Homeಮುಖಪುಟಪಶ್ಚಿಮ ಏಷ್ಯಾ ಸಂಘರ್ಷ ಕುರಿತು ಚರ್ಚೆಗೆ ಪ್ರತಿಪಕ್ಷಗಳು ಪಟ್ಟು : ಲೋಕಸಭೆ ಕಲಾಪ ಮುಂದೂಡಿಕೆ

ಪಶ್ಚಿಮ ಏಷ್ಯಾ ಸಂಘರ್ಷ ಕುರಿತು ಚರ್ಚೆಗೆ ಪ್ರತಿಪಕ್ಷಗಳು ಪಟ್ಟು : ಲೋಕಸಭೆ ಕಲಾಪ ಮುಂದೂಡಿಕೆ

- Advertisement -
- Advertisement -

ಲೋಕಸಭೆಯ ಬಜೆಟ್ ಅಧಿವೇಶನದ ಎರಡನೇ ಹಂತದ ಕಾರ್ಯ ಕಲಾಪಗಳು ಸೋಮವಾರ (ಮಾ.9) ಭಾರೀ ಗದ್ದಲದೊಂದಿಗೆ ಆರಂಭಗೊಂಡಿತು.

ಪಶ್ಚಿಮ ಏಷ್ಯಾದ ಪರಿಸ್ಥಿತಿಯ ಕುರಿತು ಚರ್ಚಿಸಲು ಆಗ್ರಹಿಸಿ ಪ್ರತಿಪಕ್ಷಗಳು ತೀವ್ರ ಪ್ರತಿಭಟನೆ ನಡೆಸಿದ ಹಿನ್ನೆಲೆ, ಸ್ಪೀಕರ್ ಪೀಠದಲ್ಲಿದ್ದ ಬಿಜೆಪಿ ಸಂಸದ ಜಗದಾಂಬಿಕ ಪಾಲ್ ಕಲಾಪವನ್ನು ಮಧ್ಯಾಹ್ನ 3 ಗಂಟೆಗೆ ಮುಂದೂಡಿದರು.

ಬೆಳಿಗ್ಗೆ 11 ಗಂಟೆಗೆ ಸದನ ಸಭೆ ಸೇರಿದಾಗ ಅಗಲಿದವರಿಗೆ ಸಂತಾಪ ಸೂಚಿಸಲಾಯಿತು. ಬಳಿಕ ಸ್ಪೀಕರ್ ಸದನವನ್ನು ಮಧ್ಯಾಹ್ನ 12 ಗಂಟೆಗೆ ಮುಂದೂಡಿದರು. 12 ಗಂಟೆಗೆ ಮತ್ತೆ ಸಭೆ ಸೇರಿದಾಗ, ವಿದೇಶಾಂಗ ಸಚಿವ ಡಾ. ಎಸ್ ಜೈಶಂಕರ್ ಅವರು ಪಶ್ಚಿಮ ಏಷ್ಯಾದ ಪರಿಸ್ಥಿತಿಯ ಬಗ್ಗೆ ಸ್ವಯಂಪ್ರೇರಿತ ಹೇಳಿಕೆ ನೀಡಿದರು.

ಈ ವೇಳೆ ಕಾಂಗ್ರೆಸ್, ಡಿಎಂಕೆ, ಎಸ್ಪಿ ಮತ್ತು ಇತರ ವಿರೋಧ ಪಕ್ಷಗಳ ಸದಸ್ಯರು ಪ್ಲೆಕಾರ್ಡ್ ಪ್ರದರ್ಶಿಸುತ್ತಾ ಸದನದ ಬಾವಿಗಿಳಿದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಸ್ಪೀಕರ್, ಸದನದಲ್ಲಿ ಪ್ಲೆಕಾರ್ಡ್‌ ಹಿಡಿಯುವಂತಿಲ್ಲ, ಇದು ನಿಯಮಗಳಿಗೆ ವಿರುದ್ದ ಎಂದರು. ಆದರೆ, ವಿಪಕ್ಷ ಸದಸ್ಯರು ತಮ್ಮ ಪ್ರತಿಭಟನೆ ಮುಂದುವರಿಸಿದರು.

ಈ ಮಧ್ಯೆ ಎದ್ದು ನಿಂತ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು, ಸದನದೊಳಗೆ ವಿಪಕ್ಷ ಸದಸ್ಯರ ವರ್ತನೆಯನ್ನು ಖಂಡಿಸಿದರು. “ನನ್ನ ಜೀವಿತಾವಧಿಯಲ್ಲಿ ಇಂತಹ ಬೇಜವಾಬ್ದಾರಿ ವಿರೋಧ ಪಕ್ಷವನ್ನು ಎಂದಿಗೂ ನೋಡಿಲ್ಲ” ಎಂದು ಹೇಳಿದರು.

ಲೋಕಸಭೆ ಸ್ಪೀಕರ್ ವಿರುದ್ಧ ನಿರ್ಣಯಕ್ಕೆ ಸಂಬಂಧಿಸಿದಂತೆ ಪ್ರತಿಪಕ್ಷಗಳು ನೋಟಿಸ್ ನೀಡಿವೆ ಮತ್ತು ಅದನ್ನು ಇಂದಿನ ಚರ್ಚೆಗೆ ಪಟ್ಟಿ ಮಾಡಲಾಗಿದೆ. ಆದರೆ, ಪ್ರತಿಪಕ್ಷಗಳು ಗೊಂದಲಕ್ಕೊಳಗಾಗಿದ್ದು, ಇಂದು ಇತರ ವಿಷಯಗಳ ಕುರಿತು ಚರ್ಚೆಗೆ ಒತ್ತಾಯಿಸುತ್ತಿವೆ ಎಂದು ರಿಜಿಜು ತಿಳಿಸಿದರು.

ಸ್ಪೀಕರ್ ಕೋರಿಕೆಯ ಹೊರತಾಗಿಯೂ, ವಿರೋಧ ಪಕ್ಷಗಳು ಪ್ರತಿಭಟನೆಯನ್ನು ಮುಂದುವರೆಸಿದ್ದರಿಂದ ಸದನವನ್ನು ಮಧ್ಯಾಹ್ನ 3 ಗಂಟೆಯವರೆಗೆ ಮುಂದೂಡಲಾಯಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಬೈ: ಸ್ವ-ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ಆಕ್ರೋಶ: ದಾದರ್‌ನಲ್ಲಿ ಮೂಢನಂಬಿಕೆ ವಿರೋಧಿ ಅಭಿಯಾನ

ಮುಂಬೈ: ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ಅವರ ಚಟುವಟಿಕೆಗಳ ಸುತ್ತ ವ್ಯಾಪಕ ಆಕ್ರೋಶ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ, ವಿವೇಕ್ ಜಾಗರ್ ಉಪಕ್ರಮದಡಿಯಲ್ಲಿ ಮಹಾರಾಷ್ಟ್ರ ಅಂಧಾಶ್ರದ್ಧ ನಿರ್ಮೂಲನ ಸಮಿತಿ (MANS) ಮಹಾರಾಷ್ಟ್ರ ಘಟಕವು ಭಾನುವಾರ...

ನೋಟಿಸ್ ನೀಡದೆ ಮಸೀದಿ ಬಂದ್; ಉತ್ತರ ಪ್ರದೇಶ ಸರ್ಕಾರವನ್ನು ಪ್ರಶ್ನಿಸಿದ ಅಲಹಾಬಾದ್ ಹೈಕೋರ್ಟ್

ಪೂರ್ವ ಸೂಚನೆ ನೀಡದೆ ಅಥವಾ ಮಾಲೀಕರಿಗೆ ವಿಚಾರಣೆಗೆ ಅವಕಾಶ ನೀಡದೆ ಪ್ರಾರ್ಥನಾ ಸ್ಥಳಕ್ಕೆ ಬೀಗ ಹಾಕಬಹುದೇ ಎಂಬ ಬಗ್ಗೆ ವಿವರಣೆ ನೀಡಬೇಕು ಎಂದು ಅಲಹಾಬಾದ್ ಹೈಕೋರ್ಟ್ ಉತ್ತರ ಪ್ರದೇಶ ಸರ್ಕಾರವನ್ನು ಕೇಳಿದೆ. ಮುಜಫರ್‌ನಗರದಲ್ಲಿ ಮಸೀದಿಯನ್ನು...

ಬಿಜು ಪಟ್ನಾಯಕ್ ಕುರಿತು ಹೇಳಿಕೆ : ಬಿಜೆಪಿ ಸಂಸದ ನಿಶಿಕಾಂತ್ ದುಬೆ ವಿರುದ್ಧ ತೀವ್ರ ಆಕ್ರೋಶ

ಒಡಿಶಾದ ಮಾಜಿ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಅವರ ಕುರಿತು ಬಿಜೆಪಿ ಸಂಸದ ನಿಶಿಕಾಂತ್ ದುಬೆ ನೀಡಿರುವ ಹೇಳಿಕೆಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. ದುಬೆ ನೇತೃತ್ವದ ಸಂವಹನ ಮತ್ತು ಐಟಿ ಕುರಿತ ಸಂಸದೀಯ ಸ್ಥಾಯಿ...

ಮುರ್ಷಿದಾಬಾದ್ ರಾಮನವಮಿ ಹಿಂಸಾಚಾರ; ಆರ್‌ಎಸ್‌ಎಸ್ ನಾಯಕ ಸೇರಿದಂತೆ 30 ಜನರ ಬಂಧನ

ಮಾರ್ಚ್ 27 ರಂದು ಮುರ್ಷಿದಾಬಾದ್ ಜಿಲ್ಲೆಯ ಜಂಗಿಪುರ ಉಪವಿಭಾಗದ ರಘುನಾಥಗಂಜ್‌ನಲ್ಲಿ ನಡೆದ ರಾಮನವಮಿ ಮೆರವಣಿಗೆ ಹಿಂಸಾಚಾರಕ್ಕೆ ತಿರುಗಿದ ನಂತರ ಸುಮಾರು 30 ಜನರು ಗಾಯಗೊಂಡರು. ಈ ಘಟನೆಯು ವ್ಯಾಪಕ ಉದ್ವಿಗ್ನತೆಗೆ ಕಾರಣವಾಗಿದ್ದು, ಅಂಗಡಿ...

ದೆಹಲಿ ಗಲಭೆ ಪ್ರಕರಣ: ಮಧ್ಯಂತರ ಜಾಮೀನು ಅವಧಿ ಅಂತ್ಯ; ಇಂದು ತಿಹಾರ್ ಜೈಲಿಗೆ ಮರಳಲಿರುವ ಶಾರ್ಜೀಲ್ ಇಮಾಮ್

2020 ರ ಈಶಾನ್ಯ ದೆಹಲಿ ಗಲಭೆಯ ಹಿಂದಿನ ದೊಡ್ಡ ಪಿತೂರಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ನ್ಯಾಯಾಲಯವು ನೀಡಿದ್ದ 10 ದಿನಗಳ ಮಧ್ಯಂತರ ಜಾಮೀನು ಅವಧಿ ಮುಗಿದ ಹಿನ್ನೆಲೆಯಲ್ಲಿ ವಿದ್ಯಾರ್ಥಿ ಕಾರ್ಯಕರ್ತ ಶಾರ್ಜೀಲ್ ಇಮಾಮ್...

ಕುವೈತ್ ವಿದ್ಯುತ್ ಸ್ಥಾವರ, ಉಪ್ಪು ನಿವಾರಣಾ ಘಟಕದ ಮೇಲೆ ಇರಾನ್ ದಾಳಿ: ಭಾರತ ಮೂಲದ ಕಾರ್ಮಿಕ ಸಾವು

ದುಬೈ: ಕುವೈತ್‌ನಲ್ಲಿ ವಿದ್ಯುತ್ ಮತ್ತು ನೀರು ನಿವಾರಣಾ ಘಟಕದ ಮೇಲೆ ಇರಾನ್ ನಡೆಸಿದ ದಾಳಿಯಲ್ಲಿ ಭಾರತೀಯ ಪ್ರಜೆಯೊಬ್ಬರು ಸಾವನ್ನಪ್ಪಿದ್ದಾರೆ ಎಂದು ದೇಶದ ಸರ್ಕಾರಿ ಸುದ್ದಿ ಸಂಸ್ಥೆ ಕುನಾ ಸೋಮವಾರ ವರದಿ ಮಾಡಿದೆ. ದಾಳಿಯ ಸಮಯದಲ್ಲಿ...

1,100 ಕ್ಕೂ ಹೆಚ್ಚು ಬಾಂಬ್ ಬೆದರಿಕೆ ಆರೋಪ; ದೆಹಲಿ ಪೊಲೀಸರಿಂದ ಮೈಸೂರಿನ ವ್ಯಕ್ತಿ ಬಂಧನ

ದೇಶಾದ್ಯಂತ ಹಲವು ಶಾಲೆಗಳು, ಹೈಕೋರ್ಟ್‌ ಮತ್ತು ಸರ್ಕಾರಿ ಕಚೇರಿಗಳಿಗೆ 1,100 ಕ್ಕೂ ಹೆಚ್ಚು ಬಾಂಬ್ ಬೆದರಿಕೆಗಳನ್ನು ಕಳುಹಿಸಿದ ಆರೋಪದ ಮೇಲೆ ದೆಹಲಿ ಪೊಲೀಸರು ಮೈಸೂರಿನ ವ್ಯಕ್ತಿಯನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ. ದೆಹಲಿ...

ಬಾಂಗ್ಲಾದೇಶದಿಂದ ಭಾರತದಲ್ಲಿ ಭಯೋತ್ಪಾದಕ ದಾಳಿ ನಿರ್ವಹಿಸುತ್ತಿದ್ದ ಲಷ್ಕರ್ ಕಮಾಂಡರ್ ಶಬ್ಬೀರ್ ಅಹ್ಮದ್ ಲೋನ್ ಬಂಧನ

ನವದೆಹಲಿ: ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯಲ್ಲಿ ಪ್ರಮುಖ ಪ್ರಗತಿಯಲ್ಲಿ, ಬಾಂಗ್ಲಾದೇಶದಲ್ಲಿ ನೆಲೆಸಿದ್ದು, ಭಾರತದಲ್ಲಿ ದಾಳಿಗಳನ್ನು ಯೋಜಿಸುತ್ತಿದ್ದ ಆರೋಪ ಹೊತ್ತಿರುವ ಲಷ್ಕರ್-ಎ-ತೊಯ್ಬಾ (ಎಲ್‌ಇಟಿ) ಕಾರ್ಯಕರ್ತನನ್ನು ದೆಹಲಿ ಗಡಿಯ ಬಳಿ ಬಂಧಿಸಲಾಗಿದೆ ಎಂದು ಅಧಿಕಾರಿಗಳು ಸೋಮವಾರ ದೃಢಪಡಿಸಿದ್ದಾರೆ. ಆರೋಪಿ...

‘ಗುಪ್ತಾಂಗಕ್ಕೆ ಪೆಟ್ರೋಲ್ ಸುರಿದರು, ಪ್ರಾಣಿಯಂತೆ ಥಳಿಸಿದರು’ : ಪೊಲೀಸರ ವಿರುದ್ಧ ಚಿತ್ರಹಿಂಸೆ ಆರೋಪ ಮಾಡಿದ ಪತ್ರಕರ್ತ

ಗುಜರಾತ್‌ನ ರಾಜ್‌ಕೋಟ್‌ನ ಸ್ಥಳೀಯ ಪತ್ರಕರ್ತ ಸುದೇಶ್ ವಡೇಚಾ ಎಂಬವರು, ಪೊಲೀಸ್ ಕಸ್ಟಡಿಯಲ್ಲಿ ತನಗೆ ತೀವ್ರ ಚಿತ್ರ ಹಿಂಸೆ ನೀಡಲಾಗಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ. 'ಖಬರ್ ರಾಜ್‌ಕೋಟ್ ಕಿ ನ್ಯೂಸ್' ಎಂಬ ಆನ್‌ಲೈನ್...

‘168 ಮಕ್ಕಳನ್ನು ಕೊಂದವರ ನೆನಪಿಡಿ’ : ಇರಾನ್‌ನಿಂದ ಅಮೆರಿಕ ಅಧಿಕಾರಿಗಳ ಫೋಟೋ ಬಿಡುಗಡೆ

ಬರೋಬ್ಬರಿ 168 ಕಂದಮ್ಮಗಳ ಸಾವಿಗೆ ಕಾರಣವಾದ, ಮಿನಾಬ್‌ನ ಶಾಲೆ ಮೇಲಿನ ಕ್ಷಿಪಣಿ ದಾಳಿಗೆ ಅಮೆರಿಕದ ನೌಕಾಪಡೆಯ ಅಧಿಕಾರಿಗಳಾದ ಕಮಾಂಡರ್ ಲೀ ಆರ್. ಟೇಟ್ ಮತ್ತು ಯುಎಸ್ಎಸ್ ಸ್ಪ್ರೂಯನ್ಸ್‌ನ ಎಕ್ಸಿಕ್ಯೂಟಿವ್ ಆಫೀಸರ್ ಜೆಫ್ರಿ ಇ....