Homeಮುಖಪುಟಲೋಕಸಭೆ ಕಲಾಪ ಹಲವು ಬಾರಿ ಮುಂದೂಡಿಕೆ, ಪ್ರಧಾನಿ ಪ್ರತಿಕ್ರಿಯೆ ಇಲ್ಲದೆ ರಾಷ್ಟ್ರಪತಿ ಭಾಷಣಕ್ಕೆ ವಂದನಾ ನಿರ್ಣಯ

ಲೋಕಸಭೆ ಕಲಾಪ ಹಲವು ಬಾರಿ ಮುಂದೂಡಿಕೆ, ಪ್ರಧಾನಿ ಪ್ರತಿಕ್ರಿಯೆ ಇಲ್ಲದೆ ರಾಷ್ಟ್ರಪತಿ ಭಾಷಣಕ್ಕೆ ವಂದನಾ ನಿರ್ಣಯ

- Advertisement -
- Advertisement -

ಪ್ರತಿಪಕ್ಷಗಳ ತೀವ್ರ ಪ್ರತಿಭಟನೆ ಹಿನ್ನೆಲೆ ಇಂದು (ಫೆ.5, ಗುರುವಾರ) ಲೋಕಸಭೆ ಕಲಾಪ ಹಲವು ಬಾರಿ ಮುಂದೂಡಿಕೆಯಾಯಿತು. ಆದರೂ, ಗದ್ದಲ ಕಡಿಮೆಯಾಗದ ಕಾರಣ ಅಂತಿಮವಾಗಿ ಸ್ಪೀಕರ್ ಓಂ ಬಿರ್ಲಾ ಕಲಾಪವನ್ನು ಒಂದು ದಿನದ ಮಟ್ಟಿಗೆ, ಅಂದರೆ ನಾಳೆಗೆ (ಫೆ.6, ಶುಕ್ರವಾರ) ಮಂದೂಡಿದರು.

ಬೆಳಿಗ್ಗೆ 11 ಗಂಟೆಗೆ ಸದನ ಸಮಾವೇಶಗೊಳ್ಳುತ್ತಿದ್ದಂತೆಯೇ, ಪ್ರತಿಪಕ್ಷದ ಸದಸ್ಯರು ಘೋಷಣೆಗಳನ್ನು ಕೂಗುತ್ತಾ ಪ್ರತಿಭಟನೆ ಆರಂಭಿಸಿದರು. ವಿಶೇಷವಾಗಿ, ವಿಪಕ್ಷಗಳ ಎಂಟು ಸಂಸದರ ಅಮಾನತು, ರಾಹುಲ್ ಗಾಂಧಿಯವರಿಗೆ ಮಾತನಾಡಲು ಅವಕಾಶ ನಿರಾಕರಿಸಿದ್ದನ್ನು ವಿರೋಧಿಸಿ ಪ್ರತಿಭಟಿಸಿದರು.

ಮಾಜಿ ಸೇನಾ ಮುಖ್ಯಸ್ಥ ಎಂ.ಎಂ ನರವಾಣೆ ಅವರ ಪುಸ್ತಕದ ಅಂಶಗಳನ್ನು ಉಲ್ಲೇಖಿಸಲು ಮತ್ತು ಭಾರತ-ಅಮೆರಿಕ ವ್ಯಾಪಾರ ಒಪ್ಪಂದದ ಕುರಿತು ಚರ್ಚೆಗೆ ಅವಕಾಶ ನೀಡದಿರುವುದನ್ನು ಖಂಡಿಸಿದರು.

ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸೇರಿದಂತೆ ಅನೇಕ ಸದಸ್ಯರು ರೈತರ ಹಿತಾಸಕ್ತಿ ಕಾಪಾಡುವಂತೆ ಒತ್ತಾಯಿಸಿದರು. ಗದ್ದಲ ಹೆಚ್ಚಾದ ಕಾರಣ ಸ್ಪೀಕರ್ ಓಂ ಬಿರ್ಲಾ ಕಲಾಪವನ್ನು ಮಧ್ಯಾಹ್ನ 12 ಗಂಟೆಗೆ ಮುಂದೂಡಿದರು.

12 ಗಂಟೆಗೆ ಮತ್ತೆ ಸದನ ಪ್ರಾರಂಭವಾಯಿತು, ಪ್ರತಿಪಕ್ಷ ಸದಸ್ಯರು ತಮ್ಮ ಪ್ರತಿಭಟನೆಯನ್ನು ಮುಂದುವರಿಸಿದರು. ಈ ವೇಳೆ ಸ್ಪೀಕರ್ ಓಂ ಬಿರ್ಲಾ ಅವರು ಬುಧವಾರದ (ಫೆ.4) ಘಟನೆಗಳನ್ನು ಉಲ್ಲೇಖಿಸಿ ಪ್ರತಿಪಕ್ಷಗಳ ನಡವಳಿಕೆಯನ್ನು ತೀವ್ರವಾಗಿ ಖಂಡಿಸಿದರು. ಪ್ರಧಾನಿ ನರೇಂದ್ರ ಮೋದಿ ಮಾತನಾಡಬೇಕಿದ್ದ ಸಂದರ್ಭದಲ್ಲಿ ಪ್ರತಿಪಕ್ಷದ ಮಹಿಳಾ ಸದಸ್ಯರು ಆಡಳಿತ ಪಕ್ಷದ ಆಸನಗಳ ಬಳಿ ನುಗ್ಗಿದ್ದು ಸಂಸದೀಯ ವ್ಯವಸ್ಥೆಗೆ ಮಾಡಿದ “ಅಪಮಾನ” ಎಂದು ಅವರು ಟೀಕಿಸಿದರು.

“ಸದನವು ಚರ್ಚೆ ಮತ್ತು ಸಂವಾದಕ್ಕಾಗಿ ಇದೆಯೇ ಹೊರತು, ಘೋಷಣೆಗಳನ್ನು ಕೂಗಲು ಅಲ್ಲ” ಎಂದು ಬಿರ್ಲಾ ಅವರು ಪ್ರತಿಪಕ್ಷ ಸದಸ್ಯರನ್ನು ಉದ್ದೇಶಿಸಿ ಹೇಳಿದರು. ಸಂಸತ್ತಿನ ಘನತೆಯನ್ನು ಕಾಪಾಡುವುದು ಎಲ್ಲ ಸದಸ್ಯರ ಜವಾಬ್ದಾರಿ ಎಂದರು.

ಗದ್ದಲದ ನಡುವೆಯೇ ಸ್ಪೀಕರ್ ಪ್ರಶ್ನೋತ್ತರ ಅವಧಿಯನ್ನು ನಡೆಸಲು ಪ್ರಯತ್ನಿಸಿದರು. ಕೇವಲ ಐದು ನಿಮಿಷಗಳ ಕಾಲ ನಡೆದ ಈ ಅವಧಿಯಲ್ಲಿ ಒಂದೇ ಒಂದು ಪ್ರಶ್ನೆ ಮತ್ತು ಅದರ ಉಪಪ್ರಶ್ನೆಗಳನ್ನು ತೆಗೆದುಕೊಳ್ಳಲು ಸಾಧ್ಯವಾಯಿತು.

ಈ ನಡುವೆ ಪ್ರತಿಪಕ್ಷದ ಸದಸ್ಯರು ಪ್ಲಕಾರ್ಡ್‌ಗಳನ್ನು ಪ್ರದರ್ಶಿಸುತ್ತಾ ಸದನದ ಬಾವಿಗೆ ಇಳಿದು ಪ್ರತಿಭಟನೆ ಮುಂದುವರಿಸಿದ ಕಾರಣ, ಸ್ಪೀಕರ್ ಸದನವನ್ನು ನಡೆಸಲು ಸಾಧ್ಯವಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿ ಕಲಾಪವನ್ನು ಮಧ್ಯಾಹ್ನ 2 ಗಂಟೆಯವರೆಗೆ ಮುಂದೂಡಿದರು.

ಮಧ್ಯಾಹ್ನ 2 ಗಂಟೆಗೆ ಸದನ ಸೇರಿದಾಗ ಸರ್ಕಾರ ರಾಷ್ಟ್ರಪತಿಗಳ ಭಾಷಣಕ್ಕೆ ವಂದನಾ ನಿರ್ಣಯವನ್ನು ಮಂಡಿಸಿತು. ಗದ್ದಲದ ನಡುವೆಯೇ ರಾಷ್ಟ್ರಪತಿಗಳ ಭಾಷಣಕ್ಕೆ ವಂದನಾ ನಿರ್ಣಯವನ್ನು ಧ್ವನಿ ಮತದ ಮೂಲಕ ಅಂಗೀಕರಿಸಲಾಯಿತು. ಸಂಸತ್ತಿನ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಪ್ರಧಾನಿಯ ಉತ್ತರ ಇಲ್ಲದೆ ನಿರ್ಣಯ ಅಂಗೀಕಾರವಾಯಿತು.

ವಿರೋಧ ಪಕ್ಷದ ಸಂಸದರು ಪ್ರಧಾನಿ ನರೇಂದ್ರ ಮೋದಿಯವರ ಆಸನದ ಬಳಿ ಹೋಗಿ ಪ್ರತಿಭಟನೆ ನಡೆಸಲು ಯೋಜಿಸಿದ್ದಾರೆ ಎಂಬ ಗುಪ್ತಚರ ಮಾಹಿತಿ ಇದ್ದ ಕಾರಣ, ಸುರಕ್ಷತೆಯ ದೃಷ್ಟಿಯಿಂದ ಪ್ರಧಾನಿಯವರು ಸದನಕ್ಕೆ ಬರದಂತೆ ಸೂಚಿಸಲಾಗಿದೆ ಎಂದು ಸ್ಪೀಕರ್ ತಿಳಿಸಿದರು.

ಗದ್ದಲದ ನಡುವೆ ಸದನವನ್ನು ನಡೆಸಲು ಸಾಧ್ಯವಿಲ್ಲ ಎಂದು ತೀರ್ಮಾನಿಸಿದ ಸ್ಪೀಕರ್, ಕಲಾಪವನ್ನು ನಾಳೆ ಬೆಳಿಗ್ಗೆ 11 ಗಂಟೆಗೆ ಮುಂದೂಡಿದರು.

ರಾಜ್ಯಸಭೆಯಲ್ಲಿ ಮೋದಿ ಭಾಷಣ

ಲೋಕಸಭೆಯಲ್ಲಿ ಗದ್ದಲವಿದ್ದರೂ, ಪ್ರಧಾನಿ ಮೋದಿಯವರು ರಾಜ್ಯಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣಕ್ಕೆ ಉತ್ತರ ನೀಡಿದರು. ಈ ವೇಳೆ ಅವರು ಕಾಂಗ್ರೆಸ್ ಆಡಳಿತದ ಹಳೆಯ ತಪ್ಪುಗಳನ್ನು ಟೀಕಿಸಿದರು ಮತ್ತು ಭಾರತದ ಆರ್ಥಿಕ ಪ್ರಗತಿಯನ್ನು ಸಮರ್ಥಿಸಿಕೊಂಡರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...