Homeಮುಖಪುಟಲೋಕಸಭಾ, ವಿಧಾನಸಭಾ ಉಪಚುನಾವಣೆ ಅಪ್‌ಡೇಟ್ಸ್‌: ಎಸ್‌ಪಿಗೆ ಮುಖಭಂಗ

ಲೋಕಸಭಾ, ವಿಧಾನಸಭಾ ಉಪಚುನಾವಣೆ ಅಪ್‌ಡೇಟ್ಸ್‌: ಎಸ್‌ಪಿಗೆ ಮುಖಭಂಗ

ದೆಹಲಿ ಹಾಗೂ ಐದು ರಾಜ್ಯಗಳಲ್ಲಿ ಉಪಚುನಾವಣೆ ನಡೆದಿದ್ದು, ಮೂರು ಲೋಕಸಭೆ ಮತ್ತು ಏಳು ವಿಧಾನಸಭಾ ಕ್ಷೇತ್ರಗಳ ಫಲಿತಾಂಶ ಇಂದು ಹೊರಬಿದ್ದಿದೆ.

- Advertisement -
- Advertisement -

ದೆಹಲಿ ಹಾಗೂ ಐದು ರಾಜ್ಯಗಳಲ್ಲಿ ಉಪಚುನಾವಣೆ ನಡೆದಿದ್ದು, ಮೂರು ಲೋಕಸಭೆ ಮತ್ತು ಏಳು ವಿಧಾನಸಭಾ ಕ್ಷೇತ್ರಗಳ ಫಲಿತಾಂಶ ಇಂದು ಹೊರಬಿದ್ದಿದೆ.

ಉತ್ತರ ಪ್ರದೇಶದ ರಾಂಪುರದಲ್ಲಿ ಬಿಜೆಪಿ ಅಭ್ಯರ್ಥಿ ಘನಶ್ಯಾಮ್ ಲೋಧಿ 40,000 ಮತಗಳ ಅಂತರದಿಂದ ಜಯಗಳಿಸಿದರೆ, ಅಜಂಗಢದಲ್ಲಿ ಪಕ್ಷದ ಅಭ್ಯರ್ಥಿ ದಿನೇಶ್ ಲಾಲ್ ಯಾದವ್ ನಿರಾಹುವಾ ಗೆಲುವು ಸಾಧಿಸಿದ್ದಾರೆ.

ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರ ಭದ್ರಕೋಟೆಯಾದ ಸಂಗ್ರೂರ್‌ನಲ್ಲಿ ಶಿರೋಮಣಿ ಅಕಾಲಿದಳದ ಸಿಮ್ರಂಜಿತ್ ಸಿಂಗ್ ಮಾನ್ 7,000 ಮತಗಳ ಅಂತರದಿಂದ ಗೆದ್ದಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ದೆಹಲಿಯ ರಾಜಿಂದರ್ ನಗರ ಉಪಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷದ (ಎಎಪಿ) ಅಭ್ಯರ್ಥಿ ದುರ್ಗೇಶ್ ಪಾಠಕ್ 11,000 ಮತಗಳಿಂದ ಗೆದ್ದಿದ್ದಾರೆ.

ತ್ರಿಪುರಾದಲ್ಲಿ ಅಗರ್ತಲಾ, ಜುಬಾರಾಜ್‌ನಗರ, ಸುರ್ಮಾ ಮತ್ತು ಟೌನ್ ಬರ್ದೋವಾಲಿ ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಡೆದಿದೆ. ತಮ್ಮ ಸ್ಥಾನವನ್ನು ಉಳಿಸಿಕೊಳ್ಳಲು ಚುನಾಯಿತರಾಗಬೇಕಾಗಿದ್ದ ಮುಖ್ಯಮಂತ್ರಿ ಮಾಣಿಕ್ ಸಹಾ ಅವರು ಟೌನ್ ಬರ್ಡೋವಾಲಿಯಲ್ಲಿ 6,000ಕ್ಕೂ ಹೆಚ್ಚು ಮತಗಳ ಅಂತರದಿಂದ ಗೆದ್ದರು.

ಆಂಧ್ರಪ್ರದೇಶದ ಆತ್ಮಕೂರ್‌ನಲ್ಲಿ ನಡೆದ ಉಪಚುನಾವಣೆಯಲ್ಲಿ ಆಡಳಿತಾರೂಢ ವೈಎಸ್‌ಆರ್‌ ಕಾಂಗ್ರೆಸ್‌ನ ಮೇಕಪತಿ ವಿಕ್ರಮ್ ರೆಡ್ಡಿ ಗೆಲುವು ಸಾಧಿಸಿದ್ದಾರೆ.

ಜೂನ್ 23 ರಂದು ಉಪಚುನಾವಣೆ ನಡೆದಿತ್ತು.

ಎಸ್‌ಪಿಗೆ ಆಘಾತ

ಸಮಾಜವಾದಿ ಪಕ್ಷಕ್ಕೆ ದೊಡ್ಡ ಹೊಡೆತ ಈ ಚುನಾವಣೆಯಲ್ಲಿ ಬಿದ್ದಿದೆ. ರಾಮ್‌ಪುರ, ಅಜಂಗಢ ಲೋಕಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಿದೆ.

ಪ್ರಮುಖ ವಿರೋಧ ಪಕ್ಷವಾದ ಸಮಾಜವಾದಿ ಪಕ್ಷಕ್ಕೆ ಹಿನ್ನಡೆಯಾಗಿದೆ. ರಾಂಪುರದಲ್ಲಿ ನಡೆದ ನೇರ ಸ್ಪರ್ಧೆಯಲ್ಲಿ ಬಿಜೆಪಿಯ ಘನಶ್ಯಾಮ್ ಲೋಧಿ ಅವರು ಸಮಾಜವಾದಿ ಪಕ್ಷದ (ಎಸ್‌ಪಿ) ಅಭ್ಯರ್ಥಿ ಮೊಹಮ್ಮದ್ ಅಸೀಂ ರಾಜಾ ಅವರನ್ನು 42,192 ಮತಗಳ ಅಂತರದಿಂದ ಸೋಲಿಸಿದ್ದಾರೆ.

ಲೋಧಿ ಅವರು 42,000 ಮತಗಳಿಂದ ಗೆದ್ದಿದ್ದಾರೆ ಎಂದು ರಾಂಪುರ ಜಿಲ್ಲಾ ಮ್ಯಾಜಿಸ್ಟ್ರೇಟ್ ರವೀಂದ್ರ ಕುಮಾರ್ ಬಿಜೆಪಿ ಅಭ್ಯರ್ಥಿಗೆ ಗೆಲುವಿನ ಪ್ರಮಾಣಪತ್ರ ನೀಡಿದ ನಂತರ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಲೋಧಿ 3,67,397 ಮತಗಳನ್ನು (ಶೇ 51.96) ಗಳಿಸಿದರೆ, ಎಸ್‌ಪಿಯ ರಾಜಾ 3,25,205 (ಶೇ 46) ಮತಗಳನ್ನು ಪಡೆದರು ಎಂದು ಚುನಾವಣಾ ಆಯೋಗ (ಇಸಿ) ತಿಳಿಸಿದೆ.

ಎರಡೂ ಕ್ಷೇತ್ರಗಳು ಅಖಿಲೇಶ್ ಯಾದವ್ ಪಕ್ಷದ ಭದ್ರಕೋಟೆಗಳಾಗಿದ್ದವು.

“ಉಪಚುನಾವಣೆಯಲ್ಲಿನ ಗೆಲುವು 2024ರ ಸಾರ್ವತ್ರಿಕ ಚುನಾವಣೆಗಳ ಬಗ್ಗೆ ಆಶಾವಾದದ ಸಂದೇಶವನ್ನು ರವಾನಿಸಿದೆ. ಜನರು ಪ್ರಧಾನಿ ಮೋದಿ ನೇತೃತ್ವದ ಡಬಲ್ ಇಂಜಿನ್ ಸರ್ಕಾರದ ಮೇಲೆ ತಮ್ಮ ವಿಶ್ವಾಸವನ್ನು ತೋರಿಸಿದ್ದಾರೆ” ಎಂದು ಯೋಗಿ ಆದಿತ್ಯನಾಥ್ ಅಭಿಪ್ರಾಯಪಟ್ಟಿದ್ದಾರೆ.

PC: NDTV

ತ್ರಿಪುರದಲ್ಲಿ ಹಿಂಸಾಚಾರ

ತ್ರಿಪುರಾ ವಿಧಾನಸಭೆಗೆ ನಡೆದ ಉಪಚುನಾವಣೆಯ ಫಲಿತಾಂಶಗಳು ಪ್ರಕಟವಾದ ಕೆಲವೇ ಗಂಟೆಗಳ ನಂತರ, ಅಗರ್ತಲಾ ನಗರದ ವಿವಿಧ ಭಾಗಗಳಲ್ಲಿ ಹಿಂಸಾಚಾರ ನಡೆದಿರುವ ಕುರಿತು ವರದಿಗಳಾಗಿವೆ. ಪೋಸ್ಟ್ ಆಫೀಸ್ ಚೌಮುಹಾನಿಯಲ್ಲಿರುವ ರಾಜ್ಯ ಕಾಂಗ್ರೆಸ್ ಪ್ರಧಾನ ಕಚೇರಿ ಬಳಿ ಘರ್ಷಣೆ ಸಂಭವಿಸಿದೆ.

ಇದನ್ನೂ ಓದಿರಿ: ಪಂಜಾಬ್ ಉಪಚುನಾವಣೆ: ಸಿಎಂ ಭಗವಂತ್ ಮಾನ್ ಪ್ರತಿನಿಧಿಸುತ್ತಿದ್ದ ಕ್ಷೇತ್ರ ಕಳೆದುಕೊಂಡ ಆಪ್

“ಬಿಜೆಪಿ ಬೆಂಬಲಿತ ಗೂಂಡಾಗಳ ಗುಂಪು ಕಾಂಗ್ರೆಸ್‌ ಬೆಂಬಲಿಗರ ಮೇಲೆ ದಾಳಿ ಮಾಡಿದೆ. ಯುವ ಕಾಂಗ್ರೆಸ್ ಕಾರ್ಯಕರ್ತನಿಗೆ ಇರಿಯಲಾಗಿದೆ. ಪಕ್ಷದ ಕೇಂದ್ರ ಕಚೇರಿಗೆ ಕಲ್ಲು ತೂರಾಟ ಮಾಡಲಾಗಿದೆ. ರಾಜ್ಯ ಕಾಂಗ್ರೆಸ್ ಅಧ್ಯಕ್ಷರ ತಲೆಗೆ ಗಾಯವಾಗಿದೆ” ಎಂದು ಕಾಂಗ್ರೆಸ್ ಪಕ್ಷ ಆರೋಪಿಸಿದೆ.

ಅಗರ್ತಲಾ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಗೆಲುವಿನ ನಂತರ ಬಿಜೆಪಿ ಗೂಂಡಾಗಳು ನಮ್ಮ ನಾಯಕರು ಮತ್ತು ಕಾರ್ಯಕರ್ತರ ಮೇಲೆ ನಡೆಸಿದ ಕೆಟ್ಟ ದಾಳಿಯನ್ನು ನಾನು ಬಲವಾಗಿ ಖಂಡಿಸುತ್ತೇನೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೇಪಾಳ–ಟಿಬೆಟ್ ಭೀಕರ ಪ್ರವಾಹ: ನೇಪಾಳದಲ್ಲಿ 734 ಸಾವು, 2,498 ಮಂದಿ ನಾಪತ್ತೆ; ಒಟ್ಟು ಸಾವಿನ ಸಂಖ್ಯೆ 750ಕ್ಕೆ ಏರಿಕೆ!

ನೇಪಾಳ–ಚೀನಾ ಗಡಿ ಪ್ರದೇಶದಲ್ಲಿ ಹಿಮನದಿ ಕುಸಿತದಿಂದ ಉಂಟಾದ ಭೀಕರ ಪ್ರವಾಹ ಮತ್ತು ಅವಶೇಷ ಪ್ರವಾಹದಲ್ಲಿ ನೇಪಾಳದಲ್ಲಿ ಇದುವರೆಗೆ 734 ಮಂದಿ ಮೃತಪಟ್ಟಿದ್ದು, 2,498 ಮಂದಿ ನಾಪತ್ತೆಯಾಗಿದ್ದಾರೆ. ಚೀನಾದ ಟಿಬೆಟ್ ಪ್ರದೇಶದಲ್ಲಿ 16 ಮಂದಿ...

“ಇಂತಹ ಸೌಹಾರ್ದತೆಯ ಮಾತುಗಳನ್ನು ಅಮೆರಿಕಾದಲ್ಲಲ್ಲ, ಭಾರತಕ್ಕೆ ಬಂದು ಇಲ್ಲಿನ ಜನರಿಗೆ ಹೇಳಿ!” – ಭಾಗವತ್‌ಗೆ ವಿರೋಧ ಪಕ್ಷಗಳ ಸವಾಲು

ನ್ಯೂಯಾರ್ಕ್/ಮುಂಬೈ: ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಸರಸಂಘಚಾಲಕ ಮೋಹನ್ ಭಾಗವತ್ ಅವರು ಅಮೆರಿಕಾದ ನ್ಯೂಯಾರ್ಕ್‌ನಲ್ಲಿ ನೀಡಿರುವ ಸೌಹಾರ್ದತೆಯ ಹೇಳಿಕೆ ಈಗ ಭಾರತೀಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದೆ. ವಿದೇಶಿ ಮಣ್ಣಿನಲ್ಲಿ ಮುಸ್ಲಿಂ ಸಮುದಾಯದ ಪರವಾಗಿ...

ಸ್ವದೇಶದಲ್ಲಿ ಹಿಂದೂ ರಾಷ್ಟ್ರ, ವಿದೇಶದಲ್ಲಿ ಒಳಗೊಳ್ಳುವಿಕೆ ಮಂತ್ರ : ಆರ್‌ಎಸ್‌ಎಸ್‌ ದ್ವಂದ್ವ ನಿಲುವು ಪ್ರಶ್ನಿಸಿದ ಪ್ರಿಯಾಂಕ್ ಖರ್ಗೆ

"ಭಾರತದಲ್ಲಿ ಮುಸ್ಲಿಮರು ಇರಬಾರದು ಎನ್ನುವವನು ಹಿಂದೂ ಅಲ್ಲ" ಎಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ಅಮೆರಿದಲ್ಲಿ ನೀಡಿರುವ ಹೇಳಿಕೆಯ ಸುತ್ತ ಭಾರೀ ಚರ್ಚೆಗಳು ನಡೆಯುತ್ತಿವೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ...

ಮಹಾರಾಷ್ಟ್ರ | ಬುಡಕಟ್ಟು ವಿದ್ಯಾರ್ಥಿಗಳ ಹೋರಾಟಕ್ಕೆ ಜಯ : ಎಲ್ಲಾ ಬೇಡಿಕೆಗಳ ಈಡೇರಿಕೆಗೆ ಒಪ್ಪಿದ ಸರ್ಕಾರ

ಮಹಾರಾಷ್ಟ್ರದಲ್ಲಿ ಸರ್ಕಾರಿ ಉದ್ಯೋಗಗಳಲ್ಲಿ ಪರಿಶಿಷ್ಟ ಪಂಗಡದ (ಎಸ್‌ಟಿ) ಅಭ್ಯರ್ಥಿಗಳಿಗೆ ಆದ್ಯತೆ ಹಾಗೂ ವಸತಿ ಶಾಲೆಗಳ ಮೂಲಸೌಕರ್ಯ ಸುಧಾರಣೆಗೆ ಆಗ್ರಹಿಸಿ ಕಳೆದ 16 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಬುಡಕಟ್ಟು ವಿದ್ಯಾರ್ಥಿಗಳ ಸುದೀರ್ಘ ಹೋರಾಟಕ್ಕೆ...

ಖರ್ಗೆ ಭಾಷಣ ಸ್ಥಳದ ‘ಶುದ್ಧೀಕರಣ’: ಬಿಜೆಪಿ-RSS, ಸಂಘ ಪರಿವಾರದ ವಿಷಪೂರಿತ ಮನಸ್ಥಿತಿ ಮಾಜಿ ಸಿಎಂ ಸಿದ್ದರಾಮಯ್ಯ

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಮಾವೇಶದಲ್ಲಿ ಪಾಲ್ಗೊಂಡ ಬಳಿಕ, ಬಲಪಂಥೀಯ ಸಂಘಟನೆಯೊಂದು ಆ ಮೈದಾನದಲ್ಲಿ 'ಶುದ್ಧೀಕರಣ' ಕೈಗೊಂಡಿರುವುದಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಆಕ್ರೋಶ...

ಸೋನಿಯಾ ಗಾಂಧಿ ಆತ್ಮಕಥೆ ವಿವಾದ | ಮೋದಿ, ಆರ್‌ಎಸ್‌ಎಸ್, ಚೀನಾ ನುಸುಳುವಿಕೆ ಕುರಿತ ಭಾಗಗಳನ್ನು ತೆಗೆದುಹಾಕಲು ಪೆಂಗ್ವಿನ್ ಇಂಡಿಯಾ ಕೋರಿತ್ತು : ಕಾಂಗ್ರೆಸ್ ಆರೋಪ

ಪ್ರಧಾನಿ ನರೇಂದ್ರ ಮೋದಿ, ಆರ್‌ಎಸ್‌ಎಸ್ ಮತ್ತು ಅವರ ಅಧಿಕಾರಾವಧಿಯಲ್ಲಿ ನಡೆದ ಭಾರತೀಯ ಭೂಪ್ರದೇಶದ ಮೇಲಿನ ಚೀನಾದ ಆಕ್ರಮಣದ ನಿರ್ವಹಣೆಗೆ ಸಂಬಂಧಿಸಿದ ಭಾಗಗಳನ್ನು ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ "ಬೆಲಾಂಗಿಂಗ್: ಎ ಜರ್ನಿ...

ಪಶ್ಚಿಮ ಬಂಗಾಳ| ದುರ್ಗಾಪೂಜೆ ಸಂದರ್ಭದಲ್ಲಿ ಮಾಂಸ ಮಾರಾಟ ನಿಷೇಧ ಆದೇಶ ಹೊರಡಿಸಿದ ವಿಎಚ್‌ಪಿ; ಬಲಪಂಥೀಯ ಸಂಘನೆಯ ಅಧಿಕಾರ ಪ್ರಶ್ನಿಸಿದ ವಿಪಕ್ಷಗಳು

ಪಶ್ಚಿಮ ಬಂಗಾಳದಲ್ಲಿ ದುರ್ಗಾಪೂಜೆ ಆಚರಣೆಗೆ ಸಂಬಂಧಿಸಿದಂತೆ ಬಲಪಂಥೀಯ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಹೊರಡಿಸಿರುವ ಮಾರ್ಗಸೂಚಿಯು ರಾಜಕೀಯ ಚರ್ಚೆಗೆ ಗ್ರಾಸವಾಗಿದೆ. ಪೂಜಾ ಮಂಟಪಗಳ ಸುತ್ತಮುತ್ತ ಸಸ್ಯಾಹಾರಿ ಅಲ್ಲದ ಮಾಂಸ ಮತ್ತು ಮೀನು...

ನ್ಯೂಯಾರ್ಕ್‌ನಲ್ಲಿ ಮೋಹನ್ ಭಾಗವತ್ ಕಾರ್ಯಕ್ರಮ: RSS ಮತ್ತು ಸಂಸ್ಥೆಯ ನಂಟಿನ ರಹಸ್ಯ ಬಯಲು

ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಸರಸಂಘಚಾಲಕ ಮೋಹನ್ ಭಾಗವತ್ ಅವರು ಶನಿವಾರ ನ್ಯೂಯಾರ್ಕ್‌ನ ಪ್ರಸಿದ್ಧ ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ಆಯೋಜಿಸಲಾಗಿರುವ ‘ಯೂನಿವರ್ಸಲ್ ಒನ್‌ನೆಸ್ ಸೆಲೆಬ್ರೇಷನ್ಸ್’ ಎಂಬ ಬೃಹತ್ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ವರದಿಗಳ ಪ್ರಕಾರ,...

ಮೋಹನ್ ಭಾಗವತ್ ನ್ಯೂಯಾರ್ಕ್ ಕಾರ್ಯಕ್ರಮಕ್ಕೆ ವಿರೋಧ : ಅಮೆರಿಕದ 61 ಸಂಘಟನೆಗಳಿಂದ ಪ್ರತಿಭಟನೆ

ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ಭಾಷಣ ಮಾಡಲಿರುವ, ಶನಿವಾರ (ಆ.29) ನ್ಯೂಯಾರ್ಕ್‌ನ ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ಆಯೋಜಿಸಲಾಗಿರುವ 'ಯೂನಿವರ್ಸಲ್ ಒನ್ನೆಸ್ ಸೆಲೆಬ್ರೇಷನ್ಸ್' ಕಾರ್ಯಕ್ರಮಕ್ಕೆ ತೀವ್ರ ವಿರೋಧ ವ್ಯಕ್ತವಾಗಿದೆ. ನ್ಯೂಯಾರ್ಕ್ ಮೇಯರ್ ಝೊಹ್ರಾನ್ ಮಮ್ದಾನಿ ಅವರು...

ಶಿವಮೊಗ್ಗ| ಈದ್-ಎ-ಮಿಲಾದ್ ರ್‍ಯಾಲಿಯಲ್ಲಿ ಪ್ಯಾಲೆಸ್ತೀನ್ ಧ್ವಜ ಪ್ರದರ್ಶನ: ಮೂವರ ವಿರುದ್ಧ ಪ್ರಕರಣ ದಾಖಲು

ಶಿವಮೊಗ್ಗದ ಆರ್‌ಎಂಎಲ್ ನಗರದಲ್ಲಿ ಈದ್-ಎ-ಮಿಲಾದ್ ಆಚರಣೆಗಾಗಿ ನಿರ್ಮಿಸಲಾಗಿದ್ದ ಕಟೌಟ್ ಒಂದರ ಮೇಲೆ ಫೆಲೆಸ್ತೀನ್ ಧ್ವಜವನ್ನು ಪ್ರದರ್ಶಿಸಿದ ಆರೋಪದ ಮೇಲೆ ಪೊಲೀಸರು ಮೂವರು ಮುಸ್ಲಿಂ ಯುವಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಆರೋಪಿಗಳನ್ನು ನಿಹಾಲ್ ಉರುಫ್ ಬೆಕ್ಕು,...