Homeಮುಖಪುಟಲೋಕಸಭಾ ಉಪ ಚುನಾವಣೆ: ಕಾಂಗ್ರೆಸ್, ಬಿಜೆಪಿ, ಶಿವಸೇನೆ ತಲಾ ಒಂದೊಂದು ಕ್ಷೇತ್ರಗಳಲ್ಲಿ ಗೆಲುವು

ಲೋಕಸಭಾ ಉಪ ಚುನಾವಣೆ: ಕಾಂಗ್ರೆಸ್, ಬಿಜೆಪಿ, ಶಿವಸೇನೆ ತಲಾ ಒಂದೊಂದು ಕ್ಷೇತ್ರಗಳಲ್ಲಿ ಗೆಲುವು

- Advertisement -
- Advertisement -

ಮಧ್ಯ ಪ್ರದೇಶ, ಹಿಮಾಚಲ ಪ್ರದೇಶ ಮತ್ತು ದಾದ್ರ ನಗರ ಹಾವೇಲಿಯ ಮೂರು ಲೋಕಸಭಾ ಕ್ಷೇತ್ರಗಳಿಗೆ ನಡೆದಿದ್ದ ಉಪಚುನಾವಣೆಯ ಫಲಿತಾಂಶ ಪ್ರಕಟವಾಗಿದೆ. ಕಾಂಗ್ರೆಸ್, ಬಿಜೆಪಿ ಮತ್ತು ಶಿವಸೇನೆ ತಲಾ ಒಂದೊಂದು ಕ್ಷೇತ್ರಗಳಲ್ಲಿ ಗೆಲುವು ಕಂಡಿವೆ.

ಹಿಮಾಚಲ ಪ್ರದೇಶ – ಮಂಡಿ

ಮಂಡಿ ಲೋಕಸಭಾ ಕ್ಷೇತ್ರದಲ್ಲಿ 2019 ರಲ್ಲಿ ಕಾಂಗ್ರೆಸ್ 4 ಲಕ್ಷ ಮತಗಳ ಅಂತರದಲ್ಲಿ ಸೋಲನ್ನು ಅನುಭವಿಸಿತ್ತು. ಆಗ ಬಿಜೆಪಿಯ ರಾಮ್ ಸ್ವರೂಪ್ ಶರ್ಮಾ ವಿಜಯಿಯಾಗಿದ್ದರು. ಆದರೆ ಅವರು 2021ರ ಮಾರ್ಚ್‌ನಲ್ಲಿ ನಿಧನ ಹೊಂದಿದ್ದರು. ಹಾಗಾಗಿ ಅಲ್ಲಿ ಉಪಚುನಾವಣೆ ಘೋಷಣೆಯಾಗಿತ್ತು. ಬಿಜೆಪಿಯು ಬ್ರಿಗೇಡಿಯರ್ ಖುಶಾಲ್ ಸಿಂಗ್ ಠಾಕೂರ್ ರವರಿಗೆ ಟಿಕೆಟ್ ನೀಡಿತ್ತು. ಕಾಂಗ್ರೆಸ್‌ ಪಕ್ಷವು ಮಾಜಿ ಸಿಎಂ ವೀರಭದ್ರ ಸಿಂಗ್‌ರವರ ಪತ್ನಿ ಪ್ರತಿಭಾ ಸಿಂಗ್ ರವರನ್ನು ಕಣಕ್ಕಿಳಿಸಿದ್ದರು. ನೇರಾ ನೇರ ಪೈಪೋಟಿ ನಡೆದು ಕೊನೆಗೆ ಕಾಂಗ್ರೆಸ್‌ನ ಪ್ರತಿಭಾ ಸಿಂಗ್ 7,490 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಅಲ್ಲಿಗೆ ಬಿಜೆಪಿ ಸ್ಥಾನ ಕಾಂಗ್ರೆಸ್ ಪಾಲಾಗಿದೆ.

ಮಧ್ಯಪ್ರದೇಶ – ಖಾಂಡ್ವಾ

ಬಿಜೆಪಿ ಅಭ್ಯರ್ಥಿ ಜ್ಞಾನೇಶ್ವರ್ ಪಾಟೀಲ್ ಅವರು ತಮ್ಮ ಪ್ರತಿಸ್ಪರ್ಧಿ ಮತ್ತು ಕಾಂಗ್ರೆಸ್ ಅಭ್ಯರ್ಥಿ ರಾಜನಾರಾಯಣ್ ಸಿಂಗ್ ಅವರನ್ನು 80,000 ಕ್ಕೂ ಹೆಚ್ಚು ಮತಗಳ ಅಂತರದಿಂದ ಸೋಲಿಸಿದ್ದಾರೆ. ಬಿಜೆಪಿಯ ಹಿರಿಯ ನಾಯಕ ನಂದಕುಮಾರ್ ಸಿಂಗ್ ಚೌಹಾಣ್ ಅವರ ನಿಧನದ ನಂತರ ಖಾಂಡ್ವಾ ಲೋಕಸಭಾ ಕ್ಷೇತ್ರ ತೆರವಾಗಿತ್ತು. ಈ ಗೆಲುವಿನ ಮೂಲಕ ಆ ಸ್ಥಾನವನ್ನು ಬಿಜೆಪಿ ಉಳಿಸಿಕೊಂಡಿದೆ.

ದಾದ್ರ ಮತ್ತು ನಗರ ಹಾವೇಲಿ

ಮಾಜಿ ಸ್ವತಂತ್ರ ಸಂಸದ ದಿವಂಗತ ಮೋಹನ್ ದೇಲ್ಕರ್ ಅವರ ಪತ್ನಿ, ಶಿವಸೇನಾ ಅಭ್ಯರ್ಥಿ ಕಲಾಬೆನ್ ದೇಲ್ಕರ್ ಅವರು ದಾದ್ರಾ ಮತ್ತು ನಗರ ಹಾವೇಲಿ ಲೋಕಸಭಾ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ 51,269 ಮತಗಳಿಂದ ಗೆದ್ದಿದ್ದಾರೆ.

2019 ರಲ್ಲಿ ಸ್ವತಂತ್ರ ಅಭ್ಯರ್ಥಿ ಮೋಹನ್ ದೇಲ್ಕರ್ ಬಿಜೆಪಿಯ ನಾಥುಭೈ ಪಟೇಲ್ ಅವರನ್ನು 9001 ಮತಗಳ ಅಂತರದಿಂದ ಸೋಲಿಸಿದ್ದರು. ಆದರೆ ಈ ವರ್ಷದ ಫೆಬ್ರವರಿ 22 ರಂದು ಸಂಸದರಾಗಿದ್ದ ಮೋಹನ್ ದೇಲ್ಕರ್ ಹೋಟೆಲ್ ಒಂದರಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದರು. ಹಾಗಾಗಿ ಇಲ್ಲಿ ಉಪಚುನಾವಣೆ ನಡೆಸಲಾಯಿತು. ಅವರ ಪತ್ನಿ ಶಿವಸೇನೆ ಟಿಕೆಟ್ ಅಡಿಯಲ್ಲಿ ಸ್ಪರ್ಧಿಸಿ ಜಯಗಳಿಸಿದ್ದಾರೆ. ಅಲ್ಲಿಗೆ ಸ್ವತಂತ್ರ ಅಭ್ಯರ್ಥಿಯ ಸ್ಥಾನ ಶಿವಸೇನೆ ಪಾಲಾಗಿದೆ.


ಇದನ್ನೂ ಓದಿ: ಅಸ್ಸಾಂ: ಐದು ಕ್ಷೇತ್ರಗಳಲ್ಲೂ ಕಾಂಗ್ರೆಸ್‌ಗೆ ಸೋಲು; ಆಪರೇಷನ್‌ ಕಮಲಕ್ಕೆ ಜಯ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...