Homeಮುಖಪುಟಯುಪಿಯ 5 ನಗರಗಳಲ್ಲಿ ಲಾಕ್‌ಡೌನ್‌ ಇಲ್ಲ: ಅಲಹಾಬಾದ್ ಹೈಕೋರ್ಟ್ ಆದೇಶಕ್ಕೆ ತಡೆ ನೀಡಿದ ಸುಪ್ರೀಂ!

ಯುಪಿಯ 5 ನಗರಗಳಲ್ಲಿ ಲಾಕ್‌ಡೌನ್‌ ಇಲ್ಲ: ಅಲಹಾಬಾದ್ ಹೈಕೋರ್ಟ್ ಆದೇಶಕ್ಕೆ ತಡೆ ನೀಡಿದ ಸುಪ್ರೀಂ!

- Advertisement -
- Advertisement -

ಕೋವಿಡ್ ನಿಭಾಯಿಸಲು ಲಕ್ನೋ, ಪ್ರಯಾಗರಾಜ್, ವಾರಣಾಸಿ, ಕಾನ್ಪುರ್ ಮತ್ತು ಗೋರಖ್ಪುರ್ ಈ ಐದು ನಗರಗಳಲ್ಲಿ ಏಪ್ರಿಲ್ 26 ರವರೆಗೆ ಲಾಕ್ ಡೌನ್ ಮಾಡುವಂತೆ ನಿನ್ನೆ ಅಲಹಾಬಾದ್ ಹೈಕೋರ್ಟ್ ನೀಡಿದ ಆದೇಶಕ್ಕೆ ಸುಪ್ರೀಂ ಕೋರ್ಟ್ ಇಂದು ತಡೆನೀಡಿದೆ.

ಅಲಹಾಬಾದ್ ಹೈಕೋರ್ಟ್ ಆದೇಶದಂತೆ 5 ನಗರಗಳಲ್ಲಿ ಲಾಕ್ ಡೌನ್ ಜಾರಿ ಮಾಡಲು ಉತ್ತರಪ್ರದೇಶ ಸರ್ಕಾರ ನಿರಾಕರಿಸಿ ಇಂದು ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು. ಅಲಹಾಬಾದ್ ಹೈಕೋರ್ಟ್ ಆದೇಶವು ಯುಪಿ ಸರ್ಕಾರದ ಸ್ವಾಯುತ್ತತೆಯನ್ನು ಅನ್ನು ಉಲ್ಲಂಘಿಸಿದೆ ಎಂದು ಆರೋಪಿಸಿತ್ತು.

“ನಾವು ನ್ಯಾಯಾಲಯದ ಕಳವಳವನ್ನು ಅರ್ಥಮಾಡಿಕೊಳ್ಳುತ್ತೇವೆ. ಆದರೆ ಹೈಕೋರ್ಟ್ ಆದೇಶಿಸಿದ ಹಲವಾರು ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ, ಕೆಲವು ವಿಷಯಗಳು ಈಗಾಗಲೇ ಜಾರಿಯಲ್ಲಿವೆ ” ಎಂದು ಯುಪಿ ಸರ್ಕಾರ ಸುಪ್ರೀಂ ನಲ್ಲಿ ವಾದಿಸಿದೆ.

ಸಾಂಕ್ರಾಮಿಕ ರೋಗವು “ನಮ್ಮ ವೈದ್ಯಕೀಯ ಮೂಲಸೌಕರ್ಯವನ್ನು ವಾಸ್ತವಿಕವಾಗಿ ಅಸಮರ್ಥಗೊಳಿಸಿದೆ… ವಿಶೇಷವಾಗಿ ಪ್ರಯಾಗರಾಜ್, ಲಕ್ನೋ, ವಾರಣಾಸಿ, ಕಾನ್ಪುರ್ ಮತ್ತು ಗೋರಖ್ಪುರದಂತಹ ನಗರಗಳಲ್ಲಿ’ ಎಂದು ಅಲಹಾಬಾದ್ ಹೈಕೋರ್ಟ್ ಸೋಮವಾರ ಅಭಿಪ್ರಾಯಪಟ್ಟಿತ್ತು.

ಅಲಹಾಬಾದ್ ಹೈಕೋರ್ಟ್ ಆದೇಶದಂತೆ ಲಾಕ್‌ಡೌನ್ ಜಾರಿಗೊಳಿಸಲು ಉತ್ತರಪ್ರದೇಶ ಸರ್ಕಾರ ನಿನ್ನೆ ಸಂಜೆಯೇ ನಿರಾಕರಿಸಿದೆ. ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರವು ಜೀವ ಮತ್ತು ಜೀವನೋಪಾಯ ಎರಡನ್ನೂ ರಕ್ಷಿಸಬೇಕಾಗಿದೆ ಎಂದು ಹೇಳಿಕೆಯಲ್ಲಿ ತಿಳಿಸಿದೆ.
ಧಾರ್ಮಿಕ ಚಟುವಟಿಕೆಗಳನ್ನು ನಿಷೇಧಿಸುವುದು ಮತ್ತು ಶಿಕ್ಷಣ ಸಂಸ್ಥೆಗಳು ಮತ್ತು ಶಾಪಿಂಗ್ ಮಾಲ್‌ಗಳನ್ನು ಬಂದ್ ಮಾಡುವುದು ಸೇರಿದಂತೆ ಸರಣಿ ಕ್ರಮಗಳನ್ನು ಹೈಕೋರ್ಟ್ ಆದೇಶಿಸಿತ್ತು.

ಯುಪಿ 24 ಗಂಟೆಗಳಲ್ಲಿ ದಾಖಲೆಯ 30,000 ಕ್ಕಿಂತ ಹೆಚ್ಚು ಹೊಸ ಪ್ರಕರಣಗಳನ್ನು ವರದಿ ಮಾಡಿದೆ. ನ್ಯಾಯಾಲಯವು ಹಣಕಾಸು ಸಂಸ್ಥೆಗಳು, ವೈದ್ಯಕೀಯ ಅಥವಾ ಆರೋಗ್ಯ ಸೇವೆಗಳನ್ನು ನೀಡುವ ವ್ಯವಹಾರ, ಕೈಗಾರಿಕಾ ಮತ್ತು ವೈಜ್ಞಾನಿಕ ಸಂಸ್ಥೆಗಳು ಮತ್ತು ಅಗತ್ಯ ಸೇವೆಗಳನ್ನು ಹೊರತುಪಡಿಸಿ ಎಲ್ಲಾ ಕಚೇರಿಗಳು, ಸರ್ಕಾರಿ ಅಥವಾ ಖಾಸಗಿ, ಮುಚ್ಚಲು ಆದೇಶಿಸಿತ್ತು. ಸ್ಥಳೀಯ ಸಂಸ್ಥೆಗಳಿಗೆ ವಿನಾಯಿತಿ ನೀಡಿತ್ತು.

ವೈದ್ಯಕೀಯ ತುರ್ತು ಪರಿಸ್ಥಿತಿಗಳನ್ನು ಹೊರತುಪಡಿಸಿ ರಸ್ತೆಗಳಲ್ಲಿ ಸಾರ್ವಜನಿಕ ಸಂಚಾರವನ್ನು ನಿರ್ಬಂಧಿಸಬೇಕು ಎಂದು ಹೈಕೋರ್ಟ್ ಹೇಳಿತ್ತು.


ಇದನ್ನೂ ಓದಿ: ಕೋವಿಡ್ ಸಾವಿನ ಸಂಖ್ಯೆಗಳನ್ನು ಮುಚ್ಚಿಡುತ್ತಿರುವ ಯೋಗಿ ಸರ್ಕಾರ: ಒಂದು ಗ್ರೌಂಡ್ ರಿಪೋರ್ಟ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಜೆಪಿಯ ಅಧಿಕೃತ ‘ಎಕ್ಸ್’ ಖಾತೆ ವಿರುದ್ಧ ಎಫ್‌ಐಆರ್‌ ದಾಖಲಿಸಿದ ಚುನಾವಣಾ ಆಯೋಗ

0
ವಿವಿಧ ಗುಂಪುಗಳು ಮತ್ತು ವರ್ಗಗಳ ನಡುವೆ ದ್ವೇಷ ಹರಡಲು ಮತ್ತು ಉತ್ತೇಜಿಸಲು ಯತ್ನಿಸುತ್ತಿರುವ ಆರೋಪದ ಮೇಲೆ ಬಿಜೆಪಿಯ ಅಧಿಕೃತ ಎಕ್ಸ್ ಖಾತೆ ವಿರುದ್ಧ ಚುನಾವಣಾ ಆಯೋಗ ಎಫ್‌ಐಆರ್‌ನ್ನು ದಾಖಲಿಸಿದೆ. ಈ ಕುರಿತು ಚುನಾವಣಾ ಆಯೋಗ...