Homeಮುಖಪುಟಪ್ರತಿಪಕ್ಷಗಳಿಂದ ತೀವ್ರ ಪ್ರತಿಭಟನೆ : ಲೋಕಸಭೆ ಕಲಾಪ ಮುಂದೂಡಿಕೆ

ಪ್ರತಿಪಕ್ಷಗಳಿಂದ ತೀವ್ರ ಪ್ರತಿಭಟನೆ : ಲೋಕಸಭೆ ಕಲಾಪ ಮುಂದೂಡಿಕೆ

- Advertisement -
- Advertisement -

ಪ್ರತಿಪಕ್ಷಗಳ ತೀವ್ರ ಪ್ರತಿಭಟನೆ ಹಿನ್ನೆಲೆ ಗುರುವಾರ (ಫೆ.5) ಲೋಕಸಭೆ ಕಲಾಪವನ್ನು ಸ್ಪೀಕರ್ ಓಂ ಬಿರ್ಲಾ ಮಧ್ಯಾಹ್ನದವರೆಗೆ ಮುಂದೂಡಿದರು.

ಬೆಳಿಗ್ಗೆ 11 ಗಂಟೆಗೆ ಸದನ ಸಮಾವೇಶಗೊಳ್ಳುತ್ತಿದ್ದಂತೆಯೇ, ಪ್ರತಿಪಕ್ಷದ ಸದಸ್ಯರು ಘೋಷಣೆಗಳನ್ನು ಕೂಗುತ್ತಾ ಪ್ರತಿಭಟನೆ ಆರಂಭಿಸಿದರು. ವಿಶೇಷವಾಗಿ, ಎಂಟು ಸಂಸದರ ಅಮಾನತು ಮತ್ತು ರಾಹುಲ್ ಗಾಂಧಿ ಅವರಿಗೆ ಮಾತನಾಡಲು ಅವಕಾಶ ನಿರಾಕರಿಸಿದ್ದನ್ನು ವಿರೋಧಿಸಿ ಪ್ರತಿಭಟಿಸಿದರು.

ಈ ವೇಳೆ ಸ್ಪೀಕರ್ ಓಂ ಬಿರ್ಲಾ ಅವರು ಬುಧವಾರದ (ಫೆ.4) ಘಟನೆಗಳನ್ನು ಉಲ್ಲೇಖಿಸಿ ಪ್ರತಿಪಕ್ಷಗಳ ನಡವಳಿಕೆಯನ್ನು ತೀವ್ರವಾಗಿ ಖಂಡಿಸಿದರು. ಪ್ರಧಾನಿ ನರೇಂದ್ರ ಮೋದಿ ಅವರು ಮಾತನಾಡಬೇಕಿದ್ದ ಸಂದರ್ಭದಲ್ಲಿ ಪ್ರತಿಪಕ್ಷದ ಮಹಿಳಾ ಸದಸ್ಯರು ಆಡಳಿತ ಪಕ್ಷದ ಆಸನಗಳ ಬಳಿ ನುಗ್ಗಿದ್ದು ಸಂಸದೀಯ ವ್ಯವಸ್ಥೆಗೆ ಮಾಡಿದ “ಅಪಮಾನ” ಎಂದು ಅವರು ಟೀಕಿಸಿದರು.

“ಸದನವು ಚರ್ಚೆ ಮತ್ತು ಸಂವಾದಕ್ಕಾಗಿ ಇದೆಯೇ ಹೊರತು, ಘೋಷಣೆಗಳನ್ನು ಕೂಗಲು ಅಲ್ಲ” ಎಂದು ಬಿರ್ಲಾ ಅವರು ಪ್ರತಿಪಕ್ಷ ಸದಸ್ಯರನ್ನು ಉದ್ದೇಶಿಸಿ ಹೇಳಿದರು. ಸಂಸತ್ತಿನ ಘನತೆಯನ್ನು ಕಾಪಾಡುವುದು ಎಲ್ಲ ಸದಸ್ಯರ ಜವಾಬ್ದಾರಿ ಎಂದರು.

ಗದ್ದಲದ ನಡುವೆಯೇ ಸ್ಪೀಕರ್ ಅವರು ಪ್ರಶ್ನೋತ್ತರ ಅವಧಿಯನ್ನು ನಡೆಸಲು ಪ್ರಯತ್ನಿಸಿದರು. ಕೇವಲ ಐದು ನಿಮಿಷಗಳ ಕಾಲ ನಡೆದ ಈ ಅವಧಿಯಲ್ಲಿ ಒಂದೇ ಒಂದು ಪ್ರಶ್ನೆ ಮತ್ತು ಅದರ ಉಪಪ್ರಶ್ನೆಗಳನ್ನು ತೆಗೆದುಕೊಳ್ಳಲು ಸಾಧ್ಯವಾಯಿತು.

ಈ ನಡುವೆ ಪ್ರತಿಪಕ್ಷದ ಸದಸ್ಯರು ಪ್ಲಕಾರ್ಡ್‌ಗಳನ್ನು ಪ್ರದರ್ಶಿಸುತ್ತಾ ಸದನದ ಬಾವಿಗೆ ಇಳಿದು ಪ್ರತಿಭಟನೆ ಮುಂದುವರಿಸಿದ ಕಾರಣ, ಸ್ಪೀಕರ್ ಅವರು ಸದನವನ್ನು ನಡೆಸಲು ಸಾಧ್ಯವಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿ ಕಲಾಪವನ್ನು ಅಪರಾಹ್ನ 2 ಗಂಟೆಯವರೆಗೆ ಮುಂದೂಡಿದರು.

ಬೆಳಗ್ಗೆ 11 ಗಂಟೆಗೆ ಆರಂಭವಾದ ಕಲಾಪವು ವಿರೋಧ ಪಕ್ಷದ ಸದಸ್ಯರ ಘೋಷಣೆಗಳಿಂದಾಗಿ ಕೆಲವೇ ನಿಮಿಷಗಳಲ್ಲಿ ಮಧ್ಯಾಹ್ನ 12 ಗಂಟೆಯವರೆಗೆ ಮುಂದೂಡಲ್ಪಟ್ಟಿತು.

ಮಧ್ಯಾಹ್ನ 12 ಗಂಟೆಗೆ ಪುನಃ ಸಮಾವೇಶಗೊಂಡಾಗಲೂ ಗದ್ದಲ ಮುಂದುವರಿಯಿತು. ಈ ನಡುವೆಯೇ ರಾಷ್ಟ್ರಪತಿಗಳ ಭಾಷಣಕ್ಕೆ ವಂದನಾ ನಿರ್ಣಯವನ್ನು ಅಂಗೀಕರಿಸಿ, ಕಲಾಪವನ್ನು ಮಧ್ಯಾಹ್ನ 2 ಗಂಟೆಯವರೆಗೆ ಮುಂದೂಡಲಾಯಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿಯ ಪಾಲಂನಲ್ಲಿರುವ ಬಹುಮಹಡಿ ಕಟ್ಟಡದಲ್ಲಿ ಬೆಂಕಿ ಅವಘಡ: ಮೂವರು ಮಕ್ಕಳು ಸೇರಿ ಏಳು ಮಂದಿ ಸಾವು

ರಾಷ್ಟ್ರ ರಾಜಧಾನಿಯ ಪಾಲಂ ಪ್ರದೇಶದ ವಸತಿ ಕಟ್ಟಡದಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡು ಮೂವರು ಮಕ್ಕಳು ಸೇರಿದಂತೆ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದಾರೆ ಎಂದು ದೆಹಲಿ ಪೊಲೀಸರು ಬುಧವಾರ ತಿಳಿಸಿದ್ದಾರೆ. ಘಟನೆಯ ಮಾಹಿತಿ ತಿಳಿದ ತಕ್ಷಣ...

ವಾರಣಾಸಿ: ಗಂಗಾ ನದಿಯ ದೋಣಿಯಲ್ಲಿ ‘ಇಫ್ತಾರ್’ ಕೂಟ ಆಯೋಜಿಸಿದ್ದಕ್ಕಾಗಿ 14 ಜನರ ಬಂಧನ 

ವಾರಣಾಸಿಯಲ್ಲಿ ಗಂಗಾ ನದಿಯ ಮಧ್ಯದಲ್ಲಿ ದೋಣಿಯಲ್ಲಿ 'ಇಫ್ತಾರ್' (ರಂಜಾನ್ ಸಮಯದಲ್ಲಿ ಸೂರ್ಯಾಸ್ತದ ನಂತರ ತಿನ್ನುವ ಊಟ) ಕೂಟವನ್ನು ಆಯೋಜಿಸಿದ್ದಕ್ಕಾಗಿ ಹದಿನಾಲ್ಕು ಮುಸ್ಲಿಂ ಯುವಕರನ್ನು ಬಂಧಿಸಲಾಗಿದೆ.  ದೈನಂದಿನ ಮುಸ್ಲಿಂ ಜೀವನವನ್ನು ಅಪರಾಧೀಕರಿಸುವ ಮತ್ತೊಂದು ಪ್ರಕರಣ ಇದಾಗಿದ್ದು,...

ಚುನಾವಣೆ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಇಬ್ಬರು ಪ್ರಮುಖ ನಾಯಕರು ರಾಜೀನಾಮೆ

ಚುನಾವಣೆ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಇಬ್ಬರು ಪ್ರಮುಖ ನಾಯಕರು ತಮ್ಮ ಸ್ಥಾನಗಳಿಗೆ ಮಂಗಳವಾರ (ಮಾ.17) ರಾಜೀನಾಮೆ ಸಲ್ಲಿಸಿದ್ದಾರೆ. ಪಕ್ಷದ ಹಿರಿಯ ನಾಯಕ ಹಾಗೂ ನೌಗಾಂಗ್ ಲೋಕಸಭಾ ಕ್ಷೇತ್ರದ ಹಾಲಿ ಸಂಸದ ಪ್ರದ್ಯುತ್ ಬೋರ್ಡೊಲೊಯ್...

ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ : ಮೂವರು ಶಾಸಕರನ್ನು ಅಮಾನತುಗೊಳಿಸಿದ ಒಡಿಶಾ ಕಾಂಗ್ರೆಸ್

ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ್ದಕ್ಕಾಗಿ ಒಡಿಶಾ ಕಾಂಗ್ರೆಸ್ ಮೂವರು ಶಾಸಕರಾದ ಸೋಫಿಯಾ ಫಿರ್ದೌಸ್, ರಮೇಶ್ ಜೆನಾ ಮತ್ತು ದಾಸರಥಿ ಗೊಮಾಂಗೊ ಅವರನ್ನು ಅಮಾನತುಗೊಳಿಸಿದೆ. ಒಡಿಶಾ ವಿಧಾನಸಭೆಯಲ್ಲಿ ಕಾಂಗ್ರೆಸ್ 14 ಶಾಸಕರನ್ನು ಹೊಂದಿದ್ದು, ನಾಲ್ಕನೇ...

ಅಮೆರಿಕ ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ದಳದ ನಿರ್ದೇಶಕ ಜೋ ಕೆಂಟ್‌ ರಾಜೀನಾಮೆ

ಅಮೆರಿಕದ ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ಕೇಂದ್ರದ (ಎನ್‌ಸಿಟಿಸಿ) ನಿರ್ದೇಶಕ ಜೋ ಕೆಂಟ್ ಅವರು ಇರಾನ್ ಜೊತೆಗಿನ ಯುದ್ಧಕ್ಕೆ ವಿರೋಧ ವ್ಯಕ್ತಪಡಿಸಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. "ಇರಾನ್‌ನಿಂದ ಅಮೆರಿಕಕ್ಕೆ ಯಾವುದೇ ತಕ್ಷಣದ ಅಪಾಯವಿರಲಿಲ್ಲ. ಇಸ್ರೇಲ್‌ನ ಒತ್ತಡದಿಂದಾಗಿ...

ಪಶ್ಚಿಮ ಏಷ್ಯಾ ಸಂಘರ್ಷ: ಇರಾನ್ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ಹತ್ಯೆ ಮಾಡಿರುವುದಾಗಿ ಹೇಳಿಕೊಂಡ ಇಸ್ರೇಲ್ 

ಇರಾನ್‌ನ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ವೈಮಾನಿಕ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಇಸ್ರೇಲ್ ರಕ್ಷಣಾ ಸಚಿವ ಕಾಟ್ಜ್ ಮಂಗಳವಾರ ಹೇಳಿದ್ದಾರೆ. ಆದರೆ ಟೆಹ್ರಾನ್‌ನಿಂದ ಯಾವುದೇ ಅಧಿಕೃತ ದೃಢೀಕರಣವಿಲ್ಲ. ಕಾಟ್ಜ್ ಪ್ರಕಾರ, ಜನರಲ್ ಘೋಲಮ್...

ನಾಲ್ಕು ತಿಂಗಳಲ್ಲೇ ಗರಿಷ್ಠ ಮಟ್ಟಕ್ಕೆ ತಲುಪಿದ ಯುವಜನರ ನಿರುದ್ಯೋಗ ಪ್ರಮಾಣ

15–29 ವರ್ಷ ವಯಸ್ಸಿನ ಯುವಕರಲ್ಲಿ ನಿರುದ್ಯೋಗ ದರವು ಫೆಬ್ರವರಿಯಲ್ಲಿ ನಾಲ್ಕು ತಿಂಗಳಲ್ಲೇ ಗರಿಷ್ಠ ಶೇ. 14.8 ಕ್ಕೆ ಏರಿದೆ. ಇದು ಜನವರಿಯಲ್ಲಿ ಶೇ. 14.7 ರಷ್ಟು ಹೆಚ್ಚಾಗಿ, ಯುವಜನರಲ್ಲಿ ನಿರುದ್ಯೋಗ ಹೆಚ್ಚಳ ಉಂಟಾಗಿದೆ...

ಆರ್‌ಎಸ್‌ಎಸ್‌ ನಿಷೇಧಕ್ಕೆ ಒತ್ತಾಯಿಸಿದ ಅಮೆರಿಕದ ಧಾರ್ಮಿಕ ಸ್ವಾತಂತ್ರ್ಯ ಸಮಿತಿ; ಕಾಂಗ್ರೆಸ್ ಪ್ರತಿಕ್ರಿಯೆ

ಭಾರತದಲ್ಲಿ ಧಾರ್ಮಿಕ ಸ್ವಾತಂತ್ರ್ಯದ ಉಲ್ಲಂಘನೆಯಾಗಿದೆ ಎಂದು ಆರೋಪಿಸಿರುವ ಅಂತರರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯದ ಯುನೈಟೆಡ್ ಸ್ಟೇಟ್ಸ್ ಆಯೋಗವು, ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರೆಸ್ಸೆಸ್) ಮತ್ತು ಭಾರತದ ಬಾಹ್ಯ ಗುಪ್ತಚರ ಸಂಸ್ಥೆಯಾದ ಸಂಶೋಧನೆ, ವಿಶ್ಲೇಷಣಾ...

ಕಾಂಗ್ರೆಸ್ ವಿರುದ್ಧದ ‘ಟರ್ಕಿ ಕಚೇರಿ’ ಹೇಳಿಕೆ: ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ಸಮನ್ಸ್ ಜಾರಿ ಮಾಡಿದ ದೆಹಲಿ ಹೈಕೋರ್ಟ್

ಕಾಂಗ್ರೆಸ್ ವಿರುದ್ಧದ "ಟರ್ಕಿ ಕಚೇರಿ" ಆರೋಪಕ್ಕೆ ಸಂಬಂಧಿಸಿದಂತೆ ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ದೆಹಲಿ ಹೈಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಟರ್ಕಿಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಂತರರಾಷ್ಟ್ರೀಯ ಕಚೇರಿಯನ್ನು ನಡೆಸುತ್ತಿದೆ...

ಚುನಾವಣಾ ಆಯೋಗ ಬಿಜೆಪಿ ಆಜ್ಞೆಯ ಮೇರೆಗೆ ಕೆಲಸ ಮಾಡುತ್ತಿದೆ: ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ

ವಿಧಾನಸಭಾ ಚುನಾವಣೆಗೂ ಮುನ್ನ, ಭಾರತದ ಚುನಾವಣಾ ಆಯೋಗ (ಇಸಿಐ) ಪ್ರಸ್ತುತ ಡಿಜಿಪಿ, ಕೋಲ್ಕತ್ತಾ ಪೊಲೀಸ್ ಆಯುಕ್ತರು, ಮುಖ್ಯ ಮತ್ತು ಗೃಹ ಕಾರ್ಯದರ್ಶಿಗಳನ್ನು ಬದಲಿಸುವ ಮೂಲಕ ಪ್ರಮುಖ ಪುನರ್ರಚನೆಯನ್ನು ಮಾಡಿದೆ. ಪಶ್ಚಿಮ ಬಂಗಾಳದ ಹೊಸ ಡಿಜಿ...