ಕರ್ನಾಟಕದಲ್ಲಿ ಲಾಕ್‌ಡೌನ್ ಮಾಡಲು ಸಾಧ್ಯವಿಲ್ಲ ಎಂದು ಉಪಮುಖ್ಯಮಂತ್ರಿ ಸಿ.ಎನ್ ಅಶ್ವಥ್ ನಾರಾಯಣ್ ಅಭಿಪ್ರಾಯಪಟ್ಟಿದ್ದಾರೆ.
ಕರ್ನಾಟಕದಲ್ಲಿ ಕೊರೊನಾ ವೈರಸ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಲಾಕ್‌ಡೌನ್ ಮಾಡಬೇಕೆಂಬ ಪ್ರಸ್ತಾಪಗಳ ಕುರಿತು ಮಾತನಾಡಿರುವ ಅವರು “ಲಾಕ್‌ಡೌನ್ ಮಾಡಬೇಕೆಂಬುದು ಅನೇಕ ವಿರೋಧ ಪಕ್ಷದ ನಾಯಕರ ಸಲಹೆಯಾಗಿದೆ. ಪ್ರಸ್ತುತ ಆ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಿರುವುದಾಗಿ” ಎಎನ್‌ಐ ವರದಿ ಮಾಡಿದೆ.
“ರಾಜ್ಯದಲ್ಲಿ ಆರ್ಥಿಕತೆಯ ಪುನಶ್ಚೇತನವು ಈಗಷ್ಟೇ ಪ್ರಾರಂಭವಾಗಿದೆ. ಜನರ ಜೀವನೋಪಾಯ ಬಹಳ ಅವಶ್ಯಕ. ಇಂತಹ ಸಮಯದಲ್ಲಿ ಲಾಕ್‌ಡೌನ್ ಮಾಡುವುದು ತುಂಬಾ ಕಷ್ಟಕರವಾಗುತ್ತದೆ ಮತ್ತು ಜನರು ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ ಎಂದು ನಾನು ಭಾವಿಸುತ್ತೇನೆ” ಎಂದು ಅವರು ತಿಳಿಸಿದ್ದಾರೆ.
That's a suggestion by many opposition leaders. At present that question doesn't arise. Revival of economy has just started. Livelihood is very essential. If you go back,I think it becomes very difficult & people will face problems: Karnataka Dy CM on issue of lockdown in state pic.twitter.com/WAa3Y9z42E
— ANI (@ANI) June 25, 2020
ಮಾಜಿ ಮುಖ್ಯಮಂತ್ರಿಗಳಾದ ಎಚ್.ಡಿ ಕುಮಾರಸ್ವಾಮಿಯವರು ಕೊರೊನಾ ಪ್ರಕರಣಗಳನ್ನು ತಡೆಯಲು ಲಾಕ್‌ಡೌನ್ ಅಗತ್ಯ ಎಂದು ಅಭಿಪ್ರಾಯಪಟ್ಟಿದ್ದರು.
ಕೊರೋನಾ ಸೋಂಕಿತರಿಗೆ ಸೂಕ್ತ ಚಿಕಿತ್ಸೆ ನೀಡುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಈಗಿರುವ ಮೂರ್ನಾಲ್ಕು ಸಾವಿರ ರೋಗಿಗಳಿಗೆ ಚಿಕಿತ್ಸೆ ನೀಡಲು ಬೆಡ್ ಗಳಿಲ್ಲ, ವೆಂಟಿಲೇಟರ್ ಗಳ ಕೊರತೆ ಇದೆ. ಇದಕ್ಕೆ ಸ್ವಯಂ ಪ್ರೇರಿತ ಲಾಕ್ ಡೌನ್ ಒಂದೇ ಪರಿಹಾರ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಆಗ್ರಹಿಸಿದ್ದರು.
ಬೆಂಗಳೂರು ಸೇರಿದಂತೆ ರಾಜ್ಯದ ನಿವಾಸಿಗಳೇ, ನೀವು COVID-19 ನಿಂದ ಪಾರಾಗಲು ಈಗ ಉಳಿದಿರುವುದು ಒಂದೇ ದಾರಿ. ಮನೆಯಲ್ಲೇ ಉಳಿದು ನೀವೇ ಸ್ವಯಂ ಘೋಷಿತ ಬಂದ್ ಆಚರಿಸಿ. ಪ್ರಾಣಕ್ಕಿಂತಲೂ ಹಣ ಮುಖ್ಯವಲ್ಲ. ಜೀವ ಇದ್ದರೆ ಹೇಗಾದರೂ ಬದುಕಬಹುದು. ನಿಮ್ಮ ಜೀವ ಜೀವನ ಈಗ ನಿಮ್ಮ ಕೈಯಲ್ಲಿದೆ ಎಂದು ಕುಮಾರಸ್ವಾಮಿ ತಿಳಿಸಿದ್ದರು.
ಇದನ್ನೂ ಓದಿ: ಕೊರೊನಾ ಮತ್ತು ಪೆಟ್ರೋಲ್-ಡೀಸೆಲ್ ಬೆಲೆಯನ್ನು ಮೋದಿ ಸರ್ಕಾರ ಅನ್‌ಲಾಕ್ ಮಾಡಿದೆ – ರಾಹುಲ್


