ಮೇ 24 ಬಳಿಕ ಲಾಕ್‌ಡೌನ್ ವಿಸ್ತರಣೆಯಾಗಬೇಕು- ಕಂದಾಯ ಸಚಿವ ಆರ್‌.ಅಶೋಕ್

ರಾಜ್ಯದಲ್ಲಿ ಲಾಕ್‌ಡೌನ್ ವಿಧಿಸಿದ ಹಿನ್ನೆಲೆ ಕೊರೊನಾ ಸೋಂಕು ಪ್ರಕರಣಗಳು ಕಡಿಮೆಯಾಗಿವೆ. ಹೀಗಾಗಿ ಬೆಂಗಳೂರಿನ ನಾಗರಿಕನಾಗಿ ಲಾಕ್​ಡೌನ್​ ಮುಂದುವರಿಯಲಿ ಎಂದೇ ಬಯಸುತ್ತೇನೆ ಎಂದು ಕಂದಾಯ ಸಚಿವ ಆರ್​. ಅಶೋಕ್ ಹೇಳಿದ್ದಾರೆ.

ಲಾಕ್‌ಡೌನ್‌ ವಿಸ್ತರನೆ ಕುರಿತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಬಳಿ ಮಾತನಾಡುವುದಾಗಿಯೂ ಸಚಿವ ಅಶೋಕ್ ತಿಳಿಸಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಲಾಕ್​ಡೌನ್​ ಮತ್ತೆ ಮುಂದುವರಿಯುವ ಸುಳಿವು ನೀಡಿದ್ದಾರೆ.

ಬೆಂಗಳೂರಿನ ಹೊಸಕೆರೆಹಳ್ಳಿಯಲ್ಲಿ ಮಾತನಾಡಿದ ಮಾತನಾಡಿದ ಸಚಿವ ಆರ್​. ಅಶೋಕ್,​ ’ರಾಜ್ಯದ ಪ್ರಸ್ತುತ ಸನ್ನಿವೇಶದಲ್ಲಿ ರಾಜ್ಯದಲ್ಲಿ ಲಾಕ್​ಡೌನ್ ಮುಂದುವರಿಯುವ ಅವಶ್ಯಕತೆ ಇದೆ. ಲಾಕ್‌ಡೌನ್ ಮಾಡಿರುವುದರಿಂದ ಕೊರೊನಾ ಪ್ರಕರಣಗಳಲ್ಲಿ ಕಡಿಮೆಯಾಗುತ್ತಿದೆ. ಹೀಗಾಗಿ ಲಾಕ್‌ಡೌನ್ ಮುಗಿಯುವ 3-4 ದಿನಗಳ ಮೊದಲು ಮುಖ್ಯಮಂತ್ರಿಗಳು ಸಭೆ ಕರೆಯಲಿದ್ದಾರೆ. ಸಭೆಯಲ್ಲಿ ಲಾಕ್​​ಡೌನ್ ಮುಂದುವರಿಸುವ ಬಗ್ಗೆಯೇ ಸಲಹೆ ನೀಡುತ್ತೇನೆ ಎಂದು ಕಂದಾಯ ಸಚಿವ ಹೇಳಿದ್ದಾರೆ.

ಇದನ್ನೂ ಓದಿ: ಭೂ ಕೈಲಾಸ ಸೃಷ್ಟಿಸುವ ಬಿಜೆಪಿ ಮಾತು ನಂಬಿ ಜನ ಅಧಿಕಾರ ನೀಡಿದ್ದಾರೆ: ಜನರ ಆಶಯಕ್ಕೆ ತಕ್ಕಂತೆ ಕೆಲಸ ಮಾಡಿ- ಕುಮಾರಸ್ವಾಮಿ

ಬೆಂಗಳೂರಿನ ಸಾಮಾನ್ಯ ನಾಗರಿಕನಾಗಿ ಲಾಕ್‌ಡೌನ್ ಮುಂದುವರೆಯುವುದನ್ನು ನಾನು ಬೆಂಬಲಿಸುತ್ತೇನೆ. ಈ ಸೆಮಿ ಲಾಕ್‌ಡೌನ್ ಮತ್ತು ಲಾಕ್‌ಡೌನ್‌ನಿಂದ ಪ್ರಕರಣಗಳು ಕಡಿಮೆಯಾಗುತ್ತಿವೆ ಎಂದಿದ್ದಾರೆ.

ಲಾಕ್​ಡೌನ್​ ಆದೇಶವನ್ನ ಮೊದಲು ವಿಪಕ್ಷಗಳು ಗೇಲಿ ಮಾಡಿದ್ದವು. ಆದರೆ ರಾಜ್ಯದಲ್ಲಿ ಸೋಂಕಿನ ಸಂಖ್ಯೆ ಇಳಿಮುಖವಾಗುವಲ್ಲಿ ಲಾಕ್​ಡೌನ್​ ಪ್ರಮುಖ ಪಾತ್ರ ವಹಿಸಿದೆ ಎಂದು ಆರ್‌.ಅಶೋಕ್ ಹೇಳಿದ್ದಾರೆ.

ರಾಜ್ಯದಲ್ಲಿ ಕೊರೊನಾ ​​ಪ್ರಸರಣ ತಡೆಯುವ ಸಲುವಾಗಿ ರಾಜ್ಯ ಸರ್ಕಾರ ಮೇ 24ರವರೆಗೆ ಲಾಕ್​ಡೌನ್​ ಆದೇಶವನ್ನ ಜಾರಿಗೆ ತಂದಿದೆ. ಲಾಕ್‌ಡೌನ್ ಎಂಬ ಪದ ಬಳಸದೇ ಕಠಿಣ ನಿರ್ಬಂಧ ಎಂದು ಹೇಳಲಾಗಿದೆ. ಇದನ್ನೂ ವಿಪಕ್ಷಗಳು ಟೀಕಿಸಿದ್ದು, ಲಾಕ್‌ಡೌನ್ ಎಂದು ಘೋಷಿಸದೇ ಸರ್ಕಾರ ಜವಾಬ್ದಾರಿಯಿಂದ ತಪ್ಪಿಸಿಕೊಳ್ಳುತ್ತಿದೆ ಎಂದಿದ್ದಾರೆ.

ಬಡವರಿಗೆ ಆಹಾರ ಮತ್ತು ಆರ್ಥಿಕ ಪ್ಯಾಕೇಜ್ ಘೋಷಿಸಿ ಎಂದು ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಮತ್ತು ಎಚ್.ಡಿ.ಕುಮಾರಸ್ವಾಮಿ ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.


ಇದನ್ನೂ ಓದಿ: ನ್ಯಾಯಾಧೀಶರು ಸರ್ವಜ್ಞರಲ್ಲ ಎಂಬ ಸಿಟಿ ರವಿ ಹೇಳಿಕೆಗೆ ವ್ಯಾಪಕ ಆಕ್ರೋಶ: ಮತ್ತೆ ಹೇಳಿಕೆ ಸಮರ್ಥಿಸಿಕೊಂಡ ಮಾಜಿ ಸಚಿವ!

LEAVE A REPLY

Please enter your comment!
Please enter your name here