HomeUncategorizedಮುಜಫರ್‌ನಗರ ಪ್ರಕರಣ: ವಾರದೊಳಗೆ ವರದಿ ಸಲ್ಲಿಸುವಂತೆ ಮಕ್ಕಳ ಹಕ್ಕುಗಳ ಆಯೋಗ ಸೂಚನೆ

ಮುಜಫರ್‌ನಗರ ಪ್ರಕರಣ: ವಾರದೊಳಗೆ ವರದಿ ಸಲ್ಲಿಸುವಂತೆ ಮಕ್ಕಳ ಹಕ್ಕುಗಳ ಆಯೋಗ ಸೂಚನೆ

- Advertisement -
- Advertisement -

ಮುಜಫರ್‌ನಗರದ ನೇಹಾ ಪಬ್ಲಿಕ್ ಸ್ಕೂಲ್‌ನಲ್ಲಿ ಶಿಕ್ಷಕಿ ಮುಸ್ಲಿಂ ವಿದ್ಯಾರ್ಥಿಗೆ ಹೊಡೆಯುವಂತೆ ಸಹಪಾಠಿ ವಿದ್ಯಾರ್ಥಿಗಳಿಗೆ ಸೂಚಿಸುವ ವಿಡಿಯೋ ದೇಶದಲ್ಲಿ ಭಾರೀ ಸಂಚಲನ ಮೂಡಿಸಿರುವ ಬೆನ್ನಲ್ಲೇ  ರಾಷ್ಟ್ರೀಯ ಮಕ್ಕಳ ಹಕ್ಕುಗಳ ಆಯೋಗವು (NCPCR) ಪ್ರಕರಣದಲ್ಲಿ ಮಧ್ಯಪ್ರವೇಶ ಮಾಡಿದೆ.

ಮಕ್ಕಳ ಹಕ್ಕುಗಳ ಆಯೋಗವು  ಮುಜಫರ್‌ನಗರದ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ (SSP) ಅವರಿಗೆ ತನಿಖೆಯನ್ನು ಪ್ರಾರಂಭಿಸಲು ಮತ್ತು ಪ್ರಕರಣವನ್ನು ದಾಖಲಿಸಲು ಸೂಚಿಸಿದೆ.

ಈ ಕುರಿತು ತೆಗೆದುಕೊಂಡ ಕ್ರಮದ ಬಗ್ಗೆ ವರದಿಯನ್ನು ಒಂದು ವಾರದೊಳಗೆ ಸಲ್ಲಿಸುವಂತೆಯೂ ಎಸ್‌ಎಸ್‌ಪಿಗೆ ಸೂಚಿಸಲಾಗಿದೆ.

2009ರ RTE ಕಾಯಿದೆಯ ಸೆಕ್ಷನ್ 17ರ ಅಡಿಯಲ್ಲಿ ಕ್ರಮವನ್ನು ತೆಗೆದುಕೊಳ್ಳಲು NCPCR ಮುಜಫರ್‌ನಗರ ಜಿಲ್ಲಾ ಮ್ಯಾಜಿಸ್ಟ್ರೇಟ್ ಗೆ (DM)ಗೆ ನಿರ್ದೇಶನ ನೀಡಿದೆ.

ಉತ್ತರ ಪ್ರದೇಶದ ಮುಜಾಫರ್‌ನಗರ ಜಿಲ್ಲೆಯ ಖುಬಾಪುರ ಗ್ರಾಮದ ನೇಹಾ ಪಬ್ಲಿಕ್ ಸ್ಕೂಲ್‌ನಲ್ಲಿ ಈ ಘಟನೆ ನಡೆದಿದೆ. ಆದರೆ ಘಟನೆಯ ವಿಡಿಯೋ ಶುಕ್ರವಾರ ವೈರಲ್ ಆಗಿದೆ. ವಿಡಿಯೋದಲ್ಲಿ ತರಗತಿಯ ಮುಂದೆ ನಿಂತಿದ್ದ ಮುಸ್ಲಿಂ ಹುಡುಗನನ್ನು ಒಬ್ಬ ವಿದ್ಯಾರ್ಥಿ ಹೊಡೆದ ನಂತರ, ಶಿಕ್ಷಕರು ಇತರ ವಿದ್ಯಾರ್ಥಿಗಳಿಗೂ ಬಲವಾಗಿ ಹೊಡೆಯುವಂತೆ ಒತ್ತಾಯಿಸುವುದನ್ನು ಕಾಣಬಹುದು.

ಒಬ್ಬ ವಿದ್ಯಾರ್ಥಿ ಆತನ ಕಪಾಳಕ್ಕೆ ಹೊಡೆದ ನಂತರ, ಶಿಕ್ಷಕಿಯು ಇನ್ನೊಬ್ಬ ವಿದ್ಯಾರ್ಥಿಯನ್ನು ಕರೆದು, ”ನಾನು ಹೇಳುತ್ತಿದ್ದೇನೆ, ಈ ಮುಸ್ಲಿಂ ವಿದ್ಯಾರ್ಥಿಯ ಬೆನ್ನಿನ ಮೇಲೆ ಹೊಡೆಯಬೇಕು. ಮತ್ತೆ ಬೇರೆ ವಿಧ್ಯಾರ್ಥಿಗಳನ್ನು ಕರೆದು, ಅವನ ಸೊಂಟದ ಮೇಲೆ ಹೊಡೆಯಲು ಪ್ರಾರಂಭಿಸಿ. ಅವನ ಮುಖವು ಕೆಂಪಾಗುತ್ತಿದೆ, ಅವನ ಸೊಂಟದ ಮೇಲೆ ಎಲ್ಲರೂ ಹೊಡೆಯಿರಿ ಎಂದು ಆದೇಶಿಸಿದ್ದಾರೆ.

ಮಗು ಖುಬಾಪುರ ಗ್ರಾಮದ ನೇಹಾ ಪಬ್ಲಿಕ್ ಸ್ಕೂಲ್‌ನಲ್ಲಿ ಶಿಶುವಿಹಾರದಲ್ಲಿ ಓದುತ್ತಿದ್ದ ಎಂದು ಆತನ ಪೋಷಕರು ತಿಳಿಸಿದ್ದಾರೆ. ಮಗುವಿನ ತಂದೆ ಹೆಸರು ಇರ್ಷಾದ್ ತ್ಯಾಗಿ, ಅವರು ವೃತ್ತಿಯಲ್ಲಿ ರೈತರಾಗಿದ್ದಾರೆ. ಇನ್ನು ಶಿಕ್ಷಕಿಯನ್ನು ತ್ರಿಪ್ತಾ ತ್ಯಾಗಿ ಎಂದು ಗುರುತಿಸಲಾಗಿದೆ.

ಇದನ್ನು ಓದಿ: ದೆಹಲಿ: ಬಾಲಕಿ ಮೇಲೆ ಅಧಿಕಾರಿಯಿಂದ ಅತ್ಯಾಚಾರ ಪ್ರಕರಣ: ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದ ಸಚಿವೆ ಅತಿಶಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪನ್ನೂನ್‌ ಹತ್ಯೆಗೆ ಸಂಚು: ವಾಷಿಂಗ್‌ ಟನ್‌ ಪೋಸ್ಟ್‌ ವರದಿ ತಿರಸ್ಕರಿಸಿದ ಭಾರತ

0
ಭಾರತದ ಮಾಜಿ ಗುಪ್ತಚರ ಅಧಿಕಾರಿಯೊಬ್ಬರು ಅಮೆರಿಕದ ನೆಲದಲ್ಲಿ ಖಲಿಸ್ತಾನಿ ಭಯೋತ್ಪಾದಕ ಗುರ್ಪತ್‌ವಂತ್ ಸಿಂಗ್ ಪನ್ನೂನನ್ನು ಹತ್ಯೆ ಮಾಡಲು ಸಂಚು ರೂಪಿಸಿದ್ದರು ಎಂಬ ವಾಷಿಂಗ್ಟನ್ ಪೋಸ್ಟ್‌ನ ವರದಿಯನ್ನು ಭಾರತ ಇಂದು ಬಲವಾಗಿ ತಿರಸ್ಕರಿಸಿದೆ. ಭಾರತದ ರಿಸರ್ಚ್...