲವು ಸಂಪನ್ಮೂಲಗಳಲ್ಲಿ ಒಂದಾಗಿದೆ. ಕೃಷಿ ಕಾಯ್ದೆಗಳು ದೇಶದ ಹಸಿವಿನ ಪರಿಸ್ಥಿತಿಯನ್ನು ಇನ್ನಷ್ಟು ಹದಗೆಡಿಸುತ್ತದೆ ಎಂದು ವರದಿ ತಿಳಿಸಿದೆ.

ದೇಶದಲ್ಲಿ ಕಳೆದ 15 ದಿನಗಳಿಂದ ಸಾವಿರಾರು ರೈತರು ಕೇಂದ್ರದ ವಿವಾದಿತ ಕೃಷಿ ಕಾನೂನುಗಳನ್ನು ವಿರೋಧಿಸಿ ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ನಿನ್ನೆ ಕೇಂದ್ರ ಸರ್ಕಾರ ಕಳುಹಿಸಿದ್ದ ಪ್ರಸ್ತಾಪವನ್ನು ತಿರಸ್ಕರಿಸಿರುವ ರೈತರು, ಮೂರು ವಿವಾದಿತ ಕೃಷಿ ಕಾಯ್ದೆಗಳನ್ನು ರದ್ದುಪಡಿಸಲೇಬೇಕು ಎಂದು ಪಟ್ಟು ಹಿಡಿದಿದ್ದಾರೆ.

ಈಗಾಗಲೇ ಯಶಸ್ವಿ ಭಾರತ್ ಬಂದ್ ನಡೆಸಿರುವ ರೈತರು, ಕೇಂದ್ರ ಸರ್ಕಾರ ಬೇಡಿಕೆಗಳನ್ನು ಈಡೇರಿಸದಿದ್ದರೇ ಡಿಸೆಂಬರ್‌ 12 ರಂದು ದೆಹಲಿ – ಜೈಪುರ ಹೆದ್ದಾರಿ ಬಮದ್ ಮಾಡಲು ಮತ್ತು 14 ರಂದು ರಾಷ್ಟ್ರವ್ಯಾಪಿ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ.


ಇದನ್ನೂ ಓದಿ: ಅಂಬಾನಿಯ ಜಿಯೋ ಸಿಮ್ ಬಳಸುವುದಿಲ್ಲ, ರಿಲೆಯನ್ಸ್ ಪೆಟ್ರೋಲ್ ಹಾಕಿಸುವುದಿಲ್ಲ, ಮಾಲ್‌ಗೆ ಹೋಗುವುದಿಲ್ಲ: ರೈತರ ಪ್ರತಿಜ್ಞೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...