Homeಮುಖಪುಟಲಾಕ್‌ಡೌನ್ ವಿಸ್ತರಿಸುವ ಸಾಧ್ಯತೆ: ಸರ್ವಪಕ್ಷ ಸಭೆಯಲ್ಲಿ ಪ್ರಧಾನಿ ಸೂಚನೆ

ಲಾಕ್‌ಡೌನ್ ವಿಸ್ತರಿಸುವ ಸಾಧ್ಯತೆ: ಸರ್ವಪಕ್ಷ ಸಭೆಯಲ್ಲಿ ಪ್ರಧಾನಿ ಸೂಚನೆ

- Advertisement -
- Advertisement -

ದೇಶದಲ್ಲಿ ಕೊವಿಡ್-19 ಸೋಂಕುಗಳು ಹೆಚ್ಚುತ್ತಿರುವ ಮಧ್ಯೆ, ಏಪ್ರಿಲ್ 14 ರ ನಂತರ ಕೊರೊನ ವೈರಸ್ ಹರಡುವಿಕೆಯನ್ನು ತಡೆಯಲು ಲಾಕ್‌ಡೌನ್ ವಿಸ್ತರಿಸಲಾಗುವುದು ಮತ್ತು ನಿರ್ಬಂಧಗಳನ್ನು ಒಂದೇ ಬಾರಿಗೆ ತೆಗೆದುಹಾಕಲಾಗುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಇಂದು ಸೂಚಿಸಿದ್ದಾರೆ.

ಸರ್ವ ಪಕ್ಷಗಳ ಮುಖಂಡರೊಂದಿಗಿನ ವಿಡಿಯೋ ಸಭೆಯಲ್ಲಿ ಪ್ರಧಾನ ಮಂತ್ರಿ ಮೋದಿ ಈ ಬಗ್ಗೆ ಎಲ್ಲಾ ಮುಖ್ಯಮಂತ್ರಿಗಳೊಂದಿಗೆ ಸಮಾಲೋಚಿಸುವುದಾಗಿ ಹೇಳಿದ್ದಾರೆ.

“ಪ್ರತಿಯೊಂದು ಜೀವವನ್ನೂ ಉಳಿಸುವುದು ಸರ್ಕಾರದ ಆದ್ಯತೆಯಾಗಿದೆ. ದೇಶದ ಪರಿಸ್ಥಿತಿ ‘ಸಾಮಾಜಿಕ ತುರ್ತುಸ್ಥಿತಿಗೆ’ ಹೋಲುತ್ತದೆ, ಇಂದು ಕಠಿಣ ನಿರ್ಧಾರಗಳ ಅಗತ್ಯವಿದೆ ಹಾಗೂ ನಾವು ಜಾಗರೂಕರಾಗಿ ಮುಂದುವರಿಯಬೇಕು” ಎಂದು ಪ್ರಧಾನಿ ಹೇಳಿದರು.

ಕೊವಿಡ್-19 ರ ನಂತರ ಮತ್ತೆ ಬದುಕು ಒಂದೇ ಆಗಿರುವುದಿಲ್ಲ, ಮುಂದಿನ ದಿನಗಳಲ್ಲಿ “ಕೊರೊನಾ ಪೂರ್ವ ಮತ್ತು ಕೊರೊನಾ ನಂತರ” ಎಂದಿರುತ್ತದೆ ಎಂದು ಪ್ರಧಾನಿ ಹೇಳಿದರು.

“ಬೃಹತ್ ನಡೆಗಳು, ಸಾಮಾಜಿಕ ಹಾಗೂ ವೈಯಕ್ತಿಕ ಬದಲಾವಣೆಗಳು ಆಗಬೇಕಿದೆ” ಎಂದು ಅವರು ವಿಡಿಯೋ ಕಾನ್ಫರೆನ್ಸ್‌ನಲ್ಲಿ ರಾಜಕೀಯ ಮುಖಂಡರಿಗೆ ತಿಳಿಸಿದ್ದಾರೆ.

ಕೊವಿಡ್-19 ಸಾಂಕ್ರಾಮಿಕ ರೋಗವನ್ನು ತಡೆಗಟ್ಟಲು 130 ಕೋಟಿ ಜನರ ವ್ಯಾಪಕ ಲಾಕ್‌ಡೌನ್ ಏಪ್ರಿಲ್ 14 ರಂದು ಕೊನೆಗೊಳ್ಳುತ್ತದೆ. ಇದನ್ನು ವಿಸ್ತರಿಸಬೇಕೆ, ಬೇಡವೇ ಎಂಬ ಬಗ್ಗೆ ಪ್ರಧಾನಿ ಮೋದಿ ಈ ವಾರ ನಿರ್ಧಾರ ತೆಗೆದುಕೊಳ್ಳಲಿದ್ದಾರೆ. ನಿರ್ಧಾರ ತೆಗೆದುಕೊಳ್ಳುವ ಮೊದಲು, ಅವರು ಶನಿವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ಮುಖ್ಯಮಂತ್ರಿಗಳೊಂದಿಗೆ ಎರಡನೇ ಸಭೆ ನಡೆಸಲಿದ್ದಾರೆ.

ಅನೇಕ ರಾಜ್ಯಗಳು ಮತ್ತು ತಜ್ಞರು ಈಗಾಗಲೇ ಲಾಕ್‌ಡೌನ್‌ ವಿಸ್ತರಣೆಯನ್ನು ಕೋರಿದ್ದಾರೆ. ಲಾಕ್‌ಡೌನ್ ಇದ್ದರೂ ಕೊರೊನಾ ಪ್ರಕರಣಗಳು ವೇಗವಾಗಿ ಹರಡುತ್ತಿವೆ, ಜೊತೆಗೆ ಮುಂಬರುವ ವಾರಗಳಲ್ಲಿ ಸೋಂಕು ಗರಿಷ್ಠವಾಗಬಹುದು ಎಂಬ ಎಚ್ಚರಿಕೆಯನ್ನು ತಜ್ಞರು ಈಗಾಗಲೆ ನೀಡಿದ್ದಾರೆ ಎಂದಿದ್ದಾರೆ.

ಶಾಲಾ-ಕಾಲೇಜುಗಳು ಮತ್ತು ಧಾರ್ಮಿಕ ಕೇಂದ್ರಗಳು ಇನ್ನೂ ಹೆಚ್ಚಿನ ವಾರಗಳವರೆಗೆ ಮುಚ್ಚಲ್ಪಡಬೇಕೆಂದು ಮಂತ್ರಿಗಳ ಗುಂಪು ನಿನ್ನೆ ಸೂಚಿಸಿತ್ತು. ರೈಲು ಪ್ರಯಾಣ, ಬಸ್ಸುಗಳು, ಮಹಾನಗರಗಳು ಮತ್ತು ಧಾರ್ಮಿಕ ಕೂಟಗಳನ್ನು ದೇಶದಲ್ಲಿ ಎಲ್ಲಿಯಾದರೂ ಅನುಮತಿಸುವ ಸಾಧ್ಯತೆಯಿಲ್ಲ. ದೇಶದಲ್ಲಿ ಕೊರೊನ ವೈರಸ್ ಪ್ರಕರಣಗಳ ಸಂಖ್ಯೆ 5,194 ಕ್ಕೆ ಏರಿದೆ ಹಾಗೂ 149 ಸಾವುಗಳು ಸಂಭವಿಸಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಸ್ಲಿಂ ಗ್ಯಾಸ್ ಏಜೆನ್ಸಿ ಮಾಲೀಕರನ್ನು ಬಾಂಗ್ಲಾದೇಶಿ ಎಂದು ನಿಂದನೆ; ಬುಲಂದ್‌ಶಹರ್‌ನಲ್ಲಿ ಹಿಂದೂ ರಕ್ಷಾ ದಳ ನಾಯಕನ ಬಂಧನ

ಉತ್ತರ ಪ್ರದೇಶದ ಬುಲಂದ್‌ಶಹರ್ ಜಿಲ್ಲೆಯಲ್ಲಿ ಹಿಂದೂ ರಕ್ಷಾ ದಳದ ನಾಯಕನೊಬ್ಬ ಮುಸ್ಲಿಂ ಗ್ಯಾಸ್ ಏಜೆನ್ಸಿ ಮಾಲೀಕರನ್ನು "ಬಾಂಗ್ಲಾದೇಶಿ" ಎಂದು ಕರೆದು ಬೆದರಿಕೆ ಹಾಕುತ್ತಿರುವ ವೀಡಿಯೊ ಕಾಣಿಸಿಕೊಂಡ ನಂತರ ಆತನನ್ನು ಬಂಧಿಸಲಾಗಿದೆ. ಜಿಲ್ಲೆಯ ಖುರ್ಜಾ ನಗರದಲ್ಲಿ...

ಭಾರತ 6ನೇ ಅತ್ಯಂತ ಕಲುಷಿತ ರಾಷ್ಟ್ರ; ಉತ್ತರ ಪ್ರದೇಶದ ಲೋನಿ ವಿಶ್ವದ ಅತ್ಯಂತ ಕಲುಷಿತ ನಗರ: ವರದಿ

ಪ್ರಮುಖ ವಾಯು ಮಾಲಿನ್ಯಕಾರಕ ಸೂಕ್ಷ್ಮ ಕಣಗಳ ಮಟ್ಟದಲ್ಲಿ ಭಾರತ ಆರನೇ ಅತ್ಯಂತ ಕಲುಷಿತ ರಾಷ್ಟ್ರವಾಗಿದ್ದರೆ, ಉತ್ತರ ಪ್ರದೇಶದ ಲೋನಿ ಜಗತ್ತಿನಾದ್ಯಂತ ಅತ್ಯಂತ ಕಲುಷಿತ ನಗರವಾಗಿದೆ. ದೆಹಲಿ ನಾಲ್ಕನೇ ಸ್ಥಾನದಲ್ಲಿದೆ ಎಂದು ವಿಶ್ವ ವಾಯು...

ನಿಷ್ಕ್ರಿಯ ದಯಾಮರಣಕ್ಕೆ ಅನುಮತಿ ಪಡೆದ ಭಾರತದ ಮೊದಲ ವ್ಯಕ್ತಿ ಹರೀಶ್ ರಾಣಾ ದೆಹಲಿ ಏಮ್ಸ್‌ನಲ್ಲಿ ನಿಧನ

ಕಳೆದ 13 ವರ್ಷಗಳಿಂದ ಕೋಮಾದಲ್ಲಿದ್ದು ಜೀವನ್ಮರಣ ಹೋರಾಟ ನಡೆಸಿ, ಅಂತಿಮವಾಗಿ 2026ರ ಮಾರ್ಚ್ 11ರಂದು ನಿಷ್ಕ್ರಿಯ ದಯಾಮರಣಕ್ಕೆ ಸುಪ್ರೀಂ ಕೋರ್ಟ್‌ನಿಂದ ಅನುಮತಿ ಪಡೆದ 32 ವರ್ಷದ ಯುವಕ ಹರೀಶ್ ರಾಣಾ, ಮಂಗಳವಾರ (ಮಾ.24)...

ಪಶ್ಚಿಮ ಏಷ್ಯಾ ಸಂಘರ್ಷ: ಪಾಕಿಸ್ತಾನ ಮಧ್ಯವರ್ತಿಯಾದರೆ ಅದು ಭಾರತದ ರಾಜತಾಂತ್ರಿಕ ಹಿನ್ನೆಡೆಯಾಗಬಹುದು; ಕಾಂಗ್ರೆಸ್ 

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಸಂವಹನದಲ್ಲಿ ಪಾಕಿಸ್ತಾನ ಮಧ್ಯವರ್ತಿಯಾಗಿ ಕಾರ್ಯನಿರ್ವಹಿಸುತ್ತಿದೆ ಎಂಬ ವರದಿಗಳು ದೃಢಪಟ್ಟರೆ ಭಾರತಕ್ಕೆ ರಾಜತಾಂತ್ರಿಕ ಹಿನ್ನಡೆಯಾಗಬಹುದು ಎಂದು ಕಾಂಗ್ರೆಸ್ ಪಕ್ಷ ಮಂಗಳವಾರ ಹೇಳಿದೆ. ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದ ಮಧ್ಯೆ,...

ಭಯೋತ್ಪಾದಕ ಚಟುವಟಿಕೆಗಳ ಆರೋಪ; ಕಾಶ್ಮೀರಿ ಪ್ರತ್ಯೇಕತಾವಾದಿ ಆಸಿಯಾ ಅಂದ್ರಾಬಿಗೆ ಜೀವಾವಧಿ ಶಿಕ್ಷೆ

ಕಾಶ್ಮೀರಿ ಪ್ರತ್ಯೇಕತಾವಾದಿ ಆಸಿಯಾ ಅಂದ್ರಾಬಿಗೆ ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆ (ಯುಎಪಿಎ) ಅಡಿಯಲ್ಲಿ ಭಯೋತ್ಪಾದನಾ ಚಟುವಟಿಕೆಗಳ ಆರೋಪದ ಮೇಲೆ ದೆಹಲಿಯ ವಿಶೇಷ ನ್ಯಾಯಾಲಯವು ಮಂಗಳವಾರ ಜೀವಾವಧಿ ಶಿಕ್ಷೆ ವಿಧಿಸಿದೆ. ಆಕೆಯ ಸಹಚರರಾದ ಸೋಫಿ...

ಬಿಜೆಪಿ ಸೀಲ್ ಇರುವ ಚು.ಆಯೋಗದ ಪತ್ರದ ಕುರಿತ ಪೋಸ್ಟ್‌ಗಳನ್ನು ತೆಗೆದು ಹಾಕಲು ಕೇರಳ ಪೊಲೀಸರಿಂದ ಸೂಚನೆ

ಚುನಾವಣಾ ಆಯೋಗದ ಪತ್ರದಲ್ಲಿ ಬಿಜೆಪಿ ಕೇರಳ ರಾಜ್ಯ ಘಟಕದ ಸೀಲ್ ಇದ್ದ ಬಗ್ಗೆ ಸೋಮವಾರದಿಂದ (ಮಾ.23) ಭಾರೀ ಚರ್ಚೆಯಾಗುತ್ತಿದೆ. ಸಿಪಿಐ(ಎಂ), ಕಾಂಗ್ರೆಸ್, ಟಿಎಂಸಿ ಸೇರಿದಂತೆ ಪ್ರತಿಪಕ್ಷಗಳು ಮತ್ತು ಸಾಮಾಜಿಕ ಜಾಲತಾಣ ಬಳಕೆದಾರರು ಚುನಾವಣಾ...

ಪಂಜಾಬ್: ಮಾಜಿ ಸಚಿವ ಲಾಲ್‌ಜಿತ್ ಸಿಂಗ್ ಭುಲ್ಲರ್ ಕಿರುಕುಳಕ್ಕೆ ಅಧಿಕಾರಿ ಆತ್ಮಹತ್ಯೆ; ಅಮೃತಸರದಲ್ಲಿ ಶವಪರೀಕ್ಷೆಗೆ ಕುಟುಂಬ ಒಪ್ಪಿಗೆ

ಪಂಜಾಬ್‌ನ ಮಾಜಿ ಸಚಿವ ಲಾಲ್‌ಜಿತ್ ಸಿಂಗ್ ಭುಲ್ಲರ್ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಆತ್ಮಹತ್ಯೆ ಮಾಡಿಕೊಂಡ ಗೋದಾಮು ನಿಗಮದ ಅಧಿಕಾರಿ ಗಗನ್‌ದೀಪ್ ಸಿಂಗ್ ರಾಂಧವ ಅವರ ಮರಣೋತ್ತರ ಪರೀಕ್ಷೆಯನ್ನು ಮಂಗಳವಾರ ಅಮೃತಸರದಲ್ಲಿ ನಡೆಸಲಾಗುವುದು...

ಮುಸ್ಲಿಂ ಮಹಿಳೆಯರು ‘ನಮಾಜ್’ ಮಾಡುತ್ತಿದ್ದ ಕೊಠಡಿಯಲ್ಲಿ ಮಂತ್ರ ಪಠಿಸಿದ ಬಿಜೆಪಿ ನಾಯಕಿ ಮಾಧವಿ ಲತಾ

ತೆಲಂಗಾಣದ ಭಾರತೀಯ ಜನತಾ ಪಕ್ಷದ (ಬಿಜೆಪಿ)ದ ವಿವಾದಾತ್ಮಕ ನಾಯಕಿ ಮಾಧವಿ ಲತಾ ಮತ್ತೆ ಸಾಮಾಜಿಕ ಮಾಧ್ಯಮದಲ್ಲಿ ಸುದ್ದಿಯಾಗಿದ್ದಾರೆ. ನಮಾಜ್‌ ಮಾಡುತ್ತಿದ್ದವರ ಹಿಂದೆ ಮಂತ್ರ ಪಠಿಸುತ್ತಿರುವ ಅವರ ವೀಡಿಯೊವೊಂದು ಮತ್ತೆ ಸಾಮಾಜಿಕ ಮಾಧ್ಯಮದಲ್ಲಿ ವೈರಲ್...

ತೂತುಕುಡಿ ಸಾತನ್‌ಕುಳಂ ತಂದೆ ಮಗನ ಕಸ್ಟಡಿ ಸಾವು ಪ್ರಕರಣ : ಒಂಬತ್ತು ಪೊಲೀಸರು ದೋಷಿಗಳು ಎಂದ ಕೋರ್ಟ್

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

4 ವರ್ಷದ ಬಾಲಕಿಯ ಮೇಲಿನ ಅತ್ಯಾಚಾರ ಪ್ರಕರಣ; ಗುರುಗ್ರಾಮ ಪೊಲೀಸರನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್

ಹರಿಯಾಣದ ಗುರುಗ್ರಾಮದಲ್ಲಿ ನಾಲ್ಕು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣವನ್ನು ನಿರ್ವಹಿಸಿದ ಬಗ್ಗೆ ಹರಿಯಾಣ ಪೊಲೀಸರು ಮತ್ತು ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಅವರನ್ನು ಸುಪ್ರೀಂ ಕೋರ್ಟ್ ಸೋಮವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ಮಗುವಿನೊಂದಿಗೆ...