Homeಮುಖಪುಟಲಾಕ್‌ಡೌನ್ ಎಫೆಕ್ಟ್: ಬಡವರ ಹೊಟ್ಟೆ ತುಂಬಿಸುತ್ತಿರುವ Mercy Mission ಕಾರ್ಯಕ್ಕೊಂದು ಸೆಲ್ಯೂಟ್!

ಲಾಕ್‌ಡೌನ್ ಎಫೆಕ್ಟ್: ಬಡವರ ಹೊಟ್ಟೆ ತುಂಬಿಸುತ್ತಿರುವ Mercy Mission ಕಾರ್ಯಕ್ಕೊಂದು ಸೆಲ್ಯೂಟ್!

- Advertisement -
- Advertisement -

ಭಾರತ ನಿಜಕ್ಕೂ ಕೊರೋನಾಗೆ ಬೆಚ್ಚಿ ಬಿದ್ದಿದೆಯೋ ಇಲ್ಲವೋ? ಆದರೆ, ಬೆಂಗಳೂರಿನಂತಹ ಮಹಾ ನಗರಗಳಲ್ಲಿ ವಾಸಿಸುವ ಸಮಾಜದ ತಳವರ್ಗದ ಜನ ಒಪ್ಪೊತ್ತಿನ ಊಟಕ್ಕೂ ಪರದಾಡುವಂತೆ ಮಾಡಿರುವ ಲಾಕ್‌ಡೌನ್‌ಗೆ  ಬೆಚ್ಚಿದ್ದಾರೆ.

ಭಾರತದಂತಹ ದೇಶದಲ್ಲಿ ಲಾಕ್‌ಡೌನ್ ಘೋಷಿಸುವುದು ಸುಲಭ. ಆದರೆ, ದಿನನಿತ್ಯದ ಆಹಾರಕ್ಕೆ ಅದೇ ದಿನ ದುಡಿಯುವ ಅನಿವಾರ್ಯತೆಗೆ ಸಿಲುಕಿ ಬದುಕುತ್ತಿರುವ ಜನರಿಗೆ ಸತತ 21 ದಿನಗಳ ಕಾಲ ಎರಡು ಹೊತ್ತಿನ ಊಟ ಹಾಗೂ ಆರೋಗ್ಯ ಸಲಕರಣೆಗಳನ್ನು ಒದಗಿಸುವುದು ಅಷ್ಟು ಸುಲಭದ ಕೆಲಸವಲ್ಲ.

ಬೆಂಗಳೂರಿನಲ್ಲೇ ಸುಮಾರು ಸಾವಿರದಷ್ಟು ಬಡಜನರ, ಶ್ರಮಿಕರ ಏರಿಯಾಗಳಿವೆ. ಇಲ್ಲಿನ ಬಡ ಜನರಿಗೆ ಊಟ ಒದಗಿಸುವುದು ಅವರ ಕಷ್ಟಕ್ಕೆ ಸ್ಪಂದಿಸುವುದು ಕೇವಲ ಸರ್ಕಾರದಿಂದ ಮಾತ್ರ ಆಗುವ ಕೆಲಸವಲ್ಲ. ಇಂತಹ ಕೆಲಸಕ್ಕೆಂದೆ ತನ್ನನ್ನು ಮುಡಿಪಾಗಿಟ್ಟುಕೊಂಡು ಇಂತಹ ಸಂದಿಗ್ಧ ಸಂದರ್ಭದಲ್ಲಿ ಸ್ಲಂ ಭಾಗದ ಬಡ ವರ್ಗದ ಜನರ ಹೊಟ್ಟೆ ತುಂಬಿಸುತ್ತಿರುವ ಎನ್‌ಜಿಓ ಸಂಸ್ಥೆಯೇ Mercy Mission.

ಪ್ರತಿನಿತ್ಯ ಸಾವಿರಾರು ಬಡವರ ಹೊಟ್ಟೆ ತುಂಬಿಸುತ್ತಿದೆ ಈ Mercy Mission!

Mercy Mission ಎಂಬುದು ಕೇವಲ ಒಂದು ಸ್ವಯಂ ಸೇವಾ ಸಂಘವಲ್ಲ. ಬದಲಿಗೆ ಜನಪರ ಕೆಲಸದಲ್ಲಿ ತೊಡಗಿರುವ ಸುಮಾರು 25ಕ್ಕೂ ಹೆಚ್ಚು ಜನಪರ ಸಂಘಟನೆಗಳ ಒಂದು ಒಕ್ಕೂಟ. ಭಾರತದಲ್ಲಿ ಕಳೆದ ಒಂದು ವಾರದಿಂದ ಲಾಕ್‌ಡೌನ್ ಘೋಷಿಸಲಾಗಿದೆ. ಜನರ ಒಪ್ಪೊತ್ತಿನ ಊಟಕ್ಕೂ ಪರದಾಡುತ್ತಿದ್ದಾರೆ. ಆದರೆ, ಇಂತಹ ಸಂದಿಗ್ಧ ಕಾಲದಲ್ಲಿ ಮರ್ಸಿ ಮೆಷಿನ್ ನಡೆಸುತ್ತಿರುವ ಕಾರ್ಯ ನಿಜಕ್ಕೂ ಶ್ಲಾಘನೀಯ.

ಲಾಕ್‌ಡೌನ್ ‌ನಿದಾಗಿ ಹಸಿದಿರುವವರಿಗೆ ಆಹಾರ ನೀಡಲೆಂದೆ Mercy Mission ಬೆಂಗಳೂರಿನಲ್ಲಿ ಎರಡು ಕಡೆ “ಕಮ್ಯೂನಿಟಿ ಕಿಚನ್” ಹೊಂದಿದೆ. ಉತ್ತರ ಬೆಂಗಳೂರಿಗೆ ಡಿಜೆ ಹಳ್ಳಿ ಹಾಗೂ ದಕ್ಷಿಣ ಬೆಂಗಳೂರಿಗೆ ಈಜಿಪುರದಲ್ಲಿ ಕಮ್ಯೂನಿಟಿ ಕಿಚನ್ ಸ್ಥಾಪಿಸಲಾಗಿದೆ. ಇಲ್ಲಿನ ಅಡಿಗೆ ಮನೆಗಳಲ್ಲಿ ಪ್ರತಿ ಹೊತ್ತಿಗೆ ತಲಾ 2,000 ಜನರಿಗೆ ಆಹಾರ ಸಿದ್ದಪಡಿಸಿ ಹಂಚಲಾಗುತ್ತಿದೆ.

Mercy Mission ಸ್ವಯಂ ಸೇವಾ ಸಂಘಟನೆಯಲ್ಲಿ ದೊಡ್ಡ ಸಂಖ್ಯೆಯ ಸ್ವಯಂ ಸೇವಕರಿದ್ದಾರೆ. ಈ ಸ್ವಯಂ ಸೇವಕರ ಪೈಕಿ ಪ್ರತಿಯೊಬ್ಬರೂ ಪ್ರತಿದಿನ ಇಂತಿಷ್ಟು ಜನರಿಗೆ ಆಹಾರ ತಲುಪಿಸಬೇಕೆಂಬ ಗುರಿ ನೀಡಲಾಗುತ್ತಿದೆ. ಆದಷ್ಟು ಸ್ಲಂ ಭಾಗಕ್ಕೆ ತಮ್ಮದೇ ವಾಹನಗಳಲ್ಲಿ ತೆರಳುತ್ತಿರುವ ಈ ಕಾರ್ಯಕರ್ತರು ಬಡ ಜನರಿಗೆ ಆಹಾರ ಪೂರೈಸುವ ಕೆಲಸಕ್ಕೆ ಮುಂದಾಗಿದ್ದಾರೆ. ಬೆಂಗಳೂರಿನಂತಹ ಮಹಾನಗರದಲ್ಲಿ ಮೂರು ಹೊತ್ತು ತಲಾ 2000 ಸಾವಿರ ಜನರ ಹೊಟ್ಟೆ ತುಂಬಿಸುವುದು ಎಂದರೆ ಸುಮ್ಮನೆ ಮಾತಲ್ಲ.

ಇದಲ್ಲದೆ, ಕೆಲವು ಫಾರ್ಮಸಿಗಳಿಂದ ರಿಯಾಯಿತಿ ದರದಲ್ಲಿ ಔಷಧ ಸಾಮಾಗ್ರಿಗಳನ್ನು ಕೊಂಡು ಅದನ್ನು ಬಡವರಿಗೆ ಉಚಿತವಾಗಿ ನೀಡುವ ಕೆಲಸವನ್ನೂ ಈ Mercy Mission ಮಾಡುತ್ತಿದೆ. ಶುಗರ್ ಬಿಪಿಯಂತಹ ಎಲ್ಲಾ ತರದ ಖಾಯಿಲೆ ಹೊಂದಿರುವ ಬಡವರಿಗೂ ಈ ಸೌಲಭ್ಯವನ್ನು ಮರ್ಸಿ ಮಿಷಿನ್ ನೀಡುತ್ತಿದೆ.

ಈ ಕುರಿತು ನಾನುಗೌರಿ.ಕಾಂ Mercy Mission ಸಂಸ್ಥೆ ಪದಾಧಿಕಾರಿಗಳಲ್ಲೊಬ್ಬರಾದ ತೌಸಿಫ್‌ರವರನ್ನು ಮಾತನಾಡಿಸಿತು. ಅವರು “ಈ ಸಂಸ್ಥೆ ಹಲವಾರು ವರ್ಷಗಳಿಂದ ಯಾವುದೇ ಪ್ರಚಾರ ಇಲ್ಲದೆ ಸಮಾಜಮುಖಿ ಕೆಲಸದಲ್ಲಿ ತೊಡಗಿದೆ. ಲಾಕ್‌ಡೌನ್ ಘೋಷಿಸಿದ ನಂತರದ ಕಳೆದ ಒಂದು ವಾರದ ಅವಧಿಯಲ್ಲಿ ಸಾವಿರಾರು ಜನರ ಹಸಿವನ್ನು ನೀಗಿಸಿದೆ. ಆದರೆ, ಸಹಾಯ ಹಸ್ತ ನೀಡುವ ಸಂದರ್ಭದಲ್ಲಿ ನಾವು ಎಲ್ಲಿಯೂ ಸಹ ಹಿಂದೂ-ಮುಸ್ಲಿಂ ಎಂದು ಬೇಧ ಮಾಡುವ ಕೆಲಸಕ್ಕೆ ಮುಂದಾಗಿಲ್ಲ. ಇದು ಬೇಧ ಮಾಡುವ ಸಮಯವಲ್ಲ. ಇಡೀ ಭಾರತ ಒಟ್ಟಾಗಿ ನಿಲ್ಲಬೇಕಾದ ಸಮಯ” ಎನ್ನುತ್ತಾರೆ ಅವರು.

ಒಟ್ಟಾರೆ ಲಾಕ್‌ಡೌನ್‌ನಿಂದಾಗಿ ಮೇಲ್ ಮತ್ತು ಮಧ್ಯಮ ವರ್ಗಕ್ಕಿಂತ ಅಧಿಕ ಪೆಟ್ಟು ತಿನ್ನುತ್ತಿರುವುದು ಸಮಾಜದ ಕೆಳ ಮತ್ತು ಕೂಲಿ ಕಾರ್ಮಿಕ ವರ್ಗ. ಇಂತಹ ಜನರಿಗೆ ದಿನನಿತ್ಯ ಆಹಾರ ಪೂರೈಸುತ್ತಿರುವ Mercy Mission ಕಾರ್ಯ ನಿಜಕ್ಕೂ ಶ್ಲಾಘನೀಯ.


ಇದನ್ನೂ ಓದಿ: ಅಂದು ನೋಟುರದ್ದು, ಇಂದು ಮಹಾವಲಸೆ – ಬಡಜನತೆಯ ನಡು ಮುರಿದ ಮೋದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತ 6ನೇ ಅತ್ಯಂತ ಕಲುಷಿತ ರಾಷ್ಟ್ರ; ಉತ್ತರ ಪ್ರದೇಶದ ಲೋನಿ ವಿಶ್ವದ ಅತ್ಯಂತ ಕಲುಷಿತ ನಗರ: ವರದಿ

ಪ್ರಮುಖ ವಾಯು ಮಾಲಿನ್ಯಕಾರಕ ಸೂಕ್ಷ್ಮ ಕಣಗಳ ಮಟ್ಟದಲ್ಲಿ ಭಾರತ ಆರನೇ ಅತ್ಯಂತ ಕಲುಷಿತ ರಾಷ್ಟ್ರವಾಗಿದ್ದರೆ, ಉತ್ತರ ಪ್ರದೇಶದ ಲೋನಿ ಜಗತ್ತಿನಾದ್ಯಂತ ಅತ್ಯಂತ ಕಲುಷಿತ ನಗರವಾಗಿದೆ. ದೆಹಲಿ ನಾಲ್ಕನೇ ಸ್ಥಾನದಲ್ಲಿದೆ ಎಂದು ವಿಶ್ವ ವಾಯು...

ನಿಷ್ಕ್ರಿಯ ದಯಾಮರಣಕ್ಕೆ ಅನುಮತಿ ಪಡೆದ ಭಾರತದ ಮೊದಲ ವ್ಯಕ್ತಿ ಹರೀಶ್ ರಾಣಾ ದೆಹಲಿ ಏಮ್ಸ್‌ನಲ್ಲಿ ನಿಧನ

ಕಳೆದ 13 ವರ್ಷಗಳಿಂದ ಕೋಮಾದಲ್ಲಿದ್ದು ಜೀವನ್ಮರಣ ಹೋರಾಟ ನಡೆಸಿ, ಅಂತಿಮವಾಗಿ 2026ರ ಮಾರ್ಚ್ 11ರಂದು ನಿಷ್ಕ್ರಿಯ ದಯಾಮರಣಕ್ಕೆ ಸುಪ್ರೀಂ ಕೋರ್ಟ್‌ನಿಂದ ಅನುಮತಿ ಪಡೆದ 32 ವರ್ಷದ ಯುವಕ ಹರೀಶ್ ರಾಣಾ, ಮಂಗಳವಾರ (ಮಾ.24)...

ಪಶ್ಚಿಮ ಏಷ್ಯಾ ಸಂಘರ್ಷ: ಪಾಕಿಸ್ತಾನ ಮಧ್ಯವರ್ತಿಯಾದರೆ ಅದು ಭಾರತದ ರಾಜತಾಂತ್ರಿಕ ಹಿನ್ನೆಡೆಯಾಗಬಹುದು; ಕಾಂಗ್ರೆಸ್ 

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಸಂವಹನದಲ್ಲಿ ಪಾಕಿಸ್ತಾನ ಮಧ್ಯವರ್ತಿಯಾಗಿ ಕಾರ್ಯನಿರ್ವಹಿಸುತ್ತಿದೆ ಎಂಬ ವರದಿಗಳು ದೃಢಪಟ್ಟರೆ ಭಾರತಕ್ಕೆ ರಾಜತಾಂತ್ರಿಕ ಹಿನ್ನಡೆಯಾಗಬಹುದು ಎಂದು ಕಾಂಗ್ರೆಸ್ ಪಕ್ಷ ಮಂಗಳವಾರ ಹೇಳಿದೆ. ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದ ಮಧ್ಯೆ,...

ಭಯೋತ್ಪಾದಕ ಚಟುವಟಿಕೆಗಳ ಆರೋಪ; ಕಾಶ್ಮೀರಿ ಪ್ರತ್ಯೇಕತಾವಾದಿ ಆಸಿಯಾ ಅಂದ್ರಾಬಿಗೆ ಜೀವಾವಧಿ ಶಿಕ್ಷೆ

ಕಾಶ್ಮೀರಿ ಪ್ರತ್ಯೇಕತಾವಾದಿ ಆಸಿಯಾ ಅಂದ್ರಾಬಿಗೆ ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆ (ಯುಎಪಿಎ) ಅಡಿಯಲ್ಲಿ ಭಯೋತ್ಪಾದನಾ ಚಟುವಟಿಕೆಗಳ ಆರೋಪದ ಮೇಲೆ ದೆಹಲಿಯ ವಿಶೇಷ ನ್ಯಾಯಾಲಯವು ಮಂಗಳವಾರ ಜೀವಾವಧಿ ಶಿಕ್ಷೆ ವಿಧಿಸಿದೆ. ಆಕೆಯ ಸಹಚರರಾದ ಸೋಫಿ...

ಬಿಜೆಪಿ ಸೀಲ್ ಇರುವ ಚು.ಆಯೋಗದ ಪತ್ರದ ಕುರಿತ ಪೋಸ್ಟ್‌ಗಳನ್ನು ತೆಗೆದು ಹಾಕಲು ಕೇರಳ ಪೊಲೀಸರಿಂದ ಸೂಚನೆ

ಚುನಾವಣಾ ಆಯೋಗದ ಪತ್ರದಲ್ಲಿ ಬಿಜೆಪಿ ಕೇರಳ ರಾಜ್ಯ ಘಟಕದ ಸೀಲ್ ಇದ್ದ ಬಗ್ಗೆ ಸೋಮವಾರದಿಂದ (ಮಾ.23) ಭಾರೀ ಚರ್ಚೆಯಾಗುತ್ತಿದೆ. ಸಿಪಿಐ(ಎಂ), ಕಾಂಗ್ರೆಸ್, ಟಿಎಂಸಿ ಸೇರಿದಂತೆ ಪ್ರತಿಪಕ್ಷಗಳು ಮತ್ತು ಸಾಮಾಜಿಕ ಜಾಲತಾಣ ಬಳಕೆದಾರರು ಚುನಾವಣಾ...

ಪಂಜಾಬ್: ಮಾಜಿ ಸಚಿವ ಲಾಲ್‌ಜಿತ್ ಸಿಂಗ್ ಭುಲ್ಲರ್ ಕಿರುಕುಳಕ್ಕೆ ಅಧಿಕಾರಿ ಆತ್ಮಹತ್ಯೆ; ಅಮೃತಸರದಲ್ಲಿ ಶವಪರೀಕ್ಷೆಗೆ ಕುಟುಂಬ ಒಪ್ಪಿಗೆ

ಪಂಜಾಬ್‌ನ ಮಾಜಿ ಸಚಿವ ಲಾಲ್‌ಜಿತ್ ಸಿಂಗ್ ಭುಲ್ಲರ್ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಆತ್ಮಹತ್ಯೆ ಮಾಡಿಕೊಂಡ ಗೋದಾಮು ನಿಗಮದ ಅಧಿಕಾರಿ ಗಗನ್‌ದೀಪ್ ಸಿಂಗ್ ರಾಂಧವ ಅವರ ಮರಣೋತ್ತರ ಪರೀಕ್ಷೆಯನ್ನು ಮಂಗಳವಾರ ಅಮೃತಸರದಲ್ಲಿ ನಡೆಸಲಾಗುವುದು...

ಮುಸ್ಲಿಂ ಮಹಿಳೆಯರು ‘ನಮಾಜ್’ ಮಾಡುತ್ತಿದ್ದ ಕೊಠಡಿಯಲ್ಲಿ ಮಂತ್ರ ಪಠಿಸಿದ ಬಿಜೆಪಿ ನಾಯಕಿ ಮಾಧವಿ ಲತಾ

ತೆಲಂಗಾಣದ ಭಾರತೀಯ ಜನತಾ ಪಕ್ಷದ (ಬಿಜೆಪಿ)ದ ವಿವಾದಾತ್ಮಕ ನಾಯಕಿ ಮಾಧವಿ ಲತಾ ಮತ್ತೆ ಸಾಮಾಜಿಕ ಮಾಧ್ಯಮದಲ್ಲಿ ಸುದ್ದಿಯಾಗಿದ್ದಾರೆ. ನಮಾಜ್‌ ಮಾಡುತ್ತಿದ್ದವರ ಹಿಂದೆ ಮಂತ್ರ ಪಠಿಸುತ್ತಿರುವ ಅವರ ವೀಡಿಯೊವೊಂದು ಮತ್ತೆ ಸಾಮಾಜಿಕ ಮಾಧ್ಯಮದಲ್ಲಿ ವೈರಲ್...

ತೂತುಕುಡಿ ಸಾತನ್‌ಕುಳಂ ತಂದೆ ಮಗನ ಕಸ್ಟಡಿ ಸಾವು ಪ್ರಕರಣ : ಒಂಬತ್ತು ಪೊಲೀಸರು ದೋಷಿಗಳು ಎಂದ ಕೋರ್ಟ್

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

4 ವರ್ಷದ ಬಾಲಕಿಯ ಮೇಲಿನ ಅತ್ಯಾಚಾರ ಪ್ರಕರಣ; ಗುರುಗ್ರಾಮ ಪೊಲೀಸರನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್

ಹರಿಯಾಣದ ಗುರುಗ್ರಾಮದಲ್ಲಿ ನಾಲ್ಕು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣವನ್ನು ನಿರ್ವಹಿಸಿದ ಬಗ್ಗೆ ಹರಿಯಾಣ ಪೊಲೀಸರು ಮತ್ತು ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಅವರನ್ನು ಸುಪ್ರೀಂ ಕೋರ್ಟ್ ಸೋಮವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ಮಗುವಿನೊಂದಿಗೆ...

ದಾವಣಗೆರೆ: ನಿಮ್ಮ ದೇಶಭಕ್ತಿ ಪ್ರಶ್ನಿಸುವ ಅಯೋಗ್ಯರಿಗೆ ಮತ ಹಾಕಬೇಡಿ; ಮುಸ್ಲಿಮರಿಗೆ ಪ್ರದೀಪ್ ಈಶ್ವರ್ ಮನವಿ

ದಾವಣಗೆರೆ: ಮುಸ್ಲಿಮರ ದೇಶಭಕ್ತಿಯನ್ನು ಪ್ರಶ್ನಿಸಿದ, ಅವರ ಕುಟುಂಬಗಳ ಮಹಿಳೆಯರ ಬಗ್ಗೆ ಹೀನಾಯವಾಗಿ ಮಾತನಾಡಿದ್ದು ಬಿಜೆಪಿ. ಇವತ್ತು ಯಾವುದೋ ಅಸಮಾಧಾನಕ್ಕೆ ಬಿಜೆಪಿಗೆ ಮತ ಹಾಕದರೆ ನಿಮ್ಮ ಅಸ್ತಿತ್ವಕ್ಕೆ ಕುತ್ತು ಬರುತ್ತದೆ. ಇಂತಹ ಅಯೋಗ್ಯರಿಗೆ ಮತ...