Homeಮುಖಪುಟಏಪ್ರಿಲ್ 23 ರಿಂದ ಕರ್ನಾಟಕದಲ್ಲಿ ಲಾಕ್‌ಡೌನ್ ಭಾಗಶಃ ಸಡಿಲಿಕೆ

ಏಪ್ರಿಲ್ 23 ರಿಂದ ಕರ್ನಾಟಕದಲ್ಲಿ ಲಾಕ್‌ಡೌನ್ ಭಾಗಶಃ ಸಡಿಲಿಕೆ

- Advertisement -
- Advertisement -

ಏಪ್ರಿಲ್ 23 ರಿಂದ ಕರ್ನಾಟಕದಲ್ಲಿ ಲಾಕ್‌ಡೌನ್ ಭಾಗಶಃ ಸಡಿಲಿಕೆ ಮಾಡಲು ನಿರ್ಧರಿಸಲಾಗಿದೆ. ಕೊರಿಯರ್ ಸೇವೆಗಳು, ನಿರ್ಮಾಣ ಕಾರ್ಯಗಳು ಮತ್ತು ಪ್ಯಾಕೇಜಿಂಗ್ ವಸ್ತುಗಳ ತಯಾರಿಕೆಗೆ ಏಪ್ರಿಲ್ 23 ರಿಂದ ರಾಜ್ಯ ಸರ್ಕಾರ ಅನುಮತಿಸಿದೆ.

“ಸಾರ್ವಜನಿಕರಿಗೆ ತೊಂದರೆಗಳನ್ನು ತಗ್ಗಿಸಲು, ಆಯ್ದ ಹೆಚ್ಚುವರಿ ಚಟುವಟಿಕೆಗಳನ್ನು ಅನುಮತಿಸಲಾಗಿದೆ, ಇದು 2020 ರ ಏಪ್ರಿಲ್ 23 ರಿಂದ ಜಾರಿಗೆ ಬರಲಿದೆ” ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯ್ ಭಾಸ್ಕರ್ ಹೊರಡಿಸಿದ ಆದೇಶದಲ್ಲಿ ತಿಳಿಸಿದ್ದಾರೆ.

ಸರ್ಕಾರವು ಗುರುತಿಸಿರುವ ಕೊರೊನಾ ಪ್ರಕರಣ ಹೆಚ್ಚಿರುವ ವಲಯಗಳ (ಕಂಟೈನ್‌ಮೆಂಟ್‌) ಹೊರಗೆ ಮಾತ್ರ ಆಯ್ದ ಈ ಚಟುವಟಿಕೆಗಳಿಗೆ ಅವಕಾಶವಿರುತ್ತದೆ.

ಆದರೆ ಸಾರ್ವಜನಿಕ ಸಾರಿಗೆಯನ್ನು ಮೇ 3 ರವರೆಗೆ ಸ್ಥಗಿತಗೊಳಿಸಲಾಗುತ್ತದೆ. ತುರ್ತು ಸೇವೆಗಳಿಗೆ ಪಾಸ್ ಹೊಂದಿರುವ ಖಾಸಗಿ ವಾಹನಗಳು ಮತ್ತು ಕೆಲಸದ ಸ್ಥಳಗಳಿಗೆ ಹೋಗಲು ಮತ್ತು ಹಿಂತಿರುಗಲು ಪಾಸ್‌ಗಳೊಂದಿಗೆ ಪ್ರಯಾಣಿಸುವ ಸಿಬ್ಬಂದಿಗೆ ಅವಕಾಶವಿದೆ.

ರಸ್ತೆ ನಿರ್ಮಾಣ, ನೀರಾವರಿ ಯೋಜನೆಗಳು, ಕಟ್ಟಡಗಳು ಮತ್ತು ಎಂಎಸ್‌ಎಂಇಗಳು ಸೇರಿದಂತೆ ಕೈಗಾರಿಕಾ ಕೆಲಸಗಳು ನಡಯಬಹುದು. ಹಾಗೆಯೇ ಗ್ರಾಮೀಣ ಭಾಗದಲ್ಲಿ ಯಾವುದೇ ಕಾರ್ಮಿಕರನ್ನು ಹೊರಗಿನಿಂದ ಕರೆತರದೇ ಸ್ಥಳೀಯ ಕಾರ್ಮಿಕರನ್ನು ಬಳಸಿ ಕೃಷಿ ಮತ್ತು ಕೈಗಾರಿಕಾ ಚಟುವಟಿಕೆಗಳಿಗೆ ಅನುಮತಿಸಲಾಗಿದೆ.

ಮುಖ್ಯವಾಗಿ ಸ್ವಯಂ ಉದ್ಯೋಗಿಗಳು ನೀಡುವ ಸೇವೆಗಳಾದ, ಎಲೆಕ್ಟ್ರಿಷಿಯನ್, ಐಟಿ ರಿಪೇರಿ, ಕೊಳಾಯಿಗಾರರು, ಆಟೋ ಮೆಕ್ಯಾನಿಕ್ಸ್, ಬಡಗಿಗಳು ಇತ್ಯಾದಿಗಳನ್ನು ಅನುಮತಿಸಲಾಗಿದೆ.

ಅಗತ್ಯ ವಸ್ತುಗಳ ಉತ್ಪಾದನಾ ಘಟಕಗಳಾದ, ಔಷಧಗಳು, ವೈದ್ಯಕೀಯ ಸಾಧನಗಳು, ಅವುಗಳ ಕಚ್ಚಾ ವಸ್ತುಗಳು ಮತ್ತು ಗ್ರಾಮೀಣ ಪ್ರದೇಶಗಳಲ್ಲಿನ ಆಹಾರ ಸಂಸ್ಕರಣಾ ಕೈಗಾರಿಕೆಗಳು, ಕಲ್ಲಿದ್ದಲು ಉತ್ಪಾದನೆ (ಗಣಿಗಳು ಮತ್ತು ಖನಿಜ ಉತ್ಪಾದನೆ ಮತ್ತು ಗಣಿಗಾರಿಕೆಗೆ ಸಂಬಂಧಿಸಿದ ಚಟುವಟಿಕೆಗಳು) ಮತ್ತು ಪ್ಯಾಕೇಜಿಂಗ್ ವಸ್ತುಗಳ ಉತ್ಪಾದನಾ ಘಟಕಗಳನ್ನು ಅನುಮತಿಸಲಾಗಿದೆ.

ಹಣಕಾಸಿನ ಬಿಕ್ಕಟ್ಟನ್ನು ಎದುರಿಸುತ್ತಿರುವ ಸರ್ಕಾರವು ಕೊರೊನಾ ವೈರಸ್ ಲಾಕ್‌ಡೌನ್‌ನಿಂದಾಗಿ ಸ್ಥಗಿತಗೊಂಡ ಆರ್ಥಿಕ ಚಟುವಟಿಕೆಗಳನ್ನು ತುರ್ತಾಗಿ ಪ್ರಾರಂಭಿಸಲು ಭಾರೀ ಒತ್ತಡದಲ್ಲಿದೆ.

ಆದರೆ ವಿಮಾನಗಳು, ಬಸ್ಸುಗಳು, ಮೆಟ್ರೋ ರೈಲು ಮತ್ತು ಅಂತರ-ಜಿಲ್ಲಾ, ಅಂತರ-ರಾಜ್ಯ ಪ್ರಯಾಣವನ್ನು ಮೇ 3 ರವರೆಗೆ ನಿಷೇಧಿಸಲಾಗಿದೆ. ಹೋಟೆಲ್‌ಗಳು, ಬಾರ್‌ಗಳು, ಮಾಲ್‌ಗಳು, ಚಿತ್ರಮಂದಿರಗಳು, ಶಾಪಿಂಗ್ ಸಂಕೀರ್ಣಗಳು ಮತ್ತು ಮುಂತಾದವುಗಳ ಸ್ಥಗಿತವು ಮುಂದುವರೆಯುತ್ತದೆ. ಅದಲ್ಲದೆ ಎಲ್ಲಾ ಧಾರ್ಮಿಕ ಸ್ಥಳಗಳನ್ನು ಕೂಡಾ ಮುಚ್ಚಬೇಕಾಗಿದೆ.


ಇದನ್ನೂ ಓದಿ: ಲಾಕ್‌ಡೌನ್; ಕರ್ನಾಟಕಕ್ಕೆ ಕೇರಳ-ತಮಿಳುನಾಡು ಮಾದರಿಯಾಗಬಾರದೇಕೆ?


 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ರಾಜಸ್ಥಾನ: ಬಿಜೆಪಿ ಸರ್ಕಾರದ ಯೋಜನೆಯಲ್ಲಿ 1,140 ಕೋಟಿ ರೂ.ನಷ್ಟ: ತಮ್ಮದೇ ಸರಕಾರದ ವಿರುದ್ಧ ಆರೋಪಿಸಿದ...

0
ರಾಜಸ್ಥಾನದ ಬಿಜೆಪಿ ಸರಕಾರ ಅಧಿಕಾರಕ್ಕೇರಿದ ಆರು ತಿಂಗಳಲ್ಲೇ ಬಿಕ್ಕಟ್ಟನ್ನು ಎದುರಿಸುತ್ತಿದ್ದು, ಮುಖ್ಯಮಂತ್ರಿಯ ಅಧೀನದ ಇಲಾಖೆಯಲ್ಲಿನ ವಸತಿ ಯೋಜನೆಯಲ್ಲಿನ ಲೋಪದೋಷವನ್ನು ಕ್ಯಾಬಿನೆಟ್ ಸಚಿವರೋರ್ವರು ಬಹಿರಂಗಪಡಿಸಿದ್ದು, ಇದರಿಂದ ಸರಕಾರದ ಬೊಕ್ಕಸಕ್ಕೆ 1,146 ಕೋಟಿ ರೂ. ನಷ್ಟವಾಗಿದೆ...